Design a site like this with WordPress.com
Get started

ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.

ಬೆಂಗಳೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ‌ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ‌ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೆ ನನಗೆ ಮನವಿ ಸಲ್ಲಿಸಿ, ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ‌ ಮಾಡಿದ್ದರು. ಕರ್ನಾಟಕ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ರು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘೃವಾಗಿ‌‌ ಕೇಂದ್ರದಿಂದ‌ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆContinue reading “ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.”

ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು! ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿContinue reading “ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ”

ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರು ಮತ್ತು ಮತದಾರರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು.Continue reading “ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ”

ಸೋಲಿನ ಖಾತರಿಯಿಂದ ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕಾರ್ಡ್ ವಿತರಣೆ: ಕುಯಿಲಾಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಜನತೆಯ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸೋಲಿನ ಖಾತರಿಯಿಂದ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ‘ಗರೀಭೀ ಹಠಾವೋ’ ಎಂಬ ಪೊಳ್ಳು ಘೋಷಣೆಯೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶ ಲೂಟಿಗೈದ ಕಾಂಗ್ರೆಸ್ಸಿನ ಸ್ವತಃ ಪರಮೋಚ್ಚ ನಾಯಕರು ಭ್ರಷ್ಟಾಚಾರ ಹಗರಣಗಳಲ್ಲಿ ತನಿಖೆ ಎದುರಿಸುತ್ತಾ ಬೇಲ್ ಮೇಲೆ ಹೊರಗಿರುವುದು ಕಾಂಗ್ರೆಸ್ಸಿನ ನೈತಿಕತೆಗೆ ಒಡ್ಡಿರುವ ಜ್ವಲಂತ ಸವಾಲಾಗಿದೆ. ಅನ್ನಭಾಗ್ಯ ಕೇಂದ್ರContinue reading “ಸೋಲಿನ ಖಾತರಿಯಿಂದ ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕಾರ್ಡ್ ವಿತರಣೆ: ಕುಯಿಲಾಡಿ”

ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದು ಚುನಾವಣಾ ತಯಾರಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್ ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಮಾತನಾಡಿ ಚುನಾವಣೆಯನ್ನು ಎದುರಿಸುವ ಕುರಿತು ಮಾಹಿತಿContinue reading “ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ”

ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಉಡುಪಿಗೆ ಸ್ವಾಗತ

News By ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ಧರ ಪ್ರಕೋಷ್ಠದ ಜಿಲ್ಲಾContinue reading “ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಉಡುಪಿಗೆ ಸ್ವಾಗತ”

ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗದಿರಿ: ಕುಯಿಲಾಡಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ದೇಶ ವಿರೋಧಿ ಮಾನಸಿಕತೆಯ ಮುಸ್ಲಿಂ ಮೂಲಭೂತವಾದಿ ಸಂಘಟನೆ ಎಸ್ಡಿಪಿಐ ಜೊತೆಗೆ ಕಾಂಗ್ರೆಸ್ಸಿನ ಅಪವಿತ್ರ ಮೈತ್ರಿ, ಒಳ ಒಪ್ಪಂದ ಸಾಕ್ಷಿ ಸಮೇತ ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್ಸಿನ ಷಡ್ಯಂತ್ರ ಮತ್ತು ಆಮಿಷಗಳಿಗೆ ಬಲಿಯಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈ ಹಿಂದೆ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್ಡಿಪಿಐ ಕಾಂಗ್ರೆಸ್ ಜೊತೆ ಸ್ಥಾನ ಹೊಂದಾಣಿಕೆ ಮಾಡುವಂತೆ ಕಾಂಗ್ರೆಸ್ಸಿನ ರಾಜ್ಯ ಮುಖಂಡರು ಒಳ ಒಪ್ಪಂದಕ್ಕಾಗಿ ಅಂಗಲಾಚಿರುವುದನ್ನುContinue reading “ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗದಿರಿ: ಕುಯಿಲಾಡಿ”

ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಭೆ : ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿಯ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ-ಬೈಂದೂರು ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಜ್ಯೋತಿ ಬೆಳಗಿಸಿ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2023-24ನೇ ಸಾಲಿನ ಕ್ರಿಯಾ ಯೋಜನೆಯನ್ನು ಸಮಗ್ರ ವಿಚಾರ ವಿನಿಮಯದೊಂದಿಗೆ ಅನುಮೋದಿಸಲಾಯಿತು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮದ್ಯContinue reading “ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಭೆ : ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ”

ಕರಾವಳಿಯನ್ನು ಕೊಲೆಗಡುಕರ ಜಿಲ್ಲೆ ಎಂದ ಬಿಕೆ ಹರಿಪ್ರಸಾದ್ ಬೇಷರತ್ ಕ್ಷಮೆಯಾಚಿಸಬೇಕು: ಶ್ರೀಕಾಂತ್ ನಾಯಕ್

News By : ಜನತಾಲೋಕವಾಣಿನ್ಯೂಸ್ ಕಾಪು: ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕರಾವಳಿ ಜಿಲ್ಲೆಗಳನ್ನು ಕೊಲೆಗಡುಕರ ಜಿಲ್ಲೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿ ಕರಾವಳಿ ಜನತೆಗೆ ಅವಮಾನ ಮಾಡಿರುತ್ತಾರೆ. ಕರಾವಳಿ ಜಿಲ್ಲೆಗಳನ್ನು ಎಲ್ಲ ವಿಚಾರಗಳಲ್ಲಿ ದೇಶಕ್ಕೆ ಮಾದರಿ ಎನ್ನುತ್ತಾರೆ. ಸರಕಾರದ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರುವಾಗ ಬುಧ್ಧಿವಂತರ ಜಿಲ್ಲೆ ಎಂದು ಮೊದಲು ಕರಾವಳಿ ಜಿಲ್ಲೆಯಲ್ಲಿ ಜ್ಯಾರಿಗೆ ತಂದು ಸಾಧಕ ಬಾಧಕ ನೋಡಿ ಆಮೇಲೆ ಇತರ ಕಡೆ ಅನುಷ್ಠಾನಕ್ಕೆ ತರುತ್ತಾರೆ. ಜಾತಿಯ ಅಮಲಿನಲ್ಲಿಲ್ಲದೆ,Continue reading “ಕರಾವಳಿಯನ್ನು ಕೊಲೆಗಡುಕರ ಜಿಲ್ಲೆ ಎಂದ ಬಿಕೆ ಹರಿಪ್ರಸಾದ್ ಬೇಷರತ್ ಕ್ಷಮೆಯಾಚಿಸಬೇಕು: ಶ್ರೀಕಾಂತ್ ನಾಯಕ್”

ಬಿಜೆಪಿ ಬಹುಮತ ಪಡೆಯಲು ರಥಯಾತ್ರೆ ನೆರವು: ಈಶ್ವರಪ್ಪ

News By: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ನಡೆಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಉಡುಪಿ ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿಯಾಗಿ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದ ಪರಿಸ್ಥಿತಿ ಇತ್ತು. ಈಗ ಪ್ರತಿ ಕ್ಷೇತ್ರಕ್ಕೆ 10ಕ್ಕೂ ಹೆಚ್ಚುContinue reading ಬಿಜೆಪಿ ಬಹುಮತ ಪಡೆಯಲು ರಥಯಾತ್ರೆ ನೆರವು: ಈಶ್ವರಪ್ಪ