ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಕೋಲ್ಕತ್ತಾ ಘಟನೆ ಖಂಡಿಸಿ ಕ್ಯಾಂಡಲ್ ಲೈಟ್ ಪ್ರೊಟೆಸ್ಟ್



ಉಡುಪಿ: ಪಶ್ಚಿಮ ಬಂಗಾಲದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಮೊoಬತ್ತಿ ಉರಿಸಿ ಶಾಂತಿಯುತ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಮಹಿಳಾ ಮೋರ್ಚಾ ಪ್ರಮುಖರಾದ ಸುಜಾಲ ಸುವರ್ಣ, ಸುಮ ಶೆಟ್ಟಿ, ಲೀಲಾ ಆರ್. ಅಮೀನ್, ರಜನಿ ಹೆಬ್ಬಾರ್, ಶಾಂತ, ನೀತಾ ಪ್ರಭು, ತಾರಾ ಆಚಾರ್ಯ, ಸರೋಜಾ ಶೆಣೈ, ಶಾಂತಿ ಮನೋಜ್, ಸುಧಾ ಪೈ , ಪೂರ್ಣಿಮಾ ಶೆಟ್ಟಿ, ಸುಗುಣಾ ನಾಯ್ಕ್, ಪ್ರೀತಿ, ಸುಕನ್ಯಾ, ಶೋಭಾ ಪೈ, ಪ್ರಜ್ಞಾ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ



ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಶ್ರೀ ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು.

ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು.

ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ


ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ರಮೇಶ್ ಕೋಟ್ಯಾನ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ ಹಾಗೂ ನವೀನ್ ಕುಮಾರ್, ಆನಂದ ಕೋಟ್ಯಾನ್, ಪ್ರಖ್ಯಾತ್ ಎಸ್. ಕುಮಾರ್, ರೀಷಾ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು


ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಅನಿಟಾ ಬೆಲಿಂಡ ಡಿಸೋಜ, ಪ್ರಮುಖರಾದ ರಾಘವೇಂದ್ರ ಉಪ್ಪೂರು, ದಿನಕರ ಪೂಜಾರಿ, ಸಲೀಂ ಅಂಬಾಗಿಲು, ರತ್ನಾಕರ ದೇವಾಡಿಗ, ಶಿವರಾಮ ಕಾಡಿಮಾರ್, ಚಂದ್ರಶೇಖರ ಪ್ರಭು, ನಿತಿನ್ ಪೈ, ದೀಪಾ ಪೈ, ಶಾಂತಿ ಮನೋಜ್, ಯಶೋದಾ, ಕೈರುನ್ನೀಸಾ ಮತ್ತಿತರರು ಉಪಸ್ಥಿತರಿದ್ದರು.

ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’




ಉಡುಪಿ: ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಆಟಿ ತಿಂಗಳ ವೈಶಿಷ್ಟ್ಯ ಮತ್ತು ತುಳುನಾಡಿನ ಗತ ಸಾಂಸ್ಕೃತಿಕ ವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಹೇಳಿದರು.

ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಅಜ್ಜರಕಾಡು ಡಾ! ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಡಾ! ನಿಕೇತನ ಅವರು ಆಟಿ ತಿಂಗಳ ಆಚಾರ-ವಿಚಾರ ಮತ್ತು ಜೀವನ ಪದ್ಧತಿಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಉಡುಪಿ ಇದರ ಆರ್ಥಿಕ ಸಮಾಲೋಚಕಿ ಮೀರಾ ಬ್ರಹ್ಮಾವರ ಅವರು ಬ್ಯಾಂಕ್ ಮೂಲಕ ದೊರೆಯುವ ಸರಕಾರದ ವಿವಿಧ ಸೌಲಭ್ಯಗಳ ಕುರಿತು ಸಮಗ್ರ  ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದ ಡಾ! ನಿಕೇತನ ಮತ್ತು ಮೀರಾ ಬ್ರಹ್ಮಾವರ ಅವರನ್ನು ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಸುಮಾರು 30ಕ್ಕೂ ಮಿಕ್ಕಿ ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿದ ಮಹಿಳಾ ಘಟಕದ ಸದಸ್ಯರನ್ನು ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು. ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್ ಸದಸ್ಯರ ಯಾದಿಯನ್ನು ವಾಚಿಸಿದರು.

ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಮ್. ಸುವರ್ಣ ಮತ್ತು ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಸದಸ್ಯರನ್ನು ಅಭಿನಂದಿಸಿದರು.

ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ನಡೆಯುತ್ತಿರುವ ಆಟಿಡೊಂಜಿ ಕೂಟ ಕಾರ್ಯಕ್ರಮ ಸಂಘದ ಸದಸ್ಯರಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಸಿದೆ. ಇದು ನಮ್ಮ ಹಿರಿಯರೆಲ್ಲರನ್ನೂ ನೆನಪಿಸಿಕೊಳ್ಳುವ ಭಾವನಾತ್ಮಕ ಕ್ಷಣವೂ ಹೌದು ಎಂದರು.

ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್ ಮತ್ತು ಜಯಂತಿ ಹರೀಶ್ ಹಾಗೂ ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಘಟಕದ ಸಮಿತಿ ಸದಸ್ಯೆಯರಾದ ವಿಜಯ ಕೃಷ್ಣ ಮತ್ತು ಪ್ರಭಾ ದಯಾನಂದ್ ಕಾರ್ಯಕ್ರಮ ನಿರೂಪಿಸಿ, ಅನಿತಾ ಲಕ್ಷ್ಮಣ್ ವಂದಿಸಿದರು.

ರೀಶಾ ಪ್ರಾರ್ಥನೆ ಹಾಡಿದರು. ಅನ್ವಿ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯೆಯರಿಂದ ನೃತ್ಯ ಪ್ರದರ್ಶನ ಹಾಗೂ ಆಟಿ ತಿಂಗಳ ವಿವಿಧ ಖಾಧ್ಯಗಳೊಂದಿಗೆ ಸಾಮೂಹಿಕ ಸಹ ಭೋಜನ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ



ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯು ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ವ್ಯಾಪ್ತಿಯ ಕರಂಬಳ್ಳಿಯ ಮೂರು ಮಂದಿ ವೃತ್ತಿಪರ ಕೈಮಗ್ಗ ನೇಕಾರ ಮಹಿಳೆಯರಾದ ಸರಸ್ವತಿ ಶೆಟ್ಟಿಗಾರ್, ಸತ್ಯವತಿ ಶೆಟ್ಟಿಗಾರ್ ಮತ್ತು ವಸಂತಿ ಇವರನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಬಿಜೆಪಿ ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಹಿರಿಯರಾದ ರವೀಂದ್ರ ಶೆಟ್ಟಿಗಾರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕರಂಬಳ್ಳಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕಿ ನೀತಾ ಪ್ರಭು, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಜಾಲಾ ಸತೀಶ್, ಪ್ರಧಾನ ಕಾರ್ಯದರ್ಶಿ ಅನಿತಾ ಮರವಂತೆ, ಕಾರ್ಯದರ್ಶಿ ನಿರ್ಮಲಾ ಶೆಟ್ಟಿ, ಕೋಶಾಧಿಕಾರಿ ನಾಗವೇಣಿ, ಪ್ರಮುಖರಾದ ಸುಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಗೀತಾ ಶೇರಿಗಾರ್, ಲೀಲಾ ಆರ್. ಅಮೀನ್,  ಸರೋಜಾ ಶೆಣೈ, ಶಾಂತಿ ಮನೋಜ್,  ಸೌರಭಿ ಪೈ, ಶ್ವೇತ, ರಮ್ಯಾ, ಶಾಂತ, ವಿದ್ಯಾ ಶ್ಯಾಮ್ ಸುಂದರ್, ಸುಗುಣಾ ನಾಯ್ಕ್, ಪೂರ್ಣಿಮಾ ಶೆಟ್ಟಿ, ದೀಪ ಪೈ, ಪ್ರಜ್ಞಾ, ಪಾಂಡುರಂಗ ಶೆಟ್ಟಿಗಾರ್, ಪ್ರದೀಪ್ ಕುಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಿದರೆ ಕಾಂಗ್ರೆಸ್ ನವರಿಗೇಕೆ ಹೊಟ್ಟೆಉರಿ? : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನೆ

ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಮನವಿ ಸಲ್ಲಿಕೆ

Continue reading “ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಿದರೆ ಕಾಂಗ್ರೆಸ್ ನವರಿಗೇಕೆ ಹೊಟ್ಟೆಉರಿ? : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನೆ”

ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್





ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.

ಅವರು ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ  ಇದರ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಧ್ಯಕ್ಷ ಹರೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಬೀಡು ಮಾರ್ಗ ಸೀತಾರಾಮ ಶೆಟ್ಟಿಯವರ ಗದ್ದೆಯಲ್ಲಿ ನಡೆದ ಕೆಸರು ಗದ್ದೆ ಕ್ರೀಡಾ ಕೂಟ ‘ಕೆಸರ್ದ ಗೊಬ್ಬು’ ಕಾರ್ಯಕ್ರಮವನ್ನು ತೆಂಗಿನ ತೆನೆ ಅರಳಿಸಿ, ಕಳಸಕ್ಕೆ ಭತ್ತ ಸುರಿಯುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಸಂಸ್ಕೃತಿಯಲ್ಲಿ ಮಣ್ಣಿಗೆ ಬಹಳಷ್ಟು ಮಹತ್ವವಿದೆ. ಮನುಷ್ಯನಿಗೂ ಮಣ್ಣಿಗೂ ಅವಿನಾಭಾವ ಸಂಬಂಧ. ಪಂಚಭೂತಗಳಲ್ಲಿ ಮಣ್ಣು ಒಂದು ವಿಶಿಷ್ಟವಾದ ಅಂಶ. ‘ಮಣ್ಣಿನಿಂದ ದೇಹ, ದೇಹದಿಂದ ಮಣ್ಣಿಗೆ’ ಎಂದು ಪುರಂದರ ದಾಸರು ಹೇಳಿದ್ದಾರೆ. ನಾವು ಅಷ್ಟು ಮಣ್ಣಿನೊಂದಿಗೆ ಹೊಂದಿಕೊಂಡವರು, ಅಲ್ಲೇ ಹುಟ್ಟಿ ಅಲ್ಲಿಗೇ ಸೇರುವವರು. ಗ್ರಾಮೀಣ ಪ್ರದೇಶ ಕೃಷಿ ಪ್ರಧಾನವಾದ ಪ್ರಾಂತ್ಯ. ಕೃಷಿಗೆ ಮಣ್ಣು ಅತೀ ಮುಖ್ಯ. ಇದಕ್ಕೆ ದೊಡ್ಡ ಇತಿಹಾಸವೇ ಇದೆ. ಮಣ್ಣು ತುಂಬಾ ಫಲವತ್ತಾಗಿರುತ್ತದೆ. ಉಸಿರಾಟಕ್ಕೆ ಆಮ್ಲಜನಕ ಕೊಡುವ ಮರ ಗಿಡ ಸಸ್ಯಗಳಿಗೆ ಮಣ್ಣು ಬೇಕು.  ಕೆಸರಿನಲ್ಲಿ ನಿರ್ಮಲವಾಗಿ ಅರಳುವ ತಾವರೆಯಂತೆ ನಾವು ಬದುಕಬೇಕು ಎಂದರು.

ಕೆಸರಿನಲ್ಲಿ ಓಡಾಡಲು ಅಭ್ಯಾಸ ಬೇಕು. ಹಿಂದೆ ಅಂಬಲಪಾಡಿಯಲ್ಲೂ ಕಂಬಳ ನಡೆಯುತ್ತಿತ್ತು. ಇಂದು ಮನುಷ್ಯರ ಕಂಬಳ ಬೀಡಿನ ಬಳಿಯೇ ನಡೆಯುತ್ತಿರುವುದು ಸಂತಸ ತಂದಿದೆ. ಕೆಸರಿನಲ್ಲಿ ಆಟವಾಡಿದವರಿಗೆ ಯಾವುದೇ ಶೀತ, ನೆಗಡಿ, ಜ್ವರ ಬರುವುದಿಲ್ಲ. ಕೆಸರಿನಲ್ಲಿ ರೋಗ ನಿರೋಧಕ ಶಕ್ತಿ ಇದೆ. ಶ್ರಮದ ಬದುಕಿನ ಸಂಕೇತದ ಜೊತೆಗೆ ದೇಹದಾಡ್ಯತೆ, ಮನೋವಿಕಾಸ, ಆರೋಗ್ಯ ವೃದ್ಧಿಯ ಸಹಿತ ಎಲ್ಲರೂ ಆತ್ಮೀಯರಾಗಿ ಒಂದಾಗುವ ಅವಿಸ್ಮರಣೀಯ ಕ್ಷಣ ಈ ‘ಕೆಸರ್ದ ಗೊಬ್ಬು’ ಎಂದರು.

