ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸ್ಥಾನಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಅನಿತಾ ಶ್ರೀಧರ್ ಕುಂದಾಪುರ ಹಾಗೂ ಜಿಲ್ಲಾ ವಕ್ತಾರರಾಗಿ ಕೆ.ರಾಘವೇಂದ್ರ ಕಿಣಿ ಕಡಿಯಾಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author Archives: ಜನತಾಲೋಕವಾಣಿ.com
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ”
ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ
ದೆಹಲಿ: ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು. ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ
ಉಡುಪಿ: ಕೇಂದ್ರ ಸರಕಾರಿ ಸ್ವಾಮ್ಯದ ‘ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್’ ಇದರ ಮೆನೇಜ್ಮೆಂಟ್ ಕಮಿಟಿ’ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬಿಜೆಪಿ ಉಡುಪಿ ನಗರ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಸಾವಯವ ಕೃಷಿContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ”
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ
ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ”
ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಬಿಜೆಪಿಗೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜು.30ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದContinue reading “ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್”
2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ
ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ “ಕಡೇ ನಟ್ಟಿ” (ಸಮಾರೋಪ) ಇಂದು ದಿನಾಂಕ 30-07-2022 ರಂದು ಕಡೆಕಾರ್ ಭುವನೆಂದ್ರ ಕಿದಿಯೂರ್ ಮನೆಯ ಬಳಿ ನಡೆಯಿತು.* *ಸ್ಥಳೀಯ ಕೃಷಿಕರು, ಸಂಘಟನೆಗಳ ಸದಸ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಪ್ರಥಮವಾಗಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರುContinue reading “2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ”
ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ
ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆContinue reading “ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ”
ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ
ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿContinue reading “ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ”
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ
‘ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್” ಗೋವಾ ಇದರ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ ಆದೇಶ ಹೊರಡಿಸಿದೆ. ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ”