ದೇಶದ ಹಿತಾಸಕ್ತಿಗೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಸಮರ್ಪಣಾ ಭಾವದ ಸೇವೆ ಸದಾ ಸ್ಮರಣೀಯ : ಕೆ. ಉದಯ ಕುಮಾರ್ ಶೆಟ್ಟಿ

ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ‘ಏಕತಾ ನಡಿಗೆ’ ಉಡುಪಿ: ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಜನತೆ ಸದಾ ನೆನಪಿಸಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಒಂದು ದೇಶ ಎಂಬ ಪರಿಕಲ್ಪನೆಯಡಿ ರಾಷ್ಟ್ರೀಯ ಏಕೀಕರಣದ ರೂವಾರಿಯಾಗಿ ದೇಶದ ಸಮಗ್ರತೆಗೆ ಸಮರ್ಪಣಾ ಭಾವದ ಸೇವೆ ಸಲ್ಲಿಸಿರುವ ಧೀಮಂತ ನಾಯಕ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನಾದರ್ಶ ಸದಾ ಸ್ಮರಣೀಯ ಎಂದು ಬಿಜೆಪಿContinue reading “ದೇಶದ ಹಿತಾಸಕ್ತಿಗೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಸಮರ್ಪಣಾ ಭಾವದ ಸೇವೆ ಸದಾ ಸ್ಮರಣೀಯ : ಕೆ. ಉದಯ ಕುಮಾರ್ ಶೆಟ್ಟಿ”

ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’

ಉಡುಪಿ: ಭಾರತದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ, ರಾಷ್ಟ್ರೀಯ ಏಕೀಕರಣದ ರೂವಾರಿ, ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯಿ ಪಠೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಏಕತಾ ನಡಿಗೆ’ಯು ಅ.31 ಶುಕ್ರವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆContinue reading “ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’”

ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯContinue reading “ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ”

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ರಾಷ್ಟ್ರ ಭಕ್ತಿಯ ಚಿಂತನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಮೂಲ್ಯ ಸೇವಾ ಕಾರ್ಯಗಳ ಕುರಿತು ಎಳ್ಳಷ್ಟೂ ಪರಿಜ್ಞಾನವಿಲ್ಲದ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಚಟುವಟಿಕೆಗಳ ಮೇಲೆContinue reading “ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ”

ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’ವು ಅ.3 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದContinue reading “ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’”

Design a site like this with WordPress.com
Get started