ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ರಾಜ್ಯ ಬಿಜೆಪಿ ಸೂಚನೆ ಮೇರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆ ಮತ್ತು ಎಲ್ಲಾ ಆರು ಮಂಡಲಗಳ ವ್ಯಾಪ್ತಿಯ 25ಕ್ಕೂ ಮಿಕ್ಕಿ ವಿವಿಧ ಕೇಂದ್ರಗಳಲ್ಲಿ ಯೋಗ ಶಿಬಿರಗಳ ಆಯೋಜನೆ ಮೂಲಕ ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಜೊತೆಗೆ ಇತರ ಹಲವಾರು ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಬೂತ್ ಮಟ್ಟದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂನ್ 22ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

  • ಜೂನ್ 23ರಂದು ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ತಿಥಿ ಮತ್ತು ಜುಲೈ 6ರಂದು ಅವರ ಜನ್ಮದಿನ: ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಅವರ ತ್ಯಾಗ, ಬಲಿದಾನ ಮತ್ತು ಸಿದ್ಧಾಂತದ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸುವ ಜೊತೆಗೆ ಈ 14 ದಿನಗಳ ಪರ್ಯಂತ ಪ್ರತಿ ಬೂತ್ ಮಟ್ಟದಲ್ಲಿ ಸಸಿ ನೆಡುವ ಅಭಿಯಾನ ವೃಕ್ಷಾಪರೋಹಣವನ್ನು ನಡೆಸಲಾಗುವುದು. ಕೆರೆ, ಬಾವಿಗಳು ಮತ್ತು ಇತರ ಜಲ ಮೂಲಕಗಳ ಬಗ್ಗೆ ವಿಶೇಷ ಗಮನ ಹರಿಸಿ ‘ಕ್ಲೀನ್ ಇಂಡಿಯಾ, ಹೆಲ್ತ್‌ ಇಂಡಿಯಾ’ ಘೋಷಣೆಯಡಿಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ನಡೆಸಲಾಗುವುದು.
  • ಜೂನ್ 25ರಂದು ತುರ್ತು ಪರಿಸ್ಥಿತಿಯ ಕರಾಳ ದಿನಾಚರಣೆ: 1975ರಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ತದ ಹತ್ಯೆ ಮಾಡಿ, ಮಾನವ ಹಕ್ಕುಗಳನ್ನು ಹತ್ತಿಕ್ಕಿದ ದಿನವಾದ ಜೂನ್ 25ನ್ನು ತುರ್ತು ಪರಿಸ್ಥಿತಿಯ ಕರಾಳ ದಿನವಾಗಿ ಆಚರಿಸಲಾಗುವುದು. ಕಾಂಗ್ರೆಸ್ ಪಕ್ಷ ಕೈಗೊಂಡ ಧಮನಕಾರಿ ನೀತಿ ಮತ್ತು ಪ್ರಜಾಪ್ರಭುತ್ವ, ಹತ್ತಿಕ್ಕುವ ನೀತಿಯನ್ನು ಖಂಡಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲಾಗುವುದು.
  • ಜೂನ್ 27ರಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್: ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಮನವರಿಕೆ ಮಾಡಲು ದೇಶವಾಸಿಗಳೊಂದಿಗೆ ಹಂಚಿಕೊಳ್ಳುವ ಮನ್ ಕಿ ಬಾತ್ ಕಾರ್ಯಕ್ರಮವನ್ನು ಜೂನ್ 27ರಂದು ಜಿಲ್ಲೆಯಾದ್ಯಂತ ಮಂಡಲ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಆಲಿಸುವಂತೆ ಆಯೋಜಿಸಲಾಗುವುದು,

ಸೇವಾ ಹಿ ಸಂಘಟನ್-2ರ ಮುಂದಿನ 3 ಹಂತಗಳು:

  • ಲಸಿಕೆ ಹಾಕುವ ಆಂದೋಲನ: ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ, ‘ಮೇರಾ ಬೂತ್, ವ್ಯಾಕ್ಸಿನೇಷನ್ ಯುಕ್ತ’ ತತ್ವದಡಿ, 45 ವರ್ಷ ಮೇಲ್ಪಟ್ಟ ಎಲ್ಲರಿಗೂ 2 ಬಾರಿ ಲಸಿಕೆ ಹಾಕಿಸುವುದು. 18+ ಮೇಲ್ಪಟ್ಟ ಮುಂಚೂಣಿ ಕಾರ್ಮಿಕ ವರ್ಗಕ್ಕೆ ಆದ್ಯತೆಯ ಜೊತೆಗೆ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸುವ ಬಗ್ಗೆ ಪ್ರೇರಣೆ ನೀಡುವುದು.
  • ಪರಿಹಾರ ಕಾರ್ಯಗಳು: ಸೇವಾ ಹಿ ಸಂಘಟನ್ ತತ್ವದಡಿ ಜನಸೇವಾ ಕಾರ್ಯಗಳನ್ನು ಮುಂದುವರಿಸುವುದು. ಕೋವಿಡ್’ ನಿಯಮ ಪಾಲನೆ ಹಾಗೂ ಸಾಮಾಜಿಕ ನಡವಳಿಕೆಯ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು. ರಕ್ತದಾನ ಶಿಬಿರ ಆಯೋಜನೆ, ಕೊರೋನಾ ವಾರಿಯರ್ಸ್‌ಗಳನ್ನು ಗುರುತಿಸಿ ಗೌರವಿಸುವುದು, ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ, ವೈದ್ಯಕೀಯ ಸಹಾಯ ನೀಡುವುದು, ಕೋವಿಡ್ ಸಹಾಯ ಕೇಂದ್ರಗಳನ್ನು ನಿರ್ವಹಿಸುವುದು.
  • ಸ್ಥಳೀಯ ಆರೋಗ್ಯ ಸ್ವಯಂಸೇವಕರು: ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮಗಳಲ್ಲಿ ಒಬ್ಬ ಯುವಕ ಮತ್ತು ಓರ್ವ ಮಹಿಳಾ ಕಾರ್ಯಕರ್ತರ ನೇಮಕ, ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ 3 ಸದಸ್ಯರ ತಂಡ ರಚನೆ, ವೈದ್ಯಕೀಯ ಉಪಕರಣ ಉಪಯೋಗದ ಬಗ್ಗೆ ತರಬೇತಿ, ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಲಸಿಕೆ ನೀಡುವ ಪ್ರಕ್ರಿಯೆ ಮತ್ತು ಆರೋಗ್ಯ ಸಂವರ್ಧನೆ ಅಭಿಯಾನದಲ್ಲಿ ಸಹಕರಿಸುವುದು.
  • ಜಿಲ್ಲಾ ಮತ್ತು ಮಂಡಲಗಳ ಕಾರ್ಯಕಾರಿಣೆ ಸಭೆ: ರಾಜ್ಯ ಬಿಜೆಪಿ ಸೂಚನೆಯಂತೆ ಕೋಡ್ ನಿಯಮ ಪಾಲನೆಯೊಂದಿಗೆ ನಿಗದಿತ ಅವಧಿಯಲ್ಲಿ ಜಿಲ್ಲಾ ಮತ್ತು ಮಂಡಲವಾರು ಕಾರ್ಯಕಾರಿಣಿ ಸಭೆಗಳು ನಡೆಯಲಿವೆ.
  • ಇ-ಪ್ರಶಿಕ್ಷಣ ವರ್ಗ: ಪಕ್ಷದ ಸೂಚನೆಯಂತೆ ಇ-ಪ್ರಶಿಕ್ಷಣ ವರ್ಗವನ್ನು ಮಂಡಲವಾರು ಆಯೋಜಿಸಲಾಗುವುದು ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:

ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗದಿಂದ ಉತ್ತಮ ಆರೋಗ್ಯ ಹಾಗೂ ಮಾನಸಿಕ ಸ್ಥಿಮಿತ ಕಾಯ್ದುಕೊಳ್ಳಲು ಸಾಧ್ಯ. ಇಂದಿನ ದಿನಗಳಲ್ಲಿ ವಿಶ್ವದಾದ್ಯಂತ ಪ್ರತಿಯೊಬ್ಬರು ಯೋಗಾಭ್ಯಾಸದ ಕಡೆ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಯೋಗ ದಿನಾಚರಣೆಯ ಜಿಲ್ಲಾ ಸಂಯೋಜಕರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಡಾ! ವಿಜಯೇಂದ್ರ ವಸಂತ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸೃಷ್ಠಿ ಫೌಂಡೇಶನ್ ಸಂಸ್ಥಾಪಕಿ, ಯೋಗ ಶಿಕ್ಷಕಿ ಡಾ! ಮಂಜರಿಚಂದ್ರ ಪುಷ್ಪರಾಜ್ ಯೋಗ ತರಬೇತಿ ನೀಡಿದರು.

ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಯೋಗ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಯೋಗ ಎಂಬುದು ಭಾರತೀಯ ಜೀವನ ಪದ್ಧತಿಯ ಒಂದು ಪ್ರಮುಖ ಅಂಗವಾಗಿದೆ. ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯದ ವಿಕಸನದ ಜೊತೆಗೆ ದೈನಂದಿನ ಬದುಕಿನಲ್ಲಿ ಲವಲವಿಕೆ, ಚೈತನ್ಯ ಕಂಡುಕೊಳ್ಳಲು ಸಾಧ್ಯ. ಪ್ರಸಕ್ತ ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಜನತೆ ಆರೋಗ್ಯದ ಕಾಳಜಿಯಿಂದ ಮನೆ ಮನೆಗಳಲ್ಲಿ ಸ್ವಯಂಪ್ರೇರಿತರಾಗಿ ಯೋಗಾಭ್ಯಾಸದಲ್ಲಿ ತೊಡಗುವುದು ಇಂದಿನ ಅಗತ್ಯತೆ ಎಂದು ಕುಯಿಲಾಡಿ ಹೇಳಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಹೆಣ್ಣು ಕುಟುಂಬದ ಕಣ್ಣು ಇದ್ದಂತೆ. ಕುಟುಂಬದ ಸದಸ್ಯರು ಯೋಗಾಭ್ಯಾಸವನ್ನು ದಿನಚರಿಯ ಭಾಗವಾಗಿ ಅಳವಡಿಸಿಕೊಳ್ಳುವಂತೆ ಮಹಿಳೆಯರು ಪ್ರೇರಣೆ ನೀಡುವುದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವೆನಿಸುವುದು ಎಂದರು.

ಯೋಗ ಶಿಕ್ಷಕಿ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ಮತ್ತು ಯೋಗ ಸಹ ಶಿಕ್ಷಕಿ, ಉಡುಪಿ ನಗರಸಭಾ ನಾಮ ನಿರ್ದೇಶಿತ ಸದಸ್ಯೆ ಸುಭೇದಾ ಯೋಗ ತರಗತಿಯನ್ನು ನಡೆಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಛೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕಷ್ಣ ಶೆಟ್ಟಿ, ಕೋಶಾಧಿಕಾರಿ ರಜನಿ ಹೆಬ್ಬಾರ್ ಮತ್ತು ಮಹಿಳಾ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ, ಮಾಜಿ ಗೌರವಾಧ್ಯಕ್ಷ ಜಗದೀಶ್ ಕೆದ್ಲಾಯ, ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಎ.ಶಿವಕುಮಾರ್, ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ, ಮಾಜಿ ಗ್ರಾ.ಪಂ. ಸದಸ್ಯ ಜಗದೀಶ್ ಆಚಾರ್ಯ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ವಾಮನ್ ಪಾಲನ್, ಕೋವಿಡ್ ಹೆಲ್ಪ್ ಡೆಸ್ಕ್ ಕೇಂದ್ರದ ವಿವಿಧ ವಿಭಾಗ ಪ್ರಮುಖರಾದ ಪ್ರಶಾಂತ್ ಕೆ.ಎಸ್., ಭರತ್ ರಾಜ್ ಕೆ.ಎನ್., ಸತೀಶ್ ಭಂಡಾರಿ, ಶಿವರಾಮ್ ಪೂಜಾರಿ ಹಾಗೂ ಆಶಾ ಕಾರ್ಯಕರ್ತೆಯರಾದ ಸರಸ್ವತಿ ಕೆ. ಶ್ರೀಯಾನ್, ಗ್ರಾಯತ್ರಿ, ನಿಶಾ ಕಿದಿಯೂರು, ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ ಕೇಂದ್ರದ ಪ್ರಾರಂಭ ಹಂತದಲ್ಲಿ ಸಕ್ರಿಯವಾಗಿದ್ದ ಸುಮಾರು 50ಕ್ಕೂ ಮಿಕ್ಕಿ ಕೋವಿಡ್ ಪ್ರಕರಣಗಳು ಶೂನ್ಯದತ್ತ ಸಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಕಿದಿಯೂರು ಇವರ ಮನೆಗೆ ತೆರಳಿ ಆಹಾರ ಧಾನ್ಯಗಳ ಕಿಟ್ ಹಸ್ತಾಂತರಿಸಲಾಯಿತು.

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

  • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
  • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
  • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
  • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
  • ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
  • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
  • ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
  • ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
  • ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
  • ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

      ರಾಜ್ಯವ್ಯಾಪಿ ಅನ್ವಯವಾಗುವಂತೆ:

  • ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
  • ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಬಿಜೆಪಿ ಸೇವಾ ಕಾರ್ಯಗಳೇ ವಿರೋಧಿಗಳ ಟೀಕೆಗೆ ಸೂಕ್ತ ಉತ್ತರ – ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಕೋವಿಡ್ ಸಂಕಷ್ಟದಲ್ಲಿರುವ ಜನತೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ರೂ.1,250 ಕೋಟಿ ಮತ್ತು ರೂ.500 ಕೋಟಿಗಳ 2 ಪ್ಯಾಕೇಜ್‍ಗಳ ಘೋಷಣೆಯ ಜೊತೆಗೆ ಕೋವಿಡ್‍ನಿಂದ
ಮೃತಪಟ್ಟ ಸದಸ್ಯರ ಬಡ ಕುಟುಂಬಕ್ಕೆ ತಲಾ ರೂ.1 ಲಕ್ಷ ಪರಿಹಾರ ನೀಡುವ ಬಗ್ಗೆ ರೂ.300 ಕೋಟಿಗಳನ್ನು ಮಂಜೂರು ಮಾಡಿರುವುದು ಸ್ವಾಗತಾರ್ಹ. ಬಿಜೆಪಿ ಸೇವಾ ಕಾರ್ಯಗಳೇ ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಪಕವಾದ ಉತ್ತರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಅವರು ರಾಜ್ಯ ಬಿಜೆಪಿಯ ಸೂಚನೆಯಂತೆ ಸೇವಾ ಹೀ ಸಂಘಟನ್ ತತ್ವದಡಿ ಕಾರ್ಯಾಚರಿಸುತ್ತಿರುವ ಬಿಜೆಪಿ ಉಡುಪಿ ಜಿಲ್ಲಾ ಮತ್ತು ಅರು ಮಂಡಲಗಳ ಕೋವಿಡ್ ಸಹಾಯವಾಣಿಯ ಪ್ರಗತಿ ಪರಿಶೀಲನಾ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೇವಾ ಹೀ ಸಂಘಟನ್ ಧ್ಯೇಯವಾಕ್ಯದಡಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾರ್ಕಳ, ಕಾಪು, ಕುಂದಾಪುರ, ಬೈಂದೂರು ಮಂಡಲಗಳ ವ್ಯಾಪ್ತಿಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವ ಜನತೆಗೆ ಸಹಾಯ ಹಸ್ತವನ್ನು ಚಾಚುವ ಮೂಲಕ ವಿವಿಧ ರೀತಿಯಲ್ಲಿ ಅಮೂಲ್ಯ ಸೇವೆಗಳನ್ನು ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚತುಷ್ಪಥ ರಸ್ತೆ ನಿರ್ಮಾಣದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಕಾರಗೊಳಿಸುತ್ತಿದೆ. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಉನ್ನತೀಕರಣದ ಕಾಮಗಾರಿ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ರಾಜ್ಯದಲ್ಲಿ ಗಣನೀಯ ಪ್ರಮಾಣದ ಅಭಿವೃದ್ಧಿ ಕಾರ್ಯಗಳು ನಡೆದಿವೆ.

