ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ‘ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಕಛೇರಿಗೆ ನುಗ್ಗುತ್ತೇವೆ’ ಎಂಬ ಪ್ರಚೋದನಕಾರಿ, ದೇಶ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಪೊಲೀಸ್ ಇಲಾಖೆ ಐವನ್ ಡಿಸೋಜ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸದೇ ಇರುವುದು ಓಲೈಕೆ ರಾಜಕಾರಣದ ಪರಮಾವಧಿಯಾಗಿದೆ.Continue reading “ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ”
Monthly Archives: September 2024
ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! :ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ
*”ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು”ಎಂದ ಐವನ್ ಡಿ’ಸೋಜಾ ವಿರುದ್ಧ ಯಾವುದೇ ಕ್ರಮವಿಲ್ಲ…! ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! ಪೋಲೀಸ್ ಇಲಾಖೆ ಒಂದು ಪಕ್ಷದ ಕೈಗೊಂಬೆಯಾಗಿದೆ!! – ಶಶಾಂಕ್ ಶಿವತ್ತಾಯ ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ* ಕುಂದಾಪುರದ ಪ್ರಥಮ ದರ್ಜೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ.ಜಿ. ರಾಮಕೃಷ್ಣ ಅವರಿಗೆ ಘೋಷಿಸಲಾಗಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನುContinue reading “ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! :ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ”
ಶಿಕ್ಷಕರ ಪರ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ : ದಿನೇಶ್ ಅಮೀನ್
ಉಡುಪಿ ಜಿಲ್ಲೆಯ ಅರ್ಹ ಶಿಕ್ಷಕರಿಗೆ ತಮ್ಮದೇ ಸರಕಾರ ಘೋಷಿಸಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಜಾಬ್ ಬೆಂಬಲಿತ ಮತಾಂಧ ಶಕ್ತಿಗಳ ಓಲೈಕೆಗಾಗಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ನಿಲುವನ್ನು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಹಿಜಾಬ್Continue reading “ಶಿಕ್ಷಕರ ಪರ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ : ದಿನೇಶ್ ಅಮೀನ್”
ಶಿಕ್ಷಕ ಪ್ರಶಸ್ತಿ ತಡೆ ಪ್ರಕರಣ: ಶಾಸಕರ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು ಖಂಡನೀಯ
ಉಡುಪಿ: ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಡೆಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ. ಸರ್ಕಾರವೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಿಕ್ಷಕರಿಗಾದ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸಿರುವ ವಿರುದ್ಧ ಕ್ರಮContinue reading “ಶಿಕ್ಷಕ ಪ್ರಶಸ್ತಿ ತಡೆ ಪ್ರಕರಣ: ಶಾಸಕರ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು ಖಂಡನೀಯ”
ಜಲಜ ಪೂಜಾರ್ತಿ, ಬೀಡು ಮಾರ್ಗ, ಅಂಬಲಪಾಡಿ ನಿಧನ
ಅಂಬಲಪಾಡಿ ಗ್ರಾಮದ ಬೀಡು ಮಾರ್ಗ ನಿವಾಸಿ ಶ್ರೀಮತಿ ಜಲಜ ಪೂಜಾರ್ತಿ (74 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಸೆ.9) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಮತ್ತು ಬಂಧು ವರ್ಗವನ್ನು ಅಗಲಿದ್ದಾರೆ.
ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ
ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು (81 ವರ್ಷ) ಅವರು ಇಂದು ಸೆ.8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಹಾಬಲ ಪೂಜಾರಿ ಅವರು ಬಸ್ ಮಾಲಕರಾಗಿದ್ದು, ಉಡುಪಿಯ ಹಿರಿಯ ಬಸ್ ಏಜೆಂಟರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಬಂಧು ವರ್ಗ ಹಾಗೂ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರವು ನಾಳೆ ಸೆ.9ರಂದುContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ”
ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ
ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಹಾಗೂ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಇಸ್ಲಾಮಿಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿನಿಗೆ, ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವContinue reading “ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ”
ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ, ಅಭಿವೃದ್ಧಿಯನ್ನು ಮರೆತ ರಾಜ್ಯ ಸರಕಾರ : ರೇಷ್ಮಾ ಉದಯ್ ಶೆಟ್ಟಿ
ಉಡುಪಿ: ಉಡುಪಿಯಲ್ಲಿ ಈ ಬಾರಿ ಧಾರಾಕಾರವಾಗಿ ಸುರಿದ ಮಳೆಗೆ ಜಿಲ್ಲಾದ್ಯಂತ ಅಪಾರ ಹಾನಿಯಾಗಿದ್ದು, ಜಿಲ್ಲೆಯ ಹೆದ್ದಾರಿಗಳು ಸೇರಿದಂತೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಬಹುತೇಕ ರಸ್ತೆಗಳು ಹಾಳಾಗಿವೆ. ಅಂಗನವಾಡಿ ಶಾಲಾ ಕಟ್ಟಡಗಳು, ಕಾಲುಸಂಕ, ತಡೆಗೋಡೆ, ವಿದ್ಯುತ್ ಕಂಬಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದ್ದು, ಸುಮಾರು 234 ಕೋಟಿ ರೂಪಾಯಿ ಮೌಲ್ಯದಷ್ಟು ಹಾನಿಯಾಗಿರುವ ವರದಿಯನ್ನು ಜಿಲ್ಲಾಡಳಿತವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರೂ, ಇದುವರೆಗೂ ನಯಾ ಪೈಸೆ ಪರಿಹಾರ ಬಿಡುಗಡೆಯಾಗದೇ ಇರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ, ಅಭಿವೃದ್ಧಿಯನ್ನು ಮರೆತ ರಾಜ್ಯ ಸರಕಾರ : ರೇಷ್ಮಾ ಉದಯ್ ಶೆಟ್ಟಿ”