ಉಡುಪಿ: ತನ್ನ ಆದರ್ಶ ಮತ್ತು ಸಾಮಾಜಿಕ ಚಿಂತನೆಗಳಿಂದ ದೇಶಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ಜಗತ್ತಿಗೆ ಆದರ್ಶವಾದಾಗ ಮಾತ್ರ ಓರ್ವ ಜನನಾಯಕ ತನ್ನ ಬದುಕು ಸಾಕಾರ ಗೊಳಿಸುತ್ತಾನೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಅಂತಹ ಅದ್ಭುತ ವ್ಯಕ್ತಿತ್ವ ಹೊಂದಿದ ಜಾಗತಿಕ ನಾಯಕನಾಗಿ ಗುರುತಿಸಲ್ಪಡುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ರಕ್ತದಾನ ಶಿಬಿರಗಳಂತಹ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ನಿಜವಾದ ಅರ್ಥಪೂರ್ಣ ಸಂಭ್ರಮಾಚರಣೆ ಎಂದು ಶಾಸಕರಾದ ಯಶಪಾಲ್ ಸುವರ್ಣ ರವರು ಅಭಿಮತ ವ್ಯಕ್ತಪಡಿಸಿದರು. ಅವರು Continue reading “ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು:ಮಣಿಪಾಲದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ”
Author Archives: ಜನತಾಲೋಕವಾಣಿ.com
ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ
ಉಡುಪಿ: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದContinue reading “ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ”
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ – ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ನಿತ್ಯೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ”
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ : ಭಜನಾ ಮಂಡಳಿಗಳಿಂದ ‘ಸಾಧಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷದಂತೆ ಈ ಬಾರಿ ಸೆ.22ರಿಂದ 29ರ ವರೆಗೆ ‘ರಾಜ್ಯ ಮಟ್ಟದ ಭಜನಾ ಕಮ್ಮಟ’ ನಡೆಯಲಿದೆ. ಸೆ.29ರಂದು ನಡೆಯಲಿರುವ ‘ಭಜನೋತ್ಸವ’ ಹಾಗೂ ‘ಭಜನಾ ಕಮ್ಮಟದ ಸಮಾರೋಪ’ ಸಮಾರಂಭದಲ್ಲಿ ತಾಲೂಕಿನ ಆಯ್ದ ಒಂದು ಉತ್ತಮ ಭಜನಾ ಮಂಡಳಿಗೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಿಂದ ‘ಸಾಧಕ ಪ್ರಶಸ್ತಿ’ಯನ್ನು ಸ್ವೀಕರಿಸುವ ಸದವಕಾಶವಿದೆ. ಈ ನಿಟ್ಟಿನಲ್ಲಿ ಉಡುಪಿ ತಾಲೂಕಿನ ಆಸಕ್ತ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ನಿಗದಿತ ನಮೂನೆಯಲ್ಲಿ ತಮ್ಮ ಭಜನಾ ಮಂಡಳಿಯ ಮಾಹಿತಿಯನ್ನು ಭರ್ತಿ ಮಾಡಿContinue reading “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ : ಭಜನಾ ಮಂಡಳಿಗಳಿಂದ ‘ಸಾಧಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ”
ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ
ಅತ್ತ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ಸ್ವದೇಶವನ್ನು ತೆಗಳುತ್ತಾ ಭಾರತದಲ್ಲಿ ಮಹಿಳೆಯರಿಗೆ ಸಮಾನತೆ ಇಲ್ಲ ಎಂದು ಬೊಬ್ಬಿರಿದರೆ, ಉಡುಪಿಯಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ‘ಬಿಜೆಪಿ ಪುಂಡಾಟ ಕಣ್ಣು ಮುಚ್ಚಿ ಒಪ್ಪಲು ಕಾಂಗ್ರೆಸ್ ಕಾರ್ಯಕರ್ತರು ಕೈಗೆ ಬಳೆ ತೊಟ್ಟು ಕುಳಿತಿಲ್ಲ’ ಎನ್ನುವ ಮೂಲಕ ಬಳೆ ತೊಡುವುದನ್ನು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದContinue reading “ಬಳೆ ತೊಡುವುದು ದೌರ್ಬಲ್ಯದ ಸಂಕೇತವೆಂಬಂತೆ ಬಿಂಬಿಸಿ ಹಿಂದೂ ಮಹಿಳೆಯರನ್ನು ಅವಮಾನಿಸಿರುವ ವೆರೋನಿಕಾ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ”
ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ
ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ‘ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಕಛೇರಿಗೆ ನುಗ್ಗುತ್ತೇವೆ’ ಎಂಬ ಪ್ರಚೋದನಕಾರಿ, ದೇಶ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಪೊಲೀಸ್ ಇಲಾಖೆ ಐವನ್ ಡಿಸೋಜ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸದೇ ಇರುವುದು ಓಲೈಕೆ ರಾಜಕಾರಣದ ಪರಮಾವಧಿಯಾಗಿದೆ.Continue reading “ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ”
ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! :ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ
*”ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು”ಎಂದ ಐವನ್ ಡಿ’ಸೋಜಾ ವಿರುದ್ಧ ಯಾವುದೇ ಕ್ರಮವಿಲ್ಲ…! ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! ಪೋಲೀಸ್ ಇಲಾಖೆ ಒಂದು ಪಕ್ಷದ ಕೈಗೊಂಬೆಯಾಗಿದೆ!! – ಶಶಾಂಕ್ ಶಿವತ್ತಾಯ ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ* ಕುಂದಾಪುರದ ಪ್ರಥಮ ದರ್ಜೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ.ಜಿ. ರಾಮಕೃಷ್ಣ ಅವರಿಗೆ ಘೋಷಿಸಲಾಗಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನುContinue reading “ಘೋಷಣೆಯಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಉಡುಪಿ ಶಾಸಕರ ವಿರುದ್ಧ ಪ್ರಕರಣ ದಾಖಲು..! :ಉಡುಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಖಂಡನೆ”
ಶಿಕ್ಷಕರ ಪರ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ : ದಿನೇಶ್ ಅಮೀನ್
ಉಡುಪಿ ಜಿಲ್ಲೆಯ ಅರ್ಹ ಶಿಕ್ಷಕರಿಗೆ ತಮ್ಮದೇ ಸರಕಾರ ಘೋಷಿಸಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಜಾಬ್ ಬೆಂಬಲಿತ ಮತಾಂಧ ಶಕ್ತಿಗಳ ಓಲೈಕೆಗಾಗಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ನಿಲುವನ್ನು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಹಿಜಾಬ್Continue reading “ಶಿಕ್ಷಕರ ಪರ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ಸಿನ ಶಿಕ್ಷಕ ವಿರೋಧಿ ಮಾನಸಿಕತೆ ಬಯಲಾಗಿದೆ : ದಿನೇಶ್ ಅಮೀನ್”
ಶಿಕ್ಷಕ ಪ್ರಶಸ್ತಿ ತಡೆ ಪ್ರಕರಣ: ಶಾಸಕರ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು ಖಂಡನೀಯ
ಉಡುಪಿ: ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಡೆಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ. ಸರ್ಕಾರವೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಿಕ್ಷಕರಿಗಾದ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸಿರುವ ವಿರುದ್ಧ ಕ್ರಮContinue reading “ಶಿಕ್ಷಕ ಪ್ರಶಸ್ತಿ ತಡೆ ಪ್ರಕರಣ: ಶಾಸಕರ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು ಖಂಡನೀಯ”
ಜಲಜ ಪೂಜಾರ್ತಿ, ಬೀಡು ಮಾರ್ಗ, ಅಂಬಲಪಾಡಿ ನಿಧನ
ಅಂಬಲಪಾಡಿ ಗ್ರಾಮದ ಬೀಡು ಮಾರ್ಗ ನಿವಾಸಿ ಶ್ರೀಮತಿ ಜಲಜ ಪೂಜಾರ್ತಿ (74 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಸೆ.9) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಮತ್ತು ಬಂಧು ವರ್ಗವನ್ನು ಅಗಲಿದ್ದಾರೆ.