ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ





ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ  ರಜತಾದ್ರಿಯ ಮುಂಭಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಡಾ! ವಿ.ಎಸ್. ಆಚಾರ್ಯರವರ ಪುತ್ರರಾದ ಡಾ! ರವಿರಾಜ್ ವಿ. ಆಚಾರ್ಯ, ಡಾ! ಕಿರಣ್ ವಿ. ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಕಲ್ಪನಾ ಸುಧಾಮ, ಪ್ರಮುಖರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಕಿಶೋರ್ ಕರಂಬಳ್ಳಿ, ಎನ್.ರಾಮಕೃಷ್ಣ, ಮಂಜುಳಾ ಪ್ರಸಾದ್  ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started