ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್Continue reading “ಸತತ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”
Monthly Archives: June 2024
ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಅತ್ಯದ್ಭುತ ಜಯವನ್ನು ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿಗೆ ಶ್ರಮಿಸಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮತದಾರರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದೃಢ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಶ್ರಮದಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್Continue reading “ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು : ಕಿಶೋರ್ ಕುಮಾರ್ ಕುಂದಾಪುರ”
ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
ಉಡುಪಿ: ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾನು ಮುಂದಿನ 3 ವರ್ಷದ ಅವಧಿಗೆ ಬಿಜೆಪಿ ಜಿಲ್ಲಾಧ್ಯಕ್ಷನಾಗಿContinue reading “ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”
ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ
ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಅವರ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಉಡುಪಿ, ದ.ಕ. ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಇನ್ನೊಮ್ಮೆ ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎನ್ನುವುದು ಈ ಗೆಲುವಿನಿಂದ ಸಾಬೀತಾಗಿದೆ ಎಂದು ಉದಯ ಕುಮಾರ್ ಶೆಟ್ಟಿContinue reading “ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ”
ಲೋಕಸಭಾ ಚುನಾವಣಾ ಗೆಲುವು ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ
ಭಾರತೀಯ ಜನತಾ ಪಾರ್ಟಿಯ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನ ಪಾರ್ಟಿ ಅಗಾಧವಾದ ಬಹುಮತದಿಂದ ಗೆಲ್ಲುವ ಅವಕಾಶವನ್ನು ಮಾಡಿಕೊಟ್ಟಿದೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ ಮಾಧ್ಯಮ ವರದಿಗಾರರನ್ನುದ್ದೇಶಿಸಿ ಮಾತನಾಡಿದರು. ನಾನು ಚುನಾವಣೆಗೆ ನಿಂತಾಗ ಉಡುಪಿ, ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಸುಮಾರು 1,900 ಮತಗಟ್ಟೆಯಲ್ಲಿರುವ ಬಿಜೆಪಿ ಹಾಗೂContinue reading “ಲೋಕಸಭಾ ಚುನಾವಣಾ ಗೆಲುವು ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ”
ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು. ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್Continue reading “ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ”
ವಿಧಾನ ಪರಿಷತ್ ಚುನಾವಣೆ : ಮತದಾರರು ಮತ್ತು ಕಾರ್ಯಕರ್ತರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಮತದಾನಗೈದಿರುವ ಪದವೀಧರ ಮತ್ತು ಶಿಕ್ಷಕ ಮತದಾರ ಬಾಂಧವರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶೃದ್ಧೆಯಿಂದ ಶ್ರಮ ವಹಿಸಿ ತೊಡಗಿಸಿಕೊಂಡಿರುವ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗದ ಜಿಲ್ಲಾಧ್ಯಕ್ಷರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧContinue reading “ವಿಧಾನ ಪರಿಷತ್ ಚುನಾವಣೆ : ಮತದಾರರು ಮತ್ತು ಕಾರ್ಯಕರ್ತರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ”