ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆContinue reading “ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ”
Author Archives: ಜನತಾಲೋಕವಾಣಿ.com
ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ
ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,Continue reading “ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ”
ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ
ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ,Continue reading “ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ”
ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ಉಚಿತ ಕನ್ನಡಕ ವಿತರಣೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ವಿಶ್ವದಲ್ಲೇ ಮಾದರಿಯಾಗಿರುವ ಉಚಿತ ಆರೋಗ್ಯ ಸೇವೆ, ರೈತ ಸಮ್ಮಾನ್ ಯೋಜನೆ ಮೂಲಕ ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸಹಿತ ಹಲವಾರು ಜನಪರ ಯೋಜನೆಗಳ ಜೊತೆಗೆ ದೇಶದ ಸಮಗ್ರತೆ ಮತ್ತು ಅಖಂಡತೆಗೆ ವಿಶೇಷ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವವಂದ್ಯರೆನಿಸಿದ್ದಾರೆ. ಇಂದು ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
100 ಕೋಟಿ ಕೋವಿಡ್ ಲಸಿಕೆ ವಿತರಿಸಿ ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಕೋರೋನಾ ವಾರಿಯರ್ಸ್ ಗೆ ಸನ್ಮಾನ – ಶಾಸಕ ರಘುಪತಿ ಭಟ್ ಭಾಗಿ
*ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಇಂದು ದಿನಾಂಕ 26-10-2021 ರಂದು ಗ್ರಾಮಾಂತರ ಬಿಜೆಪಿ ವತಿಯಿಂದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕೋರೋನ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.* *ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.*Continue reading “100 ಕೋಟಿ ಕೋವಿಡ್ ಲಸಿಕೆ ವಿತರಿಸಿ ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಕೋರೋನಾ ವಾರಿಯರ್ಸ್ ಗೆ ಸನ್ಮಾನ – ಶಾಸಕ ರಘುಪತಿ ಭಟ್ ಭಾಗಿ”
ಅಲೆವೂರು ಕರ್ವಾಲು ಹೀಗೊಂದು ಕನ್ನಡ ಶಾಲೆ ಉಳಿಸಿ ಅಭಿಯಾನ
ಕನ್ನಡ ಶಾಲೆಗಳು ನಿಧಾನವಾಗಿ ಹೇಗೆ ಅಂತ್ಯಗೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇದಕ್ಕೆ ಸೆಡ್ಡು ಹೊಡೆದು ನಮ್ಮ ಊರಿನ ಶಾಲೆ ಮುಚ್ಚಬಾರದು ಅದು ನಮ್ಮೂರ ಹೆಮ್ಮೆ ಎಂದು ಕಳೆದ ಐದು ವರ್ಷಗಳಿಂದ ಶಾಲಾ ದತ್ತು ಸ್ವೀಕಾರ ಎನ್ನುವ ಕಾರ್ಯಕ್ರಮ ನಡೆಸಿ ಮುಚ್ಚುವ ಹಂತದಲ್ಲಿದ್ದ ಅಲೆವೂರು ಕರ್ವಾಲಿನ ಸರಕಾರಿ ಕನ್ನಡ ಶಾಲೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಅಲೆವೂರು ಕರ್ವಾಲಿನ ಹೆಮ್ಮೆಯ ಸಂಸ್ಥೆ ಶ್ರೀ ವಿಷ್ಣು ಸ್ನೇಹ ಬಳಗ ಇದೀಗ ಮತ್ತೊಂದು ನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದೇ *ನಮ್ಮೂರ ಶಾಲಾContinue reading “ಅಲೆವೂರು ಕರ್ವಾಲು ಹೀಗೊಂದು ಕನ್ನಡ ಶಾಲೆ ಉಳಿಸಿ ಅಭಿಯಾನ”
ಕಾಪು ಮಂಡಲ – ಪದಾಧಿಕಾರಿಗಳ ಸಭೆ
ಕಾಪು: ಬಿಜೆಪಿ ಕಚೇರಿಯಲ್ಲಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಮೋರ್ಚ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪದಾಧಿಕಾರಿಗಳಿಗೆ ಪಕ್ಷ ನೂತನವಾಗಿ ಕೊಟ್ಟ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ಎಲ್ಲ ಬೂತ್ ಗಳಲ್ಲಿಯೂ ಕಾರ್ಯಕ್ರಮ ನಡೆಯುವಂತಹ ಶಕ್ತಿಕೇಂದ್ರ ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದರು. ಕಾಪು ಕ್ಷೇತ್ರ ಶಾಸಕರಾದ ಲಾಲಾಜಿಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಗಳನ್ನು ನೆನಪಿಸಿದರು.Continue reading “ಕಾಪು ಮಂಡಲ – ಪದಾಧಿಕಾರಿಗಳ ಸಭೆ”
ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ ರವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ಕರಾವಳಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ”
100 ಕೋಟಿ ಕೋವಿಡ್ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್
ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳು. ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು,Continue reading “100 ಕೋಟಿ ಕೋವಿಡ್ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್”
ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅ.17 ರವಿವಾರ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್”