ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ : ಅಖಿಲ ಭಾರತೀಯ ಸಂಘಟನಾತ್ಮಕ ಪ್ರವಾಸದ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ: ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ನೂರಾರು ಯೋಜನೆಗಳ ಮೂಲಕ ಜನಪರ ಆಡಳಿತದ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ನಮ್ಮ ಸುಯೋಗ. ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಸದೃಢ ಪಕ್ಷ ಸಂಘಟನೆಯ ಜೊತೆಗೆ ಲೋಕಸಭೆ ಸಹಿತ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿContinue reading “ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಮುಖ್ಯ : ವೀಣಾ ಎಸ್. ಶೆಟ್ಟಿ “
Monthly Archives: February 2024
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”
ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಏಕಾತ್ಮ ಮಾನವತಾContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್”
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ
ಉಡುಪಿ: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಉಡುಪಿ ಶ್ರೀ ಕೃಷ್ಣ ದರ್ಶನಗೈದು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆಯನ್ನು ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾContinue reading “ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ”
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ
ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ನೂರಾರು ಜನಪರ ಯೋಜನೆಗಳ ಸಹಿತ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯೊಂದಿಗೆ ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ ಮುಂಚೂಣಿ 3ನೆೇ ಸ್ಥಾನದತ್ತ ದಾಪುಗಾಲು ಹಾಕುತ್ತಿರುವ ಸಮೃದ್ಧ ಭಾರತದ ಕನಸು ನನಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ”
ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಬಿಜೆಪಿ ಉಡುಪಿ ಜಿಲ್ಲೆ ಇದರ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಫೆ.6 ಮಂಗಳವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 1.30ರ ವರೆಗೆ ಉಡುಪಿ-ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಲಿದೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರು ಬೆಳಿಗ್ಗೆ ಗಂಟೆ 10.00ಕ್ಕೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯContinue reading “ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”
ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣ, ಬಿಜೆಪಿ ಹಿರಿಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿಯವರ ನಿಕಟವರ್ತಿ ಹಾಗೂ ಮಾಜಿ ಸಚಿವ ದಿ. ಡಾ! ವಿ.ಎಸ್. ಆಚಾರ್ಯ ಅವರ ಮಾರ್ಗದರ್ಶಕರಾಗಿದ್ದ ಸೋಮಶೇಖರ ಭಟ್ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತುರ್ತು ಪರಿಸ್ಥಿತಿಯContinue reading “ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”
ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ
ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ಜಿಲ್ಲಾ ಸಹಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಪ್ರಸ್ತಾವನೆಗೈದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಗ್ರಾಮ್ ಚಲೋ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿದರು. ಕಾಪು ಮಂಡಲ ಸಂಚಾಲಕರಾದ ಮುರಳೀದರ್ ಪೈ ಕಾರ್ಯಕ್ರಮ ನಿರೂಪಿಸಿದರು. ಈContinue reading “ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ”
ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ
ಅಂದು ಅಧಿಕಾರದ ದುರಾಸೆಯಿಂದ ದೇಶವನ್ನು ಒಡೆಯುವ ಕುಕೃತ್ಯಕ್ಕೆ ನೆಹರೂ-ಜಿನ್ನಾ ನಾoದಿ ಹಾಡಿದ್ದು ಕರಾಳ ಇತಿಹಾಸ. ಇಂದು ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರದ ಕಲ್ಪನೆಯನ್ನು ತೇಲಿಬಿಟ್ಟಿರುವುದು ದೇಶದ್ರೋಹದ ಸಂಕೇತವಾಗಿದೆ ಎಂದು ನಿಳಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜನತೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯ ಮತ್ತು ವಿಭಜನಕಾರಿ ಧೋರಣೆಯನ್ನು ಕೂಲಂಕುಷವಾಗಿ ಗಮನಿಸುತ್ತಿರುವುದು ವಾಸ್ತವ. ಕಾಂಗ್ರೆಸ್ಸಿಗರಿಗೆ ಉತ್ತಮ ಆಡಳಿತಕ್ಕಿಂತ ದೇಶವನ್ನು ಒಡೆಯುವ ಕೃತ್ಯವೇ ಮುಖ್ಯ ಎನಿಸಿದೆ. ಇದು ಕಾಂಗ್ರೆಸ್ಸಿನ ಮೂಲContinue reading “ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ”
ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಭಾರತ್ ಜೋಡೋ ಎಂದು ಬೊಗಳೆ ಬಿಡುತ್ತಿರುವ ಕಾಂಗ್ರೆಸ್ಸಿನ ನೈಜ ವಿಭಜನಕಾರಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ‘ಭಾರತ್ ಜೋಡೋ ಯಾತ್ರೆ’ ಎಂದು ಹೆಸರಿಟ್ಟುಕೊಂಡು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ‘ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಸಾಬೀತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯ ವಾಕ್ಯದಡಿ 2047ಕ್ಕೆ ವಿಕಸಿತContinue reading “ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”