ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಜಾಹೀರಾತು ನೀಡಿ ಬಿಟ್ಟಿ ಪ್ರಚಾರ ಪಡೆಯಲು ವಿಫಲ ಯತ್ನ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ತಿಲಾಂಜಲಿಯನ್ನಿತ್ತು ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ರಾಜ್ಯದ ಅಭಿವೃದ್ಧಿಗೆ ಚಿಕ್ಕಾಸನ್ನೂ ನೀಡದ ರಾಜ್ಯ ಕಾಂಗ್ರೆಸ್ ಸರಕಾರ ಬೊಕ್ಕಸವನ್ನು ಬರಿದಾಗಿಸಿ ಕೇoದ್ರ ಸರಕಾರದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುತ್ತಾ ಚೆoಬು ಹಿಡಿದು ಹೆಚ್ಚುವರಿ ಅನುದಾನವನ್ನು ಯಾಚಿಸುತ್ತಿರುವುದು ವಿಶಾಧನೀಯ. ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನದ ವಿವರವನ್ನೂContinue reading “ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ : ಕಿಶೋರ್ ಕುಮಾರ್ ಕುಂದಾಪುರ”

ನೇಹಾ ಹಿರೇಮಠ್ ಹತ್ಯೆಯ ಅಪರಾಧಿಯನ್ನು ಗಲ್ಲಿಗೇರಿಸಿ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ 

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಮತ್ತು ಶೃದ್ದಾಂಜಲಿ

ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರ್ಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಲ್ಪೆ ಮೀನುಗಾರ ಸಂಘದ ಸಭಾಭವನದಲ್ಲಿ ಮಲ್ಪೆಯ ಮೀನುಗಾರ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಮತಯಾಚನೆ ಮಾಡಿ ಗೆಲುವಿಗೆ ಸಹಕಾರ ಕೋರಿದರು. ಕರಾವಳಿ ಭಾಗದ ಮೀನುಗಾರರುContinue reading “ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ”

ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸ್ ನಿಂದ ಖಾಲಿ ಚೊಂಬು ಮಾತ್ರ : ಯಶ್ಪಾಲ್ ಸುವರ್ಣ

ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ದೇಶದ 80 ಕೋಟಿ ಜನತೆಗೆ 5 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ವಿತರಿಸುತ್ತಾ ಬಂದಿದೆ. ಆ ಮೂಲಕ ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ ದೊರೆತಂತಾಗಿದೆ. ಆದರೆ ಚುನಾವಣೆಯ ಸಂದರ್ಭದಲ್ಲಿ 10 ಕೆ.ಜಿ. ಉಚಿತ ‘ಅಕ್ಕಿ ಬೇಕೋ ಬೇಡ್ವೊ’ ಎಂದು ಪುಂಗಿ ಊದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಒಂದು ಕಾಳು ಅಕ್ಕಿಯನ್ನೂ ನೀಡದೆ ಜನತೆಗೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದುContinue reading “ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸ್ ನಿಂದ ಖಾಲಿ ಚೊಂಬು ಮಾತ್ರ : ಯಶ್ಪಾಲ್ ಸುವರ್ಣ”

ದೇಶದಲ್ಲಿ ಆದರ್ಶ ರಾಜಕಾರಣಿ , 2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ : ಮಾಜಿ ಪ್ರಧಾನಿ ದೇವೇಗೌಡ ಮನವಿ

ಉಡುಪಿ-ಚಿಕ್ಕಮಗಳೂರು: ದೇಶದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ನೆರೆದ ಜನಸ್ತೋಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮನವಿ ಮಾಡಿದರು. ಅವರು ಮೂಡಿಗೆರೆ ಅಡ್ಯoತಾಯ ರಂಗ ಮಂದಿರದಲ್ಲಿ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ದೇಶದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು,Continue reading “ದೇಶದಲ್ಲಿ ಆದರ್ಶ ರಾಜಕಾರಣಿ , 2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ : ಮಾಜಿ ಪ್ರಧಾನಿ ದೇವೇಗೌಡ ಮನವಿ”

