ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ನೀತಾ ಪ್ರಭು

ಉಡುಪಿ: ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ದುರುದ್ದೇಶದಿಂದ ಆಧಾರ ರಹಿತ ಮತ ಚೋರಿ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಮಹಿಳೆಯರ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ಗೃಹಲಕ್ಷ್ಮೀ ಯೋಜನೆಯ 2 ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ರಾಜ್ಯದ ಮಹಿಳೆಯರಿಗೆ ವಂಚಿಸಿದ ರಾಜ್ಯ ಸರಕಾರದ ವಿರುದ್ಧವೂ ಪ್ರತಿಭಟನೆ ನಡೆಸಲಿ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹೇಳಿದ್ದಾರೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರುContinue reading “ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ನೀತಾ ಪ್ರಭು”

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ

ಕಾರ್ಕಳ:  ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ. ಇಡೀ ದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿಯ ವಿಚಾರವಾಗಿಯೂ ಮೋದಿ ಅವರು ಮಾತನಾಡಿದ್ದಾರೆ. ಇಂತಹ ಪ್ರಧಾನಿಯನ್ನು ಪಡೆದ ನಾವು ಪುಣ್ಯವಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ”

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಯಿತು. ರಾ.ಹೆ.66 ಅಂಬಲಪಾಡಿ ಇದರ ಅಗಲ ಕಿರಿದಾಗಿರುವ ಸರ್ವಿಸ್ ರಸ್ತೆಯನ್ನು ಮಳೆ ನೀರು ಹರಿಯುವ ಚರಂಡಿ ಸಹಿತ ಅಗಲೀಕರಣಗೊಳಿಸುವಂತೆ, ರಾ.ಹೆ.66 ಅಂಬಲಪಾಡಿContinue reading “ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ”

‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ವಿರೋಧ ರಾಜಕೀಯ ಪ್ರೇರಿತ ಹಾಗೂ ಹಾಸ್ಯಾಸ್ಪದ : ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು

ಉಡುಪಿ: ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಕೃತಿ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ‌ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜಯನ್ ಮಲ್ಪೆ ಅವರ ನಡೆ ರಾಜಕೀಯ ಪ್ರೇರಿತ ಹಾಗೂ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ. ಜಯನ್ ಮಲ್ಪೆ ಅವರು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾಗೆ ಏನೂ ತಿಳಿದಿಲ್ಲವೆಂಬಂತೆ ಹೇಳಿಕೆ ನೀಡಿರುವುದು ದುರದೃಷ್ಟಕರವಾಗಿದೆ. ಬಿಜೆಪಿ ಎಸ್.ಸಿ. ಮೋರ್ಚಾ ರಾಷ್ಟ್ರೀಯವಾದಕ್ಕೆ ಗೌರವ, ಮನ್ನಣೆ ನೀಡುವ ತಂಡವಾಗಿದೆ.Continue reading “‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ವಿರೋಧ ರಾಜಕೀಯ ಪ್ರೇರಿತ ಹಾಗೂ ಹಾಸ್ಯಾಸ್ಪದ : ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು”

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರಗಿಸುವಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರಗಿಸುವಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪೂರು ಉಗ್ಗೇಲ್ ಬೆಟ್ಟು ನಿವಾಸಿ ಅಕ್ಷತಾ ಪೂಜಾರಿ ಅವರ ಮನೆಗೆ ಮುಂಜಾನೆ ಸುಮಾರು 4.00 ಗಂಟೆಗೆ 5 ಮಂದಿ ಆಕ್ರಮವಾಗಿ ಪ್ರವೇಶಿಸಿ ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ, ಕುಮಾರಿ ಅಕ್ಷತಾ ಅವರ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿContinue reading “ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರಗಿಸುವಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ”

