ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಏ.3ರಂದು ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಚುನಾವಣಾ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬೋಜೇ ಗೌಡ ಇವರು ಉಪಸ್ಥಿತರಿದ್ದರು.

Design a site like this with WordPress.com
Get started