
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ವರ್ಷ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು.
ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು ತನ್ನ ನೇರ ನಡೆ-ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧು ವರ್ಗ ಮತ್ತು ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.