ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರು, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಬಡತನ ರೇಖೇಗಿಂತ ಕೆಳಗೆ ಇರುವ ರೈತರು, ಜಮೀನು, ಜಾಬ್‍ಕಾರ್ಡ ಹಾಗೂ ಬ್ಯಾಂಕ್ ಖಾತೆ ಹೊಂದಿರುವ ರೈತರು ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ದಿನಕ್ಕೆ 275 ರೂ. ರಂತೆ ಗಂಡು ಮತ್ತು ಹೆಣ್ಣು ಕೂಲಿಕಾರ್ಮಿಕರಿಗೆ ಸಮಾನ ವೇತನ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಗರಿಷ್ಠ 100 ದಿನಗಳವರೆಗೆ ಉದ್ಯೋಗ ಒದಗಿಸಬಹುದಾಗಿರುತ್ತದೆ. ಬರಪೀಡಿತ ತಾಲ್ಲೂಕುಗಳಲ್ಲಿ ಗರಿಷ್ಠ 150 ದಿನಗಳವರೆಗೆ ಉದ್ಯೋಗ ಒದಗಿಸಬಹುದಾಗಿರುತ್ತದೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ದುಡಿಮೆ ಮಾಡಿ ಹೊಸ ತೋಟ ಅಭಿವೃದ್ಧಿ ಪಡಿಸಿಕೊಳ್ಳುವುದರ ಜೊತೆಗೆ ಸರ್ಕಾರದಿಂದ ಕೂಲಿ ವೇತನ ಪಡೆಯಲು ಉತ್ತಮ ಅವಕಾಶವಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟ ಅಭಿವೃದ್ಧಿ ಪಡಿಸಿದ ಫಲಾನುಭವಿಗಳಿಗೆ (ಫಲಾನುಭವಿ ಇಚ್ಚಿಸಿದ್ದಲ್ಲಿ) ಹನಿ ನೀರಾವರಿ ಸೌಲಭ್ಯವನ್ನು ಒದಗಿಸಲು ಪ್ರಥಮ ಆದ್ಯತೆ ನೀಡಲಾಗುವುದು.
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ: ಮಾವು, ಸಪೋಟ, ದಾಳಿಂಬೆ, ಸೀಬೆ, ಸಿಟ್ರಸ್ (ನಿಂಬೆ), ಹುಣಸೆ, ನೇರಳೆ, ಸೀತಾಫಲ, ಬಾರೆ, ನಲ್ಲಿ, ನುಗ್ಗೆ, ಹಲಸು, ಗುಲಾಬಿ, ಮಲ್ಲಿಗೆ, ಗೋಡಂಬಿ, ಕರೆಬೇವು, ತೆಂಗು ಮತ್ತು ವೀಳ್ಯದೆಲೆ ಪ್ರದೇಶ ವಿಸ್ತರಣೆ ಕಾಮಗಾರಿಗಳ ಅಭಿವೃದ್ಧಿಗೆ ರೈತರಿಗೆ ಸಹಾಯಧನ ನೀಡಲಾಗುತ್ತದೆ.
ತೋಟಗಾರಿಕೆ ಬೆಳೆಗಳ ಪುನಃಶ್ಚೇತನ ಕಾರ್ಯಕ್ರಮ:ಮಾವು, ಸಪೋಟ, ತೆಂಗು ಮತ್ತು ಗೋಡಂಬಿ ಪುನಃಶ್ಚೇತನ ಕಾಮಗಾರಿಗಳ ಅಭಿವೃದ್ಧಿಗೆ ರೈತರಿಗೆ ಸಹಾಯಧನ ನೀಡಲಾಗುತ್ತದೆ.
ಸಾರ್ವಜನಿಕ ಸ್ಥಳಗಳಲ್ಲಿ ಪೌಷ್ಠಿಕ ತೋಟಗಳ ನಿರ್ಮಾಣ:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಶಾಲೆ/ವಸತಿ ಶಾಲೆ/ವಸತಿ ನಿಲಯ/ಅನುದಾನಿತ ವಸತಿ ನಿಲಯಗಳ ಆವರಣದಲ್ಲಿ ಪೋಷಕಾಂಶ ತೋಟ ಅಭಿವೃದ್ಧಿಪಡಿಸಿ ಶಾಲೆಗಳ ಮಧ್ಯಾಹ್ನದ ಬಿಸಿ ಊಟ ಅಥವಾ ವಸತಿ ನಿಲಯಗಳ ಅವಶ್ಯಕತೆ ಸ್ವಲ್ಪ ಮಟ್ಟಿಗೆ ನೀಗಿಸಲು ಸಹಾಯವಾಗುತ್ತದೆ.
ಈರುಳ್ಳಿ ಶೇಖರಣಾ ಘಟಕಗಳ ಅಭಿವೃದ್ಧಿ: ಈ ಯೋಜನೆಯಡಿ 10 ಟನ್ ಸಾಮಥ್ರ್ಯದ ಈರುಳ್ಳಿ ಸಂಗ್ರಹಣಾ ಘಟಕ ನಿರ್ಮಾಣಕ್ಕಾಗಿ ಯೋಜನೆಯಿಂದ 35,000 ರೂ. ಹಾಗೂ 23,606 ರೂ. ಸಹಾಯಧನದೊಂದಿಗೆ ಅನುಷ್ಠಾನಿಸಲು ಅವಕಾಶ ನೀಡಲಾಗಿದೆ.
ಮಣ್ಣು, ನೀರು ಸಂರಕ್ಷಣಾ / ಕೊಳವೆ ಬಾವಿ ಮರುಪೂರಣ ಘಟಕ: ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೊಳವೆ ಬಾವಿ ಮರುಪೂರಣ ಘಟಕ ಸ್ಥಾಪನೆಗೆ 19,000 ರೂ. ಸಹಾಯಧನ ನೀಡಲಾಗುತ್ತದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವೆಡೆ ಮಳೆಯಾಗತೊಡಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮಳೆಯಾಗತೊಡಗಿದೆ. ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮನವಿ ಮಾಡಲಾಗಿದೆ.
ನಿಸರ್ಗ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಿದ್ದು ಜೂನ್ 3 ರಂದು ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು 1 ಲೋಟ ನೀರಿಟ್ಟು ಕುದಿಸಿ. ಜೊತೆಗೆ ಇದರಲ್ಲಿ 3 ರಿಂದ 4 ಲವಂಗವನ್ನು ಹಾಕಿ. 10 ರಿಂದ 12 ಪುದೀನಾ ಎಲೆ, ಕಾಲು ಚಮಚ ಓಂ ಕಾಳನ್ನು ಹಾಕಿ. ಒಂದು ಲೋಟ ನೀರು ಅರ್ಧಕ್ಕೆ ಇಳಿಯಲಿ. ನಂತರ ಇದನ್ನು ಸೋಸಿ.ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ.
ಈ ಕಷಾಯ ತಣ್ಣಗಾದ ಮೇಲೆ ಒಂದು ಚಮಚ ಜೇನುತುಪ್ಪ ಸೇರಿಸಿ. ಹೀಗೆ ತಯಾರಿಸಿದ ಕಷಾಯವನ್ನು ಪ್ರತಿದಿನ ಎರಡು ಬಾರಿ ಸೇವಿಸಿ. ಮಕ್ಕಳಿಗಾದರೆ ಒಮ್ಮೆ ಕುಡಿಸಿ.
ಅರಿಶಿನ, ಶುಂಠಿಯಲ್ಲಿರುವ ಆಂಟಿ ಬ್ಯಾಕ್ಟೀರಿಯಲ್ ಇನ್ಪೆಕ್ಷನ್ ಮತ್ತು ಅಲರ್ಜಿಯಿಂದ ಕಾಪಾಡುತ್ತದೆ. ಲವಂಗ, ಪುದೀನಾ ನೈಸರ್ಗಿಕವಾಗಿ ಆಂಟಿಬ್ಯಾಕ್ಟೀರಿಯಲ್ ಆಗಿದ್ದು, ಇದು ನೆಗಡಿ, ಗಂಟಲ ಕಿರಿಕಿರಿ ಮತ್ತು ಶೀತವನ್ನು ಗುಣಪಡಿಸುತ್ತದೆ. ಓಂ ಕಾಳು ಕೂಡ ಕಫವನ್ನು ನಿವಾರಿಸಲು ತುಂಬಾ ಉಪಯೋಗಕಾರಿಯಾಗಿದೆ.
ಕಳೆದು ಹೋದ ವಸ್ತುವೊಂದನ್ನು ಪುನಃ ಪಡೆದುಕೊಳ್ಳುವ ಸಾಧ್ಯತೆ. ವಾಹನ, ಯಂತ್ರೋಪಕರಣದಂತಹ ಚರ ಆಸ್ತಿಗಳನ್ನು ಖರೀದಿ ಮಾಡಲಿದ್ದೀರಿ. ದೇವತಾಕಾರ್ಯಗಳಲ್ಲಿ ತೊಡಗಿಕೊಂಡು ನೆಮ್ಮದಿಯನ್ನು ಹೊಂದುವಿರಿ.
ವೃಷಭ
ಸಂಬಂಧಿಕರೊಂದಿಗೆ ವಿಚಾರ ವಿನಿಮಯ ನಡೆಸಲಿದ್ದೀರಿ. ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳುವಿರಿ. ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಮನೆ ಮಂದಿಯೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ.
ಮಿಥುನ
ನಿತ್ಯದ ಕೆಲಸಗಳಲ್ಲದೇ ಹೊಸ ಕಾಮಗಾರಿಗಳನ್ನು ಪೂರ್ಣಗೊಳಿಸುವ ಧಾವಂತದಲ್ಲಿರುವಿರಿ. ಮನೆಯವರೊಂದಿಗೆ ಆತುರದ ವ್ಯವಹಾರ ತೋರುವುದು ತರವಲ್ಲ. ಪ್ರಚಲಿತ ವಿದ್ಯಮಾನಗಳ ಬಗ್ಗೆ ಸ್ಪಂದಿಸಲಿದ್ದೀರಿ.
ಕಟಕ
ಆಸ್ತಿ ಪಡೆಯುವ ಸಾಧ್ಯತೆ. ವಾಹನ ರಿಪೇರಿ, ಮಾರಾಟಗಾರರಿಗೆ ಉತ್ತಮ ವ್ಯವಹಾರ ನಡೆದು ಹೆಚ್ಚಿನ ಆದಾಯ. ಕಾನೂನಿಗೆ ಸಂಬಂಧಿಸಿದ ವಿಷಯದಲ್ಲಿ ಸೂಕ್ತ ಸಲಹೆ ಪಡೆದು ವ್ಯವಹರಿಸುವುದು ಒಳಿತು.
ಸಿಂಹ
ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಭಾಗ್ಯ ನಿಮ್ಮದಾಗಲಿದೆ. ವಿವಾದಗಳು ಇತ್ಯರ್ಥಗೊಂಡು ಮಾನಸಿಕ ನೆಮ್ಮದಿ. ವಿವಾಹಾದಿ ಶುಭಕಾರ್ಯಗಳಲ್ಲಿ ಮನೆಯವರೊಂದಿಗೆ ಸಕ್ರಿಯವಾಗಿ ಭಾಗಿಯಾಗುವಿರಿ.
ಕನ್ಯಾ
ಕ್ರೀಡಾಪಟುಗಳಿಗೆ ಉತ್ತೇಜನ ದೊರಕುವ ಸಂಭವವಿದ್ದು ಉತ್ತಮ ಸಾಧನೆ ತೋರಲಿದ್ದೀರಿ. ಸಾಧನೆಯ ಪುಟಗಳನ್ನು ಅವಲೋಕನ ಮಾಡಿಕೊಳ್ಳಲಿದ್ದೀರಿ. ವಾಹನ ವ್ಯವಹಾರಗಳಿಂದ ವಿಶೇಷ ಲಾಭ ಗಳಿಸಲಿದ್ದೀರಿ.
ತುಲಾ
ಹೊಸಬರಿಗೆ ಬರವಣಿಗೆ, ಸಾಹಿತ್ಯ ಅಥವಾ ಅನುವಾದಗಳಲ್ಲಿ ಕೆಲಸಗಳಿಗೆ ಉತ್ತೇಜನ ನೀಡಲಿದ್ದೀರಿ. ಮನೆಯ ಕೆಲಸ–ಕಾರ್ಯಗಳ ಜವಾಬ್ದಾರಿಯಿಂದ ಮುಕ್ತರಾಗಿ ಸಂಗಾತಿ ಬೇರೆ ಊರಿಗೆ ತೆರಳಲಿದ್ದೀರಿ.
ವೃಶ್ಚಿಕ
ವರಮಾನದಲ್ಲಿ ಗಣನೀಯ ಸುಧಾರಣೆ ಕಂಡು ಬರುವುದು. ದೂರದಲ್ಲಿರುವ ಮಕ್ಕಳ ಅಥವಾ ಸಮೀಪ ಬಂಧುಗಳ ಆಗಮನಕ್ಕಾಗಿ ಎದುರು ನೋಡುವಿರಿ. ಗೃಹಾಲಂಕಾರ ವಸ್ತುಗಳ ಖರೀದಿ ಸಾಧ್ಯತೆ ಕಂಡುಬರುವುದು.
ಧನು
ಸಾಹಿತ್ಯ, ಸಂಗೀತ ಹಾಗೂ ಕಲಾ ಕ್ಷೇತ್ರದಲ್ಲಿರುವ ವ್ಯಕ್ತಿಗಳ ಒಡನಾಟ ದೊರಕುವ ಸಾಧ್ಯತೆ. ರಿಯಲ್ ಎಸ್ಟೇಟ್‌ನಂತಹ ಭೂ ಸಂಬಂಧಿ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ಕೆಲಸಗಾರರ ಬಗ್ಗೆ ವಿಶ್ವಾಸವಿರಲಿ.
ಮಕರ
ಮಕ್ಕಳಿಗಾಗಿ ದುಬಾರಿ ವಸ್ತುಗಳನ್ನು ಖರೀದಿ ಮಾಡುವ ಸಾಧ್ಯತೆ. ಸೋದರಿಯರ ವಿಚಾರದಲ್ಲಿ ಧಾರಾಳತನ ತೋರಲಿದ್ದೀರಿ. ಸಂಪನ್ಮೂಲಗಳ ವೃದ್ಧಿಗಾಗಿ ಹೊಸ ಯೋಜನೆಯೊಂದನ್ನು ರೂಪಿಸುವ ಸಾಧ್ಯತೆ ಇದೆ.
ಕುಂಭ
ಮನೆಯಲ್ಲಿ ಮೃದು ಭಾಷಿಯಾಗಿ ವ್ಯವಹರಿಸಿ. ಕೆಲಸಗಳು ನಿಧಾನಗತಿಯಲ್ಲಿದ್ದರೂ ಮನಸ್ಸಿನಲ್ಲಿನ ದುಗುಡವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ದೂರದ ಸಂಬಂಧಿಕರೊಬ್ಬರ ಆಗಮನ ಸಾಧ್ಯತೆ.
ಮೀನ
ಆದಾಯದಲ್ಲಿ ಹೆಚ್ಚಳವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ದಾಂಪತ್ಯ ಜೀವನ ಸುಖಕರವಾಗಿರುವುದು. ಉನ್ನತ ಹುದ್ದೆಯಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಾಗಲಿದೆ.
ಭಾರತದಲ್ಲಿ ಕೊರೋನಾ ತನ್ನ ಅಬ್ಬರವನ್ನ ನಿಲ್ಲಿಸುತ್ತಿಲ್ಲ, ಇದುವರೆಗೆ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷ 85 ಸಾವಿರ ದಾಟಿ ಮುನ್ನುಗ್ಗುತ್ತಿದ್ದು ಇದುವರೆಗೆ ಇದರಿಂದಾಗಿ 5 ಸಾವಿರಕ್ಕೂ ಅಧಿಕ ಜನ ಭಾರತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿತರಯ ಮಹಾರಾಷ್ಟ್ರದಲ್ಲೇ ಇದ್ದು ಅಲ್ಲಿ ಈವರೆಗೆ ಬರೋಬ್ಬರಿ 67 ಸಾವಿರಕ್ಕೂ ಅಧಿಕ ಜನ ಸೋಂಕಿತರಾಗಿದ್ದು ಬರೋಬ್ಬರಿ 2400ಜನ ಮಹಾರಾಷ್ಟ್ರವೊಂದರಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕರೋನಾ ಔಷಧಿಯನ್ನು ಸಿದ್ಧಪಡಿಸಿದೆ. ಇದನ್ನ ರೋಗಿಗಳ ಪರೀಕ್ಷೆಗೆ ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಅನುಮತಿ ನೀಡಿದ್ದಾರೆ. ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜು, ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ ಮೆಡಿಕಲ್ ಕಾಲೇಜು ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಔಷಧಿಯ ಕ್ಲಿನಿಕಲ್ ಟ್ರಯಲ್‌ಗೆ DRDO ಉತ್ತರ ಪ್ರದೇಶ ಸರ್ಕಾರದಿಂದ ಅನುಮತಿ ಕೋರಿತ್ತು. ಕೆಜಿಎಂಯು ಮತ್ತು ಜಿಎಸ್‌ವಿಎಂನಲ್ಲಿ ಪರೀಕ್ಷೆಗೆ ಯೋಗಿ ಸರ್ಕಾರ ಅವಕಾಶ ನೀಡಿದೆ.
ಸೆಲ್ಯುಲಾರ್ ಮತ್ತು ಮಾಲಿಕ್ಯೂಲರ್ ಬಯಾಲಜಿ ಹೈದರಾಬಾದ್‌ನ ಕೇಂದ್ರದಲ್ಲಿ ಮತ್ತು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಸ್‌ನಲ್ಲಿ SARS-CoV-2 ವೈರಸ್‌ನಲ್ಲಿ ಈ ಔಷಧವನ್ನು ಪರೀಕ್ಷಿಸಲಾಗಿದೆ ಎಂದು DRDO ರಾಜ್ಯ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ. ಈ ಔಷಧಿ ವೈರಸ್ ನಿರ್ಮೂಲನೆಗೆ ಬಹಳ ಪರಿಣಾಮಕಾರಿ ಎಂದು ಸಾಬೀತಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಕ್ಲಿನಿಕಲ್ ಪ್ರಯೋಗಕ್ಕಾಗಿ ಅನುಮತಿ ಪತ್ರವನ್ನು ಕೆಜಿಎಂಯು ಮತ್ತು ಜಿಎಸ್ವಿಎಂ ಮೆಡಿಕಲ್ ಕಾಲೇಜಿಗೆ ಕಳುಹಿಸಿದ್ದಾರೆ. ಈಗ ಮೆಡಿಕಲ್ ಕಾಲೇಜಿನ ಎಥಿಕಲ್ ಕಮಿಟಿಯಿಂದ ಅನುಮತಿ ಪಡೆದ ಕೂಡಲೇ ರೋಗಿಗಳ ಮೇಲೆ ಔಷಧಿ ಪರೀಕ್ಷೆಯನ್ನು ಪ್ರಾರಂಭಿಸಲಾಗುವುದು. ರೋಗಿಗಳ ಮೇಲೆ ಔಷಧಿ ಪರೀಕ್ಷೆಯ ಪರಿಣಾಮವನ್ನು ಅಧ್ಯಯನ ಮಾಡುವ ತಂಡದ ಮುಖ್ಯ ಗೈಡ್ ಕಾಲೇಜಿನ ಎಥಿಕಲ್ ಕಮಿಟಿಗೆ ಈ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ.
ಜಿಎಸ್‌ವಿಎಂ ವೈದ್ಯಕೀಯ ಕಾಲೇಜು ಪ್ರೊ. ಅಪೂರ್ವಾ ಅಗರ್ವಾಲ್ ಮಾತನಾಡುತ್ತ – ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಡಿಆರ್‌ಡಿಒ ಔಷಧಿಯನ್ನು ಕಂಡುಹಿಡಿದಿದೆ. ಅದರ ಡಿ-ಕೋಡಿಂಗ್ ಅಧ್ಯಯನಕ್ಕೆ ಸರ್ಕಾರ ಅನುಮತಿ ಪಡೆದಿದೆ. ರೋಗಿಗಳ ಮೇಲಿನ ಟ್ರಯಲ್ ಮೊದಲು ಕಾಲೇಜಿನ ಎಥಿಕಲ್ ಸಮಿತಿಯಿಂದ ಅನುಮೋದನೆ ಕೋರಲಾಗಿದೆ ಎಂದಿದ್ದಾರೆ.ಕೋವಿಡ್-19 ಐಸಿಯುನಲ್ಲಿ ದಾಖಲಾದ ಕರೋನಾದ ಗಂಭೀರ ರೋಗಿಗಳಿಗೆ ಅನಸ್ತೇಶಿಯಾ ವಿಭಾಗದ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ದರಿಂದ, ಔಷಧಿಯ ಟ್ರಯಲ್‌ಗಳ ಜವಾಬ್ದಾರಿಯನ್ನು ಅವರಿಗೇ ವಹಿಸಲಾಗಿದೆ. ಹೀಗಾಗಿ ಔಷಧಿಯ ಪರೀಕ್ಷೆಯಿಂದ ರೋಗಿಯ ಮೇಲೆ ಅದರ ಪರಿಣಾಮದವರೆಗೆ ಅಧ್ಯಯನ ಮಾಡಬೇಕು. ಔಷಧ ತಯಾರಿಕೆಯ ಜವಾಬ್ದಾರಿಯನ್ನು DRDO ಡಾ. ರೆಡ್ರಿಡ್ಜ್ ಲ್ಯಾಬ್ ಹೈದರಾಬಾದ್‌ಗೆ ನೀಡಿದೆ. ಕ್ಲಿನಿಕಲ್ ಪ್ರಯೋಗವನ್ನು ನವಿತಾಸ್ ಲೈಫ್ ಸೈನ್ಸಸ್‌ಗೆ ನಿಯೋಜಿಸಲಾಗಿದೆ, ಇದು ಕೆಜಿಎಂಯು ಮತ್ತು ಜಿಎಸ್‌ವಿಎಂ ಅನ್ನು ಸಂಪರ್ಕಿಸುತ್ತದೆ.
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 388 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ರಾಜ್ಯದಲ್ಲಿ ಇವತ್ತು ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.ಇಷ್ಟು ದಿನ ನೂರು – ಇನ್ನೂರರ ಸಂಖ್ಯೆಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇವತ್ತು ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿರುವುದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಪತ್ತೆಯಾಗಿರುವ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.
ಬೆಂಗಳೂರಿನ ಯಶವಂತಪುರದಿಂದ ಹಾಸನಕ್ಕೆ ಅಥವಾ ತುಮಕೂರಿಗೆ ಹೋಗುವ ದಾರಿಯಲ್ಲೇ ಗೊರಗುಂಟೆಪಾಳ್ಯವಿದೆ. ಅಲ್ಲಿಂದ ಹೆಬ್ಬಾಳಕ್ಕೆ ಹೋಗುವ ರಸ್ತೆಯಲ್ಲಿ ಅರ್ಧ ಕಿಲೋ ಮೀಟರ್ ಹೋದರೆ,ಸ್ಟ್ಯಾಂಡರ್ಡ್ ಮೆಕ್ಯಾನಿಕಲ್ ವರ್ಕ್ಸ್ ಫ್ಯಾಕ್ಟರಿ ಸಿಗುತ್ತದೆ. ಹೆಚ್ಚಿನ ಸದ್ದಾಗದಂತೆ ಕಾರ್ಯ ನಿರ್ವಹಿಸುವ ವಿದೇಶಿ ನಿರ್ಮಿತ ಯಂತ್ರಗಳು ಅಲ್ಲಿವೆ. ಫ್ಯಾನ್, ರೆಫ್ರಿಜರೇಟರ್, ಟಿ.ವಿಗಳಿಗೆ ಅಗತ್ಯವಾಗಿ ಬೇಕಾಗುವ ಬಿಡಿಭಾಗಗಳನ್ನು ಅಲ್ಲಿ ಉತ್ಪಾದಿಸಲಾಗುತ್ತದೆ. ಎಲ್ಲಾ ಪ್ರಮುಖ ಕಂಪನಿಗಳಿಗೂ ಬಿಡಿ ಭಾಗಗಳನ್ನು ಸಪ್ಲೈ ಮಾಡುತ್ತಿರುವುದರಿಂದ ಸ್ಟ್ಯಾoಡರ್ಡ್ ಮೆಕ್ಯಾನಿಕಲ್‌ಸ್ ಫ್ಯಾಕ್ಟರಿಗೆ ಒಳ್ಳೆಯ ಹೆಸರೂ ಇದೆ. ಈ ಫ್ಯಾಕ್ಟರಿ ಮಾಲೀಕನೇ ರಂಗಸ್ವಾಮಿ. ಈತ, ಅರಸೀಕೆರೆ ಸಮೀಪದ ಹಳ್ಳಿಯವನು. ಸಿದ್ದಗಂಗಾ ಮಠದಲ್ಲಿ ಹೈಸ್ಕೂಲು, ತುಮಕೂರಿನಲ್ಲಿ ಐಟಿಐ ಓದಿದವನು ಸೀದಾ ಬಂದಿದ್ದು ಪೀಣ್ಯಕ್ಕೆ. ಹೆಲ್ಪರ್ ಆಗಿ ಒಂದು ಫ್ಯಾಕ್ಟರಿ ಸೇರಿಕೊಂಡವನು ಐದು ವರ್ಷದಲ್ಲಿ ಎಲ್ಲ ಬಗೆಯ ಕೆಲಸ ಕಲಿತ. ನಂತರ ಮಾರ್ಕೆಟಿಂಗ್ ಮ್ಯಾನೇಜರ್ ಆದ. ಮಾರಾಟಕ್ಕೆ ಸಂಬಂಧಿಸಿದ ಆಳ-ಅಗಲಗಳು ರಂಗಸ್ವಾಮಿಗೆ ಪರಿಚಯವಾದದ್ದೇ ಆಗ. ಹತ್ತಾರು ಕಂಪನಿಗಳ ಮುಖ್ಯಸ್ಥರ ಒಡನಾಟ, ವಿಶ್ವಾಸ, ಅಲ್ಲಿನ ವಹಿವಾಟುಗಳಿಗೆ ಇರುವ ಬೇಡಿಕೆಯನ್ನು ಗಮನಿಸಿದ ನಂತರ, ಹೇಗಿದ್ರೂ ಎಲ್ಲ ಕೆಲಸದ ಬಗ್ಗೆ ಗೊತ್ತಿದೆ. ಒಂದೆರಡು ಕಂಪನಿಗಳಿಂದ ಕಾಂಟ್ರಾಕ್ಟ್ ತಗೊಂಡು ಸ್ಪೇರ್ ಪಾರ್ಟ್ಸ್ ಉತ್ಪಾಾದನೆಯ ಸ್ವಂತ ಫ್ಯಾಕ್ಟರಿ ಶುರು ಮಾಡಿದ್ರೆ ಹೇಗೆ ಎಂಬ ಯೋಚನೆಯೂ ಅವನಿಗೆ ಬಂತು. ರಂಗಸ್ವಾಮಿ ತಡಮಾಡಲಿಲ್ಲ. ಒಂದು ಪುಟ್ಟ ಶೆಡ್‌ನಲ್ಲಿ ಫ್ಯಾಕ್ಟರಿಯನ್ನು ಆರಂಭಿಸಿಯೇಬಿಟ್ಟ. ಯೌವನದ ಹುಮ್ಮಸ್ಸು ಹಾಗೂ ಗೆಲ್ಲಬೇಕೆಂಬ ಹಠದಿಂದ ಹಗಲಿರುಳೂ ದುಡಿದ. ಪರಿಣಾಮ, ಕೆಲವೇ ದಿನಗಳಲ್ಲಿ ರಂಗಸ್ವಾಮಿಯ ಬ್ಯಾಂಕ್ ಬ್ಯಾಲೆನ್ಸ್ ದುಪ್ಪಟ್ಟಾಯಿತು. ಅದುವರೆಗೂ ಸೆಕೆಂಡ್ ಹ್ಯಾಂಡ್ ಹೀರೋ ಹೋಂಡಾದಲ್ಲಿ ಓಡಾಡುತ್ತಿದ್ದವನು, ಒಟ್ಟಿಗೇ ಎರಡು ಕಾರ್ ಖರೀದಿಸುವಷ್ಟು ಶ್ರೀಮಂತನಾದ. 25 ಮಂದಿಗೆ ಕೆಲಸ ಕೊಟ್ಟ. ಫ್ಯಾಕ್ಟರಿಗೆ ಸ್ವಂತ ಬಿಲ್ಡಿಂಗ್ ಕಟ್ಟಿಸಿದ. ವಾಸಕ್ಕೆ, ಯಶವಂತಪುರದಲ್ಲೇ ಒಂದು ಮನೆ ಖರೀದಿಸಿದ. ಇಷ್ಟೆಲ್ಲ ಆದಮೇಲೆ, ರಂಗಸ್ವಾಮಿಯ ಯಶೋ ಗಾಥೆ ನೂರಾರು ಮಂದಿಯನ್ನು ತಲುಪಿತು. ಹೇಗಿದ್ದವನು ಹೇಗಾಗಿಬಿಟ್ಟ ಅಲ್ವ ಎಂದು ಎಲ್ಲರೂ ಬೆರಗಾಗುವ ವೇಳೆಗೇ, ಹಳೇ ಪರಿಚಯದ ಹುಡುಗಿಯೊಂದಿಗೆ ಮದುವೆಯಾದ ರಂಗಸ್ವಾಮಿ, ವರ್ಷದ ನಂತರ ಗಂಡು ಮಗುವಿನ ತಂದೆಯೂ ಆದ. ಕೈ ತುಂಬಾ ವರಮಾನ ಕೊಡುವ ಕೆಲಸ, ಮನ ಮೆಚ್ಚಿದ ಹೆಂಡತಿ, ಖುಷಿ ಹೆಚ್ಚಿಸುವ ಮಗ, ಸಮಾಜದಲ್ಲಿ ವಿಶೇಷ ಸ್ಥಾನಮಾನ, ಯಾರಿಗೂ ಸಾಲ ಕೊಡಬೇಕಿಲ್ಲ ಎಂಬ ನಿರಾಳ ಭಾವ… ಲೈಫ್ ಈಸ್ ಬ್ಯೂಟಿಫುಲ್ ಎನ್ನಲು ಇಷ್ಟು ಸಾಕಲ್ಲವೇ? ರಂಗಸ್ವಾಮಿಯೂ ಇಂಥದೇ ಸಂಭ್ರಮದಲ್ಲಿದ್ದ. ಆಗಲೇ, ಯಾರೂ ನಿರೀಕ್ಷಿಸದ ಆಘಾತವೊಂದು ಅವನನ್ನು ಅಪ್ಪಳಿಸಿತು. ಅದೊಂದು ದಿನ ಮಾರ್ಕೆಟ್‌ಗೆ ಹೋಗಿ ವಾಪಸಾಗುತ್ತಿದ್ದ ರಂಗಸ್ವಾಮಿಯ ಪತ್ನಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ…
‘ಈಗಾಗ್ಲೇ ನನಗೂ ನಲವತ್ತೈದು ತುಂಬಿದೆ. ಮಗ 7ನೇ ಕ್ಲಾಸ್‌ಗೆ ಬಂದಿದಾನೆ. ಹೀಗಿರುವಾಗ ಇನ್ನೊಂದು ಮದುವೆಯಾಗಿ ಸಾಧಿಸೋದೇನಿದೆ? ಸೆಕೆಂಡ್ ಮ್ಯಾರೇಜ್ ಮಾಡ್ಕೊಂಡೆ ಅಂತಿಟ್ಕೊಳ್ಳಿ, ಹೊಸದಾಗಿ ಬಂದ ಹೆಂಡತಿ ನನ್ನ ಮಗನನ್ನು ತಿರಸ್ಕಾರದಿಂದ ನೋಡಿಬಿಟ್ರೆ, ಅಥವಾ ಹೆಂಡತಿಯ ಮೇಲಿನ ಮೋಹದಿಂದ ನಾನೇ ವಿಲನ್ ಥರಾ ವರ್ತಿಸಿಬಿಟ್ರೆ? ಬೇಡ ಬೇಡ. ಇಂಥ ಸಂದರ್ಭಗಳು ಜೊತೆಯಾಗೋದೇ ಬೇಡ. ನನಗಿನ್ನು ಮಗನೇ ಸರ್ವಸ್ವ . ಹೆಂಡತಿಯ ನೆನಪನ್ನು ಜೊತೆಗಿಟ್ಟುಕೊಂಡೇ ಇವನನ್ನು ಚೆನ್ನಾಗಿ ಓದಿಸ್ತೇನೆ…’. ಎರಡನೇ ಮದುವೆ ಮಾಡಿಕೊಳ್ಳಪ್ಪಾ ಎಂದು ಒತ್ತಾಯಿಸಲು ಬಂದ ಬಂಧುಗಳು ಹಾಗೂ ಹಿತೈಷಿಗಳಿಗೆ ರಂಗಸ್ವಾಮಿ ಹೇಳಿದ ಖಡಕ್ ಮಾತುಗಳಿವು. ರಂಗಸ್ವಾಮಿ ಮಾತಿಗೆ ತಪ್ಪಲಿಲ್ಲ. ಅವನು ಮಗನನ್ನು ಕಣ್ರೆಪ್ಪೆಯಷ್ಟು ಜೋಪಾನವಾಗಿ ನೋಡಿಕೊಂಡ. ಒಳ್ಳೆಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದಿಸಿದ. ನನಗೆ ನೀನೇ ಪ್ರಪಂಚ. ನೀನು ಜೊತೆಗಿಲ್ಲದೆ ನಾನು ಬದುಕಲಾರೆ ಎಂಬುದನ್ನು ಪರೋಕ್ಷವಾಗಿ ಮನದಟ್ಟು ಮಾಡಿಕೊಟ್ಟ.ಮುಂದೊಂದು ದಿನ- ‘ನನ್ನ ಕ್ಲಾಸ್ ಮೇಟ್ ಹುಡುಗೀನ ಲವ್ ಮಾಡಿದೀನಪ್ಪಾ. ಅವಳನ್ನೇ ಮದುವೆ ಆಗ್ತೀನಿ. ಅವರ ಮನೇಲಿ ಒಪ್ಪಿದಾರೆ. ನಿನ್ನ ಒಪ್ಪಿಗೆ ಬೇಕಪ್ಪಾ…’ ವಿಧೇಯನಾಗಿಯೇ ಹೇಳಿದ್ದ ಮಗ. ರಂಗಸ್ವಾಮಿ ಅದನ್ನೂ ಆಕ್ಷೇಪಿಸಲಿಲ್ಲ. ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟ. ಇದಾಗಿ ವರ್ಷ ಕಳೆಯುತ್ತಲೇ ಫ್ಯಾಕ್ಟರಿ ವ್ಯವಹಾರವನ್ನೆಲ್ಲ ಮಗನಿಗೆ ವಹಿಸಿಕೊಟ್ಟು, ‘ನನಗೆ ವಯಸ್ಸಾಯಿತು ಕಣಪ್ಪಾ. ರೆಸ್ಟ್ ಬೇಕು ಅನ್ನಿಸ್ತಿದೆ. ಇನ್ಮುಂದೆ ನಾನು ಮನೇಲಿರ್ತೀನಿ. ಶ್ರದ್ಧೆ ಮತ್ತು ಎಚ್ಚರದಿಂದ ಫ್ಯಾಕ್ಟರಿ ನಡೆಸ್ಕೊಂಡು ಹೋಗು’ ಎಂದಿದ್ದ. ಮರುದಿನವೇ ವಕೀಲರ ಜೊತೆಗೂ ಮಾತಾಡಿ ಫ್ಯಾಕ್ಟರಿಯನ್ನು ಮಗನ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿಸಿಬಿಟ್ಟ. ಚಿತ್ರಾನ್ನ-ಕಾಯಿಚಟ್ನಿ, ದೋಸೆ-ಜಾಮೂನ್, ಬಿಸಿಬೇಳೆಬಾತ್- ಚಿಪ್ಸ್, ವಾಂಗೀಬಾತ್-ಆಲೂಬೋಂಡಾ, ಪಲಾವ್-ಗಟ್ಟಿಮೊಸರು- ಹೀಗೆ ಪ್ರತಿಯೊಂದು ತಿಂಡಿಗೂ ಒಂದು ಸೈಡ್ ಐಟಂ ಇರಬೇಕು ಎಂಬುದು ರಂಗಸ್ವಾಮಿಯ ಆಸೆಯಾಗಿತ್ತು. ಅದರಲ್ಲೂ ಪಲಾವ್-ಮೊಸರು ಅವನ ಮೆಚ್ಚಿನ ತಿಂಡಿಯಾಗಿತ್ತು. ನಾವು ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ಇರುವಷ್ಟು ದಿನ ಚೆನ್ನಾಗಿ ತಿಂದುಂಡು ಬಾಳಬೇಕು ಎಂಬುದು ಅವನ ವಾದವಾಗಿತ್ತು. ಅವತ್ತು ರಂಗಸ್ವಾಮಿಯ ಮಗ ಜಾಗಿಂಗ್ ಮುಗಿಸಿ ಬಾಗಿಲ ಬಳಿ ಬಂದಾಗಲೇ ಪಲಾವ್‌ನ ಘಮ ಮೂಗಿಗೆ ಅಡರಿತು. ಓಹ್, ಇವತ್ತು ಅಪ್ಪನ ಫೇವರಿಟ್ ತಿಂಡಿ ಎಂದುಕೊಂಡು ಅವನು ಒಳಬರುವುದಕ್ಕೂ, ಡೈನಿಂಗ್ ಟೇಬಲ್ ಮುಂದೆ ತಿಂಡಿಗೆ ಕುಳಿತಿದ್ದ ರಂಗಸ್ವಾಮಿ- ಸ್ವಲ್ಪ ಮೊಸರು ಇದ್ರೆ ಕೊಡಮ್ಮ. ಪಲಾವ್ ಜೊತೆ ಮೊಸರು ಕೊಡೋದನ್ನೇ ಮರೆತಿದ್ದೀಯಲ್ಲ.. ಅನ್ನುವುದಕ್ಕೂ ಸರಿಹೋಯಿತು. ರಂಗಸ್ವಾಮಿಯ ಸೊಸೆ ಸರ್ರನೆ ಹೊರಬಂದವಳೇ- ‘ಇಲ್ಲ, ಮೊಸರಿಲ್ಲ; ಮೊಸರು ಖಾಲಿಯಾಗಿದೆ’ ಅಂದು ಭರ್ರನೆ ಹೋಗಿಬಿಟ್ಟಳು. ಹೌದಾ? ಹೋಗ್ಲಿ ಬಿಡಮ್ಮ ಎನ್ನುತ್ತಾ ರಂಗಸ್ವಾಮಿ ತಿಂಡಿಯ ಶಾಸ್ತ್ರ ಮುಗಿಸಿದ. ದಿನವೂ ಹೆಂಡತಿಯೊಂದಿಗೆ ತಿಂಡಿ ತಿಂದು ನಂತರ ಫ್ಯಾಕ್ಟರಿಗೆ ಹೋಗುವುದು ರಂಗಸ್ವಾಮಿಯ ಮಗನ ದಿನಚರಿಯಾಗಿತ್ತು. ಅವತ್ತೂ ಹಾಗೆಯೇ ತಿಂಡಿಗೆ ಕೂತವನು ಅಸಹನೆ ಮತ್ತು ಗೊಂದಲದಿಂದ ಹೆಂಡತಿಯನ್ನು ನೋಡಿದ. ಕಾರಣ; ಹೆಂಡತಿ ತಂದಿಟ್ಟ ತಿಂಡಿಯೊಂದಿಗೆ ಅರ್ಧ ಲೀಟರಿನಷ್ಟು ಗಟ್ಟಿ ಮೊಸರಿತ್ತು. ”ಅಪ್ಪ ಕೇಳಿದಾಗ ಮೊಸರೇ ಇಲ್ಲ ಅಂದೆಯಲ್ಲ? ಇದು ಎಲ್ಲಿತ್ತು? ಯಾಕೆ ಸುಳ್ಳು ಹೇಳ್ದೆ?” ಎಂದು ಪ್ರಶ್ನಿಸಿದ. ಆಕೆ- ‘ಗಟ್ಟಿಯಾಗಿ ಮಾತಾಡಬೇಡಿ. ಸೈಲೆಂಟಾಗಿ ತಿಂಡಿ ತಿನ್ನಿ. ನಿಮ್ಮಪ್ಪ ಕೇಳ್ತಾರೆ ಅಂತ ಅವರು ಕೇಳಿದ್ದನ್ನೆಲ್ಲ ಕೊಡೋಕಾಗುತ್ತಾ? ಬಾಯಿ ಚಪಲ ಯಾವತ್ತೂ ಒಳ್ಳೆಯದಲ್ಲ. ಇವತ್ತು ಮೊಸರು ಕೇಳ್ತಾರೆ. ನಾಳೆ ತುಪ್ಪಾನೇ ಬೇಕು ಅಂತಾರೆ. ಕೇಳಿದ್ದನ್ನೆಲ್ಲ ರೆಡಿ ಮಾಡಿ ಇಟ್ಕೊoಡಿರೋಕೆ ಆಗುತ್ತಾ?’ ಅಂದುಬಿಟ್ಟಳು. ತಿರುಗಿ ಮಾತಾಡಿದರೆ ಜಗಳ ಆಗುತ್ತೆ. ಜಗಳ ಆಗಿಬಿಟ್ರೆ ರಾತ್ರಿ ಅನ್ನೋದು ನರಕ ಆಗುತ್ತೆ. ಉಹೂಂ, ಅಂಥ ಪರಿಸ್ಥಿತಿ ಜೊತೆಯಾಗಬಾರದು ಎಂದು ಯೋಚಿಸಿದ ರಂಗಸ್ವಾಮಿಯ ಮಗ, ಮೌನವಾಗಿ ಫ್ಯಾಕ್ಟರಿಗೆ ಹೋಗಿಬಿಟ್ಟ. ರಂಗಸ್ವಾಮಿ, ಮನೆಯ ಹೊರಗಿನ ಕೈ ತೋಟದಲ್ಲಿ ಇದ್ದುದರಿಂದ ಗಂಡ-ಹೆಂಡಿರ ದುಸುಮುಸು ಅವನಿಗೆ ಗೊತ್ತಾಾಗಲೇ ಇಲ್ಲ. ಅವತ್ತು ನಾಲ್ಕೈದು ಕಂಪನಿಗಳ ಮುಖಂಡರೊಂದಿಗೆ ಹೋಟೆಲೊಂದರಲ್ಲಿ ವ್ಯವಹಾರ ಸಂಬಂಧಿ ಮೀಟಿಂಗ್ ನಡೆಸಬೇಕಾಗಿ ಬಂತು. ಊಟದ ಸಮಯದಲ್ಲಿ ಅವರೆಲ್ಲಾ- ”ಊಟ ಬೇಡ, ದೋಸೆ ವಡಾ ಥರದ ಐಟಮ್ಸ್ ತಗೊಳ್ಳೋಣ. ಕಡೆಗೆ ಮೊಸರನ್ನ ಇರಲಿ”ಎಂದರು. ಮೊಸರನ್ನದಲ್ಲಿದ್ದ ಕೆನೆಮೊಸರು, ದಾಳಿಂಬೆ, ಗೋಡಂಬಿಯ ಚೂರುಗಳನ್ನು ಕಂಡಾಗ ಛಕ್ಕನೆ, ಮೊಸರು ಇದ್ಯಾ ಎಂದು ಕೇಳಿದ ಅಪ್ಪನ ಮುಖವೇ ಎದುರು ಕಂಡಂತಾಗಿ ರಂಗಸ್ವಾಮಿಯ ಮಗ ತತ್ತರಿಸಿಹೋದ. ತನಗಾಗಿ ಏನೆಲ್ಲಾ ತ್ಯಾಗ ಮಾಡಿದ ತಂದೆಗೆ ಒಂದು ಕಪ್ ಗಟ್ಟಿ ಮೊಸರು ಕೊಡಲು ಆಗಲಿಲ್ಲವಲ್ಲ ಎಂಬ ಚಿಂತೆ ಅವನನ್ನು ಕ್ಷಣಕ್ಷಣಕ್ಕೂ ಕಾಡತೊಡಗಿತು. ಉಹೂಂ, ಅವನ ಹೆಂಡತಿಗೆ ಇಂಥ ಯಾವ ‘ಗಿಲ್ಟ್ ಕೂಡ ಇರಲಿಲ್ಲ. ಪ್ರತಿಯೊಂದು ತಿಂಡಿಗೂ ಮತ್ತೊಂದು ಸೈಡ್ ಐಟಂ ಹಾಕಿಕೊಡೋಕೆ ಇದೇನು ಹೋಟ್ಲಾ? ಇಡೀ ದಿನ ಮನೇಲಿ ಇರೋರು ಕೊಟ್ಟಿದ್ದನ್ನು ತಿಂದುಕೊಂಡು ತೆಪ್ಪಗಿರಬೇಕು ಅಲ್ವ ಎಂದೇ ಅವಳು ವಾದಿಸಿದಳು. ಬೆಡ್‌ರೂಂ, ಜಗಳದ ತಾಣವಾದರೆ ಇಡೀ ದಿನದ ಕೆಲಸ ಕೆಡುತ್ತೆ ಎಂದು ಗೊತ್ತಿದ್ದುದರಿಂದ ರಂಗಸ್ವಾಮಿಯ ಮಗ ಹೆಂಡತಿಗೆ ಎದುರು ಮಾತಾಡಲು ಹೋಗಲಿಲ್ಲ. ಹೀಗೇ ವಾರ ಕಳೆಯಿತು. ಅವತ್ತೊಂದು ದಿನ- ‘ಯಾವುದೋ ಕೋರ್ಟ್ ಕೇಸ್ ಬಂದಿದೆಯಪ್ಪಾ. ನನಗೆ ಸ್ವಲ್ಪ ಕನ್‌ಫ್ಯೂಶನ್ ಇದೆ. ನೀನು ಜೊತೆಗಿದ್ರೆ ದೊಡ್ಡ ಧೈರ್ಯ. ಮಧ್ಯಾಹ್ನ ಬೇಗ ಬಂದ್ಬಿಡೋಣ…’ ಎಂದೆಲ್ಲ ಹೇಳಿ ಆ ಮಗರಾಯ ತಂದೆಯೊಂದಿಗೆ ಕೋರ್ಟ್‌ಗೆ ಬಂದ. ಅಲ್ಲಿ ನೋಡಿದರೆ- ಫ್ಯಾಕ್ಟರಿ, ಮನೆ ಮತ್ತು ಇಡೀ ಆಸ್ತಿಯನ್ನು ರಂಗಸ್ವಾಮಿಯ ಹೆಸರಿಗೆ ಮರು ವರ್ಗಾಯಿಸಿದ ದಾಖಲೆ ಪತ್ರಗಳಿದ್ದವು. ಅವಕ್ಕೆಲ್ಲಾ ತುಂಬಾ ಒತ್ತಾಯದಿಂದಲೇ ಸಹಿ ಹಾಕಿಸಿದ ಮಗ- ‘ಅಪ್ಪಾ, ನೀನು ಇನ್ನೊಂದು ಮದುವೆ ಮಾಡ್ಕೊಳಪ್ಪಾ. ಜನ ಏನಾದ್ರೂ ಅಂದುಕೊಳ್ಳಲಿ. ಅದರ ಬಗ್ಗೆ ಚಿಂತೆ ಮಾಡ್ಬೇಡ. ನಿನ್ನ ಜೊತೆಗೆ ನಾನಿರ್ತೀನಿ. ಈ ವಿಷಯದಲ್ಲಿ ನಿಂಗೆ ಸಪೋರ್ಟ್ ಮಾಡ್ತೀನಿ. ದಯವಿಟ್ಟು ಇನ್ನೊಂದು ಮದುವೆ ಮಾಡ್ಕೊ..’ ಅಂದ. ಈ ಮಾತುಗಳಿಂದ ರಂಗಸ್ವಾಮಿಗೆ ಅಚ್ಚರಿಯಾಯಿತು. ‘ಯಾಕಪ್ಪಾ? ಯಾಕೆ ಹೀಗೆ ಹೇಳ್ತಿದೀಯ? ನಿನಗೆ ಏನಾದ್ರೂ ಕೊರತೆ ಆಯ್ತಾ? ನಾನು ನಿನಗೆ ಹೊರೆ ಅನ್ನಿಸಿಬಿಟ್ನಾ? ಏನಾದ್ರೂ ತಪ್ಪು ಮಾಡಿದೀನೇನೋ ನಾನು? ಎಲ್ಲವನ್ನೂ ನನ್ನ ಹೆಸರಿಗೇ ಮಾಡಿಸಿದೀಯಲ್ಲ ಯಾಕೋ.., ಈ ಮಾತುಗಳನ್ನು ಅಷ್ಟಕ್ಕೇ ತಡೆದ ರಂಗಸ್ವಾಮಿಯ ಮಗ ಹೇಳಿದ: ಛೆ,ಛೆ ಖಂಡಿತ ನಿನ್ನಿಂದ ಯಾವುದೇ ತಪ್ಪಾಗಿಲ್ಲಪ್ಪಾ. ಪ್ರತಿ ಹೆಂಗಸು, ತನ್ನ ಗಂಡ ಮತ್ತು ಮಕ್ಕಳ ಬಗ್ಗೆ ಮಾತ್ರ ವಿಶೇಷ ಕಾಳಜಿ ವಹಿಸ್ತಾಳೆ. ಉಳಿದವರನ್ನು ನಿರ್ಲಕ್ಷ್ಯದಿಂದ ನೋಡೋದು ಅವಳಿಗೆ ಅಭ್ಯಾಸ ಆಗಿಬಿಟ್ಟಿರುತ್ತೆ. ಅಂಥದೊಂದು ನಿರ್ಲಕ್ಷ್ಯದ ಅನುಭವ ನಿನಗೆ ಎಂದೆಂದೂ ಆಗದಿರಲಿ ಎಂಬ ಸದಾಶಯದಿಂದಲೇಇನ್ನೊಂದು ಮದುವೆ ಆಗು ಅಂತ ಒತ್ತಾಯಿಸ್ತಾ ಇದೀನಿ. ನಾಳೆಯಿಂದ ನಾನು ಹೆಂಡತಿಯೊಂದಿಗೆ ಬಾಡಿಗೆ ಮನೆಗೆ ಹೋಗ್ತೇನೆ. ಫ್ಯಾಕ್ಟರಿಗೆ ನೀನು ಎಂ.ಡಿ., ನೀನೇ ಸಿ.ಇ.ಒ. ನಾನು ಒಬ್ಬ ನೌಕರನಾಗಿ ಕೆಲಸ ಮಾಡ್ತೀನಿ. ನಮ್ಮಲ್ಲಿ ಎಂಜಿನಿಯರ್‌ಗಳಿಗೆ ಕೊಡ್ತೀಯಲ್ಲ; ಅಷ್ಟೇ ಸಂಬಳವನ್ನು ನನಗೂ ಕೊಡು. ಒಂದು ಬಟ್ಟಲಿನಷ್ಟು ಮೊಸರು ಸಂಪಾದಿಸಲು ಮನುಷ್ಯನಿಗೆ ಎಷ್ಟು ಕಷ್ಟ ಇದೆ ಎಂಬುದನ್ನು ನನ್ನ ಹೆಂಡತಿಗೆ ಪರಿಚಯ ಮಾಡಿಕೊಡಬೇಕು. ಅದರ ಜೊತೆಗೆ, ವೃದ್ಧಾಪ್ಯದಲ್ಲಿ ತುಂಬಾ ಮುತುವರ್ಜಿಯಿಂದ ನೋಡಿಕೊಳ್ಳುವ ಒಬ್ಬರು ನಿನ್ನೊಂದಿಗೆ ಇರುವಂತೆ ವ್ಯವಸ್ಥೆ ಮಾಡಬೇಕು. ಫ್ಯಾಕ್ಟರಿಯನ್ನು ನಿನ್ನ ಹೆಸರಿಗೆ ವರ್ಗಾಯಿಸಿದ್ದಕ್ಕೆ, ನಾಳೆಯಿಂದ ಒಬ್ಬ ಆರ್ಡಿನರಿ ನೌಕರನಾಗಿ ಕೆಲಸಕ್ಕೆ ಬರ್ತಿರೋದಕ್ಕೆ ಬೇರೆ ಯಾವ ಕಾರಣವೂ ಇಲ್ಲ. ಒಳ್ಳೇದಾಗ್ಲಿ ಅಂತ ಆಶೀರ್ವದಿಸಪ್ಪ…’ ರಂಗಸ್ವಾಮಿ ಏನೂ ಮಾತಾಡಲಿಲ್ಲ. ನಡೆದಿರುವುದೇನೆಂದು ತನಗೆ ಅರ್ಥವಾಗಿದೆ ಎಂಬಂತೆ ಮಗನನ್ನು ಮೆಚ್ಚುಗೆಯಿಂದ ನೋಡಿದ. ಅವನನ್ನು ಬಾಚಿ ತಬ್ಬಿಕೊಂಡು ಹಣೆಗೆ ಮುತ್ತಿಟ್ಟ…….. ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ಸಾಕು, ಅವರೇ ಅವರ ಜೀವನವನ್ನ ಸುಂದರ ಮಾಡಿಕೊಳ್ಳುತ್ತಾರೆ, ಹಣ, ಆಸ್ತಿ, ಬ್ಯಾಂಕ್ ಬ್ಯಾಲೆನ್ಸ್ ಎಲ್ಲಾ ವ್ಯರ್ಥ….
ಎನ್‌ಡಿಎ 2.0 ಸರಕಾರ ಒಂದು ವರ್ಷ ಪೂರೈಸಿದ ಬಳಿಕ ನೆನ್ನೆ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ಪ್ರಸ್ತಾಪಗಳಿಗೆ ಸಂಪುಟ ಅನುಮೋದನೆ ದೊರೆತಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ನೆರವಾಗುವ ಹಲವು ನಿರ್ಣಯಗಳಿಗೂ ಸಂಪುಟ ಸಭೆ ಹಸಿರು ನಿಶಾನೆ ತೋರಿದೆ. ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಸಂಕಷ್ಟಕ್ಕೂ ಸರಕಾರ ಸ್ಪಂದಿಸಿದೆ. ಅವರಿಗೆ ಸುಲಭ ಸಾಲ ನೀಡಲು ‘ಪಿಎಂ ಸ್ವಾನಿಧಿ’ ಹೆಸರಿನ ಹೊಸ ಯೋಜನೆಯನ್ನು ಆರಂಭಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಗೊಳ್ಳಲಿದೆ. ಸಾಲ ಮರುಪಾವತಿ ಗಡುವು ವಿಸ್ತರಣೆ ಬ್ಯಾಂಕ್‌ಗಳಿಂದ ಪಡೆದ 3 ಲಕ್ಷ ರೂ.ವರೆಗಿನ ಅಲ್ಪಾವಧಿ ಕೃಷಿ ಸಾಲ ಮರುಪಾವತಿಯ ಗಡುವನ್ನು ಆಗಸ್ಟ್ 31, 2020ರವರೆಗೂ ವಿಸ್ತರಿಸಲಾಗಿದೆ. ಈ ಗಡುವಿನೊಳಗೆ ಮರುಪಾವತಿ ಮಾಡಿದರೆ ಬಡ್ಡಿ ರಿಯಾಯಿತಿ ದೊರೆಯಲಿದೆ.ಭಾರೀ ಪ್ರಮಾಣದಲ್ಲಿ ಬೆಂಬಲ ಬೆಲೆಯನ್ನು ಹೆಚ್ಚಿಸಿ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಭತ್ತ, ರಾಗಿ, ಜೋಳ, ದ್ವಿದಳ ಧಾನ್ಯಗಳು ಸೇರಿದಂತೆ ಒಟ್ಟು 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಶೇ. 50ರಿಂದ ಶೇ.84ರವರೆಗೂ ಹೆಚ್ಚಳ ಮಾಡಲಾಗಿದೆ.‘ಕೃಷಿ ವೆಚ್ಚ ಮತ್ತು ಬೆಲೆ ಆಯೋಗ’ದ ವರದಿ ಆಧರಿಸಿ ಉತ್ಪಾದನಾ ವೆಚ್ಚಕ್ಕಿಂತಲೂ 1.5 ಪಟ್ಟು ಅಧಿಕ ಮಟ್ಟದಲ್ಲಿ ಬೆಂಬಲ ಬೆಲೆಯನ್ನು ನಿಗದಿಗೊಳಿಸಲಾಗಿದೆ. ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟವು ಮುಂಗಾರು ಹಂಗಾಮಿನ 14 ಕೃಷಿ ಉತ್ಪನ್ನಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲು ತೀರ್ಮಾನಿಸಿದೆ.ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆನ್‌ಲೈನ್ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ 5 ಸಾವಿರ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಆನ್‌ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಿ ₹ 666 ಕೋಟಿ ಬಿಡುಗಡೆ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.