ಪ್ರಸಕ್ತ ಉಡುಪಿ ಜಿಲ್ಲೆಯ ಹೆಬ್ರಿಯಿಂದ ಪರ್ಕಳ ತನಕದ 29.1 ಕಿ.ಮೀ ರಸ್ತೆ ಹಾಗೂ ಆದಿವುಡುಪಿ ಕರಾವಳಿ
ಜಂಕ್ಷನ್‍ನಿಂದ ಮಲ್ಪೆ ಮೀನುಗಾರಿಕಾ ಬಂದರನ್ನು ಬೆಸೆಯುವ 3.7 ಕಿ.ಮೀ ರಸ್ತೆಯನ್ನು ಅಭಿವೃದ್ಧಿ ಪಡಿಸಿ
ಚತುಷ್ಪಥಗೊಳಿಸಲು ಒಟ್ಟು ರೂ.350.00 ಕೋಟಿಗಳು ಮತ್ತು ಮಾನ್ಸೂನ್ ಕಾಲದಲ್ಲಿ ಮುಳುಗಡೆಯಾಗುವ ಸೀತಾನದಿ ಪ್ರದೇಶ ಹಾಗೂ ನೆಮ್ಮಾರು ಬಳಿಯ ರಸ್ತೆಯನ್ನು ಎತ್ತರಿಸಿ, ಅಗತ್ಯದ ತಡೆಗೋಡೆ ನಿರ್ಮಾಣಕ್ಕೆ ರೂ.19.00 ಕೋಟಿಗಳನ್ನು ಕೇಂದ್ರ ಸರಕಾರ ಮೀಸಲಿರಿಸುವ ಜೊತೆಗೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಓವರ್ ಪಾಸ್
ನಿರ್ಮಾಣಕ್ಕೆ ರೂ.22.72 ಕೋಟಿಗಳ ಅನುಮೋದನೆ ನೀಡಿದ ಕೇಂದ್ರ ಸರಕಾರದ ಕ್ರಮ ಪ್ರಶಂಸನೀಯ. ಈ ಅಗತ್ಯ ಕಾಮಗಾರಿಗಳಿಗೆ ಶಿಫಾರಸು ಮಾಡಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಸಾಧನೆ
ಅಭಿನಂದನೀಯ.

ವಿರೋಧ ಪಕ್ಷಗಳು ಸದಾ ನೈಜ ವಿಚಾರಗಳನ್ನು ತಿರುಚುವ ವಿಫಲ ಯತ್ನದ ಜೊತೆಗೆ ಅಪಪ್ರಚಾರವನ್ನೇ ಕಾಯಕವನ್ನಾಗಿಸಿಕೊಂಡಿರುವ ಈ ಸನ್ನಿವೇಶದಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ಬಿಜೆಪಿ ಜನ ಸೇವೆ ಮತ್ತು ಅಭಿವೃದ್ಧಿಯ ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಕುಯಿಲಾಡಿ ಹೇಳಿದ್ದಾರೆ.

ಬಿಜೆಪಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಶಿರ್ವದ ಸುನೀಲ್ ಕಬ್ರಾಲ್ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ

ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ, ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಪಕ್ಷಕ್ಕಾಗಿ ದುಡಿದ ಶಿರ್ವದ ಸುನೀಲ್ ಕಬ್ರಾಲ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದ ಸದಸ್ಯರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ: ಕುಯಿಲಾಡಿ ಸುರೇಶ್ ನಾಯಕ್

ಸದಾ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡು ದೇಶ, ಧರ್ಮವನ್ನು ಒಡೆಯುವ ಕೀಳು ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ತನ್ನ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಸದಾ ಅಪಪ್ರಚಾರ ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಾ ದೇಶದ ಏಕತೆಗೆ ಧಕ್ಕೆ ತರುವಂತಹ ಹೀನ ಕೃತ್ಯದಲ್ಲಿ ತೊಡಗಿರುವುದು ಶೋಚನೀಯ. ಒಂದೇ ಕುಟುಂಬದ ಉದ್ಧಾರ ಮತ್ತು ಗುಲಾಮಗಿರಿ ಸಂಸ್ಕೃತಿಗೆ ಒಗ್ಗಿಕೊಂಡಿರುವ ಕಾಂಗ್ರೆಸ್ ನಾಯಕರು ಅಪಪ್ರಚಾರವನ್ನೇ ತಮ್ಮ ಬಂಡವಾಳವನ್ನಾಗಿಸಿಕೊಂಡಿರುವುದು ವಿಷಾದನೀಯ.

ಸ್ವಾತಂತ್ರ್ಯಾ ನಂತರ ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್, ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿ, ಬಡತನ ನಿವಾರಣೆಯನ್ನು ಕೇವಲ ಘೋಷಣೆಗಷ್ಟೇ ಸೀಮಿತಗೊಳಿಸಿರುವುದು ಇತಿಹಾಸ. ಸಾವಿರಾರು ಹಳ್ಳಿಗಳ ವಿಧ್ಯುದ್ಧೀಕರಣ, ಉಚಿತ ಗ್ಯಾಸ್ ವಿತರಣೆ, ಜನ್ ಧನ್ ಖಾತೆ, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಮುಂತಾದ ನೂರಾರು ಜನಪರ ಯೋಜನೆಗಳ ಸಹಿತ ಉಚಿತ ಕೋವಿಡ್ ಲಸಿಕೆ ವಿತರಣೆ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡವರ ಕಣ್ಣೀರೊರೆಸುವ ಕಾಯಕದಲ್ಲಿ ನಿರತವಾಗಿದೆ. ಕಾಂಗ್ರೆಸ್ ಮಾತ್ರ
ದೇಶ ವಿರೋಧಿ ಟೂಲ್ ಕಿಟ್ ನಂತಹ ತುಚ್ಛ ಅಭಿಯಾನದಲ್ಲಿ ತೊಡಗಿಸಿಕೊಂಡಿರುವುದು ವಿಪರ್ಯಾಸ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸೇವಾ ಹೀ ಸಂಘಟನ್ ತತ್ವದಡಿ ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರೆ, ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳ ವಿರುದ್ದ ಕೀಳು ಮಟ್ಟದ ಅಪಪ್ರಚಾರ ಅಭಿಯಾನದಲ್ಲಿ ನಿರತವಾಗಿರುವುದೇ ಕಾಂಗ್ರೆಸ್ ಸಾಧನೆಯಾಗಿದೆ. ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ತನ್ನ ಆಡಳಿತಾವಧಿಯ 2014ರ ಮೊದಲು ಪೆಟ್ರೋಲ್ ಬೆಲೆ ಯಾವ ಮಟ್ಟದಲ್ಲಿ ಏರಿಕೆಯಾಗುತ್ತಲೇ ಬಂದಿದೆ ಎಂಬ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳುವುದರ ಜೊತೆಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆಯನ್ನು ಇಳಿಸಿ ಮಾದರಿಯಾಗುವುದು ಉತ್ತಮ.

