ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ನೇಮೋತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಇಂದು ಮಾರ್ಚ್ 30 ಶನಿವಾರ ಮತ್ತು ಮಾರ್ಚ್ 31 ರವಿವಾರ ಅಂಬಲಪಾಡಿ ಬಂಕೇರ್ಕಟ್ಟ ಅಂಗನವಾಡಿ ಬಳಿ ನಡೆಯಲಿದೆ. ಇಂದು ಮಾ.30 ಶನಿವಾರ ಬೆಳಿಗ್ಗೆ ಗಂಟೆ 7.30ಕ್ಕೆ ಮಹಾ ಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಚಪ್ಪರದ ಆರೋಹಣ,12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 4.00ಕ್ಕೆ ದೈವಸ್ಥಾನದಲ್ಲಿ ಮಹಾಪೂಜೆContinue reading “ಇಂದು ಮಾ.30 ಮತ್ತು 31 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೇಮೋತ್ಸವ, ಸಾಧಕರಿಗೆ ಸನ್ಮಾನ”
Monthly Archives: March 2024
ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ 2024’, ಧೀರಜ್ ಕುಮಾರ್ ‘ರನ್ನರ್ ಅಪ್’, ಝಾಕಿರ್ ಹುಲ್ಲೂರ್ ಗೆ ‘ಬೆಸ್ಟ್ ಪೋಸರ್’ ಪ್ರಶಸ್ತಿ
ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯ ವಿಜೇತರು ಉಡುಪಿ: ಗೋವಾದಲ್ಲಿ ಏ.6 ಮತ್ತು 7ರಂದು ನಡೆಯಲಿರುವ ‘ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯು ಚಾಂಪಿಯನ್ಶಿಪ್ ನ ಸಂಘಟನಾ ಸಮಿತಿಯ ನೇತೃತ್ವದಲ್ಲಿ ಉಡುಪಿ ಡಿಸ್ಟಿಕ್ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಸಹಯೋಗದೊಂದಿಗೆ ಕರ್ನಾಟಕ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಮಾರ್ಗದರ್ಶನದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಶಿವಗಿರಿ ಸಭಾಂಗಣದಲ್ಲಿ ನಡೆಯಿತು.Continue reading “ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ 2024’, ಧೀರಜ್ ಕುಮಾರ್ ‘ರನ್ನರ್ ಅಪ್’, ಝಾಕಿರ್ ಹುಲ್ಲೂರ್ ಗೆ ‘ಬೆಸ್ಟ್ ಪೋಸರ್’ ಪ್ರಶಸ್ತಿ”
ಮಾ.23 : ಉಡುಪಿ-ಬನ್ನಂಜೆ ಶಿವಗಿರಿ ಸಭಾ ಭವನದಲ್ಲಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ಮತ್ತು ‘ಮಿಸ್ಟರ್ ಬಿಲ್ಲವ 2024’ ದೇಹದಾರ್ಢ್ಯ ಸ್ಪರ್ಧೆ
ಕರಾವಳಿ ಕರ್ನಾಟಕ ದೇಹದಾರ್ಢ್ಯ ಪಟುಗಳ ತವರೂರು. ವಿಶೇಷವಾಗಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರತಿಭಾನ್ವಿತ ದೇಹದಾರ್ಢ್ಯ ಪಟುಗಳ ತಾಣ ಎಂದು ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಈಗಾಗಲೇ ಜಿಲ್ಲಾ, ಅಂತರ್ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅನೇಕ ದೇಹದಾರ್ಢ್ಯ ಸ್ಪರ್ಧೆಗಳನ್ನು ಉಡುಪಿ ಪರಿಸರ ಹಾಗೂ ಜಿಲ್ಲೆಯಾದ್ಯoತ ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದೆ. ಪ್ರಸ್ತುತ ಕರ್ನಾಟಕ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ಸಂಚಾಲನಾContinue reading “ಮಾ.23 : ಉಡುಪಿ-ಬನ್ನಂಜೆ ಶಿವಗಿರಿ ಸಭಾ ಭವನದಲ್ಲಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ಮತ್ತು ‘ಮಿಸ್ಟರ್ ಬಿಲ್ಲವ 2024’ ದೇಹದಾರ್ಢ್ಯ ಸ್ಪರ್ಧೆ”
ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ
ಉಡುಪಿ: ರಾಜ್ಯ ಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನ ನಾಸೀರ್ ಹುಸೇನ್ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಮಾತನಾಡಿದ್ದ ಎಂ.ಜಿ. ಹೆಗ್ಡೆ ನಡೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ರಮವನ್ನು ಪ್ರಶ್ನಿಸಿ ಪತ್ರಿಕಾ ಹೇಳಿಕೆ ನೀಡಿದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರಿಗೆ ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆContinue reading “ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ”
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಅನನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸಕ್ತ ಸಕ್ಷಮ ಜಿಲ್ಲಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಾಂಡುರಂಗ ಶಾನುಭಾಗ್ (65 ವರ್ಷ) ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತತ್ವ ಸಿದ್ಧಾಂತಗಳ ಬದ್ಧತೆಯಿಂದ ಕಾರ್ಯಕರ್ತರಿಗೆ ಮಾದರಿಯಾಗಿದ್ದ ಪಾಂಡುರಂಗ ಶಾನುಭಾಗ್ ರವರು ಉಡುಪಿಯ ಸಿಂಡಿಕೇಟ್ ಬ್ಯಾಂಕಿನ ಕ್ಯಾಥೋಲಿಕ್ ಸೆಂಟರ್ ಶಾಖೆಯಲ್ಲಿ ಸಹಾಯಕ ಪ್ರಭಂಧಕರಾಗಿ 2018ರಲ್ಲಿ ನಿವೃತ್ತಿ ಹೊಂದಿದ್ದರು. ಸಂಘದ ಅನೇಕ ಕಾರ್ಯಕ್ರಮಗಳಲ್ಲಿ ಹಾಗೂ ಶಿಬಿರಗಳಲ್ಲಿContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”
ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು
ಉಡುಪಿ: ಭಾರತೀಯ ಜನತಾ ಪಾರ್ಟಿ ದೇಶದಾದ್ಯoತ ಹಮ್ಮಿಕೊಂಡಿರುವ ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನದಡಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸುಮಾರು 1,336 ಮಂದಿ ರಾಮ ಭಕ್ತರು ಶ್ರೀ ರಾಮ ದರ್ಶನ ಭಾಗ್ಯ ಪಡೆಯಲು ಸಜ್ಜಾಗಿದ್ದಾರೆ. ಈ ಅಭಿಯಾನದಡಿ ಪ್ರಥಮ ಹಂತದ ಕೊನೆಯ ತಂಡದ ಪ್ರಯಾಣ ಇದಾಗಿದೆ. ಮಂಗಳೂರಿನಿಂದ ಅಯೋಧ್ಯೆಗೆ ತೆರಳಲಿರುವ ವಿಶೇಷ ರೈಲು ‘ಆಸ್ತಾ’ದಲ್ಲಿ ನಾಳೆ ಮಾ.6ರ ಸಂಜೆ ಗಂಟೆ 6.00ಕ್ಕೆ ಅಯೋಧ್ಯೆಗೆ ಪ್ರಯಾಣ ಬೆಳೆಸಲಿರುವ ಉಡುಪಿ ಜಿಲ್ಲೆಯ ಸುಮಾರುContinue reading “ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು”
ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಫೆ.27ರಂದು ರಾಜ್ಯಸಭೆ ಚುನಾವಣೆಯ ಫಲಿತಾಂಶ ಘೋಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಜೀರ್ ಹುಸೇನ್ ಗೆಲುವನ್ನು ಸಂಭ್ರಮಿಸುವ ಭರದಲ್ಲಿ ಅವರ ಬೆಂಬಲಿಗರೆನ್ನಲಾದ ವ್ಯಕ್ತಿಗಳು ವಿಧಾನ ಸೌಧದ ಆವರಣದೊಳಗೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆ ಕೂಗಿದ್ದರೂ, ಕಾಂಗ್ರೆಸ್ ಮುಖಂಡರು ಅಂತಹ ಭಯೋತ್ಪಾದಕರ ಪರವಾಗಿ ನಿಂತು ಘಟನೆಯನ್ನು ಅಲ್ಲಗಳೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ದಾಖಲಿಸಿದ ದೂರಿನನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿಯನ್ನಾಧರಿಸಿ ಪೋಲೀಸರು ಮೂರು ಮಂದಿ ದೇಶದ್ರೋಹಿಗಳನ್ನು ಬಂಧಿಸಿರುವ ಪ್ರಕ್ರಿಯೆಯಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆContinue reading “ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”
ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಜರಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರಕಾರ ಬೊಕ್ಕಸವನ್ನುContinue reading “ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ”