ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ರಾಜ್ಯ ಬಿಜೆಪಿ ಸೂಚನೆ ಮೇರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆ ಮತ್ತು ಎಲ್ಲಾ ಆರು ಮಂಡಲಗಳ ವ್ಯಾಪ್ತಿಯ 25ಕ್ಕೂ ಮಿಕ್ಕಿ ವಿವಿಧ ಕೇಂದ್ರಗಳಲ್ಲಿ ಯೋಗ ಶಿಬಿರಗಳ ಆಯೋಜನೆ ಮೂಲಕ ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗಿದೆ. ಅಂತಾರಾಷ್ಟ್ರೀಯ ಯೋಗ ದಿನದ ಜೊತೆಗೆ ಇತರ ಹಲವಾರು ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಬೂತ್ ಮಟ್ಟದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು”

ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿContinue reading “ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್”

ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿContinue reading “ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್”

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ,Continue reading “ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:”

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವContinue reading “ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್”

ಬಿಜೆಪಿ ಸೇವಾ ಕಾರ್ಯಗಳೇ ವಿರೋಧಿಗಳ ಟೀಕೆಗೆ ಸೂಕ್ತ ಉತ್ತರ – ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಕೋವಿಡ್ ಸಂಕಷ್ಟದಲ್ಲಿರುವ ಜನತೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ರೂ.1,250 ಕೋಟಿ ಮತ್ತು ರೂ.500 ಕೋಟಿಗಳ 2 ಪ್ಯಾಕೇಜ್‍ಗಳ ಘೋಷಣೆಯ ಜೊತೆಗೆ ಕೋವಿಡ್‍ನಿಂದಮೃತಪಟ್ಟ ಸದಸ್ಯರ ಬಡ ಕುಟುಂಬಕ್ಕೆ ತಲಾ ರೂ.1 ಲಕ್ಷ ಪರಿಹಾರ ನೀಡುವ ಬಗ್ಗೆ ರೂ.300 ಕೋಟಿಗಳನ್ನು ಮಂಜೂರು ಮಾಡಿರುವುದು ಸ್ವಾಗತಾರ್ಹ. ಬಿಜೆಪಿ ಸೇವಾ ಕಾರ್ಯಗಳೇ ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಪಕವಾದ ಉತ್ತರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ರಾಜ್ಯ ಬಿಜೆಪಿಯ ಸೂಚನೆಯಂತೆ ಸೇವಾ ಹೀContinue reading “ಬಿಜೆಪಿ ಸೇವಾ ಕಾರ್ಯಗಳೇ ವಿರೋಧಿಗಳ ಟೀಕೆಗೆ ಸೂಕ್ತ ಉತ್ತರ – ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಶಿರ್ವದ ಸುನೀಲ್ ಕಬ್ರಾಲ್ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ

ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ, ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಪಕ್ಷಕ್ಕಾಗಿ ದುಡಿದ ಶಿರ್ವದ ಸುನೀಲ್ ಕಬ್ರಾಲ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದ ಸದಸ್ಯರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ: ಕುಯಿಲಾಡಿ ಸುರೇಶ್ ನಾಯಕ್

ಸದಾ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡು ದೇಶ, ಧರ್ಮವನ್ನು ಒಡೆಯುವ ಕೀಳು ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ತನ್ನ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಸದಾ ಅಪಪ್ರಚಾರ ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಾ ದೇಶದ ಏಕತೆಗೆ ಧಕ್ಕೆ ತರುವಂತಹ ಹೀನ ಕೃತ್ಯದಲ್ಲಿ ತೊಡಗಿರುವುದು ಶೋಚನೀಯ. ಒಂದೇ ಕುಟುಂಬದContinue reading “ಕಾಂಗ್ರೆಸ್ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ: ಕುಯಿಲಾಡಿ ಸುರೇಶ್ ನಾಯಕ್”

ಕಾಂಗ್ರೆಸ್ ಅಪಪ್ರಚಾರದ ಪ್ರತಿಭಟನೆ ಟೂಲ್‌ಕಿಟ್‌ ಮುಂದುವರಿದ ಭಾಗದಂತಿದೆ : ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ : ಕೊರೋನಾ ಸಂಕಷ್ಟದಿಂದ ವಿಶ್ವವೇ ಕಂಗೆಟ್ಟಿದ್ದರೂ ಪ್ರಧಾನಿ ಮೋದಿ ಸಮರ್ಥ ನೇತ್ವದಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಣದಲ್ಲಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ನಡೆಗಳನ್ನು ಕೇವಲ ವಿರೋಧಕ್ಕಾಗಿ ವಿರೋಧಿಸುವ ಕಾಂಗ್ರೆಸ್, ಕೋವಿಡ್ ಲಸಿಕೆಯಿಂದ ಪ್ರಾರಂಭಗೊಂಡು ಎಲ್ಲ ವಿಚಾರಗಳಲ್ಲೂ ಅಪಪ್ರಚಾರದಲ್ಲಿ ತೊಡಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ, ನಾಯಕತ್ವದ ಕೊರತೆಯಿಂದ ಸೊರಗಿರುವ ಕಾಂಗ್ರೆಸ್ ಇದೀಗ ಪೆಟ್ರೋಲ್ ಬೆಲೆ ಏರಿಕೆಯ ನೆಪವೊಡ್ಡಿ ಪೆಟ್ರೋಲ್ ಬಂಕ್‌ಗಳ ಎದುರು ನಾಟಕೀಯ ಪ್ರತಿಭಟನೆಗೈದು ತಪ್ಪು ಮಾಹಿತಿಗಳನ್ನು ನೀಡುವ ಮೂಲಕ ಜನತೆಯ ದಾರಿ ತಪ್ಪಿಸುವ ಪ್ರಯತ್ನದಲ್ಲಿContinue reading “ಕಾಂಗ್ರೆಸ್ ಅಪಪ್ರಚಾರದ ಪ್ರತಿಭಟನೆ ಟೂಲ್‌ಕಿಟ್‌ ಮುಂದುವರಿದ ಭಾಗದಂತಿದೆ : ಜಿಲ್ಲಾ ಬಿಜೆಪಿ ಖಂಡನೆ”

ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

“ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 15-06-2021 ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರು ಸಂಕೇಶ ವಿಠೋಬ ಭಜನಾ ಮಂಡಳಿಯ ಎದುರು 5 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.* *ಹರಿಯಪ್ಪ ಕೋಟ್ಯಾನ್ ಮತ್ಸ್ಯೋದ್ಯಮಿಗಳು ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನುContinue reading “ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ”

Design a site like this with WordPress.com
Get started