ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ-ಸುಶಾಸನ ದಿನಾಚರಣೆಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.

ಉಡುಪಿ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ, ಅಜಾತಶತ್ರು, ಕವಿ ಹೃದಯದ ಅಟಲ್ ಬಿಹಾರಿ ವಾಜಪೇಯಿ ಅವರ ಮೌಲ್ಯಾಧಾರಿತ ರಾಜಕಾರಣ, ಮುತ್ಸದ್ದಿತನ, ಸುವರ್ಣ ಚತುಷ್ಪಥ ಯೋಜನೆಯಂತಹ ದೂರದರ್ಶಿತ್ವದ ಚಿಂತನೆಗಳು, ರಾಷ್ಟ್ರ ಪ್ರೇಮ ಸರ್ವಕಾಲಿಕ ಮಾದರಿಯಾಗಿದೆ. ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿContinue reading “ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ-ಸುಶಾಸನ ದಿನಾಚರಣೆಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.”

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2024-26ನೇ ಸಾಲಿನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಭಾoಡೇಶ್ವರ ಇವರು ಡಿ.22ರಂದು ಗರೋಡಿಯ ಪ್ರಾಂಗಣದಲ್ಲಿ ನಡೆದ 2022-24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಚ್ಯುತ ಎ. ಅಮೀನ್ ಕಲ್ಮಾಡಿ, ಉಪಾಧ್ಯಕ್ಷರುಗಳಾಗಿ ಗೋಪಾಲ್ ಸಿ. ಬಂಗೇರ, ಹರೀಶ್ ಎಮ್.ಕೆ. ಕಲ್ಮಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಜತ್ತನ್ ಮಲ್ಪೆ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿಯಾಗಿ ವಿನಯ ಕುಮಾರ್ ಕಲ್ಮಾಡಿ, ಜೊತೆ ಕೋಶಾಧಿಕಾರಿಯಾಗಿ ಜಯಕರ ಪೂಜಾರಿ ಕೊಡವೂರು ,Continue reading “ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ”

ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ

ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಬೂತ್ ಅಧ್ಯಕ್ಷರಾಗಿ ನಿಯೋಜನೆಗೊಳ್ಳುವ ಕಾರ್ಯಕರ್ತರು ಪಕ್ಷದ ಸಕ್ರಿಯContinue reading “ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ”

ಅಲೆವೂರು ಕರ್ವಾಲು ಪರಿಸರದಲ್ಲಿ ಚಿರತೆ ಹಾವಳಿ

ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ವಾಲು, ಮೂಡು ಅಲೆವೂರು, ಪ್ರಗತಿನಗರ ಭಾಗದಲ್ಲಿ ಕಳೆದ ಸುಮಾರು ಹದಿನೈದು ದಿನಗಳಿಂದ ಸುಮಾರು 5 ಚಿರತೆಗಳು ಒಡಾಡಿಕೊಂಡಿದ್ದು ಸ್ಥಳೀಯರು ಸಂಜೆ ಹೊತ್ತಲ್ಲಿ ಹೊರಗಡೆ ತಿರುಗಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಸಂಜೆ ಆರು ಗಂಟೆಯ ನಂತರ ಕರ್ವಾಲು ಪ್ರಗತಿನಗರ ರಸ್ತೆಯ ಫಾಲ್ಕೆ, ತೋಟ ರಸ್ತೆ, ಸ್ಕೌಟ್ ಗೈಡ್ಸ್ ಕ್ಯಾಂಪಸ್ ಬಳಿ, ಕಲ್ಲಕುಮೇರಿ, ಮೂಡುಅಲೆವೂರು ಶೆಟ್ಟಿಗಾರ್ ದೇವಸ್ಥಾನ ಬಳಿ ಅಲ್ಲಲ್ಲಿ ಎರಡು ದೊಡ್ಡದು ಹಾಗೂ ಮೂರು ಚಿರತೆ ಮರಿಗಳನ್ನು ಕಂಡು ಭಯಪಟ್ಟಿರುವರು. ಈ ಕುರಿತಂತೆContinue reading “ಅಲೆವೂರು ಕರ್ವಾಲು ಪರಿಸರದಲ್ಲಿ ಚಿರತೆ ಹಾವಳಿ”

ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಾಯೋಜಿತ ವಕ್ಫ್ ಆಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ “ನಮ್ಮ ಭೂಮಿ ನಮ್ಮ ಹಕ್ಕು” ಅಭಿಯಾನದಡಿ ಬೃಹತ್ ಆಂದೋಲನ ನಡೆಯಿತು. ಬೃಹತ್ ಆಂದೋಲನಕ್ಕೆ ಚಾಲನೆ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸರಕಾರದ ಆಡಳಿತ ವೈಫಲ್ಯ, ವಕ್ಫ್ ಅವಾಂತರ, ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ ಹಾಗೂ ಸರಣಿ ಹಗರಣಗಳ ವಿಚಾರವನ್ನುContinue reading “ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ”

ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ನಾಳೆ ನವೆಂಬರ್ 21, ಗುರುವಾರ ಬೆಳಿಗ್ಗೆ ಗಂಟೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ ನಡೆಯಲಿದೆ ಎಂದು ಬಿಜೆಪಿ ಉಡುಪಿContinue reading “ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ”

ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ:ಪುತ್ತಿಗೆಶ್ರೀ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಉಡುಪಿಯಲ್ಲಿ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ

ಉಡುಪಿ: ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರಮಟ್ಟದ ಕರಾಟೆContinue reading “ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ:ಪುತ್ತಿಗೆಶ್ರೀ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಉಡುಪಿಯಲ್ಲಿ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ”

ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ಕೂಟವು ನ.16 ಮತ್ತು 17ರಂದು ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ನಡೆಯಲಿದೆ ಎಂದು ಸ್ಪರ್ಧಾಕೂಟದ ಸಂಘಟನಾ ಸಮಿತಿಯ ಸಲಹೆಗಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ನ.16 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ  ಉಡುಪಿ ಶ್ರೀContinue reading “ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ”

‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ

ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವಿಸ್ತೃತ ಸೇವೆಯು ಕರಾವಳಿ ವಲಯದ ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಜೋಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಸಾಂಸ್ಕೃತಿಕ ವಿನಿಮಯContinue reading “‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ”

   ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ  ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ

ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ‌ಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್,  ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ ಸುವರ್ಣ,Continue reading ”   ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ  ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ”

Design a site like this with WordPress.com
Get started