ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಗಂಗಪ್ಪ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿContinue reading “ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ”

ಅತಿ ಉಪಯುಕ್ತ ಮಾಹಿತಿ🎥

ವಿಪರೀತ ಜನಸಂದಣಿಯಲ್ಲಿ ಕಾಲ್ತುಳಿತ ಉಂಟಾದಲ್ಲಿ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಪೋಲೀಸ್ ಇಲಾಖೆಯಿಂದ ಪ್ರಾತ್ಯಕ್ಷಿಕೆ

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ

ಉಡುಪಿ: ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Design a site like this with WordPress.com
Get started