ಸೇವಾಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿ, ಸೆ.16: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಂವಿಧಾನಿಕ ಹುದ್ದೆಯಲ್ಲಿನ ಸಾರ್ವಜನಿಕ ಸೇವೆಗೆ 25 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಜನ್ಮ ದಿನ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಸೇವಾ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಆರು ಮಂಡಲಗಳ ವ್ಯಾಪ್ತಿಯಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಅಭಿಯಾನದ ಅಂಗವಾಗಿ ಈಗಾಗಲೇ ಜಿಲ್ಲಾ ಹಾಗೂ ಮಂಡಲ ಮಟ್ಟದ ಅಭಿಯಾನ ತಂಡಗಳು ಮತ್ತು ವಿವಿಧ ಕಾರ್ಯಕ್ರಮಗಳ ಜಿಲ್ಲಾ ಹಾಗೂ ಮಂಡಲ ಪ್ರಮುಖರ ತಂಡಗಳನ್ನು ರಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸಮನ್ವಯದೊಂದಿಗೆ ಅನುಷ್ಠಾನಗೊಳಿಸಿ, ಸಮಾಜದ ವಿವಿಧ ವರ್ಗಗಳನ್ನು ಒಳಗೊಳ್ಳುವ ಮೂಲಕ ಅಭಿಯಾನವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅಭಿಯಾನದ ಸಂದರ್ಭದಲ್ಲಿ ಈ ಕೆಳಗಿನಂತೆ ಒಟ್ಟು 13 ವಿವಿಧ ಸೇವಾ ಕಾರ್ಯ ಹಾಗೂ ಜನ ಸಂಪರ್ಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ:

  1. ಆಶೀರ್ವಾದದ ದೀಪ
  2. 25 ಕೋಟಿ ಮಕ್ಕಳ ಕನಸಿನ ಭಾರತ
  3. ನಮೋ ಸೇವಾ ಗಾಥಾ
  4. ಅಂಗಳದ ಉತ್ಸವ
  5. ಬದಲಾವಣೆಯ ಕಥೆ
  6. ವಿಕಸಿತ ಭಾರತ ಸಂಕಲ್ಪ ಯಾತ್ರೆ
  7. ಸೇವಾ ಜ್ಯೋತಿ ಯಾತ್ರೆ
  8. ಸೇವಾ ಸಂಕಲ್ಪ ಯಾತ್ರೆ
  9. ಸೇವೆಯೇ ನನ್ನ ಕೊಡುಗೆ
  10. ಸೇವಾ ಸೇತು ಅಭಿಯಾನ
  11. ರಂಗೋಲಿ ರಾಷ್ಟ್ರ
  12. ರಾಷ್ಟ್ರೀಯ ಇನ್ನೋವೇಷನ್ ಚಾಲೆಂಜ್
  13. ಜನ ಸೇವಕ ಮಹಾ ಕುಂಭ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯ ಆಶಯಗಳಿಗೆ ಪೂರಕವಾಗಿ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರನ್ನು ತಲುಪುವ ಉದ್ದೇಶದಿಂದ ರೂಪಿಸಿರುವ ಅಭಿಯಾನದ ಎಲ್ಲಾ ಸೇವಾ ಕಾರ್ಯ ಚಟುವಟಿಕೆಗಳನ್ನು ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯಗತಗೊಳಿಸಿ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು.

ಮಹಾಪೂಜೆಯ ಬಳಿಕ ಸಂಘದ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವದಾಸ್ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕ್ರಿಶ್ಚಿಯನ್ ಪಿ.ಯು. ಕಾಲೇಜು ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಸಂಘದ ಆಡಳಿತ ಸಮಿತಿ ಸದಸ್ಯ ರಾಜೇಂದ್ರ ಪಂದುಬೆಟ್ಟು, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಂಘದ ಮಾಜಿ ಕೋಶಾಧಿಕಾರಿ ಸುರೇಶ್ ಎ., ಆಡಳಿತ ಸಮಿತಿ ಸದಸ್ಯರಾದ ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ ವಿದ್ಯಾರ್ಥಿ ವೇತನ ವಿತರಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಆಡಳಿತ ಸಮಿತಿ ಸದಸ್ಯರಾದ ಸುಧಾಕರ ಎ., ರಮೇಶ್ ಕೋಟ್ಯಾನ್, ಭಾಸ್ಕರ ಅಂಚನ್, ಕುಶಲ ಕುಮಾರ್ ಎ., ಭಾಸ್ಕರ ಕೋಟ್ಯಾನ್, ನಿತಿನ್ ಕುಮಾರ್, ಜನಾರ್ದನ ಪೂಜಾರಿ, ಚೆನ್ನಕೇಶವ, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ, ಸಮಿತಿ ಸದಸ್ಯೆಯರು, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಸಹಿತ ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಸಾಮೂಹಿಕ ಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್

​ಉಡುಪಿ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸುವುದೇ ಕಾಂಗ್ರೆಸ್‌ನ ಮುಖ್ಯ ಅಜೆಂಡಾವಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದರು.

​ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

​ಕಲಾಪ ಹಳ್ಳಹಿಡಿಸಿದ ವಿಪಕ್ಷ:

ಜುಲೈ 20ರಿಂದ ಆಗಸ್ಟ್ 18ರ ವರೆಗೆ ನಡೆದ ಸಂಸತ್ ಅಧಿವೇಶನದ ಕಾರ್ಯವೈಖರಿ ಅತ್ಯಂತ ಶೋಚನೀಯವಾಗಿತ್ತು. ವಿರೋಧ ಪಕ್ಷಗಳ ಅನಗತ್ಯ ಗದ್ದಲ ಮತ್ತು ಅಸಹಕಾರದಿಂದಾಗಿ ರಾಜ್ಯಸಭೆಯಲ್ಲಿ ಕೇವಲ ಶೇ.39 ಹಾಗೂ ಲೋಕಸಭೆಯಲ್ಲಿ ಕೇವಲ ಶೇ.19ರಷ್ಟು ಮಾತ್ರ ಕಲಾಪ ನಡೆದಿದೆ. ಸದನದಲ್ಲಿ ಜನಪರ ಚರ್ಚೆಗಳು ನಡೆಯಬಾರದು ಎಂಬುದು ಕಾಂಗ್ರೆಸ್‌ನ ವಿಕೃತ ಮನಸ್ಥಿತಿಯನ್ನು ಸ್ಪಷ್ಟವಾಗಿ ಬಿಂಬಿಸುತ್ತದೆ ಎಂದು ಅವರು ದೂರಿದರು.

​‘ವಂದೇ ಮಾತರಂ’ಗೆ ಕಾಂಗ್ರೆಸ್ ಅಪಮಾನ:

ಕಾಂಗ್ರೆಸ್ ಪಕ್ಷವು ರಾಷ್ಟ್ರಗೀತೆ ‘ವಂದೇ ಮಾತರಂ’ಗೂ ಸೂಕ್ತ ಗೌರವ ನೀಡುತ್ತಿಲ್ಲ. ಕೇವಲ ಎರಡು ಸಾಲುಗಳನ್ನು ಮಾತ್ರ ಹಾಡಬೇಕೆಂದು ನಿರ್ಣಯ ಕೈಗೊಳ್ಳುವ ಮೂಲಕ ದೇಶಭಕ್ತರ ತ್ಯಾಗ-ಬಲಿದಾನದ ಪ್ರತೀಕವಾದ ಗೀತೆಗೆ ಅಪಮಾನವೆಸಗಿದೆ. ದೇಶದ ಗೌರವಕ್ಕೆ ಧಕ್ಕೆ ತರುವ ಕಾಂಗ್ರೆಸ್‌ನ ಈ ನೀತಿಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.

​ವಾಲ್ಮೀಕಿ ನಿಗಮ ಲೂಟಿಕೋರನಿಗೆ ಮಂತ್ರಿಗಿರಿ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿ.ನಾಗೇಂದ್ರ ಅವರು ನೇರವಾಗಿ ಲೂಟಿ ಮಾಡಿರುವ ಆರೋಪವಿದ್ದರೂ, ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆಸ್ ಸರ್ಕಾರದ ಲಜ್ಜೆಗೇಡಿತನಕ್ಕೆ ಸಾಕ್ಷಿ. ಭ್ರಷ್ಟರಿಗೆ ಮಣೆ ಹಾಕುತ್ತಿರುವ ಸರ್ಕಾರದ ಈ ನಿಲುವಿನ ವಿರುದ್ಧ ಬಿಜೆಪಿ ಬೀದಿಗಿಳಿದು ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

​ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’:

ಪ್ರಧಾನಿ ನರೇಂದ್ರ ಮೋದಿ ಅವರ ಯಾವುದೇ ಕಪ್ಪುಚುಕ್ಕೆ ಇಲ್ಲದ ನಿರಂತರ 25 ವರ್ಷಗಳ ನಿಸ್ವಾರ್ಥ ಆಡಳಿತ ಹಾಗೂ ಜನಸೇವೆಯ ಸಾಧನೆಯನ್ನು ದೇಶದ ಯುವ ಸಮೂಹಕ್ಕೆ ತಲುಪಿಸುವ ಉದ್ದೇಶದಿಂದ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಆಚರಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರುಗಳಾದ ಕೆ.ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ, ಮಾಧ್ಯಮ ಸಂಚಾಲಕ ಶಶಾಂಕ್ ಶಿವತ್ತಾಯ, ಪ್ರಮುಖರಾದ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ  ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತಿ ಬಿಜೆಪಿ ಮುಖಂಡ ಮಂಜುನಾಥ್ ಸಾಲ್ಯಾನ್ ಕೊಳ ಹಾಗೂ ಪುತ್ರರು, ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಪಕ್ಷದ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಘ-ಸಂಸ್ಥೆಗಳ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯ ಸಹಿತ ಜನಪರ ಕಾಳಜಿ ಹೊಂದಿದ್ದ ಪ್ರಗತಿ ಪರ ಕೃಷಿಕ ಅಟ್ಟಿoಜೆ ಶಂಭು ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತ್ನಿ ಮತ್ತು ಮಕ್ಕಳಿಗೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ

ಉಡುಪಿ: ರಾಜ್ಯ ಸರಕಾರ ಹೊರಡಿಸಿರುವ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಭಾರತದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯ ಸರಕಾರ ‘ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗ ರಚಿಸುವುದು ಸಂವಿಧಾನದ 14ನೇ ವಿಧಿಯ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಇಂಥ ವರ್ಗೀಕರಣ ಯಾವುದೇ ಕಾನೂನುಬದ್ಧ ಉದ್ದೇಶ ಹೊಂದಿಲ್ಲ ಎಂದು ಕುತ್ಯಾರು ಹೇಳಿದರು.

ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದಲೂ ಈ ಅಧಿಸೂಚನೆ ಆತಂಕಕಾರಿ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ರಾಜ್ಯ ಸರಕಾರ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಮತದಾರರಲ್ಲದವರಿಗೂ ಪೌರತ್ವ ನೀಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಇದು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಈ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಟೀಕಿಸಿದರು.

ಈ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ

ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅಧ್ಯಕ್ಷತೆಯಲ್ಲಿ ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ, ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಸಭಾಧ್ಯಕ್ಷತೆ ವಹಿಸಿದ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಾತನಾಡಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ವಂದನೆ ತಿಳಿಸಿದರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಎಸ್.ಟಿ. ಮೋರ್ಚಾದ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನ ಬೈಲ್ ಸಹಿತ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದರ್, ಆರೋಗ್ಯ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಟ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಯೋಗ ಶಿಕ್ಷಕಿ ಮಮತಾ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ಒಂದು ಗಂಟೆ ಕಾಲ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಹ ಶಿಕ್ಷಕ ಗಣೇಶ್ ಆಚಾರ್ಯ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

Design a site like this with WordPress.com
Get started