ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು. ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್Continue reading “ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ”

Design a site like this with WordPress.com
Get started