ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ





ಉಡುಪಿ: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಉಡುಪಿ ಶ್ರೀ ಕೃಷ್ಣ ದರ್ಶನಗೈದು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆಯನ್ನು ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started