ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ ಸುಮಾರು 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳ ಬಿತ್ತನೆ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿತು. ಮಾವು, ಹಲಸು, ಹೆಬ್ಬಲಸು, ನೇರಳೆ, ಕಾನಾಜೆ ಸೇರಿದಂತೆ ಹಲವು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಬೀಜದುಂಡೆಗಳಾಗಿ ಪರಿವರ್ತಿಸಿ ಭೂಮಿಗಿಳಿಸಲಾಯಿತು.

ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳಿಗೆ ಕಾಡಿನಲ್ಲೇ ಆಹಾರ ದೊರಕಬೇಕೆನ್ನುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಇತ್ತೀಚೆಗೆ ಅರಣ್ಯ ಸಚಿವರಿಂದ ‘ಸಾಮಾಜಿಕ ಅರಣ್ಯೀಕರಣ ’ ಯೋಜನೆಗೆ ಚಾಲನೆ ನೀಡಲಾಗಿತ್ತು. ಬಯಲು ಪ್ರದೇಶ ಮತ್ತು ಖಾಲಿ ಜಾಗಗಳಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಮತ್ತು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಬೀಜಗಳನ್ನು ಎಸೆಯುವ ಮೂಲಕ ಅರಣ್ಯದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್ ,ಸುರೇಂದ್ರ ಕುಮಾರ್ ಅವರ ಮಗಳು ಶ್ರುತಾ ಜಿತೇಶ್, ಶ್ರೀ.ಕ್ಷೇ. ಧ. ಗ್ರಾ. ಯೋಜನೆಯ ಮುಖ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಾಸ್, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಚಾರ್ಮಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ಚಾರ್ಮಾಡಿ ಚಾರ್ಮಾಡಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಾಗಿ, ಅರಣ್ಯ ರಕ್ಷಕ ಶರತ್ ಶೆಟ್ಟಿ, ವೀರು ಶೆಟ್ಟಿ ಧರ್ಮಸ್ಥಳ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿಯ ಸದಸ್ಯರು, ಚಾರ್ಮಾಡಿ ಪೆಂಟ್ರೋಲ್ ಬಂಕ್ ಮಾಲಕ ಅನಂತ ಭಟ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ವರದಿ : ಸ್ವಸ್ತಿಕ್ ಕನ್ಯಾಡಿ

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಅನಾವರಣ

 ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಅನಾವರಣಗೊಂಡಿತು.

ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಯಕ್ಷಧ್ರುವ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸರಕಾರ ಕರಾಟೆ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹಧನ ಒದಗಿಸುವಂತೆ ಮನವಿ: ವಾಮನ್ ಪಾಲನ್ ಅಂಬಲಪಾಡಿ

ಕರಾಟೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಒಂದು ಅತ್ಯುತ್ತಮ ಕ್ರೀಡೆಯಾಗಿದೆ. ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು ಎಲ್ಲ ವಯೋಮಾನದ ಜನತೆ ಆರೋಗ್ಯದ ಕಾಳಜಿಯಿಂದ ಕರಾಟೆ ಅಭ್ಯಾಸದಲ್ಲಿ ನಿರತರಾಗಿರುವುದು ವಾಸ್ತವ. ಆದರೆ ಕಠಿಣ ಪರಿಶ್ರಮದಿಂದ ಹಾಗೂ ಬದ್ಧತೆಯಿಂದ ಕರಾಟೆ ತರಗತಿಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಕರಾಟೆ ಶಿಕ್ಷಕರು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡಿರುವ ಸಮಯೋಚಿತ ಲಾಕ್ ಡೌನ್ ನಿರ್ಧಾರದಿಂದ ಸಂಕಷ್ಟಕ್ಕೆ ಒಳಗಾಗಿದ್ದು ಜೀವನೋಪಾಯಕ್ಕಾಗಿ ಹರಸಾಹಸ ಪಡುತ್ತಿರುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ.

