ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null
ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಿದೆ.
ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಇದು ಹಿಂದೆ ಕಾಲರಾದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು.
ಇವತ್ತಿಗೂ ದೊಡ್ಡಪತ್ರೆ ಹೆಚ್ಚಿನ ಮನೆಗಳಲ್ಲಿ ಕಂಡು ಬರುತ್ತದೆ. ಇದನ್ನು ಸಾಂಬಾರ ಬಳ್ಳಿ, ಸಾವಿರ ಸಾಂಬಾರ(ಅಜವನದ ಎಲೆ), ಕರ್ಪೂರವಳ್ಳಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂವಿನ ಕುಂಡದಲ್ಲಿಯೂ ಇದನ್ನು ಬೆಳೆಸಬಹಹುದು. ಎಲೆಗಳು ಹಸಿರಾಗಿ ದಪ್ಪವಾಗಿರುತ್ತದೆ. ಎಲೆಯಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಔಷಧೀಯ ಗುಣವಿದೆ.
ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ನೆಟ್ಟು ಬೆಳೆಸುವುದರಿಂದ ಏನು ಉಪಯೋಗ ಎಂಬುದನ್ನು ನೋಡುವುದಾದರೆ…
ಸಾಮಾನ್ಯವಾಗಿ ಮಕ್ಕಳಲ್ಲಿ ಕಂಡು ಬರುವ ಕಫ, ಉಬ್ಬಸ ನಿವಾರಣೆಗೆ ಬಳಸಬಹುದು. ಗಿಡದಿಂದ ಎಲೆಗಳನ್ನು ತೆಗೆದು ಚೆನ್ನಾಗಿ ತೊಳೆದು ಬೆಂಕಿಯಲ್ಲಿ ಬಾಡಿಸಿಕೊಂಡು ಮಕ್ಕಳ ಎದೆಗೆ ಶಾಖ ಕೊಡಬೇಕು ಅಥವಾ ದೊಡ್ಡಪತ್ರೆ ಎಲೆಯೊಂದಿಗೆ ತುಳಸಿ ಎಲೆಯನ್ನು ಅರೆದು ಅದರ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ.
ಇದೇ ರೀತಿ 4ರಿಂದ 5 ಎಲೆಗಳನ್ನು ಕೆಂಡದ ಮೇಲೆ ಬಾಡಿಸಿ ರಸವನ್ನು ತೆಗೆದು ಕುಡಿದರೆ ಜ್ವರ ಕಡಿಮೆಯಾಗುತ್ತದೆ. ಅಥವಾ ಮಕ್ಕಳಿಗೆ ಜ್ವರ ಬಂದಾಗ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಶೀತದಿಂದಾಗಿ ಮಕ್ಕಳಿಗೆ ಮಲಬದ್ದತೆಯಾದರೆ ಎಲೆಗಳ ಸರವನ್ನು ಜೇನುತುಪ್ಪ ಬೆರೆಸಿ ಕುಡಿಸಿದರೆ ಮಲಬದ್ದತೆ ನಿವಾರಣೆಯಾಗುತ್ತದೆ. ಅರಸಿನ ಕಾಮಾಲೆ ರೋಗವುಳ್ಳವರು 10(ಹತ್ತು) ದಿನಗಳ ಕಾಲ ದೊಡ್ಡಪತ್ರೆ ಎಲೆಗಳನ್ನು ಆಹಾರ ರೂಪದಲ್ಲಿ ಸೇವಿಸಿದರೆ ರೋಗ ಗುಣವಾಗುತ್ತದೆ. ಕಂಬಳಿ ಹುಳುವಿನಂತಹ ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯನ್ನು ಜಜ್ಜಿ ಉಜ್ಜಿದರೆ ಉರಿ ಕಡಿಮೆಯಾಗುವುದು.
ಎಲೆಯನ್ನು ಉಪ್ಪಿನೊಂದಿಗೆ ನೆಂಚಿಕೊಂಡು ತಿಂದರೆ ಜೀರ್ಣಶಕ್ತಿ ಹೆಚ್ಚುತ್ತದೆ. ದೊಡ್ಡಪತ್ರೆ ಎಲೆಯನ್ನು ಜಜ್ಜಿ ಆದರ ವಾಸನೆ ಸೇವಿಸಿದರೆ ಕಟ್ಟಿದ ಮೂಗಿನಿಂದ ನಿವಾರಣೆಯನ್ನು ಹೊಂದಬಹುದು. ಗ್ಯಾಸ್ಟ್ರಿಕ್ ತಡೆಯುತ್ತದೆ. ದೇಹದಿಂದ ವಿಷವನ್ನು ಹೊರ ಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ.
ದೊಡ್ಡಪತ್ರೆ ಎಲೆಯನ್ನು ಕಿವುಚಿ ರಸ ತೆಗೆದು, ಚರ್ಮದ ಸೋಂಕು ಅಥವಾ ಕೀಟ ಕಡಿತದ ಜಾಗಕ್ಕೆ ಲೇಪಿಸಿ. ಇದರಿಂದ ಉರಿ, ಬಾವು ಮತ್ತು ತುರಿಕೆ ಕೂಡಲೇ ಕಡಿಮೆಯಾಗುವುದು.
ಇನ್ನು ಎಲೆಗಳ ಚಟ್ನಿ, ತಂಬುಳಿ ಮೊದಲಾದವುಗಳು ಸೇವಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಒಟ್ಟಿನಲ್ಲಿ ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಹಲವು ರೀತಿಯ ಉಪಯೋಗ ಪಡೆಯಬಹುದು ಎಂಬುದರಲ್ಲಿ ಎರಡು ಮಾತಿಲ್ಲ
ನೀವು ನಿಮ್ಮ ಸ್ನೇಹಿತರಿಂದಲೂ ಬೆಂಬಲವನ್ನು ಪಡೆಯುತ್ತೀರಿ. ಇದು ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುತ್ತದೆ.
ವೃಷಭ
ಬಹಳಷ್ಟು ಅನುಕೂಲಕರವಾಗಲಿದೆ. ಮತ್ತು ಹಣದ ಗಳಿಕೆಯ ಮೂಲಗಳು ನಿರಂತರವಾಗಿರುತ್ತವೆ. ಇದರಿಂದ ನೀವು ಸಂತೋಷವಾಗಿರುತ್ತೀರಿ
ಕರ್ಕಾಟಕ
ವೃತ್ತಿಪರ ಜೀವನದಲ್ಲಿ ಬದಲಾವಣೆಗಳು ಬರುತ್ತವೆ. ಬಹುಶಃ ಸ್ಥಳಾಂತರವು ಇರಬಹುದು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ವರ್ಷ ಸಾಧನೆಗಳಿಂದ ತುಂಬಿರಬಹುದು.
ಮಿಥುನ
ನೀವು ತುಂಬಾ ಅದೃಷ್ಟಶಾಲಿಯಾಗುತ್ತೀರಿ ಮತ್ತು ಉತ್ತಮ ಆರೋಗ್ಯವನ್ನು ಆನಂದಿಸುವಿರಿ. ನಿಮ್ಮ ದಿನಚರಿಯನ್ನು ನೀವು ನಿಯಮಿತವಾಗಿ ಇಟ್ಟುಕೊಳ್ಳಬೇಕು.
ಸಿಂಹ
ಪ್ರೀತಿಯ ಜೀವನವು ಇನ್ನಷ್ಟು ಆಳವಾಗಲಿದೆ ನಿಮ್ಮ ಸಂಗಾತಿಗೆ ನೀವು ಹೆಚ್ಚು ನಿಷ್ಠರಾಗಿರುತ್ತೀರಿ. ನಿಮ್ಮ ಪ್ರೀತಿ ಸ್ಥಿರವಾಗಿರುತ್ತದೆ ಮತ್ತು ನಿಮ್ಮ ಪ್ರಿಯತಮೆಯೊಂದಿಗೆ ನೀವು ಶಾಂತ ಕ್ಷಣಗಳನ್ನು ಆನಂದಿಸುವಿರಿ.
ಕನ್ಯಾ
ವಿವಾಹಿತರಿಗೆ ಸಾಧನೆಗಳಿಂದ ತುಂಬಿರಬಹುದು. ನಿಮ್ಮ ಜೀವನ ಸಂಗಾತಿಗೆ ಅವರ ಕೆಲಸದ ಸ್ಥಳದಲ್ಲಿ ಯಾವುದೇ ಪ್ರಮುಖ ಯಶಸ್ಸನ್ನು ಪಡೆಯಬಹುದು. ಸ್ವಲ್ಪ ಸಮಯದವರೆಗೆ ಪರಸ್ಪರ ದೂರವಿರಬೇಕಾಗಬಹುದು.
ತುಲಾ
ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ನೀವು ನಿಮ್ಮ ಆರ್ಥಿಕ ಜೀವನಬದಲಾಯಿಸಬೇಕಾದ ಅಗತ್ಯವಿರಬಹುದು ಏಕೆಂದರೆ ಇದು ಏರಿಳಿತಗಳಿಂದ ತುಂಬಿರಬಹುದು.
ವೃಶ್ಚಿಕ
ಕುಟುಂಬದಲ್ಲಿ ಹೊಸ ಸದಸ್ಯನು ಬರಬಹುದು. ನೀವು ಕುಟುಂಬವನ್ನು ಒಟ್ಟಿಗೆ ಇರಿಸಲು ಬಯಸಿದರೆ ನೀವು ಕೆಲವು ರಾಜಿ ಮಾಡಿಕೊಳ್ಳಬೇಕು.
ಧನು
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಯಶಸ್ಸು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ನೀವು ನಿಮ್ಮ ಆರ್ಥಿಕ ಜೀವನಬದಲಾಯಿಸಬೇಕಾದ ಅಗತ್ಯವಿರಬಹುದು.
ಮಕರ
ನಿಮ್ಮ ವೃತ್ತಿಜೀವನಕ್ಕೆ ಸಾಮಾನ್ಯವಾಗಿ ಶುಭವಾಗಿರುತ್ತದೆ. ನೀವು ಕೆಲವು ದೊಡ್ಡ ಉದ್ಯಮಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಕೆಲಸ ಮಾಡಬಹುದು.
ಕುಂಭ
ಆರ್ಥಿಕ ಭಾಗದಲ್ಲಿ ನೀವು ಸ್ವಲ್ಪ ಕಷ್ಟಪಡಬೇಕಾಗಬಹುದು ಮತ್ತು ನಿಮ್ಮ ಖರ್ಚುಗಳು ಹೆಚ್ಚಾಗುತ್ತವೆ. ಆದ್ದರಿಂದ ನಿಮ್ಮ ಉಳಿತಾಯದತ್ತ ಗಮನ ಹರಿಸಿ ಮತ್ತು ಹಣಕ್ಕೆ ಸಂಬಂಧಿಸಿದ ಹೂಡಿಕೆಯನ್ನು ಬುದ್ಧಿವಂತಿಕೆಯಿಂದ ಮಾಡಿ.
ಮೀನ
ನೀವು ಪಿತ್ತರಸಕ್ಕೆ ಸಂಬಂಧಿಸಿದ ದೈಹಿಕ ಸಮಸ್ಯೆಗಳನ್ನು ಹೊಂದುವ ಸಾಧ್ಯತೆಯಿದೆ. ಪ್ರೀತಿಯ ಜೀವನದಲ್ಲಿ ಅನೇಕ ದೀರ್ಘಕಾಲೀನ ಬದಲಾವಣೆಗಳಾಗಬಹುದು.
ಉಡುಪಿ ಜೂನ್ 10 : ಜಿಲ್ಲೆಗೆ ಮಹಾರಾಷ್ಠçದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಈಗಾಗಲೇ ಸರಕಾರದ ಆಧೇಶವಾಗಿದ್ದು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ, ನೂತನ ಕ್ವಾರಂಟೈನ್ ನಿಯಮದ ಅನುಷ್ಠಾನ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾರಾಷ್ಠçದಿಂದ ಬರುವವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡಬೇಕಾಗಿದ್ದು, ಮನೆಯ ಸುತ್ತ ಟೇಪ್ ಹಾಕಬೇಕು ಹಾಗೂ ಮನೆಗೆ ಸ್ಟಿಕರ್ ಅಳವಡಿಸಬೇಕು, ಪಕ್ಕದ ಮನೆಯವರಿಎ ಈ ಬಗ್ಗೆ ಮಾಹಿತಿ ನೀಡುವುದಲ್ಲದೇ ಕ್ವಾರಂಟೈನ್ ನಲ್ಲಿರುವರು ನಿಯಮ ಉಲ್ಲಂಘಿಸಿ ಹೊರಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ತಿಳಿಸಬೇಕು, ಸಂಬAದಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಂದಾಯ ನಿರೀಕ್ಷಕರು, ಬಿಲ್ ಕಲೆಕ್ಟರ್ ಮತ್ತು ಪಿಡಿಓ ಗಳ ತಂಡ ಪರಿಶೀಲನೆ ನಡೆಸಬೇಕು, ಈ ಕುರಿತಂತೆ ಎಲ್ಲಾ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಪ್ರತಿಯೊಂದು ಗ್ರಾಮಗಳಿಗೆ ತಂಡವನ್ನು ರಚಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಿಯಮ ಉಲ್ಲಂಘಿಸುವವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸೀಲ್ಡೌನ್ ಮಾಡಿದ ಮನೆಯ ನಿವಾಸಿಗಳು 14 ದಿನಕ್ಕೆ ಬೇಕಾಗುವ ದಿನಸಿ ಸಾಮಗ್ರಿಗಳನ್ನು ಮೊದಲೇ ಖರೀದಿಸಿರಬೇಕು, ಹಾಲು ಮತ್ತು ತರಕಾರಿಯನ್ನು ಸಂಬಂದಪಟ್ಟ ನಿರ್ದಿಷ್ಟ ಅಂಗಡಿಯಿಂದ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳ ತಂಡ ಪ್ರತೀ ದಿನ ಈ ಮನೆಗಳಿಗೆ ಭೇಟಿ ನೀಡಿ ,ಗ್ರಾಮ ಪಂಚಾಯತ್ ನಲ್ಲಿನ ತಂಡ ಭೇಟಿ ಪರಿಶೀಲನೆ ನಡೆಸಿದ ಕುರಿತು ತಪಾಸಣೆ ನಡೆಸಿ, ಅದೇ ದಿನ ಸಂಜೆಯೊಳಗೆ ವರದಿ ನೀಡಬೇಕು ಎಂದು ತಿಳಿಸಿದರು. ಕ್ವಾರಂಟೈನ್ ಗೆ ಒಳಪಡುವವರ ಕೈ ಗೆ ಕಡ್ಡಾಯವಾಗಿ ಸೀಲ್ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕ್ವಾರಂಟೈನ್ ಸೀಲ್ ಇರುವವರನ್ನು ಮಾಲ್ ಗಳು, ಹೋಟೆಲ್ ಗಳು, ದೇವಸ್ಥಾನದ ಒಳಗಡೆ ಪ್ರವೇಶ ನೀಡಿದಲ್ಲಿ ಸಂಬಂದಪಟ್ಟ ಸಂಸ್ಥೆಗಳ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ಸಂಸ್ಥೆಗಳು ತಮ್ಮ ಪ್ರವೇಶ ದ್ವಾರದಲ್ಲೇ ಇದನ್ನು ಪರೀಕ್ಷಿಸಿ ಅಂತಹವರು ಕಂಡುಬಂದಲ್ಲಿ ಕೂಡಲೇ 100 ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಜಿಲ್ಲೆಗೆ ಹೊರರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆಪ್ ನಲ್ಲಿ ನೊಂದಾಯಿಸಿಕೊಂಡು ಬರುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಉಲ್ಲಂಘನೆ, ಮಾಸ್ಕ್ ಧರಿಸದೇ ಇರುವವರಿಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವಂತೆ ಹಾಗೂ ಬಸ್ ಗಳಲ್ಲಿ ನಿಗಧಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದು, ಈ ಕುರಿತಂತೆ ಸಂಬಂದಪಟ್ಟ ಬಸ್ ಮಾಲೀಕರು,ಡ್ರೈವರ್ ಮತ್ತು ಕಂಡಕ್ಟರ್ ವಿರುದ್ದ ತಕ್ಷಣದಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳು ಕ್ವಾರಂಟೈನ್ ವ್ಯವಸ್ಥೆಯಲ್ಲಿ, ಹೋಮ್ ಕ್ವಾರೆಂಟೈನ್ ನಿಂದ ಸಾಂಸ್ಥಿಕ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ ನಿಂದ ಹೋಮ್ ಕ್ವಾರೆಂಟೈನ್‌ಗೆ ಬದಲಾವಣೆ ಮಾಡುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಅದರಂತೆ , ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು ಅವರು ಬುಧವಾರ ಜಿಲ್ಲಾಪಂಚಾಯತ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲು ಸಿದ್ದತೆ ನಡೆಸಿದ್ದು, ಉಡುಪಿ ಜಿಲ್ಲೆಗೆ ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರುವವರ ಮನೆಬಾಗಿಲಿಗೆ ಭಿತ್ತಿಪತ್ರವನ್ನು ಅಂಟಿಸಲಾಗುವುದು, ನೆರೆಹೊರೆಯ ಮನೆಗೆ ಮಾಹಿತಿಯನ್ನು ನೀಡಲಾಗುತ್ತದೆ, ಗ್ರಾಮೀಣ ಪ್ರದೇಶದಲ್ಲಿ . ಕ್ವಾರಂಟೈನ್‌ಗೆ ಬರುವವರ ಬಗ್ಗೆ ಗ್ರಾಮ ಪಂಚಾಯತಿ ನಿಗಾ ಇರಿಸಲು ಸೂಚಿಸಿದ್ದು, ಗ್ರಾಮ ಪಂಚಾಯತ್ ನಲ್ಲಿ ಆಯ್ಕೆ ಮಾಡಿರುವ ಸಿಬ್ಬಂದಿಗಳು ಕ್ವಾರಂಟೈನ್‌ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕ್ವಾರಂಟೈನ್ ವಾಚ್ ಆಪ್ ನಲ್ಲಿ ಬೇಟಿನೀಡಿದ ಮಾಹಿತಿಯನ್ನು ನೀಡಬೇಕು. ಪ್ರತೀ ಗ್ರಾಮದಲ್ಲಿ ಮೇಲ್ವಿಚಾರಣೆಗಾಗಿ 3 ಜನರ ತಂಡವನ್ನು ನೇಮಕ ಮಾಡಲಾಗಿದೆ.ಇವರು ಮನೆಗಳಿಗೆ ಬೇಟಿ ನೀಡಿ ಪ್ರತಿದಿನ ವರದಿಯನ್ನು ನೀಡಬೇಕು , ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದರೆ ಪ್ಲೆöÊಯಿಂಗ್ ಸ್ಕಾ÷್ವಡ್ ತಂಡದವರು ಎಫ್ ಐ ಆರ್ ದಾಖಲೆ ಮಾಡಿ, ಅವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ. ಪ್ರತೀ ತಾಲೂಕಿನಲ್ಲಿ ತಲಾ ಎರಡು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಮೀಸಲಿರಿಸಿದ್ದು, ಅಗತ್ಯವಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಗೆ ಸಹ ಅವಕಾಶವಿದೆ ಎಂದು ಡಿಸಿ ಹೇಳಿದರು. ಕ್ವಾರಂಟೈನ್ ವಾಚ್ ಮೂಲಕ ವ್ಯಕ್ತಿಗಳ ತಾಪಮಾನ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಲ್ಸ್ ಆಕ್ಸೂಮೀಟರ್ ರಿಡಿಂಗ್ ಮಾಡಲು ಸೂಚಿಸಲಾಗಿದೆ. ವಿಶೇಷ ವರ್ಗದಕ್ಕೆ ಸೇರಿದ 10 ವರ್ಷದೊಳಗಿನ ಮಕ್ಕಳು,ಗರ್ಭಿಣಿಯರು, 60 ವರ್ಷ ಮೇಲ್ಪಟ್ಟವರಲ್ಲಿ ಆಕ್ಸಿಜನ್ ಕೊರತೆ ಕಂಡುಬAದಲ್ಲಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಡಿಸಿ ಹೇಳಿದರು. ಟಾಸ್ಕ್ ಪೊರ್ಸ್ ಕಮಿಟಿಗಳಾಗಿ ಗ್ರಾಮೀಣ ಪ್ರದೇಶದಲ್ಲಿ ಮಾಡಲಾಗಿದೆ. ಹಾಗೆಯೇ ನಗರ ಪ್ರದೇಶಗಳಲ್ಲಿ ವಾರ್ಡ್ ವೈಸ್ ಗಳಾಗಿ ನೇಮಕ ಮಾಡಲಾಗಿದೆ. ಸಿಲ್ ಡೌನ್ ಆದ ಪ್ರದೇಶದಲ್ಲಿ ಕಂದಾಯ,ಆರೋಗ್ಯ,ಪೋಲಿಸ್ ಅಧಿಕಾರಿಗಳು ಬೇಟಿ ನೀಡಿ ಮಾಹಿತಿಯನ್ನು ನೀಡುತ್ತಾರೆ. ಹೋಮ್ ಕ್ವಾರಂಟೈನ್ ನಲ್ಲಿ ಸೀಲ್ ಹಾಕಿದವರು ಅನಗತ್ಯವಾಗಿ ತಿರುಗಾಡುವುದು ಕಂಡು ಬಂದಲ್ಲಿ, ಸಾರ್ವಜನಿಕರು 100 ದೂರವಾಣೆ ಸಂಖ್ಯೆಗೆ ಕರೆಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸೇವಾಸಿಂಧು ಮೂಲಕ ಮಹಾರಾಷ್ಟçದಿಂದ ಬರುವವರ ಪಾಸ್ ಗಳನ್ನು ಅನುಮೋದಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು, ಅವರು ನಿಗದಿತ ದಿನಾಂಕ ಆಯ್ಕೆಮಾಡಿ ಬರಬಹುದಾಗಿದೆ, ಜಿಲ್ಲೆಗೆ ಹೊರ ರಾಜ್ಯದಿಂದ ಬರುವವರು, ಜಿಲ್ಲೆಯಲ್ಲಿ ಆರಂಭಿಸಿರುವ 7 ಜಿಲ್ಲಾ ವರದಿ ಕೇಂದ್ರಗಳಲ್ಲಿ ತಮ್ಮ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಶಾಲಾ ಕ್ವಾರಂಟೈನ್ ಕೇಂದ್ರಗಳಾಗಿ ಮಾಡಲಾಗಿದ್ದು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ.ಶಾಲೆ ಕೊಠಡಿಗಳನ್ನು ರೋಗ ನಿರೋಧಿಕರಿಸಿ ಸ್ವಚ್ಚಗೊಳಿಸಲಾಗಿದೆ. ಪರೀಕ್ಷಗೆ 3 ದಿನಗಳ ಮುನ್ನ ಹಾಗೂ ಪ್ರತೀ ಪರೀಕ್ಷೆಯ ನಂತರ ಮತ್ತೊಂದು ಪರೀಕ್ಷೆಗೆ ಕೊಠಡಿಯನ್ನು ರೋಗ ನಿರೋಧಿಕರಿಸಿ ಸ್ವಚ್ಚಗೊಳಿಸಲಾಗುವುದು, ಪೋಷಕರು ಮತ್ತು ವಿದ್ಯಾರ್ಥಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಅವರ ಸುರಕ್ಷತೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್‌ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.
ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವ ಸಿದ್ದತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಶಾಲಾ ಶೈಕ್ಷಣಿಕ ಅವಧಿ ಕಡಿಮೆಯಾಗಲಿದ್ದು, ಇದಕ್ಕಾಗಿ ಶಾಲಾ ಪಠ್ಯವನ್ನು ಕಡಿಮೆಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ಮುಂದಿನ ತರಗತಿಗೆ ಅಗತ್ಯವಿರುವ ಪಠ್ಯದ ಕೊರತೆಯಾಗದಂತೆ , ಸೀಮಿತ ಅವಧಿಯೊಳಗೆ ಅತ್ಯಗತ್ಯ ಇರುವ ಪಠ್ಯ ಮಾತ್ರ ಒಳಗೊಳ್ಳುವಂತೆ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಕೋವಿಡ್-19 ಅವಧಿಯಲ್ಲಿ ರಾಜ್ಯದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಚಂದನ ವಾಹಿನಿಯ ಮೂಲಕ ಪರೀಕ್ಷೆಗಾಗಿ ಪಠ್ಯದ ಪುರ್ನ ಮನನ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ರಾಜ್ಯದಲ್ಲಿ ಶಿಕ್ಷಣ ಇಲಾಖೆಗೆ ಸಂಬAದಿಸಿದAತೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಪತ್ಯೇಕ ಟಿವಿ ಚಾನೆಲ್ ಆರಂಭಿಸುವ ಚಿಂತನೆ ಇದ್ದು, ಈ ಕುರಿತಂತೆ ಕೇಂದ್ರ ಸಚಿವ ಅಜಿತ್ ಜಾವೆಡ್‌ಕರ್ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು. ಕೋವಿಡ್ ಅವಧಿಯಲ್ಲಿ ರಾಜ್ಯದ ಶಿಕ್ಷಕರು ಕಾನನ ಶಾಲೆ, ವಠಾರ ಶಾಲೆ, ಓಣಿ ಶಾಲೆ, ಓದಿನ ಮನೆ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಪಾಠ ಮಾಡಿದ್ದು, ಇದು ಶಿಕ್ಷಕರಲ್ಲಿನ ಸೃಜನ ಶೀಲತೆ, ಕತೃತ್ವ ಶಕ್ತಿ ಗುಣಗಳನ್ನು ತೋರಿಸುತತದೆ ಈ ಕುರಿತಂತೆ ಎಲ್ಲಾ ಶಿಕ್ಷಕರಿಗೆ ಧನ್ಯವಾದ ತಿಳಿಸುವುದಾಗಿ ಸಚಿವರು ಹೇಳಿದರು. ರಾಜ್ಯದಲ್ಲಿ ಎಸ್.ಎಎಸ್.ಎಲ್.ಸಿ ಪರೀಕ್ಷೆ ನಡೆಸಲು ಸಂಬAದಿಸಿದAತೆ , ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಂತೆ, ಥರ್ಮಲ್ ಸ್ಕಾö್ಯನರ್, ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷಾ ವಿಧಾನಗಳಿಗೆ ಯಾವುದೇ ಕುಂದು ಬಾರದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ ಸುರಕ್ಷತೆಗೆ ಆದ್ಯತೆ ನೀಡಿದೆ, ಪರೀಕ್ಷೆ ಕುರಿತಂತೆ ಮಕ್ಕಳಿಗೆ ಹಿತಕರ ವಾತಾವರಣ ನಿರ್ಮಿಸಿ, ಯಾವುದೇ ಆತಂಕಕ್ಕೆ ಒಳಗಾಗದಂತೆ ಪರೀಕ್ಷೆ ಬರೆಯಲು ಶಿಕ್ಷಕರು ಪ್ರೋತ್ಸಾಹ ತುಂಬುವAತೆ ಸಚಿವ ಸುರೇಶ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು, ಪ್ರಸಕ್ತ ವರ್ಷದಲ್ಲಿ ಶಾಲಾ ಮಕ್ಕಳ ಹಾಜರಾತಿ ಗಣನೆಗೆ ತೆಗೆದುಕೊಂಡು ಶಾಲೆಗಳಲ್ಲಿನ ಹೆಚ್ವುವರಿ ಶಿಕ್ಷಕರ ವರ್ಗಾವಣೆ ಮಾಡುವುದಿಲ್ಲ ಎಂದು ಸಚಿವರು ತಿಳಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಖಾಸಗಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು, ಜಿಲ್ಲಾ ಕೇಂದ್ರಕ್ಕೆ ಆಗಮಿಸುವವರಿಗೆ, ಜಿಲ್ಲೆಯಲ್ಲಿ ಉಳಿಯಲು ಹಾಸ್ಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಸಭೆಯಲ್ಲಿ , ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಾಸಕರಾದ ರಘುಪತಿಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ,ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ದ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಸೆಲ್ವಮಣಿ, ಉ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ರೋಶನ್ , ಉಡುಪಿ ಎಸ್‌ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಘೋಷಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿಕೊಂಡಿದ್ದರು. ಇದೀಗ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ.
ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಅವಕಾಶ ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಪತ್ರ ಬರೆದು ಕೋರಿಕೊಂಡಿದ್ದರು. ಆದ್ರೇ ರಾಜ್ಯ ಸರ್ಕಾರ ಇದೀಗ ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವಂತ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುವುದಕ್ಕೆ ಬ್ರೇಕ್ ಹಾಕಿದೆ.ಈ ಹಿಂದೆ ಜೂನ್ 08ರಂದು ನಡೆಸಲು ಅನುಮತಿ ಕೇಳಿದಾಗಲೂ ಸರಕಾರ ಅನುಮತಿ ನೀಡಲು ನಿರಾಕರಿಸಿತ್ತು.
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 161 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ 91 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 24 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.
ರಾಜ್ಯದಲ್ಲಿ ಇಂದು 164 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 2605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು ಒಟ್ಟು 66 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 3248 ಸಕ್ರಿಯ ಪ್ರಕರಣಗಳು ಇದ್ದು, 12 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 161 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಇವರಲ್ಲಿ 2605 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3248 ಆಗಿದೆ. ಅಲ್ಲದೇ ಇಂದು ಬೆಂಗಳೂರು ನಗರ ಮತ್ತು ಕಲಬುರ್ಗಿಯಲ್ಲಿ ಒಬ್ಬೊಬ್ಬರು ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ರಾಜ್ಯದಲ್ಲಿ ಇಂದು 161 ಜನರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಬೆಂಗಳೂರು ನಗರದಲ್ಲಿ ಪಿ.4316 ಸೋಂಕಿತ 65 ವರ್ಷದ ಮಹಿಳೆಯವರು ಜೂನ್ 3ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಮಧುಮೇಹ, ರಕ್ತದೊತ್ತಡ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಮಹಿಳೆ 08-06-2020ರಂದು ಸಾವನ್ನಪ್ಪಿದ್ದು, ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.