ಮುಂದಿನ ಚುನಾವಣೆಗೆ ಹೆಗ್ಡೆ ಸ್ಪರ್ಧಿಸುವ ಪಕ್ಷ ಯಾವುದಿರಬಹುದು? ರಾಷ್ಟ್ರ ಭಕ್ತ ಮೋದಿ ಗೆಲ್ಲಿಸಲು ಕೋಟ ಬೆಂಬಲಿಸಿ : ಗುರ್ಮೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಾದ್ಯoತ ನಡೆದಿರುವ ಎಲ್ಲಾ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನಾನೇ ಮಾಡಿರುವುದು ಎಂದು ಸುಳ್ಳಿನ ಕಂತೆಯನ್ನೇ ಹರಿಯ ಬಿಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮುoದಿನ ಚುನಾವಣೆಗೆ ಯಾವ ಪಕ್ಷದಲ್ಲಿ ಸ್ಪರ್ಧೆಸುತ್ತಾರೆ ಎಂಬ ಜಿಜ್ಞಾಸೆ ಪ್ರಾಯಶ: ಕಾಂಗ್ರೆಸ್ ಕಾರ್ಯಕರ್ತರ ಸಹಿತ ಎಲ್ಲ ಮತದಾರರಲ್ಲಿ ಜಾಗ್ರತವಾಗಿರುವುದು ವಾಸ್ತವ. ಯಾವುದೇ ದಾಖಲೆಗಳಿಲ್ಲದೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಹೆಗ್ಡೆ ಮಾತನ್ನು ನಂಬುವಷ್ಟು ಜನತೆ ದಡ್ಡರಲ್ಲ. ಈ ನಿಟ್ಟಿನಲ್ಲಿ ವಿಕಸಿತ ಭಾರತವನ್ನು ವಿಶ್ವ ಗುರು ಮಾಡಲು ಹೊರಟಿರುವ ರಾಷ್ಟ್ರ ಭಕ್ತ ನರೇoದ್ರ ಮೋದಿಯವರನ್ನುContinue reading “ಮುಂದಿನ ಚುನಾವಣೆಗೆ ಹೆಗ್ಡೆ ಸ್ಪರ್ಧಿಸುವ ಪಕ್ಷ ಯಾವುದಿರಬಹುದು? ರಾಷ್ಟ್ರ ಭಕ್ತ ಮೋದಿ ಗೆಲ್ಲಿಸಲು ಕೋಟ ಬೆಂಬಲಿಸಿ : ಗುರ್ಮೆ”

ಅಭ್ಯರ್ಥಿ ಆಯ್ಕೆಯಲ್ಲೇ ಎಡವಿದ ಕಾಂಗ್ರೆಸ್, 15 ಲಕ್ಷ ರೂ. ಹೇಳಿಕೆ ಬಗ್ಗೆ ಹೆಗ್ಡೆ ದಾಖಲೆ ನೀಡಲಿ : ಕಿಶೋರ್ ಕುಮಾರ್ ಕುಂದಾಪುರ ಸವಾಲು

ಉಡುಪಿ: ಗೆಲ್ಲುವ ಮಾತಿರಲಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೇ ಕಾಂಗ್ರೆಸ್ ಎಡವಿದ್ದು, ಸ್ವಯಂ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಜಯಪ್ರಕಾಶ್ ಹೆಗ್ಡೆಯವರನ್ನು ಹಲವಾರು ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ದುಂಬಾಲುಬಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ದುಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವುದು ವಿಷಾಧನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿContinue reading “ಅಭ್ಯರ್ಥಿ ಆಯ್ಕೆಯಲ್ಲೇ ಎಡವಿದ ಕಾಂಗ್ರೆಸ್, 15 ಲಕ್ಷ ರೂ. ಹೇಳಿಕೆ ಬಗ್ಗೆ ಹೆಗ್ಡೆ ದಾಖಲೆ ನೀಡಲಿ : ಕಿಶೋರ್ ಕುಮಾರ್ ಕುಂದಾಪುರ ಸವಾಲು”

ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆ ಸಾಧನೆ : ಲಾಲಾಜಿ ಆರ್. ಮೆಂಡನ್

ಉಡುಪಿ: ಬಿಜೆಪಿ ಸರಕಾರದ ಅವಧಿಯ ಸಾಧನೆಗಳನ್ನು ತನ್ನದೇ ಸಾಧನೆ ಎಂದು ಬಿಂಬಿಸುತ್ತಾ ಯಾವುದೇ ತತ್ವ ಸಿದ್ದಾಂತವಿಲ್ಲದೆ ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುವ ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆಯವರ ಸಾಧನೆಯಾಗಿದೆ ಎಂದು ಕಾಪು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದ್ದಾರೆ. ಅವರು ಹಿರಿಯಡ್ಕ ದೇವಾಡಿಗರ ಸಭಾ ಭವನದಲ್ಲಿ ನಡೆದ ಬಿಜೆಪಿ ಹಿರಿಯಡ್ಕ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಮಲ್ಪೆ ಬಂದರು ಮತ್ತು ಹೆಜಮಾಡಿ ಬಂದರು ಅಭಿವೃದ್ಧಿಯನ್ನು ತನ್ನ ಸಾಧನೆContinue reading “ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆ ಸಾಧನೆ : ಲಾಲಾಜಿ ಆರ್. ಮೆಂಡನ್”

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಉಲ್ಲೇಖ ಮಾಡುತ್ತಾ ಕುಚ್ಚಲಕ್ಕಿ ಕೊಡುವುದಾಗಿ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದಿರುವುದು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ವಾಸ್ತವಿಕವಾಗಿ ಕುಚ್ಚಲಕ್ಕಿ ಕೊಡುವ ಪ್ರಕ್ರಿಯೆ ಬರೇ ಒಂದೆರಡು ತಿಂಗಳಲ್ಲಿ ಮುಗಿಯುವContinue reading “ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು”

ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ

ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಲೋಕಸಭಾ ಚುನಾವಣೆಯ ಬಳಿಕ ನೈರುತ್ಯContinue reading “ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ”

Design a site like this with WordPress.com
Get started