ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯContinue reading “ಕೇಂದ್ರ ಸರಕಾರದ 5 ಕೆ.ಜಿ. ಉಚಿತ ಅಕ್ಕಿಯ ಜೊತೆಗೆ ಕಾಂಗ್ರೆಸ್ ತನ್ನ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್”
Author Archives: ಜನತಾಲೋಕವಾಣಿ.com
ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ
ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಫ್ರೀಯಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ.Continue reading “ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ”
ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ,Continue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ”
ಜೂ.22, ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಸಮಾವೇಶ: ಕುಯಿಲಾಡಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಜನಪರ ಆಡಳಿತವನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಸರಕಾರದ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ 1 ತಿಂಗಳ ಕಾಲ ರಾಜ್ಯಾದ್ಯಂತ ಬಿಜೆಪಿ ಜಿಲ್ಲಾ ಸಮಾವೇಶಗಳು ನಡೆಯಲಿವೆ. ಬಿಜೆಪಿ ಉಡುಪಿ ಜಿಲ್ಲಾ ಸಮಾವೇಶವು ಜೂ.22, ಗುರುವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಜೂ.22, ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಸಮಾವೇಶ: ಕುಯಿಲಾಡಿ”
ಜೂ.21ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ಬುಧವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಯೋಗಾಭ್ಯಾಸ ತರಗತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದ ರಾಜ್ಯ ಸರಕಾರದ ವಿರುದ್ಧ ಜೂ.19ರಂದು ಜಿಲ್ಲಾ ವಿ.ಹಿಂ.ಪ., ಭಜರಂಗ ದಳದ ಪ್ರತಿಭಟನೆ; ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ: ಕುಯಿಲಾಡಿ
ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ,Continue reading “ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದ ರಾಜ್ಯ ಸರಕಾರದ ವಿರುದ್ಧ ಜೂ.19ರಂದು ಜಿಲ್ಲಾ ವಿ.ಹಿಂ.ಪ., ಭಜರಂಗ ದಳದ ಪ್ರತಿಭಟನೆ; ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ: ಕುಯಿಲಾಡಿ”
ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್
ಕಾಪು: ವಿಶ್ವಹಿಂದೂಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಇವರು ಇದೇ ಬರುವ ಸೋಮವಾರ ಜೂನ್ 19 ರಂದು ಸಂಜೆ 4.00 ಗಂಟೆಗೆ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದು ಹಿಂದೂ ವಿರೋಧಿ ನೀತಿ ಅನುಸರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಕಾಪು ಬಿಜೆಪಿಯಿಂದ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದು ರಾಜ್ಯ ಸರಕಾರದ ಹಿಂದೂ ವಿರೋಧೀ ದೋರಣೆಗೆ ನಮ್ಮ ಸ್ಪಷ್ಟ ವಿರೋಧವಿದ್ದು ಮುಂದಿನContinue reading “ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್”
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ
ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ”
ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ ಅವರಿಗೆ ಇಂದು ದಿನಾಂಕ 16-06-2023 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನುContinue reading “ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ
ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ”