Design a site like this with WordPress.com
Get started

ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ಉಡುಪಿ ಜಿಲ್ಲೆಯ ಪ್ರಬುದ್ಧ ರಾಜಕಾರಿಣಿಗಳಲ್ಲೊಬ್ಬರು, ನೇರ ನಡೆ ನುಡಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ. ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ಹಿರಿಯ ರಾಜಕೀಯ ಮುತ್ಸದ್ಧಿಗಳ ಸಹಿತ ಮಾಜಿ ಶಾಸಕ ಯು.ಆರ್. ಸಭಾಪತಿಯವರ ಶ್ರಮ ಸ್ಮರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆContinue reading “ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”

2ಸಾವಿರ ರೂಪಾಯಿ ನೋಟ್ ಗಳನ್ನು ಚಲಾವಣೆಗೆ ಸ್ಥಗಿತಗೊಳಿಸಿದ RBI : ಸೆ.30ರವರೆಗೆ ಬ್ಯಾಂಕ್ ಗಳಲ್ಲಿ ಬದಲಾಯಿಸಲು ಅವಕಾಶ

ನವದೆಹಲಿ: 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಆರ್ ಬಿ ಐ ಹಿಂದಕ್ಕೆ ಪಡೆದಿದೆ. ದೇಶದಲ್ಲಿ 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಸ್ಥಗಿತಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೀರ್ಮಾನಿಸಿದೆ.ಬ್ಯಾಂಕ್ ಗಳಲ್ಲಿ 2000 ರೂ.ನ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಸೆಪ್ಟಂಬರ್30ರೊಳಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಮ್ಮೆಗೆ 20 ಸಾವಿರ ರೂ.ವರೆಗೆ ಮಾತ್ರ ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ

ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯ ತಂಡ ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿಯನ್ನು ಬೆಂಬಲಿಸಿ ಮಗದೊಮ್ಮೆ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ಅಭಿವೃದ್ಧಿ ಮತ್ತು ಹಿಂದುತ್ವದ ಪರ ವಿಶ್ವಾಸದContinue reading “ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ”

ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸಿ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು ಇನ್ನೆಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ. ಮತ ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಂದರ್ಭContinue reading “ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ”

ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ

ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ”

ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ ಆರನೇ ಗ್ಯಾರಂಟಿ ರಿಲೀಸ್ ಆಗಿದೆ. ಇದರನ್ವಯ ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ, ಪಾಕಿಸ್ತಾನ ಪರ ಘೋಷಣೆ, ಬಾವುಟ ವಿವಾದ ಇತ್ಯಾದಿಗಳು ಪ್ರಾರಂಭಗೊಂಡಿದ್ದು, ಕ್ರಮೇಣ ವಿಪರೀತ ಹಂತವನ್ನು ತಲುಪಲಿದೆ. ಭಾರತೀಯ ಜನತಾ ಪಾರ್ಟಿ ಇಂತಹ ಕುಕೃತ್ಯವನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಜನರನ್ನು ಮರುಳುಗೊಳಿಸಲು ಘೋಷಿಸಿರುವContinue reading “ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್”

ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿContinue reading “ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ”

ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಲ್ಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟ ಹಾಗೂ ಕಾರ್ನರ್ ಮೀಟಿಂಗ್ ಗಳ ಮೂಲಕ ಜನತೆ ಕಾಂಗ್ರೆಸ್ಸಿನ ನಕಲಿ ಗ್ಯಾರಂಟಿ ಕಾರ್ಡ್ ಜಾಲದಿಂದ ಮೋಸ ಹೋಗದಂತೆ ಜಾಗೃತಿ ಮೂಡಿಸಿದ ಪರಿಣಾಮವಾಗಿ ದಾಖಲೆಯ ಅಂತರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದ ಇತರ ಎಲ್ಲಾ ಜಿಲ್ಲೆಗಳಿಗೆ ತುಲನೆ ಮಾಡಿದಾಗ, ಉಡುಪಿ ಜಿಲ್ಲೆಯ ಎಲ್ಲಾ ಐದುContinue reading “ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”

ಮತದಾರ ಬಾಂಧವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಕೃತಜ್ಞತೆ ಸಮರ್ಪಣೆ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಾಗರಿಕ ಸಮಾಜದ ಅತ್ಯಮೂಲ್ಯ ಹಕ್ಕು. ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ 75.00%ಕ್ಕೂ ಮಿಕ್ಕಿ ಗರಿಷ್ಠ ಪ್ರಮಾಣದಲ್ಲಿ ಮತದಾನಗೈದಿರುವ ಜಿಲ್ಲೆಯ ಸಮಸ್ತ ಮತದಾರ ಬಾಂಧವರಿಗೆ ಉಡುಪಿ ಜಿಲ್ಲಾ ಬಿಜೆಪಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಸಚಿವ ಡಾ ಕೆ ಸುಧಾಕರ್ (Dr K Sudhakar) ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಪ್ರಣಾಳಿಕೆ ಪ್ರಮುಖ ಅಂಶಗಳು: 🪷ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆContinue reading “ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ”