ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನಾ ಸಮಾರಂಭವು ನಾಳೆ ಫೆ.15 ಗುರುವಾರ ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿಯ ‘ಮಾಂಡವಿ ಟ್ರೇಡ್ ಸೆಂಟರ್’ ಸಂಕೀರ್ಣ ಕಡಿಯಾಳಿ ಇದರ ತಳ ಅಂತಸ್ತಿನಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಹಾಲಿ ಶಾಸಕರು ಮಾಜಿ ಸಚಿವರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿ ಅರಗ ಜ್ಞಾನೇಂದ್ರ ಇವರು ಚುನಾವಣಾ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರುContinue reading “ನಾಳೆ ಫೆ.15 ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಚೇರಿಯ ಉದ್ಘಾಟನೆ”
Author Archives: ಜನತಾಲೋಕವಾಣಿ.com
ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್
ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿContinue reading “ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್”
ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ
ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಡಾ! ವಿ.ಎಸ್. ಆಚಾರ್ಯರವರ ಪುತ್ರರಾದ ಡಾ! ರವಿರಾಜ್Continue reading “ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ”
ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಮುಖ್ಯ : ವೀಣಾ ಎಸ್. ಶೆಟ್ಟಿ
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ : ಅಖಿಲ ಭಾರತೀಯ ಸಂಘಟನಾತ್ಮಕ ಪ್ರವಾಸದ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ: ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ನೂರಾರು ಯೋಜನೆಗಳ ಮೂಲಕ ಜನಪರ ಆಡಳಿತದ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ನಮ್ಮ ಸುಯೋಗ. ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಸದೃಢ ಪಕ್ಷ ಸಂಘಟನೆಯ ಜೊತೆಗೆ ಲೋಕಸಭೆ ಸಹಿತ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿContinue reading “ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಮುಖ್ಯ : ವೀಣಾ ಎಸ್. ಶೆಟ್ಟಿ “
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”
ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಏಕಾತ್ಮ ಮಾನವತಾContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್”
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ
ಉಡುಪಿ: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಉಡುಪಿ ಶ್ರೀ ಕೃಷ್ಣ ದರ್ಶನಗೈದು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆಯನ್ನು ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾContinue reading “ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ”
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ
ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ನೂರಾರು ಜನಪರ ಯೋಜನೆಗಳ ಸಹಿತ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯೊಂದಿಗೆ ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ ಮುಂಚೂಣಿ 3ನೆೇ ಸ್ಥಾನದತ್ತ ದಾಪುಗಾಲು ಹಾಕುತ್ತಿರುವ ಸಮೃದ್ಧ ಭಾರತದ ಕನಸು ನನಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ”
ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಬಿಜೆಪಿ ಉಡುಪಿ ಜಿಲ್ಲೆ ಇದರ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಫೆ.6 ಮಂಗಳವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 1.30ರ ವರೆಗೆ ಉಡುಪಿ-ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಲಿದೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರು ಬೆಳಿಗ್ಗೆ ಗಂಟೆ 10.00ಕ್ಕೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯContinue reading “ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”
ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣ, ಬಿಜೆಪಿ ಹಿರಿಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿಯವರ ನಿಕಟವರ್ತಿ ಹಾಗೂ ಮಾಜಿ ಸಚಿವ ದಿ. ಡಾ! ವಿ.ಎಸ್. ಆಚಾರ್ಯ ಅವರ ಮಾರ್ಗದರ್ಶಕರಾಗಿದ್ದ ಸೋಮಶೇಖರ ಭಟ್ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತುರ್ತು ಪರಿಸ್ಥಿತಿಯContinue reading “ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”