ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿವೆ.ವೃತ್ತಿರಂಗದಲ್ಲಿ ಅಧಿಕಾರಿ ಜನರ ಅಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ ಬರಲಿವೆ.ದಿನಾಂತ್ಯ ಕಿರು ಸಂಚಾರವಿದೆ.
ವೃಷಭ
ಸದ್ಯ ದೈವಬಲ ಇದ್ದುದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆಸಮಾಧಾನ ಕಂಡು ಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಉತ್ತಮ ಫಲವು ಸಿಗಲಿದೆ. .
ಮಿಥುನ
ಅಪೇಕ್ಷಿತ ಜನರ ಸಹಾಯದಿಂದ ಕಾರ್ಯಸಾಧನೆಯಾಗಲಿದೆ.ದೇಹಾರೋಗ್ಯದಲ್ಲಿ ಸಮಾಧಾನ ಸಿಗಲಿದೆ.ದೈಹಿಕ ವಿಷದಾಪತ್ತುಗಳು ಸಮಸ್ಯೆ ತಂದೀತು.ಸಾಂಸಾರಿಕವಾಗಿ ಉತ್ತಮ ಕೆಲಸಗಳು ನಡೆಯಲಿವೆ.
ಕಟಕ
ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಕುಟುಂಬ ವರ್ಗದವರಿಂದ ಸ್ಫೂರ್ತಿ ಸಹಕಾರ ಮುನ್ನಡೆಗೆ ಸಾಧಕವಾಗಲಿದೆ.ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವುದು.
ಸಿಂಹ
ಅಧೀನ ನೌಕರರಿಂದ ಕಿರಿಕಿರಿ ಇರುತ್ತದೆ. ಸಾಂಸಾರಿಕವಾಗಿ ಉತ್ತಮ ಕೆಲಸಗಳಾಗಲಿವೆ. ಉದ್ಯೋಗ ಗೃಹಕೃತ್ಯಗಳಲ್ಲಿ ಸಮಾಧಾನ ಸಿಗಲಿದೆ. ಶತ್ರುಕೃತ ದೋಷದಿಂದ ಮನಸ್ಸಿಗೆ ಸಮಾಧಾನ ದೊರಕಲಾರದು.
ಕನ್ಯಾ
ಸಾಂಸಾರಿಕವಾಗಿ ಸಾಮರಸ್ಯದ ಕೊರತೆ ಕಾಣಿಸಲಿದೆ.ಮನಸ್ಸು ಉದ್ವೇಗದಿಂದ ಶಾಂತಿ, ಸಮಾಧಾನ ಕಳೆದುಕೊಳ್ಳಲಿದೆ.ಖರ್ಚುವೆಚ್ಚಗಳು ದುಪ್ಪಟ್ಟಾಗುವುದರಿಂದ ಆರ್ಥಿಕ ಸಮತೋಲನ ತಪ್ಪಿ ಆತಂಕಕ್ಕೆ ಕಾರಣವಾದಾವು.
ತುಲಾ
ಆರ್ಥಿಕವಾಗಿ ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ನಾನಾ ರೀತಿಯ ಸಮಸ್ಯೆಗಳು ಮನಸ್ಸನ್ನು ಉದ್ವಿಗ್ನಗೊಳಿಸಲಿವೆ.ಎಲ್ಲದರಲ್ಲೂ ತಪ್ಪು ಹುಳುಕು ಹುಡುಕುವ ನಿಮಗೆ ಸಮಾಧಾನವು ಕಂಡು ಬರಲಾರದು.
ವೃಶ್ಚಿಕ
ಆರೋಗ್ಯದ ಬಗ್ಗೆ ಮುಖ್ಯವಾಗಿ ಪಿತ್ತ, ಉಷ್ಣ ಜಾಡ್ಯ,ಉದರವ್ಯಾಧಿ,ಉಸಿರಾಟದ ತೊಂದರೆ ಆಗಾಗ ಗೋಚರಕ್ಕೆ ಬಂದಾವು.ಜಾಗ್ರತೆ ವಹಿಸಿರಿ. ಕಾರ್ಯಕ್ಷೇತ್ರದಲ್ಲಿ ವಿರೋಧಿಗಳನ್ನು ಧೈರ್ಯವಾಗಿ ಎದುರಿಸುವುದು. .
ಧನು
ನಿರುದ್ಯೋಗಿಗಳಿಗೆ ಅವಕಾಶಗಳು ಅನಿರೀಕ್ಷಿತ ರೀತಿಯಲ್ಲಿ ಸಿಗಲಿವೆ.ವಿದ್ಯಾರ್ಥಿಗಳ ಪರಿಶ್ರಮ ಸಾರ್ಥಕವಾದೀತು.ಶ್ರೀದೇವರ ದರ್ಶನ ಭಾಗ್ಯದಿಂದ ಮನಸ್ಸಿಗೆ ಸಂತಸ ತರಲಿದೆ.
ಮಕರ
ಶುಭಮಂಗಲ ಕಾರ್ಯಗಳು ನಿರ್ವಿಘ್ನವಾಗಿ ನಡೆದೀತು.ಆರ್ಥಿಕವಾಗಿ ಶಿಸ್ತು,ಸಂಯಮದಿಂದ ಇದ್ದಲ್ಲಿ ಕಷ್ಟನಷ್ಟಗಳು ಕಡಿಮೆಯಾಗುವ ಅನುಭವ ನಿಮ್ಮದಾಗಲಿವೆ.ಮಾನಸಿಕ ಒತ್ತಡವು ಹೆಚ್ಚಾಗಲಿದೆ.
ಕುಂಭ
ವಿದ್ಯಾರ್ಥಿಗಳಿಗೆ ಕೊಂಚ ಹಿನ್ನಡೆಯು ಕಂಡು ಮನಸ್ಸಿಗೆ ಬೇಸರ ತರಲಿದೆ.ಹೆಜ್ಜೆ ಹೆಜ್ಜೆಗೂ ವಿವೇಚನೆ ಅಗತ್ಯವಿದೆ.ಉದ್ಯೋಗಿಗಳಿಗೆ ದೂರಕ್ಕೆ ವರ್ಗಾವಣೆಯ ಸಂಭವ ಕಂಡು ಬರಲಿದೆ.ತಾಳ್ಮೆಯಿಂದ ಸಹಕರಿಸಿರಿ.
ಮೀನ
ಗ್ರಹಿಸಿದ ಕೆಲಸವೊಂದು ಅನಿರೀಕ್ಷಿತವಾಗಿ ನಡೆದು ಮನಸ್ಸಿಗೆ ಸಮಾಧಾನವಾಗಲಿದೆ.ವಿವಾಹಾಪೇಕ್ಷಿಗಳಿಗೆ ದಾಂಪತ್ಯದ ಯೋಗವಿದೆ.ಪತ್ರಿಕೋದ್ಯಮಿಗಳಿಗೆ ನಿರೀಕ್ಷೆಗೂ ಮೀರಿ ಯಶಸ್ಸು ತೋರಿ ಬರಲಿದೆ.ಸಹನೆ ಇರಲಿ.
ಉಡುಪಿ ಜೂನ್ 8 :ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಯಾವುದೇ ಸಂದರ್ಭದಲ್ಲೂ ಸಾವು ಸಂಭವಿಸದAತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಿಲ್ಲೆಯನ್ನು ನಾನ್ ಕೋವಿಡ್ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರನಿಧಿಗಳು ಸಹಕಾರದಿಂದ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ, ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 12540 ಮಂದಿಯನ್ನು ಕೋವಿಡ್-19 ಪರೀಕ್ಷೆ ಮಾಡಿದ್ದು, ಅದರಲ್ಲಿ 11566 ವರದಿ ನೆಗೆಟಿವ್ ಬಂದಿದ್ದು, 946 ಪಾಸಿಟಿವ್ ಪ್ರಕರಣಗಳು ಕಂಡುಬAದಿವೆ, ಇದರಲ್ಲಿ ಶೇ. 98 ಮಹಾರಾಷ್ಟçದಿಂದ ಬಂದವರಲ್ಲಿ ಕಂಡುಬAದಿದು, ಇಂದಿನವರೆಗೆ 274 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ, ರಾಜ್ಯದಲ್ಲೇ ಅತೀ ಹೆಚ್ಚು ಕ್ವಾರಂಟೈನ್ ಕೇಂದ್ರದಲ್ಲಿನ ಟೆಸ್ಟ್ ಉಡುಪಿ ಜಿಲ್ಲೆಯಲ್ಲಿ ನಡೆದಿದೆ , ಸೋಂಕು ಕಂಡುಬAದ 929 ಮಂದಿಯಲ್ಲಿ ರೋಗ ಲಕ್ಷಣಗಳು ಕಂಡುಬAದಿಲ್ಲ ಎಂದು ಸಚಿವ ಬೊಮ್ಮಾಯಿ ತಿಳಿಸಿದರು. ಪ್ರಸ್ತುತ ಜಿಲ್ಲೆಗೆ ಮಹಾರಾಷ್ಟçದಿಂದ ಬಂದವರನ್ನು ಅವರ ಗ್ರಾಮದಲ್ಲೇ ಕ್ವಾರಂಟೈನ್ ಮಾಡುತ್ತಿದ್ದು, ಇವರ ಉಸ್ತುವಾರಿಗೆ ಗ್ರಾಮೀಣ ಕಾರ್ಯಪಡೆ ರಚಿಸಿದ್ದು, ನಿಗಾವಹಿಸಲಗಿದೆ, ಹಿರಿಯ ಅಧಿಕಾರಿಗಳು ಈ ಕೇಂದ್ರಗಳಿಗೆ ಅನಿರೀಕ್ಷಿತ ಬೇಟಿ ನೀಡಿ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 4500 ಟ್ರಿಬಲ್ ಲೇಯರ್ ಮಸ್ಕ್, 10740 ಎನ್-95 ಮಾಸ್ಕ್ , 2745 ಪಿಪಿಇ ಕಿಟ್ ಸಂಗ್ರಹವಿದ್ದು, ಕೋವಿಡ್ ಚಿಕಿತ್ಸೆ ಅಗತ್ಯವಿರುವ ಉಪಕರಣಗಳ ಯಾವುದೇ ಕೊರತೆಯಿಲ್ಲ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಕಂಡ ಬಂದ ವ್ಯಕ್ತಿಯ ಮನೆಯನ್ನು ಮಾತ್ರ ಸೀಲ್ಡೌನ್ ಮಾಡುವ ಕುರಿತಂತೆ ಮುಖ್ಯಮಂತ್ರಿಗಳ ಚರ್ಚಿಸಿ ಸ್ಪಷ್ಟ ನಿರ್ದೇಶನ ನೀಡಲಾಗುವುದು, ಉಡುಪಿಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ 10 -12 ದಿನದಲ್ಲಿ ಕಾರ್ಯಾರಂಭ ಮಾಡಲಿದೆ, ಈ ಬಗ್ಗೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಸಹ ನೀಡಲಾಗಿದೆ, ಕುಂದಾಪುರ ಮತ್ತು ಕಾರ್ಕಳದಲ್ಲಿನ ಆಸ್ಪತ್ರೆಗೆ , ಉಡುಪಿ ಜಿಲ್ಲಾಸ್ಪತ್ರೆಯ ಪ್ರಮಾಣದಲ್ಲಿಯೇ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಕುರಿತಂತೆ ಪ್ರಯತ್ನ ಮಾಡಲಾಗುವುದು, ಕೋವಿಡ್ ವಿರುದ್ದದ ಹೋರಾಟದಲ್ಲಿ ಅಗತ್ಯವಿರುವ ಆಶಾ, ಆರೋಗ್ಯ ಕಾರ್ಯಕರ್ತರು, ಎಎನ್ಎಂ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳುವ ಕುರಿತಂತೆ ಆದೇಶ ನೀಡಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯಲ್ಲಿ ಎನ್.ಆರ್.ಇ.ಜಿ ಕಾರ್ಯಕ್ರಮದಲ್ಲಿ ಪ್ರಗತಿಯಗಿದ್ದು, ಕೆಳದ ವರ್ಷ 77190 ,ಮಾನವ ದಿನ ಸೃಷ್ಠಿಯಾಗಿದ್ದರೆ ಈ ವರ್ಷ ಇದುವರೆಗೆ 210000 ಮಾನವ ದಿನಗಳ ಸೃಷ್ಠಿ ಆಗಿದೆ, ವಸತಿ ಯೋಜನೆಯಲ್ಲಿ ಬ್ಲಾಕ್ ಆಗಿದ್ದ 1640 ಮನೆಗಳ ಬ್ಲಾಕ್ ತೆರವುಗೊಳಿಸಲಾಗಿದೆ ಎಂದರು. ಕೋವಿಡ್-19 ಸಮಸ್ಯೆಯನ್ನು ಜಿಲ್ಲಾಡಳಿತ ಅತ್ಯಂತ ಸಮರ್ಥವಾಗಿ ಎದುರಿಸಿದೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ ಅತ್ಯಂತ ಸವಾಲಿನದಾಗಿದ್ದು, ಇದನ್ನು ಅತ್ಯಂತ ದಕ್ಷವಾಗಿ ನಿಭಾಯಿಸಿದ್ದು, ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕ್ಷಮತೆಯಿಂದ ಕಾರ್ಯ ನಿರ್ವಹಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಜಿಲ್ಲಾಡಳಿತ ಕಾರ್ಯವನ್ನು ಅಭಿನಂದಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್,ಬೈAದೂರು ಶಾಸಕ ಸುಕುಮಾರ ಶೆಟ್ಟಿ, ಕರಾವಳಿ ಅಬಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್ ಉಪಸ್ಥಿತರಿದ್ದರು.
ಇಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಗೆ ಕೊರೊನಾ ದೃಢಪಟ್ಟಿರುವ ಹಿನ್ನಲೆಯಲ್ಲಿ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 947 ಕ್ಕೆ ಏರಿದೆ. ಎಲ್ಲಾ 45 ಸೋಂಕಿತರು ಮುಂಬಯಿಯಿಂದ ಆಗಮಿಸಿದ್ದರು. ಖುಷಿಯ ವಿಚಾರವೆಂದರೆ, ಇಂದು ಒಂದೇ ದಿನದಲ್ಲಿ 215 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ತನ್ಮೂಲಕ ಇಲ್ಲಿಯವರೆಗೆ ಒಟ್ಟು 318 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯ ಒಟ್ಟು ಕ್ರಿಯಾಶೀಲ ಪ್ರಕರಣಗಳ (active cases) ಸಂಖ್ಯೆ ವ್ಯಾಪಕವಾಗಿ ಇಳಿಮುಖವಾಗಿದ್ದು ಒಟ್ಟು 628 ಕ್ರಿಯಾಶೀಲ ಪ್ರಕರಣಗಳಿವೆ. ಇಂದು ರಾಜ್ಯದಲ್ಲಿ ಒಟ್ಟು 308 ಮಂದಿಗೆ ಕೊರೊನಾ ಬಲೆ ಬೀಸುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5760 ಕ್ಕೆ ಏರಿದೆ. ಕಲಬುರಗಿಯಲ್ಲಿ 99 ಮಂದಿಗೆ ಸೋಂಕು ತಗುಲುವ ಮೂಲಕ ಇಂದು ರಾಜ್ಯದಲ್ಲಿಯೇ ಅತ್ಯಧಿಕ ಪಾಸಿಟಿವ್ ಕೇಸ್ ಗಳಿರುವ ಜಿಲ್ಲೆಯಾಗಿದೆ. ಯಾದಗಿರಿಯಲ್ಲಿ 66, ಬೀದರ್ 48, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ ಮತ್ತು ರಾಮನಗರದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಉಳಿದ 15 ಜಿಲ್ಲೆಗಳಲ್ಲಿ ಇಂದು ಯಾವುದೇ ಪಾಸಿಟಿವ್ ಪ್ರಕರಣಗಳು ಕಂಡುಬರಲಿಲ್ಲ. ಕಾಫೀ ನಾಡು ಚಿಕ್ಕಮಗಳೂರು ಕೊರೊನಾ ಮುಕ್ತ ಜಿಲ್ಲೆಯಾಗಿ ಹೆಗ್ಗಳಿಕೆ ಪಡೆದಿದೆ. ಮೈಸೂರು, ತುಮಕೂರು ಹಾಗೂ ಕೊಡಗು ಅತಿ ಶೀಘ್ರದಲ್ಲಿ ಕೊರೊನಾ ಮುಕ್ತ ಜಿಲ್ಲೆಗಳಾಗಿ ಮೂಡಿ ಬರಲಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 2519 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ ಬಿಜೆಪಿ ರಾಜ್ಯಸಭಾ ಟಿಕೆಟ್ ವಿಚಾರ ಯಾರೂ ಊಹಿಸದ ರೀತಿಯಲ್ಲಿ ಅಂತ್ಯ ಕಂಡಿತು. ಈಗಾಗಲೇ ರಾಜ್ಯದಿಂದ ಮೂವರು ಘಟಾನುಘಟಿಗಳ ಹೆಸರನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿ ಅವರು ಮಹತ್ವದ ಸಭೆಯ ಮೂಲಕ ಬಿಜೆಪಿ ಹೈಕಮಾಂಡ್ ಗೆ ಕಳುಹಿಸಲಾಗಿತ್ತು. ಮೂವರಲ್ಲಿ ಇಬ್ಬರಿಗೆ ಟಿಕೆಟ್ ಖಚಿತ ಎಂದು ಬಹುತೇಕರು ಊಹಿಸಿಕೊಂಡಿದ್ದರು. ಆದರೆ ಟಿಕೆಟ್ ನೀಡುವ ವಿಚಾರದಲ್ಲಿ ಇಲ್ಲಿಯವರೆಗೆ ಅಚ್ಚರಿ ಮೂಡಿಸಿರುವ ಬಿಜೆಪಿ ಹೈಕಮಾಂಡ್ ಅಚ್ಚರಿಯ ಬೆಳವಣಿಗೆಯಲ್ಲಿ ಮೂವರು ಟಿಕೆಟ್ ಆಕಾಂಕ್ಷಿಗಳ ಆಸೆಯ ಮೇಲೆ ತಣ್ಣೀರು ಎರೆಚಿದೆ. ನಮಗೆ ಕಾರ್ಯಕರ್ತರು ಮುಖ್ಯ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಬಿಜೆಪಿ ಹೈಕಮಾಂಡ್ ಇಬ್ಬರು ಸಾಮಾನ್ಯ ಕಾರ್ಯಕರ್ತರಾದ ಬೆಳಗಾವಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಈರಣ್ಣ ಕದಡಿ ಮತ್ತು ರಾಯಚೂರು ಬಿಜೆಪಿ ಕಾರ್ಯದರ್ಶಿ ಅಶೋಕ್ ಗಸ್ತಿ ಅವರಿಗೆ ಪ್ರತಿಷ್ಠಿತ ರಾಜ್ಯಸಭಾ ಟಿಕೆಟ್ ನೀಡಿದೆ. ತನ್ಮೂಲಕ, ಉದ್ಯಮಿ ಪ್ರಕಾಶ್ ಶೆಟ್ಟಿ, ಮರು ಆಯ್ಕೆ ಬಯಸಿದ ಪ್ರಭಾಕರ್ ಕೋರೆ ಮತ್ತು ರಮೇಶ್ ಕತ್ತಿ ಮೂವರಿಗೂ ಟಿಕೆಟ್ ಕೈತಪ್ಪಿದೆ. ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡುವ ಮೂಲಕ ನಮಗೆ ಕಾರ್ಯಕರ್ತರೇ ಮುಖ್ಯ ಎಂದು ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಈ ಬೆಳವಣಿಗೆಯಿಂದ ಪಕ್ಷದ ವರ್ಚಸ್ಸಿಗೆ ದೊಡ್ಡ ಪ್ರಮಾಣದಲ್ಲಿ ಲಾಭವಾಗಲಿದೆ ಹಾಗೂ ಕಾರ್ಯಕರ್ತರ ಉತ್ಸಾಹ ಮತ್ತಷ್ಟು ಹೆಚ್ಚಿಸಲಿದೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ.
ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು. ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ, ಮುನ್ಸೂಚನೆ ಎಂದು ಅರಿವಾಗುವುದಿಲ್ಲ. ಬೇರೆಯವರಿಗೂ ಮನೆಯವರಿಗೂ ಹೇಳುವುದಿಲ್ಲ.
ವಿಪರೀತ ಬೆವರುವುದು, ಸುಸ್ತಾಗುವುದು, ಯಾವುದಾದರು ರಟ್ಟೆ ವಿಪರೀತ ನೋಯುವುದು, ಎದೆ ಕಿವುಚಿದಂತೆ ಆಗುವುದು ನಿರ್ಲಕ್ಷಿಸಬಾರದು.
ಇಂಥ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ, ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಆಸ್ಪತ್ರೆಯನ್ನು ಸೇರಬೇಕು.
ಗೋಲ್ಡನ್ ಹವರ್
ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು.
40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು..
ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್(ಯಾವುದಾದರು), ಎಟಿಎಂ ಕಾರ್ಡ್, ಐಡಿ ಕಾರ್ಡ್ ಮತ್ತು ನೀರಿನ ಬಾಟಲಿ (200 ಎಂ.ಎಲ್. ಆದರೂ ಪರವಾಗಿಲ್ಲ) ಜೊತೆಯಲ್ಲಿ ತೆಗೆದುಕೊಂಡು ಹೋಗವುದು ಶ್ರೇಯಕರ
ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.
ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ.
ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು(ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಕ್) ಹೆಚ್ಚಾಗುತ್ತಿರುತ್ತದೆ, ಆದರೆ ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.
ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ. ಕ್ಲಾಟ್‌ಗಳು ಒಂದಕ್ಕಿಂತ ಹೆಚ್ಚು ಕೂಡ ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು. ನಂತರ ಸೂಕ್ತ ಚಿಕೆತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು.
ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ. ಆದರೆ.. ಹೃದಯ ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು
ವೈದ್ಯರು ಹೇಳುವುದು ಒಂದೇ…
ಉತ್ತಮ ಆಹಾರ ಕ್ರಮ ಅನುಸರಿಸಿ ಸದಾ ಚಟುವಟಿಕೆಯಿಂದ ಇರಿ ಸರಳ ಜೀವನ ನಡೆಸಿ
ನಿಮ್ಮ ಕುಟುಂಬದ ಹಾಗು ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ, ಹೆಂಡತಿ ಮಕ್ಕಳನ್ನು, ನಿಮ್ಮ ಕುಟುಂಬವನ್ನು ನಡು ನೀರಿನಲ್ಲಿ ಕೈ ಬಿಡಬೇಡಿ, ಅವರಿಗಾಗಿ ಬಾಳಿ ಬದುಕಬೇಕು..
ಲಾಕ್ ಡೌನ್ ನಿಂದ ತತ್ತರಿಸಿರುವ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದಿನಿಂದ ಹೊಸ ಜೀವನ ಆರಂಭವಾಗಲಿದೆ. ಹೌದು, ದೇವಸ್ಥಾನ, ಹೋಟೆಲ್, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳು ಆರಂಭವಾಗಲಿದೆ.
ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 23 ರಿಂದ ಬಂದ್ ಆಗಿರುವ ದೇಗುಲ, ಮಸೀದಿ, ಚರ್ಚ್ ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಇಂದಿನಿಂದ ಪುನಾರಂಭಗೊಳ್ಳಲಿವೆ.ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ.
ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ ರೈಲು, ಬಸ್, ಅಂಗಡಿಗಳು ಆರಂಭಗೊಂಡಿದ್ದು ಶೇಕಡ 98 ರಷ್ಟು ವಹಿವಾಟು ಪುನರಾರಂಭಗೊಳ್ಳಲಿದೆ. ಶಾಲೆ-ಕಾಲೇಜು, ಸಿನಿಮಾ, ಮೆಟ್ರೋ ರೈಲು, ವಿದೇಶಿ ವಿಮಾನ, ಸಭೆ-ಸಮಾರಂಭ, ಜಿಮ್ ಗಳನ್ನು ಬಂದ್ ಮಾಡಲಾಗಿದೆ.. ಸೋಮವಾರದಿಂದ ಶೇಕಡ 98ರಷ್ಟು ಸೇವೆ ಮತ್ತು ಚಟುವಟಿಕೆಗಳು ಪ್ರಾರಂಭವಾಗಲಿದ್ದು, ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಶಾಪಿಂಗ್ ಮಾಲ್ ಆರಂಭ :
ಕಳೆದ ಎರಡು ತಿಂಗಳಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್ ಇಂದಿನಿಂದ ತೆರೆಯಲಿದ್ದು ಅದಕ್ಕಾಗಿ ಕೇಂದ್ರ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳನ್ನು ಪ್ರತಿಯೊಬ್ಬರು ಪಾಲಿಸಬೇಕು….
ಮಾಲ್ ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. ರೋಗ ಲಕ್ಷಣ ರಹಿತ ಗ್ರಾಹಕರು ಅಥವಾ ಸಂದರ್ಶಕರಿಗೆ ಮಾತ್ರ ಮಾಲ್ ಒಳಗಡೆ ಪ್ರವೇಶ. ಫೇಸ್ ಮಾಸ್ಕ್ ಧರಿಸಿದ ಕಾರ್ಮಿಕರು,ಗ್ರಾಹಕರು,ಸಂದರ್ಶಕರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ. ಶಾಪಿಂಗ್ ಮಾಲ್ ಒಳಗಡೆ ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸುವುದು ಕಡ್ಡಾಯ. ಕೊರೊನಾ ನಿಯಂತ್ರಣದ ಪೋಸ್ಟರ್ ಹಾಗೂ ವಿಡಿಯೋಗಳನ್ನು ಮಾಲ್ ನಲ್ಲಿ ಪ್ರದರ್ಶಿಸಬೇಕು. ಸಾಧ್ಯವಾದರೆ ಸಂದರ್ಶಕರನ್ನು ಒಂದೇ ಕಡೆ ನಿಲ್ಲಿಸುವುದು ಉಚಿತ ಸಾಮಾಜಿಕ ಅಂತರ ಕಾಪಾಡಲು ಮಾಲ್ ನಿರ್ವಹಣೆ ಕಂಪನಿಗಳು ಅಗತ್ಯವಾದ ಜನರನ್ನು ನಿಯೋಜಿಸಬೇಕು. ವೃದ್ಧ ನೌಕರರು, ಗರ್ಭಿಣಿ ನೌಕರರು ಮತ್ತು ವೈದ್ಯಕೀಯ ಪರಿಸ್ಥಿತಿಗಳನ್ನು ಹೊಂದಿರುವ ನೌಕರರು ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅವರು ಸಾರ್ವಜನಿಕರೊಂದಿಗೆ ನೇರವಾಗಿ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಬೇಕು. ಪಾರ್ಕಿಂಗ್ ಸ್ಥಳಗಳಲ್ಲಿ ಜನದಟ್ಟಣೆ ನಿಯಂತ್ರಿಸಬೇಕು. ಸಾಮಾಜಿಕ ಅಂತರ ಕಡ್ಡಾಯ. ಮಾಲ್‌ನ ಆವರಣದ ಹೊರಗೆ ಹಾಗೂ ಒಳಗೆ ಯಾವುದೇ ಅಂಗಡಿಗಳು, ಮಳಿಗೆಗಳು ಕೆಫೆಟೇರಿಯಾಗಳಲ್ಲಿ ಎಲ್ಲ ಸಮಯದಲ್ಲೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಡೋರ್, ಕೀ, ಸ್ಟೇರಿಂಗ್ ಡಿಸ್ ಇನ್ ಫೆಕ್ಕ್ಷನ್ ಮಾಡುವುದು ಉಚಿತ. ಸಂದರ್ಶಕರು, ಕಾರ್ಮಿಕರು ಮತ್ತು ಸರಕು/ಸರಬರಾಜುಗಳಿಗಾಗಿ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳ ನಿರ್ಮಾಣ. ಹೋಮ್ ಡೆಲಿವರಿಗೂ ಮುನ್ನ ಡೆಲಿವರಿ ಬಾಯ್ ಅಥವಾ ಸಿಬ್ಬಂದಿಯ ಥರ್ಮಲ್ ಸ್ಕ್ರೀನಿಂಗ್‌ನ್ನು ಮಾಲ್ ನಿರ್ವಹಣೆ ಕಂಪನಿಗಳು ಮಾಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕನಿಷ್ಠ ಸಂಖ್ಯೆಯಲ್ಲಿ ಗ್ರಾಹಕರನ್ನು ಒಳಗಡೆ ಬಿಡಬೇಕು ಎಂದು ಕೇಂದ್ರ ಸರಕಾರ ತಿಳಿಸಿದೆ. ಮಾಲ್‌ಗಳ ಎಸಿ 24 ರಿಂದ 30 ಡಿಗ್ರಿ ಸೆಲ್ಸಿಯಸ್ ಇರಬೇಕು. ಸಾಧ್ಯವಾದಷ್ಟು ಹೆಚ್ಚು ಮಾಲ್ ಒಳಗಡೆ ತಾಜಾ ಗಾಳಿ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಮಾಲ್ ನ ಒಳಗೆ ಕುಳಿತುಕೊಳ್ಳಲು ವ್ಯವಸ್ಥೆ ಇದ್ದರೆ ಅಲ್ಲೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಲ್ ನ ಒಳಗೆ, ಹೊರಗೆ, ವಾಷಿಂಗ್ ಏರಿಯಾ, ಡ್ರಿಂಕಿಂಗ್ ಏರಿಯಾ, ಕುಳಿತುಕೊಳ್ಳುವ ಜಾಗ, ಹಾಂಡ್ ರೇಲ್ಸ್, ಎಲಿವೇಟರ್ ಬಟನ್, ಡೋರ್ ಹಾಂಡಲ್ ಇವುಗಳೆಲ್ಲವನ್ನು ಕಡ್ಡಾಯವಾಗಿ ನಿಯಮಿತವಾಗಿ ಸಾನಿಟೈಸಿಂಗ್, ಕ್ಲೀನಿಂಗ್ ಮಾಡುತ್ತಿರಬೇಕು. ವಾಷ್ ರೂಮ್ ಗಳನ್ನು ಶುಚಿತ್ವವಾಗಿಡುವುದು, ಕ್ಲೀನ್ ಮಾಡುವುದು ಕಡ್ಡಾಯ ಬಳಸಿದ ಮಾಸ್ಕ್, ಗ್ಲೌಸ್, ಗ್ರಾಹಕರು ಬಿಟ್ಟು ಹೋದ ವಸ್ತುಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು.ಅಡುಗೆ ಮನೆಯಲ್ಲಿ, ಸಿಬ್ಬಂದಿ ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರ ನಿಯಮ ಪಾಲನೆ ಕಡ್ಡಾಯ.
ಕೇಂದ್ರ ಸರ್ಕಾರವು ಮೇ. 30 ರಂದು 5 ನೇ ಹಂತದ ಲಾಕ್ ಡೌನ್ ಘೋಷಣೆ ಮಾಡಿದ್ದು, ಜೂನ್ 8 ರಿಂದ ಧಾರ್ಮಿಕ ಕೇಂದ್ರ, ಶಾಪಿಂಗ್ ಮಾಲ್, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಿದೆ. ಈ ಸಂಬಂಧ ಜೂ. 3 ಬುಧವಾರ ನಿಯಮಾವಳಿಗಳನ್ನು ಬಿಡುಗಡೆ ಮಾಡಿತ್ತು. .
ಇನ್ನೂ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ ಎಲ್ಲಾ ದೇವಾಲಯಗಳು ಕೂಡ ಇಂದಿನಿಂದ ತೆರೆಯಲಾಗುತ್ತದೆ. ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರಿಂದ ಆಗಬಹುದಾದ ಸೋಂಕು ಹರಡುವುದನ್ನು ತಡೆಗಟ್ಟಲು ಹಲವಾರು ಷರತ್ತುಗಳನ್ನು ವಿಧಿಸಿದ್ದಾರೆ. ಕಂಟೈನ್‍ಮೆಂಟ್ ವಲಯಗಳಲ್ಲಿ ಕಂಡುಬರುವ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ. ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ ಅಂತಹ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಂಡು ಮುಖಗವಸನ್ನು ತಪ್ಪದೇ ಧರಿಸಬೇಕು ಹಾಗೂ ದೇವಾಲಯಗಳಲ್ಲಿ ಸೋಪ್‍ನಿಂದ ಕೈತೊಳೆಯಲು ಹಾಗೂ ಆಲ್ಕೊಹಾಲ್ ಇರುವ ಹ್ಯಾಂಡ್ ಸ್ಯಾನಿಟೈಸರ್ ಉಪಯೋಗಿಸಲು ವ್ಯವಸ್ಥೆ ಮಾಡಬೇಕು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕಡ್ಡಾಯವಾಗಿ ಹ್ಯಾಂಡ್ ಕರ್ಚಿಪ್ ಅಥವಾ ಮೊಣಕೈಯಿಂದ ಮುಚ್ಚಿಕೊಳ್ಳಬೇಕು.
ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳ ಪ್ರವೇಶದ್ವಾರದಲ್ಲಿ ಸ್ಯಾನಿಟೈಸರ್ ನೀಡಲು ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು ಹಾಗೂ ಸ್ಮಾರ್ಟ್‍ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅನ್ನು ಹೊಂದಿರಬೇಕು. ದೇವಾಲಯಗಳಲ್ಲಿ ಕೋವಿಡ್-19 ವೈರಾಣು ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಶ್ವತ ಫಲಕ ಅಳವಡಿಸುವುದು ಹಾಗೂ ವಿಡಿಯೋ-ಆಡಿಯೋ ಕ್ಲಿಪ್‍ಗಳ ಮೂಲಕ ಪ್ರಚಾರ ಮಾಡಬೇಕು.
ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶವಿರುವುದಿಲ್ಲ. ದರ್ಶನಕ್ಕೆ ಬರುವವರು ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿಗಳನ್ನು ತರಲು ಅವಕಾಶವಿರುವುದಿಲ್ಲ. ಹಾಗೂ ಪ್ರಸಾದ, ತೀರ್ಥ ನೀಡಲು ಹಾಗೂ ಪ್ರೋಕ್ಷಿಸಲು ಅವಕಾಶವಿರುವುದಿಲ್ಲ. 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಲಾಗಿದೆ. ದೇವಾಲಯದ ವಸತಿಗೃಹದಲ್ಲಿ ತಂಗಲು ಅವಕಾಶವಿರುವುದಿಲ್ಲ. ಅಲ್ಲದೆ ಸದ್ಯದ ಮಟ್ಟಿಗೆ ದಾಸೋಹ ನಡೆಸಲು ಅವಕಾಶವಿರುವುದಿಲ್ಲ.
ತಂದೆ ತಾಯಿಯ ಬೆಂಬಲವು ಪೂರ್ಣ ರೀತಿಯಾಗಿ ನಿಮ್ಮ ಕಡೆ ಇರುತ್ತದೆ ಮತ್ತು ನಿಮ್ಮ ಆರ್ಥಿಕ ಲಾಭಗಳಿಗೂ ಸಹ ಅವರು ನಿಮಗೆ ಸಹಾಯ ಮಾಡುತ್ತಾರೆ
ವೃಷಭ
ನಿಮ್ಮ ಮೇಲೆ ಪ್ರಾಬಲ್ಯಗೊಳಿಸಲು ಬಿಡಬೇಡಿ, ಇಲ್ಲದಿದ್ದರೆ ನೀವು ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುತ್ತೀರಿ. ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಬರುತ್ತವೆ.
ಮಿಥುನ
ಮನೆಯ ಅಲಂಕಾರದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡಬಹುದು ಮತ್ತು ನಿಮ್ಮ ಹೊಸ ವಾಹನದ ಕನಸು ಸಹ ನಿಜವಾಗಬಹುದು
ಕರ್ಕಾಟಕ
ವ್ಯವಹಾರದಲ್ಲಿ ಯಾವುದೇ ದೊಡ್ಡ ಹೂಡಿಕೆಗಾಗಿ ಯೋಚಿಸಿ, ಅರ್ಥಮಾಡಿಕೊಂಡು ಮುಂದುವರಿಸಿ. ಉದ್ಯೋಗದ ಬದಲಾವಣೆಗಾಗಿ ವರ್ಷದ ಮಧ್ಯದ ಸಮಯ ಉತ್ತಮವಾಗಿಲ್ಲ.
ಸಿಂಹ
ಜೀವನ ಸಂಗಾತಿಯೊಂದಿಗೆ ಯಾವುದೇ ವಿಷಯದಿಂದ ದೂರ ಹೋಗಬಹುದು. ಹೊಸ ಕೆಲಸವನ್ನು ಆರಂಭಿಸುವ ಮೊದಲು ಯಾರಾದರೂ ಹಿರಿಯರ ಸಲಹೆಯನ್ನು ತೆಗೆದುಕೊಳ್ಳಿ.
ಕನ್ಯಾ
ನೀವು ತಮ್ಮ ಸ್ವತಃ ಮನೆಯನ್ನು ಖರೀದಿಸಲು ಯೋಚಿಸುತ್ತಿದ್ದರೆ, ಈ ಕನಸ್ಸು ಸಹ ಖಂಡಿತವಾಗಿಯೂ ಸಂಪೂರ್ಣವಾಗುತ್ತದೆ. ಜೀವನ ಸಂಗಾತಿಯೊಂದಿಗೆ ಕೆಲವು ವಿವಾದಗಳು ಉಳಿದಿರುತ್ತವೆ.
ತುಲಾ
ಮಾನಸಿಕ ಒತ್ತಡ ಇರುತ್ತದೆ ಆದರೆ ಶನಿಯ ತನ್ನ ಸ್ವತಃ ರಾಶಿಚಕ್ರದಲ್ಲಿ ಸಾಗಣೆಯಿಂದಾಗಿ ಈ ಮಾನಸಿಕ ಒತ್ತಡದಿಂದ ಹೋರಾಡಲು ಪ್ರೇರಣೆ ಸಹ ಶನಿಯೇ ನೀಡುತ್ತಾನೆ.
ವೃಶ್ಚಿಕ
ಬಹಳ ಅಡಚಣೆಗಳನ್ನು ಎದುರಿಸಬೇಕಾಗಬಹುದು. ತಂದೆಯ ಕಡೆಯಿಂದ ಆಥಿಕ ಬೆಂಬಲವನ್ನು ಪಡೆಯುತ್ತೀರಿ. ತಾಯಿಯ ಆಶೀರ್ವಾದ ನಿಮ್ಮ ಮೇಲೆ ಎಂದಿಗೂ ಇರುತ್ತದೆ.
ಧನು
ಹಣಕ್ಕೆ ಸಂಬಂಧಿಸಿದ ಸಮಸ್ಯಗಳು ಇರುತ್ತವೆ ಆದರೆ ನಿಮ್ಮ ಯಾವುದೇ ಕೆಲಸವೂ ನಿಲ್ಲುವುದಿಲ್ಲ. ಈ ಶನಿ ನಿಮಗೆ ಭೂಮಿಗೆ ಸಂಬಂಧಿಸಿದ ಲಾಭವು ನೀಡಬಹುದು.
ಮಕರ
ತಾಯಿಯೊಂದಿಗೆ ಜಗಳವಾಗಬಹುದು.ಒಬ್ಬ ಸ್ನೇಹಿತನ ಸಹಾಯದಿಂದ ನಿಮ್ಮ ಕೆಲಸ ಸರಿಯಾಗಿ ಆಗುತ್ತದೆ. ಆದರೆ ಅದೇ ಸ್ನೇಹಿತನೊಂದಿಗೆ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬೇಡಿ.
ಕುಂಭ
ನಿಮ್ಮ ಕೆಲಸವನ್ನು ನಾಳೆಯ ಮೇಲೆ ಮುಂದೂಡಲು ಬಯಸಿದರೆ, ನಷ್ಟವೂ ಸಹ ನಿಮ್ಮದೇ ಆಗಿರುತ್ತದೆ. ವ್ಯಾಪಾರದಲ್ಲಿ ಯಾವುದೇ ಹೊಸ ಕೆಲಸವನ್ನು ಮಾಡಲು ಬಯಸುತ್ತಿದ್ದರೆ ಈ ಸಮಯ ಹೊಸ ಕೆಲಸಕ್ಕೆ ಉತ್ತಮವಾಗಿದೆ.
ಮೀನ
ವಿದೇಶಕ್ಕೆ ಹೋಗುವ ಕನಸು ಕೂಡ ನಿಜವಾಗಬಹುದು. ಯಾವುದೇ ರೀತಿಯ ವಿವಾದ ಅಥವಾ ಗೊಂದಲಗಳಿಂದ ನಿಮ್ಮನ್ನು ತಪ್ಪ್ಪಿಸುವುದು ನಿಮಗೆ ಉತ್ತಮವಾಗಿರುತ್ತದೆ
ರಕ್ತ ಶುದ್ಧೀಕರಣ: ರಕ್ತಕ್ಕೆ ಸಂಬಂಧಿಸಿದ ಅನೇಕ ತೊಂದರೆಗಳನ್ನು ನೀಗಿಸುವಲ್ಲಿ ಹಾಗಲ ಕಾಯಿಯದು ಮೊದಲ ಸ್ಥಾನ. ಕೆಟ್ಟ ರಕ್ತದಿಂದ ಉಂಟಾಗುವ ಹುಣ್ಣು, ಚರ್ಮದ ತುರಿಕೆ ಮತ್ತು ಕೀವು ಸೋರುವುದನ್ನು ತಡೆಯುತ್ತದೆ. ನಿಂಬೆಹಣ್ಣು ಮತ್ತು ಸ್ವಲ್ಪ ಜೇನಿನೊಂದಿಗೆ ಇದನ್ನು ಸೇವಿಸುತ್ತ ಬಂದರೆ ಕ್ರಮೇಣ ರಕ್ತ ಶುದ್ಧಿಯಾಗುತ್ತದೆ.
ಕಾಲರಾ, ಜಾಂಡೀಸ್ ನಂತಹ ಅಪಾಯಕಾರಿ ರೋಗಗಳ ತಡೆಗೆ ಇದು ರಾಮಬಾಣ. ಅಷ್ಟೇ ಅಲ್ಲ, ಹುಳುಕಡ್ಡಿ ಮುಂತಾದ ಅಲರ್ಜಿ ಸಂಬಂಧಿತ ಕಾಯಿಲೆಗಳನ್ನು ಅತಿ ಬೇಗ ಗುಣಪಡಿಸುತ್ತದೆ.
ಮಧುಮೇಹ: ಕಹಿಯಾದ ಹಾಗಲಕಾಯಿಯಲ್ಲಿನ ಹೈಪೊಗ್ಲೈಸಮಿಕ್ ಎಂಬ ನೈಸರ್ಗಿಕ ಇನ್ಸುಲಿನ್ ರಕ್ತದಲ್ಲಿನ ಸಕ್ಕರೆ ಅಂಶವನ್ನು ತಗ್ಗಿಸುವುದಲ್ಲದೆ, ರಕ್ತಕ್ಕೆ ಗ್ಲೂಕೋಸ್ ನೀಡಿ ಸಾಮರ್ಥ್ಯ ಹೆಚ್ಚುವಂತೆ ಮಾಡುತ್ತದೆ.
ರೋಗ ನಿರೋಧಕ ಶಕ್ತಿ: ಹಾಗಲಕಾಯಿಯಲ್ಲಿನ ಸತ್ವ ರಕ್ತದಲ್ಲಿನ ಕೆಲವು ಸೂಕ್ಷ್ಮಾಣು ಜೀವಿಗಳನ್ನು ಕೊಂದು ಜೀರ್ಣಕ್ರಿಯೆಗೆ ಸ್ಪಂದಿಸುವಂತೆ ಮಾಡುತ್ತದೆ. ಶಕ್ತಿಯ ಮೂಲವಾಗಿರುವ ಈ ಹಾಗಲಕಾಯಿ ರಸವನ್ನು ಸೇವಿಸಿದರೆ ತಲೆ ಸುತ್ತು ಕಡೆಮೆಯಾಗಿ, ದೈಹಿಕ ಚಟುವಟಿಕೆಗಳು ಸರಾಗವಾಗಿ ಸಾಗುವಂತೆ ಮಾಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.
ಉಸಿರಾಟ ಸಂಬಂಧಿ ಕಾಯಿಲೆಗಳಾದ ಅಸ್ತಮಾ, ಗೂರಲು ಕೆಮ್ಮು ಮತ್ತು ಗಂಟಲಿನ ಸಮಸ್ಯೆಗಳಿಗೆ ಇದರ ಸೇವನೆ ಅತಿ ಶೀಘ್ರ ಪರಿಣಾಮ ಬೀರುತ್ತದೆ.
*ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಗೆ ತಾಜಾ ಹಾಗಲಕಾಯಿಯು ಶ್ವಾಸಕೋಶ ಸಂಬಂಧಿ ಸಮಸ್ಯೆಗಳಾದ ಆಸ್ತಮಾ, ಶೀತ, ಕೆಮ್ಮು ಮುಂತಾದವುಗಳಿಗೆ ಅತ್ಯುತ್ತಮ ಪರಿಹಾರವಾಗಿದೆ.
ಯಕೃತ್ ನ ಟಾನಿಕ್ ಯಕೃತ್ ನ ಸಮಸ್ಯೆಗಳನ್ನು ಗುಣಪಡಿಸಲು ಪ್ರತಿದಿನ ಒಂದು ಲೋಟದಷ್ಟು ಹಾಗಲಯಿಯ ಜ್ಯೂಸ್ ನ್ನು ಕುಡಿಯಿರಿ. ಫಲಿತಾಂಶವನ್ನು ಮನಗಾಣಲು ಒಂದು ವಾರದವರೆಗೆ ನಿರಂತರವಾಗಿ ಕುಡಿಯಿರಿ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಸೋಂಕುಗಳ ವಿರುದ್ಧ ಹೋರಾಡಲು, ಹಾಗಲಕಾಯಿ ಗಿಡದ ಎಲೆಗಳನ್ನು ಅಥವಾ ಹಣ್ಣುಗಳನ್ನು ನೀರಿನಲ್ಲಿ ಕುಡಿಸಿ ಪ್ರತಿದಿನ ಸೇವಿಸಿರಿ. ಇದು ನಿಮ್ಮ ರೋಗನಿರೋಧಕ ಶಕ್ತಿಯ ವರ್ಧನೆಗೆ ಸಹಕಾರಿ.
*ಮೊಡವೆಗಳಿಗೆ (acne) ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ಮಧುಮೇಹ (Diabetes) Type 2 ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಮಲಬದ್ಧತೆ (Constipation) ಹಾಗಲಕಾಯಿಯ ನಾರಿನ ಗುಣಗಳು, ಪಚನಕ್ರಿಯೆಯಲ್ಲಿ ಸಹಕಾರಿಯಾಗಿವೆ. ಇದರಿಂದಾಗಿ ಆಹಾರವು ಸುಲಭವಾಗಿ ಪಚನವಾಗುತ್ತದೆ ಹಾಗೂ ತ್ಯಾಜ್ಯವು ಸುಲಲಿತವಾಗಿ ಹೊರಗೆಸೆಯಲ್ಪಡುತ್ತದೆ ಹಾಗೂ ತನ್ಮೂಲಕ ಅಜೀರ್ಣ ಹಾಗೂ ಮಲಬದ್ಧತೆಯನ್ನು ನಿವಾರಿಸುತ್ತವೆ.
ಮೂತ್ರಪಿಂಡ (kidney) ಮತ್ತು ಮೂತ್ರಕೋಶದ ಆರೋಗ್ಯಕ್ಕೆ ಮೂತ್ರಪಿoಡ ಮತ್ತು ಮೂತ್ರಕೋಶಗಳನ್ನು ಆರೋಗ್ಯಪೂರ್ಣವಾಗಿ ಕಾಪಿಟ್ಟುಕೊಳ್ಳಲು, ಹಾಗಳಕಾಯಿಯು ಸಹಕಾರಿ. kidney ಯ ಕಲ್ಲುಗಳ ನಿವಾರಣೆಯಲ್ಲಿಯೂ ಇದು ಉಪಯುಕ್ತ.
ಹೃದಯ ಸಂಬಂಧೀ ರೋಗಗಳಿಗೆ ಹಾಗಲಕಾಯಿಯು ಹೃದಯದ ಆರೋಗ್ಯಕ್ಕೆ ಹಲವು ವಿಧದಲ್ಲಿ ಅತ್ಯುತ್ತಮವಾಗಿದೆ. ರಕ್ತನಾಳಗಳಲ್ಲಿ ತಡೆಯನ್ನುಂಟು ಮಾಡುವ ಕೆಟ್ಟ ಕೊಲೆಸ್ಟರಾಲ್ (bad cholesterol) ನ ಪ್ರಮಾಣವನ್ನು ತಗ್ಗಿಸುತ್ತದೆ ಹಾಗೂ ಹೃದಯಾಘಾತದ ಸಾಧ್ಯತೆಯನ್ನು ಕ್ಷೀಣಗೊಳಿಸುತ್ತದೆ. ಮಾತ್ರವಲ್ಲದೇ, ಇದು ರಕ್ತದಲ್ಲಿನ ಸಕ್ಕರೆಯ ಅಂಶವನ್ನೂ ಸಹ ತಗ್ಗಿಸುವುದರ ಮೂಲಕ ಹೃದಯವನ್ನು ಸ್ವಸ್ಥವಾಗಿರಿಸುತ್ತದೆ.
ಕ್ಯಾನ್ಸರ್ ಖಾಯಿಲೆಗೆ ಕ್ಯಾನ್ಸರ್ ಕೋಶಗಳು ದ್ವಿಗುಣಗೊಳ್ಳುವುದನ್ನು ಹಾಗಲಕಾಯಿಯು ತಡೆಗಟ್ಟಬಲ್ಲುದು.
ಹೆಚ್ಚಾದ ತೂಕವನ್ನು ಕಳೆದುಕೊಳ್ಳಲು ಹಾಗಲಕಾಯಿಯಲ್ಲಿರುವ antioxidant ಗಳು, ನಿಮ್ಮ ಶರೀರದ ಎಲ್ಲಾ ಕಾರ್ಯಾಂಗ ವ್ಯೂಹಗಳನ್ನು ಶುದ್ಧಗೊಳಿಸುತ್ತವೆ. ಇದರಿಂದ ನಿಮ್ಮ ಚಯಾಪಚಯ ಹಾಗೂ ಜೀರ್ಣಾಂಗವ್ಯೂಹಗಳು ಉತ್ತಮಗೊಳ್ಳುತ್ತವೆ ಹಾಗೂ ತನ್ಮೂಲಕ ನೀವು ಹೆಚ್ಚಾದ ನಿಮ್ಮ ಶರೀರದ ತೂಕವನ್ನು ಬೇಗನೆ ನಿವಾರಿಸಿಕೊಳ್ಳುವುದರಲ್ಲಿ ಸಹಕಾರಿಯಾಗಿದೆ.
ಹಾಗಲ ಲಿವರ್ ಶುದ್ಧೀಕರಿಸುವ ಒಂದು ತರಕಾರಿ. ಇದು ಯಕೃತ್ತನ್ನು ಶುದ್ಧಗೊಳಿಸಲು ಮತ್ತು ಜೀವಕೋಶಗಳ ಪುನರುತ್ಪಾದನೆಯಲ್ಲಿ ಸಹಕರಿಸುತ್ತದೆ.
ಹಾಗಲರಸ ಮಧುಮೇಹ-2 ಅನ್ನು ಹೊಂದಿರುವ ರೋಗಿಗಳಿಗೆ ಒಂದು ಉತ್ತಮ ಔಷಧಿ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಿ, ಇನ್ಸುಲಿನ್ ಪ್ರತಿರೋಧವನ್ನು ಗುಣಪಡಿಸುತ್ತದೆ.
ಹಾಗಲಕಾಯಿ ಜೀರ್ಣಕ್ರಿಯೆಗೆ ಉತ್ತಮ. ಇದು ಪಚನ ಮಟ್ಟವನ್ನು ಹೆಚ್ಚಿಸುವ ಆ್ಯಂಟಿ ಆಕ್ಸಿಡೆಂಟ್‌ಗಳಿಂದಲೂ ಕೂಡಿದೆ. ಇದಲ್ಲದೆ ಹಾಗಲ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಒಂದು ತರಕಾರಿ.
ಕಹಿಯಾದ ತರಕಾರಿ ಮತ್ತು ಹಣ್ಣುಗಳು ಬಹುವಾಗಿ ಚರ್ಮಕ್ಕೆ ಪ್ರಯೋದನಕಾರಿ. ಹಾಗಲ ಊರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಚರ್ಮದಿಂದ ವಿಷಕಾರಿ ಜೀವಾಣುಗಳನ್ನು ತೊಲಗಿಸಲೂ ಸಹಕರಿಸುತ್ತದೆ.
ನಮ್ಮ ದೇಹವನ್ನು ಶುದ್ಧಿಗೊಳಿಸುವ ಹಾಗಲಕಾಯಿ ಹೇರಳವಾಗಿ ಆ್ಯಂಟಿ ಆಕ್ಸಿಡೆಂಟ್‌ಗಳಿಂದ ಕೂಡಿದೆ. ಹಾಗಾಗಿ ಈ ತರಕಾರಿ ರೋಗಗಳ ವಿರುದ್ಧ ಹೋರಾಡಲು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ.
ಮೂತ್ರಕೋಶ ಮತ್ತು ಮೂತ್ರಪಿಂಡಗಳಿಗೆ ಔಷಧಿ. ಹಾಗಲಕಾಯಿ ಕಿಡ್ನಿಗಳನ್ನು ಶುದ್ಧಿಗೊಳಿಸುತ್ತದೆ ಮತ್ತು ಮೂತ್ರ ಕೋಶದಲ್ಲಿ ಸಂಗ್ರಹವಾಗುವ ಕಲ್ಲುಗಳನ್ನು ಹೋಗಲಾಡಿಸಲು ಔಷಧಿಯಾಗಿ ಕೆಲಸ ಮಾಡುತ್ತದೆ.
ಉಸಿರಾಟದ ತೊಂದರೆಗಳಿಗೆ ಪ್ರಯೋಜನಕಾರಿ. ಹಾಗಲಕಾಯಿಯನ್ನು ನಿಯಮಿತವಾಗಿ ಬಳಸುವುದರಿಂದ ತೀವ್ರ ಉಸಿರಾಟದ ತೊಂದರೆಗಳಾದ ಅಸ್ತಮಾ ಅಥವಾ ಶ್ವಾಸನಾಳಗಳ ಒಳಪೊರೆಯ ಉರಿಯೂತಗಳನ್ನು ಹತೋಟಿಯಲ್ಲಿಡಬಹುದು.
ಈ ತರಕಾರಿ ಹೇರಳವಾಗಿ ನಾರಿನಂಶ ಹೊಂದಿದ್ದು, ಮಲಬದ್ಧತೆಯನ್ನು ತಡೆಯುತ್ತದೆ.
ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಆ್ಯಂಟಿಆಕ್ಸಿಡೆಂಟ್‌ಗಳಿದ್ದು, ಕ್ಯಾನ್ಸರ್‌ಕಾರಕ ಜೀವಕೋಶಗಳು ದೇಹದಲ್ಲಿ ಹೆಚ್ಚಾಗುವುದನ್ನು ತಡೆಯುತ್ತದೆ.
ರಕ್ತದಲ್ಲಿರುವ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವಲ್ಲಿ ಹಾಗಲ ಸಹಾಕಾರಿಯಾಗಿದ್ದು, ಇದು ಅಪಧಮನಿಗಳು ಮುಚ್ಚಿಹೋಗುವುದನ್ನು ತಡೆಯುತ್ತವೆ. ಇದರಿಂದ ಹೃದಯ ಆರೋಗ್ಯವಾಗಿರುತ್ತದೆ. ಕ್ರಪೆ : ಹಿತ್ತಲಮದ್ದು ಬ್ಲಾಗ್ಸ್ಪಾಟ್
ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ 239 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಇವರಲ್ಲಿ 2132 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3257 ಆಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಕಲಬುರ್ಗಿ – 39, ಯಾದಗಿರಿ -39, ಬೆಳಗಾವಿ-38, ಬೆಂಗಳೂರು ನಗರ – 23, ದಕ್ಷಿಣ ಕನ್ನಡ -17, ದಾವಣಗೆರೆ -17, ಉಡುಪಿ -13, ಶಿವಮೊಗ್ಗ -12, ವಿಜಯಪುರ-09, ಬೀದರ್ -07, ಬಳ್ಳಾರಿ -06, ಬೆಂಗಳೂರು ಗ್ರಾಮಾಂತರ-05, ಹಾಸನ – 05, ಧಾರವಾಡ-03, ಗದಗ-02, ಉತ್ತರಕನ್ನಡ -02, ಮಂಡ್ಯ -01, ರಾಯಚೂರು -01 ಕೊರೋನಾ ಸೋಂಕು ತಗಲುವ ಮೂಲಕ ಇಂದು 239 ಜನರಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5452ಕ್ಕೆ ಏರಿಕೆಯಾದ್ರೇ, 2132 ಜನ ಕೊರೋನಾ ಸೋಂಕಿತರು ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ 3257 ಆಗಿದೆ.ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿಯಾಗುವ ಮೂಲಕ, ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ
ಬೆಂಗಳೂರು (ಜೂ.7): ಸ್ಯಾಂಡಲ್ವುಡ್ ಪಾಲಿಗೆ ಭಾನುವಾರ ಕಹಿ ದಿನವಾಗಿ ಮಾರ್ಪಾಡಾಗಿದೆ. ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದ್ದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.
ಸ್ಯಾಂಡಲ್ವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ ಇಂದು ಮೃತಪಟ್ಟಿದ್ದಾರೆ. ಇದು ಸಾವಿರಾರು ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ವಯುಸ್ಸು ಚಿಕ್ಕದಾದ್ದರಿಂದ ಇದು ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂದು ಕುಟುಂಬದವರು ಭಾವಿಸಿರಲಿಲ್ಲ. ಆದರೆ, ಉಸಿರಾಟದ ತೊಂದರೆ ಜೊತೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತಂತೆ. ಆಗಲೇ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ.
ಆಸ್ಪತ್ರೆ ವೈದ್ಯರು ಅವರಿಗೆ ಚಿಕಿತ್ಸೆ ನೀಡಲು ತುಂಬಾನೆ ಪ್ರಯತ್ನ ಪಟ್ಟಿದ್ದರು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗಿಲ್ಲ. ನಿಯಮಗಳಂತೆ ಅವರ ಸ್ವಾಬ್ ಕಲೆಕ್ಟ್ ಮಾಡಿ ಲ್ಯಾಬ್ ಗೆ ಕಳಿಸಲಾಗಿದೆ. ನಿನ್ನೆಯ ಅನಾರೋಗ್ಯಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ.
ಸದ್ಯ ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ.
ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್ ಅವರ ಜೊತೆ 2017ರಲ್ಲಿ ನಿಶ್ವಿತಾರ್ಥ ಮಾಡಿಕೊಂಡಿದ್ದರು. 2018ರಲ್ಲಿ ವಿವಾಹವಾಗಿದ್ದರು. ಇದಾದ ಎರಡೇ ವರ್ಷದಲ್ಲಿ ಅವರು ಮೃತಪಟ್ಟಿದ್ದಾರೆ. ಅವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಸುರಿಸಿದೆ.
2009ರಲ್ಲಿ ತೆರೆಕಂಡ ವಾಯುಪುತ್ರ ಸಿನಿಮಾ ಮೂಲಕ ಚಿರಂಜೀವಿ ಸರ್ಜಾ ಬಣ್ಣದ ಬದುಕಿಗೆ ಕಾಲಿಟ್ಟಿದ್ದರು. ನಂತರ ಸೀಜರ್, ಸಿಂಗಾ, ಅಮ್ಮಾ ಐ ಲವ್ ಯು ಸೇರಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು. ಶಿವಾರ್ಜುನ ಅವರ ಕೊನೆಯ ಸಿನಿಮಾ. ಇದಲ್ಲದೆ, ನಾಲ್ಕೈದು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದರು.