ಉಡುಪಿ ನಗರಸಭೆಗೆ ನೂತನವಾಗಿ ಆಯ್ಕೆಗೊಂಡಿರುವ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಶಾಲು ಹೊದೆಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ದೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿContinue reading “ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ”
Monthly Archives: August 2024
ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ: ನವ ವಿಧ ಭಕ್ತಿಗಳಲ್ಲಿ ಭಜನೆಗೆ ವಿಶಿಷ್ಟ ಸ್ಥಾನವಿದೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಏಕಾಗ್ರತೆಯ ಜೊತೆಗೆ ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯ ಇದರ ನೇತೃತ್ವದಲ್ಲಿ ಮಹಾತೋಭಾರ ಶ್ರೀ ವೀರಭದ್ರ ದೇವಸ್ಥಾನ ಹಿರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಮತ್ತು ಎಸ್.ವಿ.ಟಿ ಕರಸೇವಕರು ಹಿರಿಯಡ್ಕContinue reading “ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ”
ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್
ಉಡುಪಿ: ಕಾರ್ಕಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕರು ಹಿಂದೂ ಯುವತಿಯೋರ್ವಳನ್ನು ಅಪಹರಿಸಿ, ಬಲವಂತಾಗಿ ಅಮಲು ಪದಾರ್ಥವನ್ನು ಕುಡಿಸಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಕೃತ್ಯ ಅತ್ಯಂತ ಖಂಡನೀಯ ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ. ಸುಶೀಕ್ಷಿತ ಕರಾವಳಿ ಜಿಲ್ಲೆಯಲ್ಲಿ ಇಂತಹ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಶಿಕ್ಷಣ ಮತ್ತು ವೃತ್ತಿಗಾಗಿ ಯುವತಿಯರು ಜಿಲ್ಲೆಗೆ ಅಗಮಿಸುತ್ತಿರುವುದು ಸ್ವಭಾವಿಕ. ಕೆಲವು ಮತಾಂಧ ದುಷ್ಟ ಶಕ್ತಿಗಳು ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದು,Continue reading “ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್”
ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ
ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹುಬ್ಬಳ್ಳಿಯ ನೇಹಾ ಹತ್ಯೆ, ಬೆಳಗಾವಿContinue reading “ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ”
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಭಜನಾ ಮಂದಿರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಶಾಲು ಹೊದೆಸಿ ಗೌರವಿಸಿ, ಶ್ರೀದೇವರ ಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರContinue reading “ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”
ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆಯನ್ನು ಆ.20ರಂದು ಭಜನಾ ಸೇವೆ, ಮಹಾ ಪೂಜೆ ಮತ್ತು ಅನ್ನ ಸಂತರ್ಪಣೆಯೊಂದಿಗೆ ಭಜನಾ ಮಂದಿರದಲ್ಲಿ ಆಚರಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ‘ಸಂಘಟನೆಯಿಂದ ಬಲಯುತರಾಗಿರಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ’ ಎಂಬ ಅಮೃತ ವಾಣಿಯಂತೆ ಶ್ರೀ ಗುರು ಜಯಂತಿಯ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ 19Continue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”
ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಿಗೆ ಸ್ವಯಂ ಪ್ರಚಾರದ ತೆವಲು* ಟೋಲ್ ಹೋರಾಟ ಹಾದಿ ತಪ್ಪಿಸಲು ಸೊರಕೆಯರಿಂದ ನಾಟಕ – ಶ್ರೀಕಾಂತ ನಾಯಕ್
ಕಾಪು: ಪಡುಬಿದ್ರೆ ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಕಂಚಿನಡ್ಕದ ಬಳಿ ಟೋಲ್ ನಿರ್ಮಾಣವಾಗುವ ಲಕ್ಷಣದಿಂದ ಸಿಡಿದೆದ್ದ ಕಾಪು ಹಾಗೂ ಕಾರ್ಕಳ ಕ್ಷೇತ್ರದ ಜನತೆ ಶ್ರೀ ಸುಹಾಸ್ ಹೆಗ್ಡೆ ಇವರ ನೇತ್ರತ್ವದಲ್ಲಿ ಸಂಘಟಿತರಾಗಿ ಹೋರಾಟ ಮಾಡಿ ಗ್ರಾಮ ಗ್ರಾಮಗಳಲ್ಲಿ ಜನಬೆಂಬಲ ಪಡೆದು ಕಾರ್ಯೋನ್ಮುಖರಾಗಿದ್ದು ಇದರ ಕಾರ್ಯವೈಖರಿಗೆ ರಾಜ್ಯ ಸರಕಾರವೇ ಬೆಚ್ಚಿಬಿದ್ದಿದ್ದು ಈ ಟೋಲ್ ಬಹುತೇಕ ರದ್ದುಗೊಳ್ಳುವ ಹಂತದಲ್ಲಿರುವಾಗ ಮಾನ್ಯ ಕಾಪುವಿನ ಮಾಜಿ ಸಚಿವರು, ಪಸ್ತುತ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರೂ ಆಗಿರುವ ಎಲ್ಲದರಲ್ಲೂ ರಾಜಕಾರಣ ಬೆಸರಸುವ ಕೆಟ್ಟ ಚಟ ಹೊಂದಿರುವ Continue reading “ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಿಗೆ ಸ್ವಯಂ ಪ್ರಚಾರದ ತೆವಲು* ಟೋಲ್ ಹೋರಾಟ ಹಾದಿ ತಪ್ಪಿಸಲು ಸೊರಕೆಯರಿಂದ ನಾಟಕ – ಶ್ರೀಕಾಂತ ನಾಯಕ್”
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಕೋಲ್ಕತ್ತಾ ಘಟನೆ ಖಂಡಿಸಿ ಕ್ಯಾಂಡಲ್ ಲೈಟ್ ಪ್ರೊಟೆಸ್ಟ್
ಉಡುಪಿ: ಪಶ್ಚಿಮ ಬಂಗಾಲದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಮೊoಬತ್ತಿ ಉರಿಸಿ ಶಾಂತಿಯುತ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಕೋಲ್ಕತ್ತಾ ಘಟನೆ ಖಂಡಿಸಿ ಕ್ಯಾಂಡಲ್ ಲೈಟ್ ಪ್ರೊಟೆಸ್ಟ್”
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಶ್ರೀ ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ”