ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ಗೀತಾ ಮಾಸೋತ್ಸವ’ದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಸಮಿತಿಯ ಸಹಯೋಗದೊಂದಿಗೆ ನ.30 ರವಿವಾರ ಬೆಳಿಗ್ಗೆ ಗಂಟೆ 9.30ರಿಂದ ಉಡುಪಿ ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’ ಹಾಗೂ ಮಧ್ಯಾಹ್ನ ಗಂಟೆ 2.30ರಿಂದ ಜೋಡುಕಟ್ಟೆಯಿಂದ ರಾಜಾoಗಣದ ವರೆಗೆ ‘ಕುಣಿತದ ಭಜನೋತ್ಸವ’ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ತಿಳಿಸಿದ್ದಾರೆ. ನ.30ರ ಬೆಳಿಗ್ಗೆ ಗಂಟೆ 9.00ರಿಂದ ರಾಜಾoಗಣದಲ್ಲಿ ‘ಸಾಮೂಹಿಕ ಗೀತಾ ಪಾರಾಯಣ’ ನಡೆಯಲಿದೆ. ಬೆಳಿಗ್ಗೆ ಗಂಟೆ 10.00ಕ್ಕೆContinue reading “ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’”
Monthly Archives: November 2025
ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ವಿಶ್ವ ಗೀತಾ ಪರ್ಯಾಯ’ದ ವಿಶಿಷ್ಟ ಕಾರ್ಯಕ್ರಮವಾಗಿ ನ.28ರಂದು ಉಡುಪಿ ರಾಜಾoಗಣದ ಪಾರ್ಕಿಂಗ್ ಸ್ಥಳದ ಬಳಿ ನಡೆಯಲಿರುವ ‘ಲಕ್ಷ ಕಂಠ ಗೀತೋತ್ಸವ’ದ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ನೆರೆದ ಎಲ್ಲರೊಂದಿಗೆ ಸಾಮೂಹಿಕ ಪಠಣ ಮಾಡಲಿದ್ದಾರೆ. ಈ ಅಪೂರ್ವ ಕ್ಷಣಗಳಲ್ಲಿ ಶ್ರೀ ಕೃಷ್ಣ ಭಕ್ತರು, ಸಮಸ್ತ ಭಜನಾ ಮಂಡಳಿಗಳ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಹಿತ ಜಿಲ್ಲೆಯContinue reading “ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ”
ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’ : ಕುತ್ಯಾರು ನವೀನ್ ಶೆಟ್ಟಿ
ಉಡುಪಿ: ನ.28 ಶುಕ್ರವಾರ ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ರೋಡ್ ಶೋ’ ಉಡುಪಿ-ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸoಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸoಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರುContinue reading “ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’ : ಕುತ್ಯಾರು ನವೀನ್ ಶೆಟ್ಟಿ”
ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯಲ್ಲಿ ನ.28ರಂದು ನಡೆಯುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮತ್ತು ನ.30ರಂದು ನಡೆಯುವ ‘ಸಂತ ಸಂಗಮ’ ಮತ್ತು ‘ಭಜನೋತ್ಸವ’ದ ಪೂರ್ವಭಾವಿಯಾಗಿ ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಭೆಯು ನ.14 ಶುಕ್ರವಾರ ಸಂಜೆ ಗಂಟೆ 4.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ‘ಕನಕ ಮಂಟಪ’ದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಮಠದ ದಿವಾನ ನಾಗರಾಜ ಆಚಾರ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷContinue reading “ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ”
ನ.28ರ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠ ಬೇಟಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ‘ಲಕ್ಷ ಕಂಠ ಗೀತೋತ್ಸವ’ದ ಸಾಮೂಹಿಕ ಭಗವದ್ಗೀತಾ ಪಠಣದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮಹಾ ಜನತೆಯ ಸಹಿತ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.28ರ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠ ಬೇಟಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ”
ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್
ಉಡುಪಿ: ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಇಂತಹ ಸಾಮಾಜಿಕ ಪಿಡುಗನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮಗಳನ್ನು ಜರಗಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡೆ ಅಭಿನಂದನಾರ್ಹ ಎಂದು ಅವರು ತಿಳಿಸಿದ್ದಾರೆ.Continue reading “ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್”