ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್

ಉಡುಪಿ: ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಇಂತಹ ಸಾಮಾಜಿಕ ಪಿಡುಗನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮಗಳನ್ನು ಜರಗಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡೆ ಅಭಿನಂದನಾರ್ಹ ಎಂದು ಅವರು ತಿಳಿಸಿದ್ದಾರೆ.Continue reading “ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್”

Design a site like this with WordPress.com
Get started