ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದ ಮೂಲಕ ವಿಶೇಷ ಚೇತನರಿಗೆ ಕಮೋಡ್ ವೀಲ್ ಚೇರ್ ವಿತರಣೆ

ಶಿರಾ:  ತುಮಕೂರು  ಜಿಲ್ಲೆಯ ಶಿರಾ2 ತಾಲೂಕಿನ  ಶಿರಾ ವಲಯದ ಸಂತೆಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಮೂಲಕ ಪೂಜ್ಯ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀನಿವಾಸ ಹಾಗೂ ಶಿವರಾಜ್  ಎಂಬ ವಿಶೇಷಚೇತನ ಫಲಾನುಭವಿಗಳಿಗೆ ಕಮೋಡ್ ವೀಲ್ ಚೇರ್ ನ್ನು ಶಿರಾ 2  ತಾಲೂಕಿನ ಯೋಜನಾಧಿಕಾರಿ ರಮೇಶ್ ಎನ್ ವಿತರಣೆ ಮಾಡಿದರು, ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಶ್ರೀಷ ಆಚಾರ್ಯ, ವಲಯ ಮೇಲ್ವಿಚಾರಕ ನರೇಶ್, TNO ಹರೀಶ್  ಹಾಗೂ ಫಲಾನುಭವಿಗಳ ಪೋಷಕರುContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದ ಮೂಲಕ ವಿಶೇಷ ಚೇತನರಿಗೆ ಕಮೋಡ್ ವೀಲ್ ಚೇರ್ ವಿತರಣೆ”

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಲಪಟಾಯಿಸಿ  ದುರ್ಬಳಕೆ ಮಾಡಿರುವ ಹಗರಣವನ್ನು ಖಂಡಿಸಿ ಜೂನ್ 26ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ  ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿ ರೂಪಾಯಿContinue reading “ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ”

ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕವಾಗಿ ಮಾತನಾಡಿ ಹೈನುಗಾರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಬಿತ್ತನೆ ಬೀಜದ ದರ ಏರಿಕೆ ಮತ್ತು ಕೊರತೆ ಹಾಗೂ ತೈಲಬೆಲೆContinue reading “ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ

ತುಮಕೂರು 2 ಜಿಲ್ಲೆಯ ಶಿರಾ2 ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯೋಜನಾಧಿಕಾರಿಗಳಾದ ಶ್ರೀ ರಮೇಶ್ ಎನ್ ಮಾತನಾಡುತ್ತಾ ಸುಂದರ ಆರೋಗ್ಯಕ್ಕಾಗಿ ದುಷ್ಚಟ ಮುಕ್ತ ಜೀವನ ನಡೆಸಬೇಕೆಂದು ತಿಳಿಸಿದರು, ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ರವೀಂದ್ರ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ”

ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ

ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮ‌ಪ್ರಸಾದ್ ಮುಖರ್ಜಿ ರವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ಗ್ರಾಮಾಂತರ ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ರವರು‌ ಪುಷ್ಪಾರ್ಚನೆ ಮಾಡಿ ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನದ ಬಗ್ಗೆ ವಿವರಿಸಿ ಅವರು ಹಾಕಿಕೊಟ್ಟ‌ ಆದರ್ಶದಲ್ಲಿಯೇ ನಾವೆಲ್ಲ ಇರಬೇಕೆಂದು ಕರೆ ನೀಡಿದರು.‌ ನಂತರದಲ್ಲಿ ಪಕ್ಷದ ಕೊಟ್ಟ ಹಲವಾರು ಕಾರ್ಯಕ್ರಮಗಳ ಬಗ್ಗೆ ಎರಡು  ಕಾರ್ಯಕ್ರಮಗಳ ಸಂಚಾಲಕರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿ, ಇಂದಿನ ಪುಣ್ಯತಿಥಿಯಿಂದ ಅವರ ಜನ್ಮದಿನಾಂಕ  ಜುಲೈ ,6 ನೇContinue reading “ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ”

ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವು ನಾಳೆ ಜೂ.23 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಜೂ. 23ರಂದು ಜಿಲ್ಲೆಯ ಎಲ್ಲ 6 ಮಂಡಲಗಳು ಮತ್ತು 1,112 ಬೂತ್ ಗಳಲ್ಲಿ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಅವರ ದೇಶಭಕ್ತಿ, ತ್ಯಾಗ, ಬಲಿದಾನ, ಜೀವನಾದರ್ಶಗಳ ಬಗ್ಗೆ ವಿಚಾರ ಸಂಕಿರಣ ನಡೆಸುವ ಮೂಲಕ ಅವರ ಪುಣ್ಯ ಸಂಸ್ಮರಣೆ  ಕಾರ್ಯಕ್ರಮವನ್ನು ಆಚರಿಸಲಾಗುವುದುContinue reading “ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ”

ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ

ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುಧ್ಧ ಕಾಪು‌ಮಂಡಲದ ವತಿಯಿಂದ ಅಲೆವೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ‌ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಸರಕಾರದ ಪೆಟ್ರೋಲ್ ಡೀಸೆಲ್, ಅಬಕಾರಿ, ಮುದ್ರಾಂಕ ಶುಲ್ಕ, ಬಸ್ ದರ, ವಿದ್ಯುತ್ ದರ , ಆಸ್ತಿ ನೋಂದಣಿ ತೆರಿಗೆ ಹೀಗೆ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ ಹಾಗೂContinue reading “ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ”

ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಯಾವುದೇ ಸಂಪನ್ಮೂಲದ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಅನುಷ್ಠಾನಗೊಳಿಸದೆ ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು ಅಗತ್ಯ ವಸ್ತುಗಳ ದರದ ಜೊತೆಗೆ ಪೆಟ್ರೋಲ್ ಡೀಸೆಲ್ ದರವನ್ನು ದಿಡೀರ್ ಏರಿಕೆ ಮಾಡಿರುವುದು ಖಂಡನೀಯ. ರಾಜ್ಯ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ಜೂ.17 ರಂದು ಬೆಳಿಗ್ಗೆ 11.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕಿಶೋರ್ ಕುಮಾರ್Continue reading “ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”

ಪೆಟ್ರೋಲ್ ಡೀಸೆಲ್ ದರ ಏರಿಕೆ, ಗಾಯದ ಮೇಲೆ ಬರೆ ಎಳೆದ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ: ಕೆ.ಉದಯ ಕುಮಾರ್ ಶೆಟ್ಟಿ

ಅಧಿಕಾರದ ಹಪಾಹಪಿಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅತ್ತ ಗ್ಯಾರಂಟಿಗಳನ್ನೂ ಸರಿಯಾಗಿ ನಿಭಾಯಿಸದೆ, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೊಕ್ಕಸವನ್ನು ಬರಿದಾಗಿಸಿರುವ ಭ್ರಷ್ಟ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸಿ ರಾಜ್ಯದ ಜನತೆಗೆ ಮಂಕು ಬೂದಿContinue reading “ಪೆಟ್ರೋಲ್ ಡೀಸೆಲ್ ದರ ಏರಿಕೆ, ಗಾಯದ ಮೇಲೆ ಬರೆ ಎಳೆದ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ: ಕೆ.ಉದಯ ಕುಮಾರ್ ಶೆಟ್ಟಿ”

ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ

ಉಡುಪಿ: ಪ್ರತೀ ವರ್ಷ ಕರ್ಕಾಟಕ ಅಮಾವಾಸ್ಯೆ ದಿನದಂದು ನಡೆಯುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯು ಈ ಬಾರಿ ಆಗಸ್ಟ್ 4 ರಂದು ಕುಂದಾಪುರದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಇದರ ಜೊತೆಗೆ ತೆರೆಯ ಮರೆಗೆ ಸರಿದಿರುವ ಕುಂದಾಪುರ ಭಾಗದ ಗ್ರಾಮ್ಯ ಕ್ರೀಡೆಗಳನ್ನು ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಕೂಡಾ ಜರುಗಿಸುವ ಯೋಜನೆಯನ್ನು ಹೊಂದಲಾಗಿದೆ. ಈ ಎರಡೂ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಲು ಹಾಗೂ ಅದ್ದೂರಿಯ ತಯಾರಿಯನ್ನು ನಡೆಸುವContinue reading “ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ”

Design a site like this with WordPress.com
Get started