ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’



ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಇವರ ಸಂಯೋಜನೆಯಲ್ಲಿ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರ ನೇತೃತ್ವದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’ವು ನ.10 ರವಿವಾರ ಮಧ್ಯಾಹ್ನ ಗಂಟೆ 2.00ಕ್ಕೆ ಸರಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ‘ರಾಜಾಂಗಣ’ದಲ್ಲಿ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

‘ಸಹಸ್ರ ಕಂಠ ಗಾಯನ’ದ ಪೂರ್ವಭಾವಿಯಾಗಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಅವರ ಮಾರ್ಗದರ್ಶನದಲ್ಲಿ ಖ್ಯಾತ ಭಜನಾ ತರಬೇತುದಾರೆ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ 4 ದಿನಗಳ ಭಜನಾ ತರಬೇತಿಯಲ್ಲಿ ಸುಮಾರು 600ಕ್ಕೂ ಮಿಕ್ಕಿ ಭಜಕರು ಆಯ್ದ ಭಜನಾ ಹಾಡುಗಳನ್ನು ಅಭ್ಯಾಸ ಮಾಡಿರುವ ಜೊತೆಗೆ ಕುಣಿತದ ಭಜನಾ ತರಬೇತುದಾರರಾದ ಶ್ರೀ ರೋಹಿತ್ ಕಬ್ಯಾಡಿ ಅವರಿಂದ ಕುಣಿತದ ಭಜನೆಯಲ್ಲಿಯೂ ಪರಿಣತಿಯನ್ನು ಹೊಂದಿದ್ದಾರೆ.

ಈಗಾಗಲೇ ಭಜನಾ ತರಬೇತಿ ಪಡೆದ ಸುಮಾರು 800ಕ್ಕೂ ಮಿಕ್ಕಿ ಭಜಕರು ವಿವಿಧ ಭಜನಾ ಮಂಡಳಿಗಳಿಂದ ಹಾಗೂ ವೈಯಕ್ತಿಕವಾಗಿ ‘ಸಹಸ್ರ ಕಂಠ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತಾಲೂಕಿನ ವಿವಿಧ ಭಜನಾ ಮಂಡಳಿಗಳ ಸುಮಾರು 500ಕ್ಕೂ ಮಿಕ್ಕಿ ಭಜಕರು ಸೇರಿದಂತೆ ಸುಮಾರು 1,000ಕ್ಕೂ ಮಿಕ್ಕಿ ಭಜಕರು ‘ಸಹಸ್ರ ಕಂಠ ಗಾಯನ’ ಹಾಗೂ ‘ಭಜನಾ ಮಂಡಳಿಗಳ ಸಮಾವೇಶ’ದಲ್ಲಿ ಪಾಲ್ಗೊಳ್ಳಲಿದ್ದಾರೆ.

ನ.10 ರವಿವಾರ ಮಧ್ಯಾಹ್ನ ಗಂಟೆ 12.30ಕ್ಕೆ ಅನ್ನ ಪ್ರಸಾದ ವಿತರಣೆ, ಗಂಟೆ 1.00ಕ್ಕೆ ಭಜನಾ ಮಂಡಳಿಗಳ ನೊಂದಾವಣೆ, 2.00ಕ್ಕೆ ಉದ್ಘಾಟನೆ, 2.30ಕ್ಕೆ ‘ಸಹಸ್ರ ಕಂಠ ಗಾಯನ’ ಹಾಗೂ ಸಂಜೆ 4.00ಕ್ಕೆ ಸಮಾರೋಪ ನಡೆಯಲಿದೆ. ಭಜನಾ ಮಂಡಳಿಗಳ ಪ್ರತಿನಿಧಿಗಳು ಮತ್ತು ಭಜನಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದಿಂದ ರಾಜ್ಯಾದ್ಯಂತ ಸೃಷ್ಟಿಯಾಗಿರುವ ‘ಲ್ಯಾಂಡ್ ಜಿಹಾದ್’ ಅವಾಂತರವನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ‘ಬೃಹತ್ ಪ್ರತಿಭಟನಾ ರ್ಯಾಲಿ’ ನಡೆಯಿತು.

ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ರಾಜ್ಯ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಿ ವಿಜಯಪುರ, ಹುಬ್ಬಳ್ಳಿ ಸಹಿತ ಅನೇಕ ಜಿಲ್ಲೆಗಳಲ್ಲಿ ಹಲವಾರು ಮಠ ಮಂದಿರ, ದೇವಸ್ಥಾನಗಳು ಸೇರಿದಂತೆ ರೈತರ ಸ್ವಂತ ಜಮೀನನ್ನು ವಶಪಡಿಸಿಕೊಳ್ಳುವ ಹುನ್ನಾರದೊಂದಿಗೆ ಪಹಣಿ ಪತ್ರಗಳಲ್ಲಿ ಅನಧಿಕೃತವಾಗಿ ವಕ್ಫ್ ಹೆಸರನ್ನು ದಾಖಲಿಸಿ, ನೋಟಿಸ್ ನೀಡಿರುವ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ನೂರಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ಮಠ ಮಂದಿರ, ದೇವಸ್ಥಾನಗಳ ಸಹಿತ ತಲೆ ತಲಾಂತರದಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ರೈತರು ಮತ್ತು ಸಾರ್ವಜನಿಕರ ಸ್ಥಿರಾಸ್ತಿಗಳ ಬಗ್ಗೆ ನೀಡಿದ ನೋಟಿಸನ್ನು ಸರಕಾರ ತಕ್ಷಣ ಹಿಂಪಡೆಯಬೇಕು ಹಾಗೂ ಪಹಣಿ ಪತ್ರಗಳಲ್ಲಿ ಅನಧಿಕೃತವಾಗಿ ನಮೂದಿಸಲ್ಪಟ್ಟಿರುವ ವಕ್ಫ್ ಹೆಸರನ್ನು ಕೂಡಲೇ ತಿದ್ದುಪಡಿ ಮಾಡಿ ರದ್ದುಗೊಳಿಸಬೇಕು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅನಪೇಕ್ಷಿತ ಕಾನೂನು ಬಾಹೀರ ಘಟನೆಗಳು ನಡೆಯದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ 1974ರಲ್ಲಿ ಹೊರಡಿಸಲಾಗಿರುವ ಗಜೆಟ್ ನೋಟಿಫಿಕೇಶನ್ ಅನ್ನು ಕೂಡಾ ಸರಕಾರ ಹಿಂಪಡೆದು ರದ್ದುಗೊಳಿಸಬೇಕು ಎಂದು ಅಗ್ರಹಿಸಿದರು.

ಪ್ರತಿಭಟನೆಗೆ ತಡೆಯೊಡ್ದುವ ಆರಕ್ಷಕರ ಸಹಿತ ಯಾವುದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಪಹಣಿ ಪತ್ರಗಳಲ್ಲಿ ವಕ್ಫ್ ಹೆಸರು ನಮೂದಾಗಿರಬಹುದೆoಬ ಆತಂಕ ಎಲ್ಲರನ್ನೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನ.7 ಮತ್ತು 8ರಂದು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರೈತ ಬಂಧುಗಳ ಜೊತೆ ಸೇರಿ ತಾಲೂಕು ಕಛೇರಿಗೆ ತೆರಳಿ ಪಹಣಿ ಪತ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಹಿಂದೂ ಸಮಾಜಕ್ಕೆ ತನ್ನ ಅಸ್ಮಿತೆ, ಹಿತಾಸಕ್ತಿಯನ್ನು ಕಾಯ್ದುಕೊಳ್ಳುವ ಜೊತೆಗೆ ಸ್ಟಿರಾಸ್ತಿಯನ್ನು ಕಾಪಾಡಿಕೊಳ್ಳುವ ಶಕ್ತಿ ಇದೆ. ಜಿಲ್ಲೆಯಲ್ಲಿ ಒಂದು ಇಂಚು ಭೂಮಿಯನ್ನೂ ವಕ್ಫ್ ಬೋರ್ಡ್ ಗೆ ಕಬಳಿಸಲು ಅವಕಾಶ ನೀಡುವುದಿಲ್ಲ. ಇದು ಕೇವಲ ಬಿಜೆಪಿಯ ಹೋರಾಟವಾಗಿರದೆ ಸಾರ್ವಜನಿಕರ ಹೋರಾಟವಾಗಿದೆ. ಒಂದೇ ಕೋಮಿನ ಅತಿಯಾದ ಒಲೈಕೆಯಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಹಿಂದೂ ಶಕ್ತಿಯ ಅಗಾಧತೆಯ ಅರಿವಾಗಲಿದೆ. ಈ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗಟ್ಟಾಗಿ ರಾಜ್ಯ ಸರಕಾರದ ಹಿಂದೂ ವಿರೋಧಿ ಷಡ್ಯಂತ್ರವನ್ನು ಎದುರಿಸಬೇಕು ಎಂದರು.

ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ನಕಲಿ ಗ್ಯಾರಂಟಿಗಳ ಅವಾಂತರ, ಬ್ರಹ್ಮಾಂಡ ಭ್ರಷ್ಟಾಚಾರ, ಹಗರಣಗಳ ಸರಮಾಲೆಯನ್ನು ಎಳೆ ಎಳೆಯಾಗಿ ಬಿಡಿಸಿ, ಮುಡಾ ಹಗರಣದ ಮುಜುಗರ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದ್ ಷಡ್ಯಂತ್ರವನ್ನು ರಚಿಸಿದ್ದು, ತಾನು ಹೆಣೆದ ಬಲೆಯಲ್ಲಿ ತಾನೇ ಸಿಲುಕಿಕೊಂಡಿದ್ದು, ಇದರ ವ್ಯತಿರಿಕ್ತ ಪರಿಣಾಮವನ್ನು ಅನುಭವಿಸಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವ ಮೂಲಕ ರಾಜ್ಯಪಾಲರಿಗೆ ನೀಡುವ ಅಹವಾಲನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ದೆ, ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಗ್ರಾಮಾಂತರ ಅಧ್ಯಕ್ಷ ರಾಜೀವ ಕುಲಾಲ್, ಪ್ರಮುಖರಾದ ರಾಜೇಶ್ ಕಾವೇರಿ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್, ಗೀತಾoಜಲಿ ಎಮ್. ಸುವರ್ಣ, ವಿಜಯ ಕುಮಾರ್ ಉದ್ಯಾವರ, ಶ್ರೀನಿಧಿ ಹೆಗ್ದೆ, ಗಿರೀಶ್ ಎಮ್. ಅಂಚನ್, ಸಂಧ್ಯಾ ರಮೇಶ್, ಪ್ರಥ್ವಿರಾಜ್ ಶೆಟ್ಟಿ, ವಿಜಯ ಕೊಡವೂರು, ವಿಜಯ ಕೊಡವೂರು, ರುಡಾಲ್ಫ್ ಡಿಸೋಜ, ಶ್ಯಾಮಲಾ ಎಸ್. ಕುಂದರ್, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಶಶಾಂಕ್ ಶಿವತ್ತಾಯ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸಚಿನ್ ಪೂಜಾರಿ, ಜಿತೇಂದ್ರ ಶೆಟ್ಟಿ, ಗೋಪಾಲಕೃಷ್ಣ ರಾವ್ ಮಟ್ಟು, ರಾಘವೇಂದ್ರ ಉಪ್ಪುರು, ಶ್ರೀಕಾಂತ್ ಪ್ರಭು, ಸದಾನಂದ ಪ್ರಭು, ಸುಮಿತ್ರಾ ನಾಯಕ್, ನೀತಾ ಪ್ರಭು, ಶ್ರೀವತ್ಸ, ನಿತಿನ್ ಪೈ, ದೇನಿಸ್ ಮಸ್ಕರೇನಸ್, ಹರೀಶ್ ಶೆಟ್ಟಿ ಚೇರ್ಕಾಡಿ, ವೀಣಾ ನಾಯ್ಕ್, ರಮ್ಯಾ ರಾವ್ ಸಹಿತ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ



ಉಡುಪಿ: ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ  ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿಯ ವರೆಗೆ ಹಮ್ಮಿಕೊಂಡ ಏಕತಾ ಓಟದಲ್ಲಿ ಭಾಗವಹಿಸಿ ಮಾತನಾಡಿದರು.

ಏಕತಾ ಓಟದ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ ಭಾರತದ ಏಕೀಕರಣಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಭಾರತೀಯರು ಮರೆಯಲು ಅಸಾಧ್ಯ. ಅವರ ಜೀವನಾದರ್ಶವನ್ನು ನೆನಪಿಸಿಕೊಳ್ಳುವ ಜೊತೆಗೆ 150ನೇ ಜಯಂತ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡ ಏಕತಾ ಓಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಂಸದರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣoಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ ನಗರಸಭೆ ಅಧ್ಯಕ್ಷ  ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್.  ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಪ್ರಮುಖರಾದ ರತ್ನಾಕರ್ ಇಂದ್ರಾಳಿ, ಶಶಾಂಕ್ ಶಿವತ್ತಾಯ, ಬಾಲಕೃಷ್ಣ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಶ್ರೀಕಾಂತ್ ಕಾಮತ್, ನಳಿನಿ ಪ್ರದೀಪ್ ರಾವ್  ಸುಜಾಲ ಸತೀಶ್, ಕಿಶೋರ್ ಕುಮಾರ್ ಕರಂಬಳ್ಳಿ, ಮಂಜುಳಾ ಪ್ರಸಾದ್, ವಿನಯ್ ಕಲ್ಮಾಡಿ , ವಿಜಯ ಭಟ್, ದಿನಕರ ಪೂಜಾರಿ, ಡೇನಿಸ್ ಮಸ್ಕರೇನಸ್, ಲೋಕಯ್ಯ, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ರಾಜು, ಆನಂದ್ ಸುವರ್ಣ, ಗುರುಪ್ರಸಾದ್, ಸಂತೋಷ್ ಆಚಾರ್ಯ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಿಶೋರ್ ಕುಮಾರ್ ಪುತ್ತೂರು ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಹಾರ್ದಿಕ ಅಭಿನಂದನೆಗಳು.

ಪಕ್ಷದ ಅಭ್ಯರ್ಥಿಯ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಿರುವ ಎಲ್ಲ ಸ್ತರದ ಜನಪ್ರತಿನಿಧಿಗಳಿಗೆ, ಸಹಕರಿಸಿರುವ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳು.

ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ಪ್ರಬುದ್ಧತೆಯನ್ನು ಮೆರೆದ ಕೋಟ ಶ್ರೀನಿವಾಸ ಪೂಜಾರಿ ಅವರ ಉದಾತ್ತ ಪರಂಪರೆಯನ್ನು ಕಿಶೋರ್ ಕುಮಾರ್ ಪುತ್ತೂರು ಅವರು ಮುಂದುವರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸವಿದೆ.

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ನಿಷ್ಠೆ ಮತ್ತು  ಕಠಿಣ ಪರಿಶ್ರಮದಿಂದ ಬೆಳೆದು ಬಂದಿರುವ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ

ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಗ್ಯಾರಂಟಿಗಳ ಜಾಲಕ್ಕೆ ಸಿಲುಕಿಸಿ ವಾಮ ಮಾರ್ಗದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಇದೀಗ ಜನತೆಯನ್ನು ವಂಚಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳ ರದ್ದತಿಗೆ ತೀರ್ಮಾನ ಕೈಗೊಂಡಿರುವುದು ರಾಜ್ಯ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಸುಮಾರು 30ರಿಂದ 40 ಸಾವಿರ ಕುಟುಂಬಗಳು ಸೇರಿದಂತೆ ರಾಜ್ಯಾದ್ಯಂತ ಸುಮಾರು 12 ಲಕ್ಷ ಕುಟುಂಬಗಳ ಮೇಲೆ ಬಿಪಿಎಲ್ ಕಾರ್ಡ್ ರದ್ಧತಿಯ ಕರಿ ನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಪ್ರಕ್ರಿಯೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅನ್ನ ಯೋಜನೆಯಡಿ ಪ್ರತೀ ಕುಟುಂಬಕ್ಕೆ ವಿತರಿಸುತ್ತಿರುವ 5 ಕೆಜಿ ಅಕ್ಕಿ ಹಾಗೂ ಇತರ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆಯದಂತೆ ರಾಜ್ಯ ಸರಕಾರ ತಡೆಯೊಡ್ದಲು ನಡೆಸುತ್ತಿರುವ ಹುನ್ನಾರದಂತಿದೆ.

ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲವಾಗಿ, ನಿಷ್ಕ್ರಿಯವಾಗಿರುವ ಸರಕಾರ ಕೇವಲ ಹಗರಣಗಳ ಗೋಜಲಿನಲ್ಲಿ ಮುಳುಗಿರುವುದು ಶೋಚನೀಯ.

ಮುಡಾ ಹಗರಣದ ತನಿಖೆಯಿಂದ ತೀವ್ರ ಮುಖಭಂಗ ಅನುಭವಿಸುತ್ತಿರುವ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ವಿವಿಧ ರೀತಿಯ ಕಸರತ್ತುಗಳನ್ನು ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಈ ಸರಕಾರ ಸಂಪೂರ್ಣವಾಗಿ ಜನತೆಯ ವಿಶ್ವಾಸವನ್ನು ಕಳೆದುಕೊಂಡಿದೆ.

ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಸಹಿತ ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿದ್ದರಾಮಯ್ಯ ಸಂಪುಟದ ಸದಸ್ಯರುಗಳ ಹೆಸರು ಮುನ್ನೆಲೆಗೆ ಬರುತ್ತಿದ್ದು, ಜನರ ತೆರಿಗೆ ಹಣದ ದುರ್ಬಳಕೆ ಮತ್ತು ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿರುವ ಕಾಂಗ್ರೆಸ್ ಸರಕಾರಕ್ಕೆ ನಾಡಿನ ಜನತೆ ಹಿಡಿಶಾಪ ಹಾಕುತ್ತಿರುವುದು ವಾಸ್ತವ.

ಈ ಹಿನ್ನೆಲೆಯಲ್ಲಿ ಹಣವಿಲ್ಲದೇ ಪರದಾಡುತ್ತಿರುವ ರಾಜ್ಯ ಸರಕಾರ, ತನ್ನ ಹುಳುಕನ್ನು ಮುಚ್ಚಿಡಲು ಅಮಾಯಕ ಜನತೆಯನ್ನು ಬಲಿಪಶು ಮಾಡುವುದು ನ್ಯಾಯ ಸಮ್ಮತವಲ್ಲ. ಸರಕಾರ ತಕ್ಷಣ ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಯಥಾ ಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ತಪ್ಪಿದಲ್ಲಿ ನೊಂದ ಬಿಪಿಎಲ್ ಪಡಿತರ ಚೀಟಿದಾರರ ಪರ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ : ಕಿಶೋರ್ ಕುಮಾರ್ ಕುಂದಾಪುರ


ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದ ವರೆಗಿನ ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೊತೆಗೆ ಪಕ್ಷಕ್ಕಾಗಿ ಶ್ರಮಿಸಿರುವ ಕುಟುಂಬದ ಹಿನ್ನೆಲೆಯ ಸಣ್ಣ ಸಮುದಾಯದಿಂದ ಮುನ್ನೆಲೆಗೆ ಬಂದಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಓರ್ವ ನಿಷ್ಠಾವಂತ ಕಾರ್ಯಕರ್ತನಿಗೆ ಬಿಜೆಪಿ ಅವಕಾಶ ನೀಡಿದೆ.

ಕಳೆದ ನಾಲ್ಕು ಅವಧಿಯಲ್ಲಿ ಸದ್ರಿ ವಿಧಾನ ಪರಿಷತ್ ಸ್ಥಾನವನ್ನು ತನ್ನದಾಗಿಸಿಕೊಂಡಿರುವ ಬಿಜೆಪಿಗೆ ಸ್ವಾಭಾವಿಕವಾಗಿಯೇ ಅಂತರದ ಗೆಲುವಿನ ವಿಶ್ವಾಸವಿದೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಸರಕಾರದ ದುರಾಡಳಿತ, ಹಗರಣಗಳ ಸರಮಾಲೆ, ಅಭಿವೃದ್ಧಿ ರಹಿತ  ಜನವಿರೋಧಿ ನೀತಿ ಗೆಲುವಿನ ಅಂತರವನ್ನು ಹೆಚ್ಚಿಸಲಿದೆ.

ಪಕ್ಷದ ಕಾರ್ಯ ಪದ್ಧತಿಯಂತೆ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಪ್ರಮುಖರು, ಸಂಸದರು, ಶಾಸಕರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳ ಸಂಘಟಿತ ಪ್ರಯತ್ನದ ಮೂಲಕ  ಜಿಲ್ಲೆಯಾದ್ಯಂತ ಎಲ್ಲ ಸ್ತರದ ಜನಪ್ರತಿನಿಧಿಗಳ ಸಂಘಟನಾತ್ಮಕ ಸಭೆಗಳನ್ನು ನಡೆಸಲಾಗಿದೆ. ಓರ್ವ ಸಾಮಾನ್ಯ ಕಾರ್ಯಕರ್ತನ ಗೆಲುವಿಗೆ ಜಿಲ್ಲೆಯ ಜನಪ್ರತಿನಿಧಿಗಳು ಬದ್ಧತೆಯಿಂದ ಕೈಜೋಡಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ದೊಡ್ಡ ಅಂತರದ ಗೆಲುವಿನ ಮೂಲಕ ಕಾರ್ಯಕರ್ತರ ಪಕ್ಷ ಎನಿಸಿರುವ ಬಿಜೆಪಿ ಮಗದೊಮ್ಮೆ ಜಿಲ್ಲೆಯಲ್ಲಿ ವಿಜಯ ಯಾತ್ರೆಯನ್ನು ಮುನ್ನಡೆಸಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ

‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಪೂರ್ವಭಾವಿ ಭಜನಾ ತರಬೇತಿಯ ಉದ್ಘಾಟನೆ

ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಭಜನಾ ತರಂಗ ಸಹಸ್ರ ಸಹಸ್ರ ಕಂಠಗಳೊಂದಿಗೆ ಎಲ್ಲೆಡೆ ಮಾರ್ಧನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹೇಳಿದರು.

ಅವರು ಶ್ರೀ ವಿಜಯದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಶ್ರೀನಿವಾಸ ಉತ್ಸವ ಬಳಗ ಬೆಂಗಳೂರು ಇವರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇವರ ಸಹಯೋಗದೊಂದಿಗೆ ನ.10ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜಾoಗಣದಲ್ಲಿ ಹಮ್ಮಿಕೊಂಡಿರುವ 4 ದಿನಗಳ ಭಜನಾ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದಿವ್ಯ ಸಾನಿಧ್ಯದಲ್ಲಿ, ಅ.20 ರಿಂದ ನ.3ರ ವರೆಗೆ ಪ್ರತೀ ರವಿವಾರ ಮಧ್ಯಾಹ್ನ ಗಂಟೆ 2.00ರಿಂದ ಸಂಜೆ 5.00ರವರೆಗೆ ರಾಜಾoಗಣದಲ್ಲಿ ಮಠದ ವಿದ್ವಾಂಸ ಗೋಪಾಲಾಚಾರ್ಯ ಅವರ ಮಾರ್ಗದರ್ಶನದಲ್ಲಿ ಖ್ಯಾತ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ ಅವರಿಂದ ನಡೆಯುವ ಭಜನಾ ತರಬೇತಿಯಲ್ಲಿ ಭಜನಾ ಮಂಡಳಿಗಳ ಸದಸ್ಯರು ಮತ್ತು ಭಜನಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ.10 ರವಿವಾರ ಮಧ್ಯಾಹ್ನ ಗಂಟೆ 2.00ರಿಂದ ಸಂಜೆ 5.00ರ ವರೆಗೆ ರಾಜಾoಗಣದಲ್ಲಿ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಪಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ, ಭಜನಾ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷರುಗಳಾದ ವಜ್ರಾಕ್ಷಿ ಪಿ. ದಾಸ್ ಕಡಿಯಾಳಿ, ಸುಮಿತ್ರಾ ನಾಯ್ಕ್ ಪೆರಂಪಳ್ಳಿ, ಜೊತೆ ಕಾರ್ಯದರ್ಶಿ ಸತೀಶ್ ಕುಮಾರ್ ಕೇದಾರ್, ಯೋಜನೆಯ ತಾಲೂಕು ಕೃಷಿ ಅಧಿಕಾರಿ ಮಂಜುನಾಥ್, ಉಡುಪಿ ವಲಯ ಮೇಲ್ವಿಚಾರಕಿ ಪವಿತ್ರಾ, ಪ್ರಮುಖರಾದ ರಘುಪತಿ ರಾವ್, ಮನೀಶ್, ನಾಗರಾಜ್ ಖಾರ್ವಿ, ನಿತ್ಯಾನಂದ ನಾಯಕ್, ಸೇವಾ ಪ್ರತಿನಿಧಿಗಳಾದ ವಾರಿಜಾ ಶಿವಳ್ಳಿ, ರಜನಿ ಅಲೆವೂರು, ಒಕ್ಕೂಟಗಳ ಪದಾಧಿಕಾರಿಗಳು, ಭಜನಾ ಮಂಡಳಿಗಳ ಸದಸ್ಯರು ಮತ್ತು ಭಜನಾಸಕ್ತರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಿ



ಉಡುಪಿ: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಅಭ್ಯರ್ಥಿ ಪ್ರಮುಖ್ ಅರುಣ್ ಕುಮಾರ್ ಶೆಟ್ಟಿ ಪಾದೂರು, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ದಿನೇಶ್ ಅಮೀನ್ ಉಡುಪಿ ನಗರ, ನವೀನ್ ನಾಯಕ್ ಕಾರ್ಕಳ, ಜಿತೇಂದ್ರ ಶೆಟ್ಟಿ ಕಾಪು, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ಸುರೇಶ್ ಶೆಟ್ಟಿ ಗೋಪಾಡಿ ಕುಂದಾಪುರ ಮತ್ತು ದೀಪಕ್ ಕುಮಾರ್ ಶೆಟ್ಟಿ ಬೈಂದೂರು ಹಾಗೂ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರು ಮತ್ತು ಪಕ್ಷದ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ವಂದಿಸಿದರು.

ನಾಳೆ ಅ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ – ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ : ಕಿಶೋರ್ ಕುಮಾರ್ ಕುಂದಾಪುರ



ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಹಾಗೂ ಪಕ್ಷದ ಪ್ರಮುಖರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಅಪೇಕ್ಷಿತರು ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಶೀರೂರು ಮೂಲ ಮಠದಲ್ಲಿ ನಡಯಲಿರುವ ಶ್ರೀರಾಮ ತಾರಕ ಮಹಾಮಂಡಲ ಪೂಜೆಯ ಹಿರಿಯಡ್ಕ ವಲಯದ   ಸಭೆ‌


ಉಡುಪಿ: ಶೀರೂರು ಮೂಲ ಮಠ ಹಿರಿಯಡ್ಕದಲ್ಲಿ ಡಿ. 14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ ಮಹಾ ಮಂಡಲ ಪೂಜೆ, ಶ್ರೀರಾಮ ತಾರಕ ಯಾಗ, ಮನ್ಯುಸ್ತುತಿ ಯಾಗ, ವಾಯುಸ್ತುತಿ ಯಾಗ ಹಾಗೂ ದತ್ತಾತ್ರೇಯ ಯಾಗ ಪ್ರಯುಕ್ತ ಪೂರ್ವಭಾವಿ ಸಭೆ ಹಿರಿಯಡ್ಕ ಸುರಭಿ ಸಭಾಭವನಲ್ಲಿ ನಡೆಯಿತು.‌ ಸಭೆಯಲ್ಲಿ ಯಾಗದ ಉದ್ದೇಶ ಹಾಗೂ ಶೀರೂರು ಮಠದಲ್ಲಿ ಮಾಡುವ ಸಂಕಲ್ಪದ ಉದ್ದೇಶ ಶೀರೂರಿಗೂ ಅಯೋಧ್ಯೆಗೂ ಇರುವ ಸಂಬಂಧಗಳ ಬಗ್ಗೆ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಭಟ್ ವಿವರಿಸಿದರು. ಸಂಚಾಲಕರಾದ ಶ್ರೀಕಾಂತ ನಾಯಕ್ ಕಾರ್ಯಕ್ರಮದ ಸ್ವರೂಪ ಹಾಗೂ ಮನೆ ಮನೆ ಗಳಿಗೂ ಹೇಗೆ ಈ ಕಾರ್ಯಕ್ರಮವನ್ನು ಮುಟ್ಟಿಸಬೇಕು ಹಾಗೂ ಹಿಂದೂ ಸಮಾಜ ಜಾತಿ ಮತ ಮರೆತು ರಾಮನ ಕಾರ್ಯದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಸಮಿತಿಯ ಅಧ್ಯಕ್ಷರೂ ಶಾಸಕರೂ ಆದ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳ ಮಹತ್ವ ತಿಳಿಸಿ ಎಲ್ಲ ಹಿಂದೂ ಬಾಂಧವರು ಇದರಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಸಮಿತಿಯ ಕಾರ್ಯದರ್ಶಿ ದಿವಾಕರ್ ಹಿರಿಯಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸರೋಜ ನಾಯಕ್ ಪ್ರಾರ್ಥನೆಗೈದರು. ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಹಿರೇಬೆಟ್ಟು, ಶೇಖರ್ ಶೆಟ್ಟಿ ಹಿರಿಯಡ್ಕ, ಸಂಘಟನಾ ಕಾರ್ಯದರ್ಶಿ ಜಿತೇಶ್ ಉಡುಪಿ, ಕೋಶಾಧಿಕಾರಿ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ತುಕಾರಾಮ್ ನಾಯಕ್ ಹಾಗೂ ಶ್ರೀಕಾಂತ ಕಾಮತ್ ಯಾಗದ ಬಗ್ಗೆ ತನ್ನ ಅನಿಸಿಕೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕೆಲ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಅಧ್ಯಕ್ಷರಾಗಿ ಜಿಯಾನಂದ ಹೆಗ್ಡೆ, ಕಾರ್ಯಾಧ್ಯಕ್ಷರಾಗಿ ದಿಲ್ಲೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ಉದಯ ಶೆಟ್ಟಿ ಬೊಮ್ಮರಬೆಟ್ಟು ಹಾಗು ತುಕಾರಾಮ ನಾಯಕ್ ಪೆರ್ಡೂರು ಇವರ ಜವಾಬ್ದಾರಿಯನ್ನು ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಇವರಿಂದ ಘೋಷಿಸಲಾಯಿತು.

Design a site like this with WordPress.com
Get started