ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಬಾಂಡೇಶ್ವರ ಆಯ್ಕೆ



ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2024-26ನೇ ಸಾಲಿನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಎಮ್. ಅಮೀನ್ ವಡಭಾoಡೇಶ್ವರ ಇವರು ಡಿ.22ರಂದು ಗರೋಡಿಯ ಪ್ರಾಂಗಣದಲ್ಲಿ ನಡೆದ 2022-24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಅಚ್ಯುತ ಎ. ಅಮೀನ್ ಕಲ್ಮಾಡಿ, ಉಪಾಧ್ಯಕ್ಷರುಗಳಾಗಿ ಗೋಪಾಲ್ ಸಿ. ಬಂಗೇರ, ಹರೀಶ್ ಎಮ್.ಕೆ. ಕಲ್ಮಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಜತ್ತನ್ ಮಲ್ಪೆ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿಯಾಗಿ ವಿನಯ ಕುಮಾರ್ ಕಲ್ಮಾಡಿ, ಜೊತೆ ಕೋಶಾಧಿಕಾರಿಯಾಗಿ ಜಯಕರ ಪೂಜಾರಿ ಕೊಡವೂರು , ಸಂಘಟನಾ ಕಾರ್ಯದರ್ಶಿಯಾಗಿ ಮಧ್ವನಗರ ಶಂಕರ ಪೂಜಾರಿ ಹಾಗೂ ಆಡಳಿತ ಸಮಿತಿಯ ಸದಸ್ಯರುಗಳಾಗಿ ಪ್ರಕಾಶ್ ಜಿ. ಕೊಡವೂರು, ಶೇಖರ್ ಕಲ್ಮಾಡಿ, ಬಾಲಕೃಷ್ಣ ಕೊಡವೂರು, ವಿನಯಕುಮಾರ್ ಪಡುಕರೆ, ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಭಾಸ್ಕರ್ ಜೆ. ಕರ್ಕೇರ ಗರ್ಡೆ, ರತ್ನಾಕರ ಅಮೀನ್, ಜಗದೀಶ್ ಬಂಗೇರ ಮಲ್ಪೆ, ಸತೀಶ್ ಬಂಗೇರ ಹಾಗೂ ಎ.ಜಯಕರ ಶೆಟ್ಟಿ ಪಠೇಲರ ಮನೆ ಅಂಬಲಪಾಡಿ, ಪಿ. ವಿ. ಭಾಸ್ಕರ್ ಕಲ್ಮಾಡಿ, ಎಮ್. ಸುರೇಶ್ ಮಲ್ಪೆ ( ಗೌರವ ಸಲಹೆಗಾರರು), ಕರುಣಾಕರ ಪೂಜಾರಿ ಪಡುದಡ್ಡಿ( ಸನ್ನುದಾರ), ನಾರಾಯಣ ಪೂಜಾರಿ ಕಲ್ಮಾಡಿ (ಗರೋಡಿ ಮನೆ ಪ್ರತಿನಿಧಿ), ವೇದ ಕುಮಾರ್ ಕಲ್ಮಾಡಿ (ಬೆಂಗಳೂರು ಸಂಚಾಲಕರು) ಆಯ್ಕೆಯಾಗಿದ್ದಾರೆ.

ಪಕ್ಷದ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಿಶೋರ್ ಕುಮಾರ್ ಕುಂದಾಪುರ ಕರೆ



ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಬೂತ್ ಅಧ್ಯಕ್ಷರಾಗಿ ನಿಯೋಜನೆಗೊಳ್ಳುವ ಕಾರ್ಯಕರ್ತರು ಪಕ್ಷದ ಸಕ್ರಿಯ ಸದಸ್ಯತ್ವವನ್ನು ಪಡೆದಿರಬೇಕು. ಬೂತ್ ಸಮಿತಿಗೆ ಆಯ್ಕೆಯಾಗುವ ಎಲ್ಲಾ ಸದಸ್ಯರು ಪಕ್ಷದ ಸದಸ್ಯತನವನ್ನು ಹೊಂದಿರಬೇಕು. ಮಂಡಲಗಳಿಂದ ನೇಮಿಸಲ್ಪಟ್ಟ ಸಹಯೋಗಿಗಳು ಪ್ರತೀ ಬೂತ್ ಮಟ್ಟದಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿ  ಶಾಸಕರ ಉಪಸ್ಥಿತಿಯಲ್ಲಿ ಪರಿಣಾಮಕಾರಿ ಸಭೆ ನಡೆಸಿ, ನಿಗದಿತ ಮಾನದಂಡದಂತೆ ಸದೃಢ ಬೂತ್ ಸಮಿತಿಯನ್ನು ರಚಿಸಿ ವಿವರಗಳನ್ನು 1 ವಾರದೊಳಗೆ ಬಿಜೆಪಿ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಮತ್ತು ಆಕ್ರಮಣಗಳನ್ನು ಖಂಡಿಸಿ, ಉಡುಪಿ ಜಿಲ್ಲಾ ಹಿಂದೂ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಡಿ.4ರಂದು ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ ಜೋಡುಕಟ್ಟೆಯಿಂದ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಸ್ಥಳದ ವರೆಗೆ ನಡೆಯುವ ‘ಜಾಥಾ ಮತ್ತು ಜನಾಂದೋಲನ ಸಭೆ’ಗೆ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಜನಾಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಪಕ್ಷದ ಸಂಘಟನಾ ಪರ್ವದ ಜಿಲ್ಲಾ ಚುನಾವಣಾಧಿಕಾರಿ ರವಿಶಂಕರ್ ಮಿಜಾರ್ ಮಾತನಾಡಿ, ಪಕ್ಷದ ಸಂಘಟನಾ ಪರ್ವದ ಮಹತ್ವವನ್ನು ವಿವರಿಸಿ, ಬೂತ್ ಸಮಿತಿ ರಚನೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಪ್ರಮುಖ ಅಂಶಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ನ.26ರಿಂದ ಜ.26ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ಸಂವಿಧಾನ ಸಮ್ಮಾನ್ ಕಾರ್ಯಕ್ರಮದ ಕುರಿತು ಅಭಿಯಾನದ ಜಿಲ್ಲಾ ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಮಾಹಿತಿ ನೀಡಿದರು.

ಇತ್ತೀಚೆಗೆ ನಿಧನರಾದ ಪಕ್ಷದ ಹಿರಿಯ ಮುಖಂಡ ಮಾಧವ ಸುವರ್ಣ ಎರ್ಮಾಳು ಮತ್ತು ಮಹಿಳಾ ಮೋರ್ಚಾದ ಹಿರಿಯ ನಾಯಕಿ ಕಿರಣ್ ಕಾಮತ್ ಕಡಿಯಾಳಿ ಅವರ ಸೇವೆಯನ್ನು ನೆನೆದು ಪಕ್ಷದ ವತಿಯಿಂದ ಶೃದ್ದಾಂಜಲಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪೆರಣಂಕಿಲ ಶ್ರೀಶ ನಾಯಕ್, ಮಹಾವೀರ ಹೆಗ್ದೆ, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ದಕ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಸಹಿತ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು, ಸಹ ಸಂಚಾಲಕರು, ಸದಸ್ಯತಾ ಅಭಿಯಾನದ ಜಿಲ್ಲಾ ಮತ್ತು ಮಂಡಲ ಸಂಚಾಲಕರು, ಸಂಘಟನಾ ಪರ್ವದ ಜಿಲ್ಲಾ ಮತ್ತು ಮಂಡಲ ಸಹಯೋಗಿಗಳು, ಮನ್ ಕೀ ಬಾತ್ ಜಿಲ್ಲಾ ಸಂಚಾಲಕರು, ಸಹ ಸಂಚಾಲಕರು ಮತ್ತು ಮಂಡಲ ಸಂಯೋಜಕರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ವಂದಿಸಿದರು.

ಅಲೆವೂರು ಕರ್ವಾಲು ಪರಿಸರದಲ್ಲಿ ಚಿರತೆ ಹಾವಳಿ

ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ವಾಲು, ಮೂಡು ಅಲೆವೂರು, ಪ್ರಗತಿನಗರ ಭಾಗದಲ್ಲಿ ಕಳೆದ ಸುಮಾರು ಹದಿನೈದು ದಿನಗಳಿಂದ ಸುಮಾರು 5 ಚಿರತೆಗಳು ಒಡಾಡಿಕೊಂಡಿದ್ದು ಸ್ಥಳೀಯರು ಸಂಜೆ ಹೊತ್ತಲ್ಲಿ ಹೊರಗಡೆ ತಿರುಗಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಸಂಜೆ ಆರು ಗಂಟೆಯ ನಂತರ ಕರ್ವಾಲು ಪ್ರಗತಿನಗರ ರಸ್ತೆಯ ಫಾಲ್ಕೆ, ತೋಟ ರಸ್ತೆ, ಸ್ಕೌಟ್ ಗೈಡ್ಸ್ ಕ್ಯಾಂಪಸ್ ಬಳಿ, ಕಲ್ಲಕುಮೇರಿ, ಮೂಡುಅಲೆವೂರು ಶೆಟ್ಟಿಗಾರ್ ದೇವಸ್ಥಾನ ಬಳಿ ಅಲ್ಲಲ್ಲಿ ಎರಡು ದೊಡ್ಡದು ಹಾಗೂ ಮೂರು ಚಿರತೆ ಮರಿಗಳನ್ನು ಕಂಡು ಭಯಪಟ್ಟಿರುವರು. ಈ ಕುರಿತಂತೆ ಫಾರೆಸ್ಟ್ ಆಫೀಸರುಗಳಿಗೆ ತಿಳಿಸಿದರೂ ಗಮನ ಹರಿಸುತ್ತಿಲ್ಲವೆಂದು ಸ್ಥಳೀಯರು ದೂರಿರುತ್ತಾರೆ. ಕೂಡಲೇ ಅರಣ್ಯ ಇಲಾಖಾಧಿಕಾರಿಗಳು ಎಚ್ಚೆತ್ತುಕೊಂಡು ಸಂಭಾವ್ಯ ಅಪಾಯವನ್ನು ತಪ್ಪಿಸಬೇಕೆಂದು ಸ್ಥಳೀಯರು‌ ವಿನಂತಿಸಿರುವರು.

ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ


ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಾಯೋಜಿತ ವಕ್ಫ್ ಆಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ “ನಮ್ಮ ಭೂಮಿ ನಮ್ಮ ಹಕ್ಕು” ಅಭಿಯಾನದಡಿ ಬೃಹತ್ ಆಂದೋಲನ ನಡೆಯಿತು.

ಬೃಹತ್ ಆಂದೋಲನಕ್ಕೆ ಚಾಲನೆ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸರಕಾರದ ಆಡಳಿತ ವೈಫಲ್ಯ, ವಕ್ಫ್ ಅವಾಂತರ, ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ ಹಾಗೂ ಸರಣಿ ಹಗರಣಗಳ ವಿಚಾರವನ್ನು ಎಳೆ ಎಳೆಯಾಗಿ ಬಿಡಿಸಿ ವಿಸ್ತೃತವಾಗಿ ಮಾತನಾಡಿದರು.

ಬೃಹತ್ ಆಂದೋಲನವನ್ನು ಉದ್ದೇಶಿಸಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ಶಂಕರ ಅಂಕದಕಟ್ಟೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಉಪ್ಪುರು ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದ ಪದಾಧಿಕಾರಿಗಳ ತಂಡದಿಂದ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ವಕ್ಫ್ ಅಕ್ರಮ, ಹಗರಣಗಳ ಸರಮಾಲೆಯನ್ನು ಅಣಕಿಸುವ ಸಾಮೂಹಿಕ ಗೀತೆ ಗಾಯನ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮತ್ತು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಸಮಾರೋಪದ ಮಾತುಗಳನ್ನಾಡಿ, ಹಗರಣಗಳ ಕೂಪದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರಕಾರ ವಕ್ಫ್ ಅಕ್ರಮ, ಬಿಪಿಎಲ್ ಕಾರ್ಡ್ ರದ್ಧತಿ, ಹಿಂದೂ ವಿರೋಧಿ ನೀತಿಗಳ ಮೂಲಕ ಹಿಂದೂ ದಮನ ಕಾರ್ಯದಲ್ಲಿ ತೊಡಗಿದ್ದು ಈ ನಿಟ್ಟಿನಲ್ಲಿ ಬಿಜೆಪಿಯ ಹೋರಾಟಗಳು ಇನ್ನಷ್ಟು ತೀವ್ರಗೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ದೆ, ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ಜಿಲ್ಲಾ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ, ಜಯರಾಮ್ ಸಾಲ್ಯಾನ್, ಪೆರಣಂಕಿಲ ಶ್ರೀಶ ನಾಯಕ್,  ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಪ್ರಮುಖರಾದ ರಾಜೇಶ್ ಕಾವೇರಿ, ರವಿ ಅಮೀನ್, ನಯನಾ ಗಣೇಶ್, ಮನೋಹರ್ ಎಸ್ ಕಲ್ಮಾಡಿ, ರಾಘವೇಂದ್ರ ಕುಂದರ್, ಉದಯ ಎಸ್. ಕೋಟ್ಯಾನ್, ಸದಾನಂದ ಬಳ್ಕೂರ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಗೀತಾಂಜಲಿ ಎಮ್. ಸುವರ್ಣ, ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ವೀಣಾ ಎಸ್. ಶೆಟ್ಟಿ, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರುಗಳಾದ ವಿಜಯ ಕೊಡವೂರು, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಮಲಾಕ್ಷ ಹೆಬ್ಬಾರ್, ಸಂಧ್ಯಾ ರಮೇಶ್, ಚಂದ್ರ ಪಂಚವಟಿ, ರುಡಾಲ್ಫ್ ಡಿ’ಸೋಜ, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ನಳಿನಿ ಪ್ರದೀಪ್ ರಾವ್, ಅನಿತಾ ಆರ್.ಕೆ., ಶ್ರೀಕಾಂತ್ ಕಾಮತ್, ಪುಷ್ಪರಾಜ್ ಶೆಟ್ಟಿ, ಸುರೇಂದ್ರ ಕುಲಾಲ್ ವರಂಗ, ಎಸ್.ನಾರಾಯಣ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ಮಂಡಲಗಳ ಅಧ್ಯಕ್ಷರುಗಳಾದ ದಿನೇಶ್ ಅಮೀನ್ ಉಡುಪಿ, ನವೀನ್ ನಾಯಕ್ ಕಾರ್ಕಳ, ಜಿತೇಂದ್ರ ಶೆಟ್ಟಿ ಕಾಪು, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ಸುರೇಶ್ ಶೆಟ್ಟಿ ಗೋಪಾಡಿ ಕುಂದಾಪುರ, ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಗೋಪಾಲಕೃಷ್ಣ ರಾವ್ ಮಟ್ಟು, ಸುರೇಶ್ ಶೆಟ್ಟಿ ಶಿವಪುರ, ಸಚಿನ್ ಪೂಜಾರಿ, ಸತೀಶ್ ಪೂಜಾರಿ, ಸುಧೀರ್ ಕೆ.ಎಸ್., ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಮೋರ್ಚಾ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಪದಾಧಿಕಾರಿಗಳು, ಸಮಿತಿ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ವಂದಿಸಿದರು.

ನಾಳೆ ನ.21 ಬೆಳಿಗ್ಗೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ : ಕಿಶೋರ್ ಕುಮಾರ್ ಕುಂದಾಪುರ




ಉಡುಪಿ: ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ನಾಳೆ ನವೆಂಬರ್ 21, ಗುರುವಾರ ಬೆಳಿಗ್ಗೆ ಗಂಟೆ 10.00ರಿಂದ ಸಂಜೆಯ ವರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ನಡೆಯುವ ಈ ‘ಬೃಹತ್ ಪ್ರತಿಭಟನೆ’ ಮತ್ತು ‘ಧರಣಿ ಸತ್ಯಾಗ್ರಹ’ದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಪ್ರಮುಖರ ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ಸಮಿತಿ ಸದಸ್ಯರು, ಕಾರ್ಯಕಾರಿಣಿ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರು, ಎಲ್ಲಾ ಸ್ತರದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು, ಪಕ್ಷದ ಹಿತೈಷಿಗಳು, ರೈತಾಪಿ ವರ್ಗ, ಸಂತ್ರಸ್ತ ಸಾರ್ವಜನಿಕ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ರೈತರ, ಮಠ ಮಂದಿರಗಳ, ಸಾರ್ವಜನಿಕರ ಭೂಮಿಯನ್ನು ವಕ್ಫ್ ಕರಾಳ ಹಸ್ತದಿಂದ ರಕ್ಷಿಸಲು ನಡೆಯುವ ಈ ಸಂಘಟಿತ ಹೋರಾಟದಲ್ಲಿ ರಾಜ್ಯ ಸರಕಾರದ ವಿರುದ್ಧ ಧ್ವನಿ ಎತ್ತಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ:ಪುತ್ತಿಗೆಶ್ರೀ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಉಡುಪಿಯಲ್ಲಿ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟಕ್ಕೆ ಚಾಲನೆ




ಉಡುಪಿ: ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ಕೂಟವನ್ನು ಪಟ್ಟದ ಕಿರಿಯ ಶ್ರೀಗಳಾದ ಸುಶ್ರೀoದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಪ್ರಶಸ್ತಿ ಫಲಕಗಳನ್ನು ಅನಾವರಣಗೊಳಿಸಿ ಆಶೀರ್ವಚನದ ನುಡಿಗಳನ್ನಾಡಿದರು.

ಶ್ರೀಕೃಷ್ಣ ಮಲ್ಲ ಯುದ್ಧದಲ್ಲಿ ನಿಪುಣ. ಮಲ್ಲನ ಅಧಿಪತಿ ಕೃಷ್ಣನ ನಾಡಿನಲ್ಲಿ ಅಭೂತಪೂರ್ವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ನಡೆಯುತ್ತಿರುವುದು ಕೃಷ್ಣನಿಗೂ ಅತ್ಯಂತ ಸಂತೋಷದಾಯಕ ವಿಷಯವಾಗಿದೆ. ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ಹೇಳಿದಂತೆ ಎಲ್ಲರೂ ಸ್ವಯಂ ರಕ್ಷಣೆಗಾಗಿ ಇಂತಹ ಕಲೆಯ ಅಭ್ಯಾಸ ಮಾಡುವುದು ಅವಶ್ಯಕ. ಈ ಸ್ಪರ್ಧೆ ಯಶಸ್ವಿಯಾಗಿ ನಡೆಯಲಿ. ಆಯೋಜಿಸಿದ ಸಂಸ್ಥೆಗೂ ಭಾಗವಹಿಸಿದ ಎಲ್ಲರಿಗೂ ಶ್ರೀ ಕೃಷ್ಣ ಶ್ರೇಯಸ್ಸನ್ನುoಟುಮಾಡಲಿ ಎಂದು ಹರಸಿದರು.

ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೌರವ ಸಲಹೆಗಾರ ಪ್ರಕಾಶ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿ ತುಳುನಾಡಿಗೂ ಕರಾಟೆ ಕಲೆಗೂ ಇರುವ ಸ್ವಾಮ್ಯತೆಯನ್ನು ಉಲ್ಲೇಖಿಸಿ ಕರಾಟೆ ಕಲೆಯ ಅಭ್ಯಾಸದ ಔಚಿತ್ಯವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಹಿರಿಯ ಕರಾಟೆ ಶಿಕ್ಷಕ ಪ್ರಭಾಕರ ಕುಂದರ್ ಮಲ್ಪೆ, ಬಿಲ್ಲವರ ಸೇವಾ ಸಂಘ(ರಿ.) ಮಲ್ಪೆ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಮತ್ತು ಶ್ರೀ ನಾರಾಯಣ ಗುರು ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ, ಮುಳುಗು ತಜ್ಞ ಈಶ್ವರ್ ಮಲ್ಪೆ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಸಮಾಜ ಸೇವಕ ಹರಿಶ್ಚಂದ್ರ ಅಂಬಲಪಾಡಿ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಶ್ರೀ ಕೃಷ್ಣ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಪರ್ಧಾ ಕೂಟದ ಸಂಘಟಕ ವಾಮನ್ ಪಾಲನ್, ಸೌತ್ ಏಷ್ಯಾ ಚೀಫ್ ಶೋಟೋಕಾನ್ ವರ್ಲ್ಡ್ ಕರಾಟೆ AKSKA ರಾಜ್ಯ ಉಪಾಧ್ಯಕ್ಷ ವಿನೋದ್ ಶಿವಮೊಗ್ಗ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ದ.ಕ. ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಈಶ್ವರ್ ಕಟೀಲ್, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತಾಕ್ಷ ಉದ್ಯಾವರ, ರಾಜ್ಯ ಕರಾಟೆ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಶಿವಮೊಗ್ಗ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ ಸ್ವಾಮಿ, ಕೆಡಿಎಫ್ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ ಕುಂದಾಪುರ ಮುಖ್ಯ ಶಿಕ್ಷಕ ಕಿರಣ್ ಕುಂದಾಪುರ, ಕೆನಿ ಮಾಬುನಿ ಕಿಟೋರಿಯೋ ಕರಾಟೆ ಉಡುಪಿ ಮುಖ್ಯ ಶಿಕ್ಷಕ ಸುಂದರಂ, ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಡೊ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯ ಶಿಕ್ಷಕ ರಘುರಾಜ್ ಪಣಿಯಾಡಿ, ವಿ.ಕೆ  ಬುಡೋಕಾನ್ ಸೆಲ್ಫ್ ಡಿಫೆನ್ಸ್ ಅಂಡ್ ಕರಾಟೆ ಅಸೋಸಿಯೇಷನ್ ಮುಖ್ಯ ಶಿಕ್ಷಕ ಅಶೋಕ್ ಕುಲಾಲ್, ಬುಡೋಕಾನ್ ಕರಾಟೆ ಯುನಿಟಿ ಅಸೋಸಿಯೇಷನ್ ಇಂಡಿಯಾ ಮುಖ್ಯ ಶಿಕ್ಷಕ ಹರೀಶ್ ಬೆಳ್ಮಣ್, ಕೆಬಿಕೆ ಹಿರಿಯ ಶಿಕ್ಷಕ ಹರ್ಷ ಭಾಗವತ್ ಸಹಿತ ತೀರ್ಪುಗಾರರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಪರ್ದಾಳುಗಳು ಮತ್ತು ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

ಬಿಕೆಎಸ್ಎ ಉಪಾಧ್ಯಕ್ಷೆ ಅಮೃತಾ ಉಪಾಧ್ಯ ಸ್ವಾಗತಿಸಿದರು. ಪ್ರತೀಕ್ಷಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ಬಿಕೆಎಸ್ಎ ಕಾರ್ಯದರ್ಶಿ ಮೇಘ ವಂದಿಸಿದರು.

ನ.16-17 : ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ



ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ಕೂಟವು ನ.16 ಮತ್ತು 17ರಂದು ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ನಡೆಯಲಿದೆ ಎಂದು ಸ್ಪರ್ಧಾಕೂಟದ ಸಂಘಟನಾ ಸಮಿತಿಯ ಸಲಹೆಗಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ನ.16 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ  ಉಡುಪಿ ಶ್ರೀ ಕೃಷ್ಣ ಮಠದ ಮದ್ವಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪರ್ಯಾಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದು, ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸ್ಪರ್ಧಾ ಕೂಟವನ್ನು ಉದ್ಘಾಟಿಸಲಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಶಸ್ತಿ ಫಲಕಗಳನ್ನು ಅನಾವರಣಗೊಳಿಸಲಿದ್ದಾರೆ. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಿತ ಗಣ್ಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಲಿದ್ದಾರೆ.

ನ.17 ರವಿವಾರ ಸಂಜೆ ಗಂಟೆ 5.00ಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಏಕಜಾತಿ ಧರ್ಮ ಪೀಠ, ದ್ವಾರಕಾಮಾಯಿ ಮಠ ಶಂಕರಪುರ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಆಶೀರ್ವಚನ ನೀಡಲಿದ್ದಾರೆ.

ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್(ರಿ.) ಹಾಗೂ ದಕ್ಷಿಣ ಭಾರತ ಕರಾಟೆ ಫೆಡರೇಶನ್ ಮುಖ್ಯ ಕಾರ್ಯದರ್ಶಿ ಸೆನ್ಸಾಯ್ ಭಾರ್ಗವ ರೆಡ್ಡಿ ಸಹಿತ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬುಡೋಕಾನ್ ಕರಾಟೆ ಎಂಡ್ ಸೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಪರ್ಧಾ ಕೂಟದ ಸಂಘಟಕ ವಾಮನ್ ಪಾಲನ್ ಮಾತನಾಡಿ, 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಮೇಘಾಲಯ ಸಹಿತ ವಿವಿಧ ರಾಜ್ಯಗಳಿಂದ ಸುಮಾರು 2000ಕ್ಕೂ ಮಿಕ್ಕಿ ಸ್ಪರ್ದಾಳುಗಳು ಭಾಗವಹಿಸಲಿದ್ದಾರೆ. ‘ಗ್ರಾಂಡ್ ಚಾಂಪಿಯನ್ಶಿಪ್’ಗಾಗಿ ನಡೆಯುವ ಸ್ಪರ್ಧೆಯಲ್ಲಿ 14 ವರ್ಷ ಕೆಳಗಿನ ವಿಭಾಗ, 14ರಿಂದ 18 ವರ್ಷದ ವಿಭಾಗ ಮತ್ತು 18 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತಾಕ್ಷ ಉದ್ಯಾವರ ಮತ್ತು ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಶ್ರೇಯಸ್ ಉಪ್ಪೂರು ಉಪಸ್ಥಿತರಿದ್ದರು.

‘ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ



ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವಿಸ್ತೃತ ಸೇವೆಯು ಕರಾವಳಿ ವಲಯದ ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಜೋಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಸಾಂಸ್ಕೃತಿಕ ವಿನಿಮಯ ಮತ್ತು ಆರ್ಥಿಕತೆಗೆ ವಿಶೇಷ ಒತ್ತು ನೀಡಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಮನವಿಯನ್ನು ಸ್ವೀಕರಿಸಿದ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣ ರೈಲ್ವೆ ಇಲಾಖೆಯನ್ನು ಸಂಪರ್ಕಿಸಿ ರೈಲ್ವೆ ಸಚಿವರಿಗೆ ಪತ್ರ ಬರೆದು, ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ನಗರಾಧ್ಯಕ್ಷ ಡೇನಿಸ್ ಮಸ್ಕರೇನಸ್, ಜಿಲ್ಲಾ ಪದಾಧಿಕಾರಿಗಳಾದ ನವೀನ್ ಡಿಸೋಜ, ಗ್ಲೆನ್ ಮೌನೀಸ್, ಓಲಿವರ್ ಪೆರಂಪಳ್ಳಿ ಮತ್ತಿತರರು ಉಪಸ್ಥಿತರಿದ್ದರು.

   ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ  ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರಿಕೆ ಸಲ್ಲಿಕೆ

ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ‌ಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್,  ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ ಸುವರ್ಣ, ಜಿಲ್ಲಾ ಸಮಿತಿಯ ಸಂಚಾಲಕರಾದ ಶ್ರೀಕಾಂತ ನಾಯಕ್, ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಮೋಹನ್ ಭಟ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ನಯನಾ ಗಣೇಶ್, ಹಿಂದೂ ಯುವಸೇನೆಯ ಹಿರಿಯಡ್ಕ ವಿಭಾಗದ ಗೌರವಾಧ್ಯಕ್ಷರಾದ ಶೇಖರ್ ಶೆಟ್ಟಿ ಪ್ರಮುಖರಾದ ನಂದನ್, ಸಚಿನ್, ಅಕ್ಷಯ್ ಶೆಟ್ಟಿ,  ಜಿಲ್ಲಾ ಮಹಿಳಾ ಪ್ರಮುಖರಾದ ಪೂರ್ಣಿಮಾ ಶೆಟ್ಟಿ, ಭಾರತಿ ಚಂದ್ರಶೇಖರ್,  ಉಪಸ್ಥಿತರಿದ್ದರು

ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’



ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಇವರ ಸಂಯೋಜನೆಯಲ್ಲಿ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರ ನೇತೃತ್ವದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’ವು ನ.10 ರವಿವಾರ ಮಧ್ಯಾಹ್ನ ಗಂಟೆ 2.00ಕ್ಕೆ ಸರಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ‘ರಾಜಾಂಗಣ’ದಲ್ಲಿ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

‘ಸಹಸ್ರ ಕಂಠ ಗಾಯನ’ದ ಪೂರ್ವಭಾವಿಯಾಗಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯ ಅವರ ಮಾರ್ಗದರ್ಶನದಲ್ಲಿ ಖ್ಯಾತ ಭಜನಾ ತರಬೇತುದಾರೆ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ 4 ದಿನಗಳ ಭಜನಾ ತರಬೇತಿಯಲ್ಲಿ ಸುಮಾರು 600ಕ್ಕೂ ಮಿಕ್ಕಿ ಭಜಕರು ಆಯ್ದ ಭಜನಾ ಹಾಡುಗಳನ್ನು ಅಭ್ಯಾಸ ಮಾಡಿರುವ ಜೊತೆಗೆ ಕುಣಿತದ ಭಜನಾ ತರಬೇತುದಾರರಾದ ಶ್ರೀ ರೋಹಿತ್ ಕಬ್ಯಾಡಿ ಅವರಿಂದ ಕುಣಿತದ ಭಜನೆಯಲ್ಲಿಯೂ ಪರಿಣತಿಯನ್ನು ಹೊಂದಿದ್ದಾರೆ.

ಈಗಾಗಲೇ ಭಜನಾ ತರಬೇತಿ ಪಡೆದ ಸುಮಾರು 800ಕ್ಕೂ ಮಿಕ್ಕಿ ಭಜಕರು ವಿವಿಧ ಭಜನಾ ಮಂಡಳಿಗಳಿಂದ ಹಾಗೂ ವೈಯಕ್ತಿಕವಾಗಿ ‘ಸಹಸ್ರ ಕಂಠ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತಾಲೂಕಿನ ವಿವಿಧ ಭಜನಾ ಮಂಡಳಿಗಳ ಸುಮಾರು 500ಕ್ಕೂ ಮಿಕ್ಕಿ ಭಜಕರು ಸೇರಿದಂತೆ ಸುಮಾರು 1,000ಕ್ಕೂ ಮಿಕ್ಕಿ ಭಜಕರು ‘ಸಹಸ್ರ ಕಂಠ ಗಾಯನ’ ಹಾಗೂ ‘ಭಜನಾ ಮಂಡಳಿಗಳ ಸಮಾವೇಶ’ದಲ್ಲಿ ಪಾಲ್ಗೊಳ್ಳಲಿದ್ದಾರೆ.

ನ.10 ರವಿವಾರ ಮಧ್ಯಾಹ್ನ ಗಂಟೆ 12.30ಕ್ಕೆ ಅನ್ನ ಪ್ರಸಾದ ವಿತರಣೆ, ಗಂಟೆ 1.00ಕ್ಕೆ ಭಜನಾ ಮಂಡಳಿಗಳ ನೊಂದಾವಣೆ, 2.00ಕ್ಕೆ ಉದ್ಘಾಟನೆ, 2.30ಕ್ಕೆ ‘ಸಹಸ್ರ ಕಂಠ ಗಾಯನ’ ಹಾಗೂ ಸಂಜೆ 4.00ಕ್ಕೆ ಸಮಾರೋಪ ನಡೆಯಲಿದೆ. ಭಜನಾ ಮಂಡಳಿಗಳ ಪ್ರತಿನಿಧಿಗಳು ಮತ್ತು ಭಜನಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Design a site like this with WordPress.com
Get started