ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ

ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ಬ್ಲಾಕ್ ಮೇಲ್ ತಂತ್ರದ ಮೂಲಕ ಹುಡುಗಿಯ ಅಪಹರಣ ನಡೆದಿರುವ ಕುರಿತು ಸ್ವತಃ ಹುಡುಗಿಯ ಹೆತ್ತವರು ಪ್ರಕರಣ ದಾಖಲಿಸಿದ್ದರೂ ಆರೋಪಿಯನ್ನು ಬಂಧಿಸಲು ಮೀನ ಮೇಷ ಎಣಿಸುತ್ತಾ ವಿಳಂಬ ಧೋರಣೆ ಅನುಸರಿಸುತ್ತಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರ ವರ್ತನೆಗೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಸಮಾಜದಲ್ಲಿ ಯಾವುದೇ ಹೆಣ್ಣು ಮಕ್ಕಳಿಗೆ ತೊಂದರೆ ಸಂಭವಿಸಿದಾಗ ಅದನ್ನು ಧರ್ಮಾತೀತವಾಗಿ ತೀವ್ರವಾಗಿ ಖಂಡಿಸಿರುವುದನ್ನು ಜಿಲ್ಲಾ ಅಲ್ಪಸಂಖ್ಯಾತContinue reading “ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ”

BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ

ಕಾಪು: ಅಲೆವೂರು ರಾಮಪುರದ ಶ್ರೀಪತಿ‌ ಆಚಾರ್ಯ ಮತ್ತು ಇಂದಿರಾ ಇವರ ಪುತ್ರಿ ಕು. ಶ್ರೀನಿಧಿ ಬಿ ಎಸ್ ರವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ ಡಬ್ಲ್ಯೂ ಪದವಿ ಪರೀಕ್ಷೆಯಲ್ಲಿ ಪ್ರಥಮ   ರ‍್ಯಾಂಕ್ ಪಡೆದಿದ್ದು‌ ಅವರನ್ನು ಅವರ ಸ್ವಗ್ರಹದಲ್ಲಿ ಬೂತ್ ಅಧ್ಯಕ್ಷರಾದ ನಾರಾಯಣ ಆಚಾರ್ಯ‌ ಇವರ ನೇತ್ರತ್ವದಲ್ಲಿ ಸನ್ಮಾನ ಮಾಡಿ ಗೌರವಿಸಿ  ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ‌ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ  ಶ್ರೀಕಾಂತ್ ನಾಯಕ್,ಹಿರಿಯರಾದ ಅಶೋಕ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ಅರುಣ್ ಆಚಾರ್ಯ, ಹರೀಶ್ ಶೆಟ್ಟಿಗಾರ್, ಸುಧಾಮ ರಾಮಪುರ,Continue reading “BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ”

ಮಾ.15: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ

ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15ರ ಬೆಳಿಗ್ಗೆ ಗಂಟೆ 9.30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿContinue reading “ಮಾ.15: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ”

ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ವಿಶ್ವ ಮಹಿಳಾ ದಿನಾಚರಣೆ’, ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ. ದಂತ ವೈದ್ಯಕೀಯ ವಿಭಾಗ ಮಣಿಪಾಲ ಹಾಗೂ ಅಪ್ಪು ಅಭಿಮಾನಿಗಳ ಬಳಗ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’ವು ಮಾ.8 ಶನಿವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 12.30ರContinue reading “ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ವಿಶ್ವ ಮಹಿಳಾ ದಿನಾಚರಣೆ’, ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’”

ಮಾ.2 : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಉಡುಪಿಗೆ

ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.2 ರವಿವಾರ ಉಡುಪಿಗೆ ಬೇಟಿ ನೀಡಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಆಗಮಿಸಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started