ಕರಾಟೆ ಶಿಕ್ಷಕರು ಕೇವಲ ಕರಾಟೆ ತರಗತಿಗಳಿಗೆ ಮಾತ್ರ ಸೀಮಿತವಾಗಿರದೆ ಸರಕಾರದ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖಾಂತರ ನಿಯಮಿತವಾಗಿ ನಡೆಸಲ್ಪಡುವ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸುತ್ತಿರುವುದು ವಾಸ್ತವ. ಆದರೆ ಸರಕಾರ ಘೋಷಿಸಿರುವ ಕೋವಿಡ್ ಪ್ಯಾಕೇಜ್ ಗಳಲ್ಲಿ ಕರಾಟೆ ಶಿಕ್ಷಕರ ಬಗ್ಗೆ ಯಾವುದೇ ಸೌಲಭ್ಯವನ್ನು ನೀಡದಿರುವುದು ಕರಾಟೆ ಶಿಕ್ಷಕರಿಗೆ ಅತೀವ ನಿರಾಸೆಯನ್ನುಂಟುಮಾಡಿದೆ.

ಈ ಬಗ್ಗೆ ವಿವಿಧ ಮನವಿಗಳ ಮೂಲಕ ಸರಕಾರದ ಗಮನವನ್ನು ಸೆಳೆಯಲಾಗಿದೆ. ಆದರೆ ಕೊರೋನಾ ಮೊದಲ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಸರಕಾರ ಘೋಷಿಸಿರುವ ಪ್ಯಾಕೇಜ್ ಗಳಲ್ಲಿ ಕರಾಟೆ ಶಿಕ್ಷಕರಿಗೆ ಯಾವುದೇ ಸಹಾಯಧನವನ್ನು ನೀಡದಿರುವುದು ಕರಾಟೆ ಶಿಕ್ಷಕರ ನಿರೀಕ್ಷೆಯನ್ನು ಹುಸಿಯಾಗಿಸಿದೆ. ಕರಾಟೆ ಶಿಕ್ಷಕ ವೃತ್ತಿಯನ್ನೇ ಜೀವನೋಪಾಯಕ್ಕೆ ಅವಲಂಬಿಸಿರುವ ಕರಾಟೆ ಶಿಕ್ಷಕರಿಗೆ ಸರಕಾರ ಶೀಘ್ರ ಪ್ರೋತ್ಸಾಹಧನವನ್ನು ಮಂಜೂರು ಮಾಡುವ ಮೂಲಕ ಆರೋಗ್ಯದ ಕಾಳಜಿಯಿಂದ ಸೇವೆ ಸಲ್ಲಿಸುತ್ತಿರುವ ಕರಾಟೆ ಶಿಕ್ಷಕರಿಗೆ ಸಹಾಯ ಹಸ್ತವನ್ನು ಚಾಚಿ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಕರಾಟೆ ಮುಖ್ಯ ಶಿಕ್ಷಕ ಹಾಗೂ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ವಾಮನ್ ಪಾಲನ್ ಅಂಬಲಪಾಡಿ ಸರಕಾರವನ್ನು ಆಗ್ರಹಿಸಿದ್ದಾರೆ.

ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಹಡಿಲು ಭೂಮಿ ಕೃಷಿ ಅಂದೋಲನದಡಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕ್ರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಜು.1ರಂದು ಅಂಬಲಪಾಡಿ ಗ್ರಾಮದ ಕುಂಜಗುಡ್ಡೆಯಲ್ಲಿ 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಎಮ್. ಗಂಗಾಧರ್ ರಾವ್ ಅಧ್ಯಕ್ಷರು ಯಕ್ಷಗಾನ ಕಲಾರಂಗ ಉಡುಪಿ ಹಾಗೂ ಎಮ್. ಗೋಪಾಲ್ ಭಟ್ ಅಧ್ಯಕ್ಷರು ಎ.ಸಿ.ಸಿ.ಇ.ಎ. ಉಡುಪಿ ಇವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಹೆಬ್ಬಾರ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ, ಟ್ರಸ್ಟ್ ಸದಸ್ಯ ದಿನಕರ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಕುಸುಮ, ಸುಜಾತ ಸುಧಾಕರ್, ಸ್ಥಳೀಯ ಕೃಷಿಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ : ಶಶಿಕಲಾ ವಿ. ಟೆಂಗಳಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗಿ

ಮಹಿಳೆಯರು ಇಂದು ಸ್ವಾವಲಂಬನೆ ಮತ್ತು ಆತ್ಮ ವಿಶ್ವಾಸದೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಮಹಿಳಾ ಸಬಲೀಕರಣದತ್ತ ಬಿಜೆಪಿ ಮಹಿಳಾ ಮೋರ್ಚಾದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಬೇಟಿ ನೀಡಿ, ಜಿಲ್ಲಾ ಮಹಿಳಾ ಮೋರ್ಚಾದ ಸಭೆಯಲ್ಲಿ ಭಾಗವಹಿಸಿ, ನಿಗಮದಿಂದ ಮಹಿಳಾ ಅಭಿವೃದ್ಧಿಯ ಬಗ್ಗೆ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿ ನೀಡಿದರು.

