ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು (81 ವರ್ಷ) ಅವರು ಇಂದು ಸೆ.8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಹಾಬಲ ಪೂಜಾರಿ ಅವರು ಬಸ್ ಮಾಲಕರಾಗಿದ್ದು, ಉಡುಪಿಯ ಹಿರಿಯ ಬಸ್ ಏಜೆಂಟರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಬಂಧು ವರ್ಗ ಹಾಗೂ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರವು ನಾಳೆ ಸೆ.9ರಂದುContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ”

ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ

ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಹಾಗೂ ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಇಸ್ಲಾಮಿಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿನಿಗೆ, ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವContinue reading “ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಮ್. ಸುವರ್ಣ”

ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ, ಅಭಿವೃದ್ಧಿಯನ್ನು ಮರೆತ ರಾಜ್ಯ ಸರಕಾರ : ರೇಷ್ಮಾ ಉದಯ್‌ ಶೆಟ್ಟಿ

ಉಡುಪಿ: ಉಡುಪಿಯಲ್ಲಿ ಈ ಬಾರಿ ಧಾರಾಕಾರವಾಗಿ ಸುರಿದ ಮಳೆಗೆ ಜಿಲ್ಲಾದ್ಯಂತ ಅಪಾರ ಹಾನಿಯಾಗಿದ್ದು, ಜಿಲ್ಲೆಯ ಹೆದ್ದಾರಿಗಳು ಸೇರಿದಂತೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಬಹುತೇಕ ರಸ್ತೆಗಳು ಹಾಳಾಗಿವೆ. ಅಂಗನವಾಡಿ ಶಾಲಾ ಕಟ್ಟಡಗಳು, ಕಾಲುಸಂಕ, ತಡೆಗೋಡೆ, ವಿದ್ಯುತ್ ಕಂಬಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದ್ದು, ಸುಮಾರು 234 ಕೋಟಿ ರೂಪಾಯಿ ಮೌಲ್ಯದಷ್ಟು ಹಾನಿಯಾಗಿರುವ ವರದಿಯನ್ನು ಜಿಲ್ಲಾಡಳಿತವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರೂ, ಇದುವರೆಗೂ ನಯಾ ಪೈಸೆ ಪರಿಹಾರ ಬಿಡುಗಡೆಯಾಗದೇ ಇರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ, ಅಭಿವೃದ್ಧಿಯನ್ನು ಮರೆತ ರಾಜ್ಯ ಸರಕಾರ : ರೇಷ್ಮಾ ಉದಯ್‌ ಶೆಟ್ಟಿ”

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ ನಗರಸಭೆಗೆ ನೂತನವಾಗಿ ಆಯ್ಕೆಗೊಂಡಿರುವ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಶಾಲು ಹೊದೆಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ದೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿContinue reading “ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ”

ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ನವ ವಿಧ ಭಕ್ತಿಗಳಲ್ಲಿ ಭಜನೆಗೆ ವಿಶಿಷ್ಟ ಸ್ಥಾನವಿದೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಏಕಾಗ್ರತೆಯ ಜೊತೆಗೆ ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯ ಇದರ ನೇತೃತ್ವದಲ್ಲಿ ಮಹಾತೋಭಾರ ಶ್ರೀ ವೀರಭದ್ರ ದೇವಸ್ಥಾನ ಹಿರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಮತ್ತು  ಎಸ್.ವಿ.ಟಿ ಕರಸೇವಕರು ಹಿರಿಯಡ್ಕContinue reading “ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ”

ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್

ಉಡುಪಿ: ಕಾರ್ಕಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕರು ಹಿಂದೂ ಯುವತಿಯೋರ್ವಳನ್ನು ಅಪಹರಿಸಿ, ಬಲವಂತಾಗಿ ಅಮಲು ಪದಾರ್ಥವನ್ನು ಕುಡಿಸಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಕೃತ್ಯ ಅತ್ಯಂತ ಖಂಡನೀಯ ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ. ಸುಶೀಕ್ಷಿತ ಕರಾವಳಿ ಜಿಲ್ಲೆಯಲ್ಲಿ ಇಂತಹ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಶಿಕ್ಷಣ ಮತ್ತು ವೃತ್ತಿಗಾಗಿ ಯುವತಿಯರು ಜಿಲ್ಲೆಗೆ ಅಗಮಿಸುತ್ತಿರುವುದು ಸ್ವಭಾವಿಕ. ಕೆಲವು ಮತಾಂಧ ದುಷ್ಟ ಶಕ್ತಿಗಳು ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದು,Continue reading “ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್”

ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ

ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹುಬ್ಬಳ್ಳಿಯ ನೇಹಾ ಹತ್ಯೆ, ಬೆಳಗಾವಿContinue reading “ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ರೇಷ್ಮಾ ಉದಯ ಶೆಟ್ಟಿ”

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಭಜನಾ ಮಂದಿರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಶಾಲು ಹೊದೆಸಿ ಗೌರವಿಸಿ, ಶ್ರೀದೇವರ ಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರContinue reading “ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”

ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆಯನ್ನು ಆ.20ರಂದು ಭಜನಾ ಸೇವೆ, ಮಹಾ ಪೂಜೆ ಮತ್ತು ಅನ್ನ ಸಂತರ್ಪಣೆಯೊಂದಿಗೆ ಭಜನಾ ಮಂದಿರದಲ್ಲಿ ಆಚರಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ‘ಸಂಘಟನೆಯಿಂದ ಬಲಯುತರಾಗಿರಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ’ ಎಂಬ ಅಮೃತ ವಾಣಿಯಂತೆ ಶ್ರೀ ಗುರು ಜಯಂತಿಯ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ 19Continue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಿಗೆ ಸ್ವಯಂ ಪ್ರಚಾರದ ತೆವಲು* ಟೋಲ್ ಹೋರಾಟ ಹಾದಿ ತಪ್ಪಿಸಲು ಸೊರಕೆಯರಿಂದ ನಾಟಕ – ಶ್ರೀಕಾಂತ ನಾಯಕ್

ಕಾಪು: ಪಡುಬಿದ್ರೆ ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಕಂಚಿನಡ್ಕದ ಬಳಿ ಟೋಲ್ ನಿರ್ಮಾಣವಾಗುವ ಲಕ್ಷಣದಿಂದ ಸಿಡಿದೆದ್ದ ಕಾಪು ಹಾಗೂ ಕಾರ್ಕಳ ಕ್ಷೇತ್ರದ ಜನತೆ ಶ್ರೀ ಸುಹಾಸ್ ಹೆಗ್ಡೆ ಇವರ ನೇತ್ರತ್ವದಲ್ಲಿ ಸಂಘಟಿತರಾಗಿ‌ ಹೋರಾಟ ಮಾಡಿ ಗ್ರಾಮ ಗ್ರಾಮಗಳಲ್ಲಿ ಜನಬೆಂಬಲ ಪಡೆದು ಕಾರ್ಯೋನ್ಮುಖರಾಗಿದ್ದು ಇದರ ಕಾರ್ಯವೈಖರಿಗೆ ರಾಜ್ಯ ಸರಕಾರವೇ ಬೆಚ್ಚಿಬಿದ್ದಿದ್ದು ಈ ಟೋಲ್ ಬಹುತೇಕ ರದ್ದುಗೊಳ್ಳುವ ಹಂತದಲ್ಲಿರುವಾಗ ಮಾನ್ಯ ಕಾಪುವಿನ ಮಾಜಿ ಸಚಿವರು, ಪಸ್ತುತ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರೂ ಆಗಿರುವ ಎಲ್ಲದರಲ್ಲೂ ರಾಜಕಾರಣ ಬೆಸರಸುವ ಕೆಟ್ಟ ಚಟ ಹೊಂದಿರುವ Continue reading “ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಿಗೆ ಸ್ವಯಂ ಪ್ರಚಾರದ ತೆವಲು* ಟೋಲ್ ಹೋರಾಟ ಹಾದಿ ತಪ್ಪಿಸಲು ಸೊರಕೆಯರಿಂದ ನಾಟಕ – ಶ್ರೀಕಾಂತ ನಾಯಕ್”

Design a site like this with WordPress.com
Get started