ದೇಶದ ಅಖಂಡತೆ ಮತ್ತು ಏಕತೆಗೆ ಒತ್ತು ನೀಡುವ ಜೊತೆಗೆ ಅಭಿವೃದ್ಧಿ ಪರ ಆಡಳಿತ ಬಿಜೆಪಿಯ ಮೂಲ ಮಂತ್ರ. ಈ ನೀತಿಗೆ ವಿರುದ್ಧವಾಗಿರುವ ಕಾಂಗ್ರೆಸ್ ಸ್ಥಿತಿ ದೇಶದ ವಿವಿಧ ರಾಜ್ಯಗಳಲ್ಲಿ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದು ಜಗಜ್ಜಾಹೀರಾಗಿದೆ. ಆದರೂ ಪ್ರಧಾನಿ ಮೋದಿ ವಿರೋಧಿ ಮಾನಸಿಕತೆಯಿಂದ ಕಾಂಗ್ರೆಸ್ ದೇಶ ವಿರೋಧಿ ಮನಸ್ಥಿತಿಯತ್ತ ಹೊರಳಿರುವುದು ಮಾತ್ರ ಶೋಚನೀಯ. ಈ ಎಲ್ಲ ವಿದ್ಯಮಾನಗಳನ್ನು ಜನತೆ ಕೂಲಂಕುಷವಾಗಿ ಗಮನಿಸುತ್ತಿದ್ದು ದೇಶ ವಿರೋಧಿ ಕಾಂಗ್ರೆಸ್ಸಿಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಪಪ್ರಚಾರದ ಪ್ರತಿಭಟನೆ ಟೂಲ್‌ಕಿಟ್‌ ಮುಂದುವರಿದ ಭಾಗದಂತಿದೆ : ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ : ಕೊರೋನಾ ಸಂಕಷ್ಟದಿಂದ ವಿಶ್ವವೇ ಕಂಗೆಟ್ಟಿದ್ದರೂ ಪ್ರಧಾನಿ ಮೋದಿ ಸಮರ್ಥ ನೇತ್ವದಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಣದಲ್ಲಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ನಡೆಗಳನ್ನು ಕೇವಲ ವಿರೋಧಕ್ಕಾಗಿ ವಿರೋಧಿಸುವ ಕಾಂಗ್ರೆಸ್, ಕೋವಿಡ್ ಲಸಿಕೆಯಿಂದ ಪ್ರಾರಂಭಗೊಂಡು ಎಲ್ಲ ವಿಚಾರಗಳಲ್ಲೂ ಅಪಪ್ರಚಾರದಲ್ಲಿ ತೊಡಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ, ನಾಯಕತ್ವದ ಕೊರತೆಯಿಂದ ಸೊರಗಿರುವ ಕಾಂಗ್ರೆಸ್ ಇದೀಗ ಪೆಟ್ರೋಲ್ ಬೆಲೆ ಏರಿಕೆಯ ನೆಪವೊಡ್ಡಿ ಪೆಟ್ರೋಲ್ ಬಂಕ್‌ಗಳ ಎದುರು ನಾಟಕೀಯ ಪ್ರತಿಭಟನೆಗೈದು ತಪ್ಪು ಮಾಹಿತಿಗಳನ್ನು ನೀಡುವ ಮೂಲಕ ಜನತೆಯ ದಾರಿ ತಪ್ಪಿಸುವ ಪ್ರಯತ್ನದಲ್ಲಿ ನಿರತರಾಗಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.

ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನೇತಾರ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು-ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಪುನರ್‌ ಸ್ಥಾಪಿಸುವ ಬಗ್ಗೆ ಹೇಳಿಕೆ ನೀಡಿರುವುದು ಕಾಂಗ್ರೆಸ್‌ನ ದೇಶವಿರೋಧಿ ನಿಲುವಿಗೆ ಹಿಡಿದ ಕೈಗನ್ನಡಿಯಂತಿದೆ. ಕಾಂಗ್ರೆಸಿಗರು ಪ್ರತಿಭಟನೆಯಲ್ಲೂ ಶತ್ರು ರಾಷ್ಟ್ರ ಪಾಕಿಸ್ತಾನದ ಜಪ ಮಾಡುತ್ತಿರುವುದು ಕಾಂಗ್ರೆಸ್‌ನ ಪಾಕ್ ಪ್ರೀತಿಗೆ ಜ್ವಲಂತ ಉದಾಹರಣೆಯಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಿಂದ ದೇಶವಾಸಿಗಳಿಗೆ ತೊಂದರೆ ಉಂಟಾಗಿದ್ದರೂ, ರಾಜ್ಯ ಮತ್ತು ಕೇಂದ್ರ ಸರಕಾರಗಳ ಮೂಲಕ ಕೋವಿಡ್ ಲಸಿಕೆಯ ಬಗ್ಗೆ ಕಳೆದ ಒಂದು ವರ್ಷದಿಂದ ರೂ.35,000 ಕೋಟಿಗೂ ಮಿಕ್ಕಿ ವೆಚ್ಚ ಮಾಡಲಾಗಿದ್ದು, ಹಣಕಾಸು ಉಳಿತಾಯವನ್ನು ಅಭಿವೃದ್ಧಿ ಯೋಜನೆಗಳಿಗೆ ಬಳಸಲಾಗುತ್ತಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ದೇಶದ ಇತಿಹಾಸದಲ್ಲಿ ಐತಿಹಾಸಿಕ ಅಭಿವೃದ್ಧಿ ಕಾರ್ಯಗಳಾಗಿರುವ ಪ್ರಧಾನಮಂತ್ರಿ ವಿದ್ಯುದ್ದೀಕರಣ ಯೋಜನೆಯಡಿ 18,000ಕ್ಕೂ ಮಿಕ್ಕಿ ಹಳ್ಳಿಗಳ ವಿದ್ಯುಧೀಕರಣ, ಉಚಿತ ಉಜ್ವಲ ಗ್ಯಾಸ್ ವಿತರಣೆ, ಆಯುಷ್ಮಾನ್ ಭಾರತ್ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಉಚಿತ ಕೋವಿಡ್ ಲಸಿಕೆ ವಿತರಣೆ ಮುಂತಾದ ನೂರಾರು ಜನಪರ ಯೋಜನೆಗಳಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್ ಕೇವಲ ಅಪಪ್ರಚಾರದಲ್ಲಿ ತೊಡಗಿರುವುದು ಟೂಲ್‌ಕಿಟ್‌ನ ಮುಂದುವರಿದ ಭಾಗದಂತಿದೆ’ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಆತ್ರಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

“ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 15-06-2021 ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರು ಸಂಕೇಶ ವಿಠೋಬ ಭಜನಾ ಮಂಡಳಿಯ ಎದುರು 5 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.*

*ಹರಿಯಪ್ಪ ಕೋಟ್ಯಾನ್ ಮತ್ಸ್ಯೋದ್ಯಮಿಗಳು ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು.*

*ವಿ. ಸುನೀಲ್ ಕುಮಾರ್ ಶಾಸಕರು ವಿಧಾನಸಭೆಯ ಮುಖ್ಯ ಸಚೇತಕರು ನೇಜಿ ನೀಡುವ ಮೂಲಕ ಕೈ ನಾಟಿಗೆ ಚಾಲನೆ ನೀಡಿದರು.*

*ಈ ಆಂದೋಲನಕ್ಕೆ ನೇಶನ್ ಫಸ್ಟ್ ತಂಡದ ಸರ್ವ ಸದಸ್ಯರು ಹಾಗೂ ಸ್ಥಳೀಯರು ಸಹಕರಿಸುತ್ತಿದ್ದು ಸರ್ವರಿಗೂ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.*

*ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ನೇಶನ್ ಫಸ್ಟ್ ಸಂಚಾಲಕರಾದ ಸೂರಜ್, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ಪ್ರಮುಖರಾದ ಹಿರಿಯಣ್ಣ ಕಿದಿಯೂರು, ವೇಣುಗೋಪಾಲ್, ಭಾಸ್ಕರ್ ಎ. ಕೋಟ್ಯಾನ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಉಷಾ ಶೆಟ್ಟಿ, ಸುಜಾತ ಸುಧಾಕರ್, ಅಂಬಲಪಾಡಿ ಗ್ರಾಮೋತ್ಥಾನ ಸಮಿತಿಯ ಪ್ರಧಾನ ಸಂಚಾಲಕರಾದ ಶಿವಕುಮಾರ್ ಅಂಬಲಪಾಡಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಸಂತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.*

Design a site like this with WordPress.com
Get started