ಉಡುಪಿ: ಭಾರತೀಯ ಜನತಾ ಪಾರ್ಟಿ ದೇಶದಾದ್ಯoತ ಹಮ್ಮಿಕೊಂಡಿರುವ ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನದಡಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸುಮಾರು 1,336 ಮಂದಿ ರಾಮ ಭಕ್ತರು ಶ್ರೀ ರಾಮ ದರ್ಶನ ಭಾಗ್ಯ ಪಡೆಯಲು ಸಜ್ಜಾಗಿದ್ದಾರೆ. ಈ ಅಭಿಯಾನದಡಿ ಪ್ರಥಮ ಹಂತದ ಕೊನೆಯ ತಂಡದ ಪ್ರಯಾಣ ಇದಾಗಿದೆ. ಮಂಗಳೂರಿನಿಂದ ಅಯೋಧ್ಯೆಗೆ ತೆರಳಲಿರುವ ವಿಶೇಷ ರೈಲು ‘ಆಸ್ತಾ’ದಲ್ಲಿ ನಾಳೆ ಮಾ.6ರ ಸಂಜೆ ಗಂಟೆ 6.00ಕ್ಕೆ ಅಯೋಧ್ಯೆಗೆ ಪ್ರಯಾಣ ಬೆಳೆಸಲಿರುವ ಉಡುಪಿ ಜಿಲ್ಲೆಯ ಸುಮಾರುContinue reading “ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು”
Author Archives: ಜನತಾಲೋಕವಾಣಿ.com
ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಫೆ.27ರಂದು ರಾಜ್ಯಸಭೆ ಚುನಾವಣೆಯ ಫಲಿತಾಂಶ ಘೋಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಜೀರ್ ಹುಸೇನ್ ಗೆಲುವನ್ನು ಸಂಭ್ರಮಿಸುವ ಭರದಲ್ಲಿ ಅವರ ಬೆಂಬಲಿಗರೆನ್ನಲಾದ ವ್ಯಕ್ತಿಗಳು ವಿಧಾನ ಸೌಧದ ಆವರಣದೊಳಗೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆ ಕೂಗಿದ್ದರೂ, ಕಾಂಗ್ರೆಸ್ ಮುಖಂಡರು ಅಂತಹ ಭಯೋತ್ಪಾದಕರ ಪರವಾಗಿ ನಿಂತು ಘಟನೆಯನ್ನು ಅಲ್ಲಗಳೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ದಾಖಲಿಸಿದ ದೂರಿನನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿಯನ್ನಾಧರಿಸಿ ಪೋಲೀಸರು ಮೂರು ಮಂದಿ ದೇಶದ್ರೋಹಿಗಳನ್ನು ಬಂಧಿಸಿರುವ ಪ್ರಕ್ರಿಯೆಯಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆContinue reading “ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”
ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಜರಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರಕಾರ ಬೊಕ್ಕಸವನ್ನುContinue reading “ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ”
ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಉಡುಪಿ, ಫೆ.28: ಕಾಂಗ್ರೆಸ್ಸಿನ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚಾರಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ನಡೆದ ದೇಶ ವಿರೋಧಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು. ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಯುವ ಮೋರ್ಚಾ ರಾಜ್ಯContinue reading “ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ”
ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್
ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆ ದೇಶ ಕಟ್ಟುವ ಚುನಾವಣೆಯಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಎಲ್ಲರನ್ನೂ ಜೊತೆಯಾಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಬೂತ್ ಗೆಲ್ಲಿಸುವ ಗುರಿಯೊಂದಿಗೆ ಪಕ್ಷದ ವಿಜಯ ಯಾತ್ರೆಯನ್ನು ಮುಂದುವರಿಸಲು ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಲೋಕಸಭಾ ಚುನಾವಣಾ ಕರಾವಳಿ-ಮಲೆನಾಡು ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯContinue reading “ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್”
ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ
ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದContinue reading “ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ”
ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ
ಉಡುಪಿ: ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿಖ್ಯಾತ್ ಶೆಟ್ಟಿಯವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ರವರು ನಗರ ಕಛೇರಿಯಲ್ಲಿ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರಜಿತ್ ಆಚಾರ್ಯ ಮುಂತಾದವರುContinue reading “ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ”
‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.23ರಿಂದ ಮಾ.5ರ ವರೆಗೆ ಉಡುಪಿ ಜಿಲ್ಲೆಯ ವಿಧ ಗ್ರಾಮಗಳಲ್ಲಿ ‘ನಮೋ ಯುವ ಭಾರತ’ ಅಭಿಯಾನದಡಿ ‘ಯುವ ಚೌಪಾಲ್’, 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ’ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನವು ಮೇ 25ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಮಾ.3ರ ತನಕ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಡೆಯಲಿದೆ. ಈ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದContinue reading “‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ”
ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಆಗಿದೆ. ಜಿಲ್ಲಾ ಸಮಿತಿ ಮತ್ತು ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರ ಸಮರ್ಪಣಾಭಾವದ ಸೇವೆ ಮತ್ತುContinue reading “ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ”
ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು : ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿಗಳು ಮತ್ತು ಸಂಚಾಲಕರ ನೇಮಕ
ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳು ಮತ್ತು ಸಂಚಾಲಕರನ್ನಾಗಿ ಈ ಕೆಳಗಿನಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ನೇಮಕ ಮಾಡಿರುತ್ತಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪುರ : ನಯನಾ ಗಣೇಶ್ (ಪ್ರಭಾರಿ), ಸತೀಶ್ ಪೂಜಾರಿ (ಸಂಚಾಲಕರು) ಉಡುಪಿ : ರಾಜೇಶ್ ಕಾವೇರಿ (ಪ್ರಭಾರಿ), ಗಿರೀಶ್ ಎಮ್. ಅಂಚನ್ (ಸಂಚಾಲಕರು)Continue reading “ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು : ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿಗಳು ಮತ್ತು ಸಂಚಾಲಕರ ನೇಮಕ”