

ಕೋರೋನಾ ಎಂಬ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ಸ್ಥಿತಿಯ ಬಗ್ಗೆ ಹಾಗೂ ಹೊಂ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ಕೋರೋನ ವೈರಸ್ ಸಾಮೂಹಿಕವಾಗಿ ಹರಡು ವುದನ್ನು ತಡೆಗಟ್ಟುವಿಕೆಯಲ್ಲಿ ಇವರ ಪಾತ್ರ ಅವಿಸ್ಮರಣೀಯ.
ಇವರ ಈ ಸೇವೆಯನ್ನು ಮನಗಂಡು K.M.F ಮಂಗಳೂರು ಇವರ ವತಿಯಿಂದ ಸುಮಾರು 2600 ನಂದಿನಿ ಉತ್ಪನ್ನಗಳ ವಿಶೇಷ ಕಿಟ್ ಗಳನ್ನು ಆಶಾ ಕಾರ್ಯಕರ್ತೆಯರಿಗೆ ಗೌರವ ರೂಪದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಲೋಕಸಭಾ ಸಂಸದರಾದ ಶೋಭಾ ಕರಂದ್ಲಾಜೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರೀತಿ ಗೆಲ್ಹೋಟ್ ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ್ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶ್ ಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಿ. ವಿ ಹೆಗ್ಡೆ, ನಿರ್ದೇಶಕರಾದ ಸ್ಮಿತಾ ಆರ್. ಶೆಟ್ಟಿ ಮತ್ತು ಇತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.