ನೆರೆ ಹಾವಳಿ, ಸಂತ್ರಸ್ತರ ಗೋಳು ಪರಿಹರಿಸದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾಪತ್ತೆ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್

ಉಡುಪಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ನೆರೆ ಹಾವಳಿ, ಕಡಲ್ಕೊರೆತ, ಆಸ್ತಿ-ಪಾಸ್ತಿ ನಷ್ಟ, ಬೆಳೆ ಹಾನಿ ಸಹಿತ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಿಲ್ಲೆಯಲ್ಲಿ ಎಲ್ಲಿಯೂ ಕಾಣಲು ಸಿಗದೇ ನಾಪತ್ತೆಯಾಗಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವುContinue reading “ನೆರೆ ಹಾವಳಿ, ಸಂತ್ರಸ್ತರ ಗೋಳು ಪರಿಹರಿಸದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾಪತ್ತೆ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್”

ಎಸ್.ಸಿ., ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ಧರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ? : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ

ಕೇವಲ ಅಧಿಕಾರದ ಲಾಲಸೆಯಿಂದ ಯಾವುದೇ ಹಣಕಾಸಿನ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿ ನಕಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರದ ಗದ್ದುಗೆಯೇರಿ ಎಸ್.ಸಿ., ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಪ್ರಶ್ನಿಸಿದ್ದಾರೆ. ಎಸ್‌.ಸಿ.ಎಸ್.ಪಿ., ಟಿ.ಎಸ್.ಪಿ. ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ಮಾತ್ರ ಬಳಸಬೇಕೆಂಬ ನಿಯಮವಿದೆ. ಆದರೆ ಆನೆ ನಡೆದದ್ದೇ ದಾರಿ ಎಂಬಂತೆ ವಿತoಡContinue reading “ಎಸ್.ಸಿ., ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ಧರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ? : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ”

ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ

ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ  ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು, ಕಾರ್ಯContinue reading “ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ”

ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ’ ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ ಮುಂದೆ ಬೆತ್ತಲಾಗಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳContinue reading “ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ”

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ

ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ”

Design a site like this with WordPress.com
Get started