ಸ್ಪೀಕರ್ ಖಾದರ್ ಮೆಚ್ಚಿಸಲು ಶಾಸಕರ ವಿರುದ್ಧ ಪ್ರಸಾದ್ ಕಾಂಚನ್ ಹತಾಶ ಹೇಳಿಕೆ : ದಿನೇಶ್ ಅಮೀನ್

ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಅಪ್ರಬುದ್ಧ ಹೇಳಿಕೆಯ ಮೂಲಕ ಪ್ರಸಾದ್ ಕಾಂಚನ್ ಇದೀಗ ಕಾಂಗ್ರೆಸ್ ಪಕ್ಷದಲ್ಲೇ ಮೂಲೆಗುಂಪಾಗಿದ್ದು, ಸದಾ ಶಾಸಕ ಯಶ್ಪಾಲ್ ಸುವರ್ಣರನ್ನು ಟೀಕಿಸುವ ಮೂಲಕ ಸ್ಪೀಕರ್ ಖಾದರ್ ರವರನ್ನು  ಮೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕರಿಗೆ ಬಿಟ್ಟಿ ಉಪದೇಶ ನೀಡುವ ಅಗತ್ಯವಿಲ್ಲ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ. ಸದನದಲ್ಲಿ ಶಾಸಕರು ತನ್ನ ಕ್ಷೇತ್ರದ ಸಮಸ್ಯೆ ಬಗ್ಗೆ ಕೇವಲ 3 ನಿಮಿಷ ಮಾತ್ರ ಮಾತಾಡಿದ್ದು, 30 ಸೆಕೆಂಡ್ ಮಾತಾಡುವಾಗಲೇ ಸ್ಪೀಕರ್Continue reading “ಸ್ಪೀಕರ್ ಖಾದರ್ ಮೆಚ್ಚಿಸಲು ಶಾಸಕರ ವಿರುದ್ಧ ಪ್ರಸಾದ್ ಕಾಂಚನ್ ಹತಾಶ ಹೇಳಿಕೆ : ದಿನೇಶ್ ಅಮೀನ್”

‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ಕೋರಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಉಡುಪಿ: ಡಿ.23ರಂದು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಭವನದಲ್ಲಿ ಹಮ್ಮಿಕೊಂಡಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸದ್ರಿ ನಾಟಕ ಪ್ರದರ್ಶನವನ್ನು ವಿರೋಧಿಸಿ ದಸಂಸ ಜಿಲ್ಲಾ ನಾಯಕ ಜಯನ್ ಮಲ್ಪೆ ಅವರು ಆಕ್ಷೇಪಣೆ ಸಲ್ಲಿಸಿರುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದ್ದು, ಈ ಆಕ್ಷೇಪಣೆಗೆ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಸಂಪೂರ್ಣ ವಿರೋಧ ಇರುತ್ತದೆ. ಈ ನಾಟಕದಲ್ಲಿContinue reading “‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ಕೋರಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ”

ಇತಿಹಾಸ ಪ್ರಸಿದ್ಧ ಉಡುಪಿ ಪರ್ಯಾಯಕ್ಕೆ ಅನುದಾನದ ಬೇಡಿಕೆಗೆ ಸ್ಪೀಕರ್ ಖಾದರ್ ಪೂರ್ವಾಗ್ರಹ ಪೀಡಿತ ಮನಸ್ಥಿತಿಯ ವರ್ತನೆ ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ‘ನಾಡ ಹಬ್ಬ ಮೈಸೂರು ದಸರಾ’ದಂತೆಯೇ ‘ಕರಾವಳಿ ಕರ್ನಾಟಕದ ನಾಡ ಹಬ್ಬ’ ಎಂದೆನಿಸಿರುವ ‘ಉಡುಪಿ ಪರ್ಯಾಯ’ಕ್ಕೆ ವಿಧಾನಸಭಾ ಅಧಿವೇಶನದಲ್ಲಿ ಅನುದಾನದ ಬೇಡಿಕೆ ಇಟ್ಟಿರುವ ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣ ಅವರ ಮಾತನ್ನು ಹಗುರವಾಗಿ ಪರಿಗಣಿಸಿ, ಹಿಂದೂ ಧರ್ಮದ ಅಸ್ಮಿತೆಯ ಭಾಗವಾದ ಹರಿಕಥೆಯನ್ನು ತಿರಸ್ಕಾರ ಭಾವದಿಂದ ಉಲ್ಲೇಖಸಿ ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯನ್ನುoಟುಮಾಡಿರುವ ವಿಧಾನಸಭಾ ಸ್ಪೀಕರ್ ಅಬ್ದುಲ್ ಖಾದರ್ ಅವರ ರಾಜಕೀಯ ಪ್ರೇರಿತ ಕ್ಷುಲ್ಲಕ ವರ್ತನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್Continue reading “ಇತಿಹಾಸ ಪ್ರಸಿದ್ಧ ಉಡುಪಿ ಪರ್ಯಾಯಕ್ಕೆ ಅನುದಾನದ ಬೇಡಿಕೆಗೆ ಸ್ಪೀಕರ್ ಖಾದರ್ ಪೂರ್ವಾಗ್ರಹ ಪೀಡಿತ ಮನಸ್ಥಿತಿಯ ವರ್ತನೆ ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ”

ಗುಂಡು ಶೆಟ್ಟಿ ಕಪ್ಪೆಟ್ಟು ನಿಧನ

ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ವರ್ಷ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು ತನ್ನ ನೇರ ನಡೆ-ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧುContinue reading “ಗುಂಡು ಶೆಟ್ಟಿ ಕಪ್ಪೆಟ್ಟು ನಿಧನ”

Design a site like this with WordPress.com
Get started