ಸ್ವಸಹಾಯ ಸಂಘಗಳ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಸಂಬಂಧ ಪಟ್ಟಂತೆ ಹಾಗೂ ಮಹಿಳೆಯರು ಒಂದಾಗಿ ಪ್ರಾರಂಭಿಸುವ ಉತ್ಪಾದನಾ ಘಟಕಗಳಿಗೆ ರಿಯಾಯತಿ ದರದ ಸಾಲ ಸೌಲಭ್ಯದ ಜೊತೆಗೆ ಸುಕನ್ಯಾ ಸಮೃದ್ಧಿ ಯೋಜನೆಯಡಿ ಬಿಪಿಎಲ್ ಕಾರ್ಡು ಹೊಂದಿರುವ ಬೀದಿ ಬದಿ ಸಣ್ಣ ವ್ಯಾಪಾರಸ್ಥ ಮಹಿಳೆಯರಿಗೆ ರೂ.10,000 ಪ್ರೋತ್ಸಾಹ ಧನ ಮುಂತಾದ ಜನಪರ ಯೋಜನೆಗಳು ಚಾಲ್ತಿಯಲ್ಲಿವೆ. ಬಿಜೆಪಿ ಕಾರ್ಯಕರ್ತರ ಕಾರ್ಯ ತತ್ಪರತೆ ಕೇವಲ ಚುನಾವಣೆ ಸಂದರ್ಭಕ್ಕೆ ಮಾತ್ರ ಸೀಮಿತವಾಗಿರದೆ, ನಿರಂತರವಾಗಿ ಜನ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಸದಸ್ಯರು ಪಕ್ಷ ಸಂಘಟನೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಒಂದು ಉತ್ತಮ ಕಾರ್ಯ ತಂಡದೊಂದಿಗೆ ಸಾರ್ಥಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಪ್ರಶಂಸನೀಯ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಯವರು ಶಶಿಕಲಾ ವಿ. ಟೆಂಗಳಿ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸ್ವಾಗತಿಸಿ, ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶಾಲು ಹೊದೆಸಿ ಉಡುಪಿ ಶಂಕರಪುರ ಖ್ಯಾತಿಯ ಮಲ್ಲಿಗೆ ಹೂವನ್ನು ಮುಡಿಗೇರಿಸಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷೆ ಸುಮಾ ಶೆಟ್ಟಿ, ಉಡುಪಿ ನಗರ ಉಪಾಧ್ಯಕ್ಷೆ ರಶ್ಮಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲ, ಸುಧಾ ಪೈ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಮಾಯಾ ಕಾಮತ್, ರಮಾ ವೈ. ಶೆಟ್ಟಿ, ಪೂರ್ಣಿಮಾ ರತ್ನಾಕರ್, ದಯಾಶಿನಿ, ಶೋಭಾ, ಸರೋಜಾ, ಸುಬೇಧಾ, ಲೈಲಾ, ಆಶಾ, ಲೀಲಾ ಆರ್. ಅಮೀನ್, ಭಾರತಿ ಚಂದ್ರಶೇಖರ್, ವಿದ್ಯಾ, ಅಶ್ವಿನಿ ಶೆಟ್ಟಿ, ಶಶಿಕಲಾ ಹಾಗೂ ತೆಂಕಪೇಟೆ ಮತ್ತು ಕಡಿಯಾಳಿ ಮಹಿಳಾ ಮೋರ್ಚಾ ಶಕ್ತಿಕೇಂದ್ರದ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವ ಪ್ರಶಂಸನೀಯ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಜೂ.28ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ ನೀಡಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಡಾ| ಶ್ಯಾಮಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ರವರಂತಹ ಹಿರಿಯರು ತ್ಯಾಗ ಬಲಿದಾನದಿಂದ, ಸಿದ್ಧಾಂತಗಳಡಿಯಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅವರ ದೂರದರ್ಶಿತ್ವದ ಚಿಂತನೆಗಳು ಮತ್ತು ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಬೆಳೆಸುವ ಗುರುತರವಾದ ಜವಾಬ್ದಾರಿ ಎಲ್ಲ ಕಾರ್ಯಕರ್ತರ ಮೇಲಿದೆ. ದಕ್ಷಿಣ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಜನಸಂಘದ ನೇತೃತ್ವದಲ್ಲಿ ಉಡುಪಿ ನಗರಸಭೆ ಅಧಿಕಾರಕ್ಕೇರಿದೆ. ಬಿಜೆಪಿ ಕಾರ್ಯಕರ್ತರು ಸೇವಾ ಪ್ರವೃತ್ತಿಯಿಂದ ತೊಡಗಿಸಿಕೊಂಡಿರುವವರು. ಜನತೆ ಬಿಜೆಪಿಯೊಂದಿಗೆ ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿರುವ ಈ ಕಾಲಘಟ್ಟದಲ್ಲಿ ದಣಿವರಿಯದೆ ಸೇವೆಯಲ್ಲಿ ತೊಡಗಿಸಿಕೊಂಡು ಜನತೆಯ ಆಶೋತ್ತರಗಳನ್ನು ಈಡೇರಿಸಿದಾಗ ನಿಗದಿತ ಗುರಿಯನ್ನು ತಲುಪಲು ಸಾಧ್ಯ ಎಂದರು.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಭಾಗವಹಿಸಲಾಗುವುದು. ಉಡುಪಿ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಪ್ರಗತಿಯಲ್ಲಿದ್ದು, ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಿ ಕಡಲ ತೀರ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು
ಎಂದು ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಧಾನಸಭಾ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ

ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಇಂದು ದಿನಾಂಕ 25-06-2021 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ

ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಂದುಬೆಟ್ಟು ಉಪಸ್ಥಿತರಿದ್ದರು.

ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ

ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂನ್ 23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಒಂದು ದೇಶದಲ್ಲಿ ಎರಡು ಸಂವಿಧಾನ ಎರಡು ರಾಷ್ಟ್ರ ಧ್ವಜ ಎರಡು ಪ್ರಧಾನಿ ಸಲ್ಲದು ಎಂಬ ನೀತಿಯನ್ನು ಪ್ರತಿಪಾದಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕೆಂಬ ಚಿಂತನೆಯೊಂದಿಗೆ ನೆಹರೂ ಸಂಪುಟದಲ್ಲಿದ್ದ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹೋರಾಡಿದ ಅಪ್ಪಟ ದೇಶಪ್ರೇಮಿ.

ಅಧಿಕಾರ ಶಾಶ್ವತವಲ್ಲ, ಅಧಿಕಾರಕ್ಕಾಗಿ ದೇಶದ ಏಕತೆಯನ್ನು ಬಲಿಕೊಡುವುದಿಲ್ಲ ಎಂಬ ವಿಚಾರಧಾರೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿ, ಅದರಿಂದಲೇ ಅವರ ಬಲಿದಾನವಾಗಿದ್ದು, ಡಾ! ಶ್ಯಾಮ ಪ್ರಸಾದ್ ಮುಖರ್ಜಿಯವರು ಎಂತಹ ಮಹಾನ್ ದೇಶ ಭಕ್ತ ಎಂಬುದನ್ನು ಅರಿಯಬಹುದಾಗಿದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ , ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ನಯನಾ ಗಣೇಶ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಉಡುಪಿ ನಗರ ಪ್ರಶಿಕ್ಷಣ ಸಂಚಾಲಕ ಲೋಕಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಾಂಡುರಂಗ ಮುಂತಾದವರು ಉಪಸ್ಥಿತರಿದ್ದರು.

ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವ್ರಕ್ಷಾಪರೋಹಣಕ್ಕೆ ಚಾಲನೆ

ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ವ್ರಕ್ಷಾಪರೋಹಣ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಸಸಿ ನೆಡುವ ಮೂಲಕ ವ್ರಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಬಿಜೆಪಿ ಉಡುಪಿ ನಗರ ಪ್ರಶಿಕ್ಷಣ ವರ್ಗ ಸಂಚಾಲಕ ಲೋಕಯ್ಯ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲಾ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಮಾಯಾ ಕಾಮತ್, ದಯಾಶಿನಿ, ಲೈಲಾ ಪ್ರಭಾವತಿ, ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

Design a site like this with WordPress.com
Get started