ಗ್ರಾಮೀಣ ಬದುಕಿನ ಆಚಾರ-ವಿಚಾರ, ಪರಂಪರೆಯನ್ನು ಪರಿಚಯಿಸುವ ಈ ಕೆಸರು ಗದ್ದೆ ಆಟೋಟ ಸ್ಪರ್ಧೆಗೆ ಮಕ್ಕಳು, ಯುವಕರು, ಮಹಿಳೆಯರು ಸೇರಿರುವುದು ಉತ್ತಮ ಬೆಳವಣಿಗೆ. ಯುವಕ ಮಂಡಲ ಹಿರಿಯರ ವೇದಿಕೆ(ರಿ.) ಇತರ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಸೇರಿ ‘ಕೆಸರ್ದ ಗೊಬ್ಬು’ ಎಂಬ ಉತ್ತಮ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಮತ್ತು ಅಭಿನಂದನೀಯ. ಎಲ್ಲರೂ ಒಂದಾಗಿ ಒಳ್ಳೆಯ ಮನೋಭಾವ ಮತ್ತು ಸಹಕಾರದೊಂದಿಗೆ ಆಟವಾಡುವ ಮೂಲಕ ‘ಅಂಬಲಪಾಡಿ ಒಂದು’ ಎಂದು ಬದುಕುವಂತಹ ಉದಾತ್ತ ಸಂದೇಶಕ್ಕೆ ನಾಂದಿ ಹಾಡಿದಂತಾಗಿದೆ. ಇಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮ ಎಲ್ಲೆಡೆ ಪಸರಿಸಲಿ. ಆರೋಗ್ಯ ಮತ್ತು ಒಗ್ಗಟ್ಟು ಅತೀ ಮುಖ್ಯ ಎಂಬ ಭಾವನೆ ಜಾಗೃತಿಗೊಳ್ಳಲಿ ಎಂದು ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.

ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆಷಾಢ ಮಾಸದ ಕಷ್ಟದ ಬದುಕು ಮತ್ತು ಆಚರಣೆಗಳ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಸರ್ದ ಗೊಬ್ಬು ಕಾರ್ಯಕ್ರಮ ಸಕಾಲಿಕ ಮತ್ತು ಪ್ರಶಂಸನೀಯ ಎಂದರು.

ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಸೋಮನಾಥ್ ಬಿ.ಕೆ. ಮಾತನಾಡಿ ಉತ್ತಮ ಚಟುವಟಿಕೆಗಳನ್ನು ನಡೆಸುತ್ತಿರುವ ಯುವಕ ಮಂಡಲ ಹಿರಿಯರ ವೇದಿಕೆ ಪರಿಸರದ ವಿವಿಧ ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಅನುಕರಣೀಯ ಎಂದರು.

ಉದ್ಯಮಿ ವಿಶ್ವನಾಥ್ ಹೆಗ್ದೆ ಮಾತನಾಡಿ ಯುವಕ ಮಂಡಲ ಹಿರಿಯರ ವೇದಿಕೆಯ ನೇತೃತ್ವದಲ್ಲಿ ಶ್ರೀ ದೇವಳದ ಸಹಕಾರ ಹಾಗೂ ಎಲ್ಲ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಇಂತಹ ಕೆಸರು ಗದ್ದೆ ಕ್ರೀಡಾ ಕೂಟ ಪ್ರತೀ ವರ್ಷ ನಡೆಯುವಂತಾಗಲಿ ಎಂದರು.

ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಕೆಸರು ಗದ್ದೆಗೆ ಹಾಲೆರೆದು, ಗದ್ದೆಯಲ್ಲಿದ್ದ ಮಕ್ಕಳತ್ತ ಬಾಲ್ ಎಸೆಯುವ ಮೂಲಕ ಕೆಸರು ಗದ್ದೆಯ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಶೆಟ್ಟಿ, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಯುವಕ ಮಂಡಲ ಹಿರಿಯರ ವೇದಿಕೆಯ ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ, ಗದ್ದೆಯ ಮಾಲಕ ಸೀತಾರಾಮ ಶೆಟ್ಟಿ, ಅಂಬಲಪಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂದಿರದ ಅಧ್ಯಕ್ಷ ಭರತ್ ರಾಜ್ ಕೆ.ಎನ್., ವಿಶ್ವಕರ್ಮ ಸಂಘ ಅಂಬಲಪಾಡಿ ಅಧ್ಯಕ್ಷ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಲಕ್ಷ್ಮಣ ಪೂಜಾರಿ, ಕುಸುಮ ಕಿಶೋರ್, ಹರೀಶ್ ಪಾಲನ್, ಸುನೀಲ್ ಕುಮಾರ್ ಕಪ್ಪೆಟ್ಟು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಪ್ರದೀಪ್ ಶೆಟ್ಟಿ, ಮೋಹನ ಬಲ್ಲಾಳ್, ನವೀನ್ ಸುವರ್ಣ, ಜಗನ್ನಾಥ್ ಕಪ್ಪೆಟ್ಟು, ಪ್ರಕಾಶ್ ಆಚಾರ್ಯ, ಸವಿತಾ ಸಂತೋಷ್, ಗೀತಾ ಪಾಲನ್, ವಿಲಾಸಿನಿ ಆಚಾರ್ಯ ಹಾಗೂ ಯುವಕ ಮಂಡಲದ ಹಿರಿಯರ ವೇದಿಕೆ ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ಪರ್ಧಾಳುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪೂರ್ವದಲ್ಲಿ ಧರ್ಮದರ್ಶಿಗಳಿಂದ ಹಣ್ಣು ಕಾಯಿ ಪ್ರಸಾದ ಸ್ವೀಕರಿಸಿ, ಅವರನ್ನು ಅಂಬಲಪಾಡಿ ಬೀಡು ಮನೆಯಿಂದ ಬ್ಯಾಂಡ್ ಸಹಿತ ಮೆರವಣಿಗೆಯಲ್ಲಿ ಕೆಸರು ಗದ್ದೆಯ ಬಳಿ ಕರೆತರಲಾಯಿತು.

ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಯೋಗೀಶ್ ಕೊಳಲಗಿರಿ, ಪ್ರಶಾಂತ್ ಕೆ.ಎಸ್. ಮತ್ತು ಅಜಿತ್ ಕಪ್ಪೆಟ್ಟು ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ ಉಪಾಧ್ಯಕ್ಷ ನಾಚಿಕೇತ್ ಶೆಟ್ಟಿಗಾರ್ ವಂದಿಸಿದರು.

ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್



ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು: ಹಿರಿಯಡ್ಕದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರ

ಉಡುಪಿ: ದೇವಸ್ಥಾನದ ಒಳಗೆ ದೇವರಿಗೆ ಪೂಜೆ ನಡೆದರೆ, ದೇವರ ಸಾನಿಧ್ಯದಲ್ಲಿ ನೂರಾರು ಭಜಕರರು ದೇವರಿಗೆ ಪ್ರಿಯವಾದ ಸಂಕೀರ್ತನೆಯೊಂದಿಗೆ ಕುಣಿತದ ಭಜನೆಯಲ್ಲಿ ತೊಡಗಿರುವುದು ಶ್ಲಾಘನೀಯ. ಭಕ್ತಿ ಮಾರ್ಗದ ಜೊತೆಗೆ ದೈಹಿಕ ಮಾನಸಿಕ ಅರೋಗ್ಯಕ್ಕೂ ಪೂರಕವಾಗಿರುವ ಕುಣಿತದ ಭಜನಾ ಅಭ್ಯಾಸ ಅತ್ಯಂತ ಮಹತ್ವಪೂರ್ಣ ಎಂದು ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಅವರು ಹೇಳಿದರು.

ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ವತಿಯಿಂದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಹಿರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಹಾಗೂ ಎಸ್.ವಿ.ಟಿ. ಕರಸೇವಕರು ಹಿರಿಯಡ್ಕ ಇವರ ಜಂಟಿ ಸಹಯೋಗದಲ್ಲಿ ಹಿರಿಯಡ್ಕ ದೇವಳದ ಸಭಾಂಗಣದಲ್ಲಿ ನೊಂದಾಯಿತ ಶಿಬಿರಾರ್ಥಿಗಳಿಗೆ ಜು.28ರಿಂದ ಆ.25ರ ವರೆಗೆ ಪ್ರತೀ ರವಿವಾರ ನಡೆಯುವ 5 ದಿನಗಳ ‘ಉಚಿತ ಕುಣಿತದ ಭಜನಾ ತರಬೇತಿ ಶಿಬಿರ’ವನ್ನು ದೀಪ ಪ್ರಜ್ವಲನೆಗೈದು ಉದ್ಘಾಟಿಸಿ ಶುಭ ಹಾರೈಸಿದರು.

ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಮಾತನಾಡಿ, ಹಿರಿಯಡ್ಕದಲ್ಲಿ ಪ್ರಥಮ ಬಾರಿಗೆ 300ಕ್ಕೂ ಹೆಚ್ಚು ಭಜನಾಸಕ್ತರನ್ನು ಒಗ್ಗೂಡಿಸಿ ಮಾದರಿಯಾಗಿ ಕುಣಿತದ ಭಾಜನಾ ತರಬೇತಿಯನ್ನು ಹಮ್ಮಿಕೊಂಡಿರುವ ಉಡುಪಿ ತಾಲೂಕು ಭಜನಾ ಪರಿಷತ್ತಿನ ಸತ್ಕಾರ್ಯ ಪ್ರಶಂಸನೀಯ. ನೊಂದಾಯಿತ ಭಜಕರು ಎಲ್ಲ 5 ದಿನಗಳ ತರಗತಿಯಲ್ಲಿ ತಪ್ಪದೇ ಭಾಗವಹಿಸಿ, ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಮಾತನಾಡಿ, ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನುರಿತ ತರಬೇತುದಾರರಿಂದ 5 ದಿನಗಳಲ್ಲಿ ಏಕ ಕಾಲದಲ್ಲಿ ನಡೆಯುವ ಕುಣಿತದ ಭಜನಾ ತರಬೇತಿಯಲ್ಲಿ ತಾಳ ಹಾಗೂ ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ 300ಕ್ಕೂ ಮಿಕ್ಕಿದ ಬಾಲಕ-ಬಾಲಕಿಯರು, ಯುವಕ-ಯುವತಿಯರು ಮತ್ತು ಮಹಿಳಾ ಶಿಭಿರಾರ್ಥಿಗಳಿಗೆ ಆ.25ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ವತಿಯಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಶ್ರೀ ವೀರಭದ್ರ  ದೇವಸ್ಥಾನದ ಕರ ಸೇವಕರ ಪ್ರಮುಖ ಶ್ರೀನಿವಾಸ ರಾವ್ ಹಿರಿಯಡ್ಕ, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಆತ್ರಾಡಿ, ತಾಲೂಕು ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಹಾಗೂ ತರಬೇತುದಾರೆ ಪೂರ್ಣಿಮಾ ಪೆರ್ಡೂರು, ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೇತ್ರಿ, ತರಬೇತಿ ಕಾರ್ಯಾಗಾರದ ಗೌರವ ಸಲಹೆಗಾರ ನಟರಾಜ್ ಹೆಗ್ಡೆ ಹಿರಿಯಡ್ಕ, ಯೋಜನೆಯ ಹಿರಿಯಡ್ಕ ವಲಯ ಮೇಲ್ವಿಚಾರಕ ಸಂತೋಷ್, ಒಕ್ಕೂಟದ ಹಿರಿಯಡ್ಕ ವಲಯಾದ್ಯಕ್ಷ ಗಣೇಶ್ ನಾಯಕ್, ತರಬೇತುದಾರರಾದ ಪ್ರಕಾಶ್ ಮಂದಾರ್ತಿ, ನಿತ್ಯಾನಂದ್ ಕಬ್ಯಾಡಿ, ರೋಹಿತ್ ಕಬ್ಯಾಡಿ, ತಾಲೂಕು ಜನಜಾಗೃತಿ ವೇದಿಕೆಯ ಸಮಿತಿ ಸದಸ್ಯೆ ನಳಿನಾದೇವಿ ಎಮ್.ಆರ್., ಪ್ರಮುಖರಾದ ನಿತೀಶ್ ಕುಮಾರ್ ಶೆಟ್ಟಿ ಕೊಂಡಾಡಿ, ಮಾಣೈ ಮುಖ್ಯಪ್ರಾಣ ಮಠದ ವಿನೋದ ಶೆಡ್ತಿ, ಪ್ರಭಾಕರ ಶೆಟ್ಟಿ ಪ್ರಭಾವನ ಕಬ್ಯಾಡಿ, ಸುಭಾಶ್ ಶೆಟ್ಟಿ ಕೈರಾಳಿ, ರಾಮ ನಾಯ್ಕ್ ಪೆರ್ಣಂಕಿಲ, ದಿನೇಶ್ ಪೂಜಾರಿ ಮೂಡು ಅಂಜಾರು, ಸುಂದರ್ ಅಂಜಾರು ಬಜೆ, ಉದ್ಯಮಿ ಉಮೇಶ್ ಶೆಟ್ಟಿ, ಗೋಪಾಲ್ ಸೇರಿಗಾರ್, ಶಂಕರ ಆಚಾರ್ಯ, ಗೋಕುಲ್ ದಾಸ್ ನಾಯಕ್, ರಮೇಶ್ ದೇವಾಡಿಗ, ಚೇತನ್ ಪೆರ್ಡೂರು, ವಿವಿಧ ಭಜನಾ ಮಂಡಳಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಒಕ್ಕೂಟದ ಪದಾಧಿಕಾರಿಗಳು ಹಾಗೂ ಶ್ರೀ ವೀರಭದ್ರ ದೇವಸ್ಥಾನದ ಕರ ಸೇವಕರು, ಭಜನಾಸಕ್ತರು ಉಪಸ್ಥಿತರಿದ್ದರು.

ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ




ಉಡುಪಿ: ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ  ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ ರಾಜಕಾರಣ ನಡೆಸುತ್ತಾ, ಕಾಪು ಕ್ಷೇತ್ರದ ಜನಪ್ರಿಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿರುದ್ಧ ಕೀಳು ಮಟ್ಟದ ಅಪಪ್ರಚಾರ ನಡೆಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದರು.

ಅವರು ಬಿಜೆಪಿ ಕಾಪು ಮಂಡಲದ ವತಿಯಿಂದ ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

‘ಅನುದಾನದ ಕೊರತೆಯ ಸಬೂಬು ಹೇಳಿ ಅಭಿವೃದ್ಧಿ ನಿರ್ಲಕ್ಷ್ಯ ‘ ಎಂದು ಆರೋಪಿಸಿರುವ ವಿನಯ ಕುಮಾರ್ ಸೊರಕೆ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ ಎಷ್ಟು ಅನುದಾನ ಬಿಡುಗಡೆಗೊಳಿಸಿದೆ ಮತ್ತು ಅವರು ಕೈಗೊಂಡಿರುವ ಮಹಾನ್ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ವಿವರ ನೀಡಲಿ. ಅಧಿಕಾರದ ಲಾಲಸೆಯಿಂದ ಘೋಷಿಸಿದ ನಕಲಿ ಗ್ಯಾರಂಟಿಗಳನ್ನು ಪೂರೈಸಲಾಗದೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ಮುಳುಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ದಿವಾಳಿತನ ಜಗಜ್ಜಾಹೀರಾಗಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಇತರ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಚಿಕ್ಕಾಸನ್ನೂ ಬಿಡುಗಡೆ ಮಾಡದ ರಾಜ್ಯ ಸರಕಾರದ ಹುಳುಕನ್ನು ಮುಚ್ಚಿಟ್ಟು ಕಡಲ್ಕೊರೆತಕ್ಕೆ ಪರಿಹಾರ ಆಗಿಲ್ಲ ಎಂಬ ಆರೋಪ ಹೊರಿಸುತ್ತಿರುವ ಸೊರಕೆ ತಮ್ಮ ಸರಕಾರ ಅಭಿವೃದ್ಧಿಗಾಗಿ ಎಷ್ಟು ಹಣ ವ್ಯಯಿಸಿದೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಪಕ್ಷದವರೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲವೆಂದು ಸಿ.ಎಂ. ವಿರುದ್ಧ ಹರಿಹಾಯ್ದಿರುವುದನ್ನು ಸೊರಕೆ ಗಮನಿಸಲಿಲ್ಲವೇ? ಅಥವಾ ಇದು ಸೊರಕೆ ಅವರ ಜಾಣ ಕುರುಡು ಪ್ರದರ್ಶನವೇ?

ಕಳೆದ ಒಂದೂವರೆ ವರ್ಷಗಳಿಂದ ಕಡಲ್ಕೊರೆತಕ್ಕೆ ಸೂಕ್ತ ಪರಿಹಾರ ಕಲ್ಪಿಸಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳನ್ನು ಕರೆಸಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರೂ, ಬಿಟ್ಟಿ ಭಾಗ್ಯ ಮತ್ತು ಹಗರಣಗಳಿಂದ ಕಂಗೆಟ್ಟಿರುವ ರಾಜ್ಯ ಸರಕಾರ ಒಂದು ನಯಾ ಪೈಸೆಯನ್ನೂ ಮಂಜೂರು ಮಾಡದೇ ಇರುವುದು ಸರಕಾರದ ದಿವಾಳಿತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದರು.

ಗುತ್ತಿಗೆದಾರರನ್ನು ಮನೆಗೆ ಕರೆಯಿಸಿ ವಿವಿಧ ಇಲಾಖೆಗಳಿಂದ ಹಣ ಮಂಜೂರು ಮಾಡಿಸುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಿರುವ ಸೊರಕೆ ಅವರಿಗೆ ಕಡಲ್ಕೊರೆತಕ್ಕೂ ಅನುದಾನ ಮಂಜೂರು ಮಾಡಿಸುವ ಭರವಸೆ ನೀಡಿ ಗುತ್ತಿಗೆದಾರರಿಂದ ಈ ಕೆಲಸವನ್ನು ಮಾಡಿಸಬಹುದಲ್ಲವೇ?

ಜನ ಬೆಂಬಲ ಕಳೆದುಕೊಂಡಿರುವ ಸೊರಕೆ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ವಿಷಯದಲ್ಲಿ ಶಾಸಕರ ಹಕ್ಕು ಭಾಧ್ಯತೆಗಳಿಗೆ ತೆಡೆಯೊಡ್ಡಿ, ತಮ್ಮ ಸರಕಾರವಿದೆಯೆಂದು ಅಧಿಕಾರಿಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಪ್ರಭಾವ ಬೀರಿ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ವಿಷಯದಲ್ಲಿ ತೊಂದರೆ ಉಂಟುಮಾಡುತ್ತಿರುವುದು ಶೋಭೆಯೇ? ಎಂದು ಅವರು ಪ್ರಶ್ನಿಸಿದರು.

ಸೊರಕೆ ಅವರು ಕಾಪು ಪುರಸಭೆ ಘೋಷಣೆ ಮಾಡಿದಾಗ 100 ಕೋಟಿ ರೂ. ಅನುದಾನ ನೀಡಿರುತ್ತೇನೆ ಎಂದು ಸುಳ್ಳು ಹೇಳಿರುತ್ತಾರೆ. ಆ ಅನುದಾನ ಎಲ್ಲಿಗೆ ಹೋಗಿದೆ ಎಂದು ಅವರು ಉತ್ತರಿಸಲಿ. ಅಲ್ಲದೆ ಸುಮಾರು 500 ನಿವೇಶನಕ್ಕೆ ಶಿಲಾನ್ಯಾಸ ಮಾಡಿರುತ್ತಾರೆ, ಪುರಸಭೆಗೆ ಕುಡಿವ ನೀರಿಗೆ ಯಾವುದೇ ಅನುದಾನ ನೀಡದೆ ಶಿಲಾನ್ಯಾಸ ಮಾಡಿರುತ್ತಾರೆ.

ಕಾಪು ಕ್ಷೇತ್ರದ ಜನಪ್ರತಿನಿಧಿಯಾಗಿ ಶಾಸಕ ಗುರ್ಮೆ ಅವರು ರಸ್ತೆಗಳ ಅಭಿವೃದ್ಧಿ, ಕಡಲೊರೆತ ಭಾದಿತ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ರಚನೆ, ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ, ನದಿ ದಂಡೆ ಸಂರಕ್ಷಣೆ, ಕಿಂಡಿ ಅಣೆಕಟ್ಟುಗಳ ನಿರ್ಮಾಣ, ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿ, ಪ.ಜಾತಿ ಮತ್ತು ಪ.ಪಂಗಡಗಳ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಮುಂತಾದವುಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಸಚಿವರಲ್ಲಿ ಖುದ್ದು ಭೇಟಿಯಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ ಉದ್ದೇಶಪೂರ್ವಕವಾಗಿ ಅಭಿವೃದ್ಧಿ ಕೆಲಸ ಆಗಬಾರದೆಂಬುದು ಪ್ರಸ್ತುತ ರಾಜ್ಯ ಕಾಂಗ್ರೆಸ್‌ ಸರಕಾರದ ಹುನ್ನಾರವಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕ ಕೆಲಸಕ್ಕೆ ತೊಂದರೆ ಉಂಟುಮಾಡುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನಿಂತು ಗ್ರಾಮದ ಅಭಿವೃದ್ಧಿಯ ಹಿನ್ನಡೆ ಬಯಸುತ್ತಿರುವ ಇಂತಹ ರಾಜಕಾರಣಿಗೆ, ಸಮಾಜ ಸೇವೆಯೊಂದಿಗೆ ಸಾರ್ವಜನಿಕ ಜೀವನದಲ್ಲಿ ಸಚ್ಚಾರಿತ್ರ್ಯವನ್ನು ಕಾಪಾಡಿಕೊಂಡು ಬಂದಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸೊರಕೆ ಅವರು ಕೇವಲ ಪ್ರಚಾರದ ತೆವಲಿಗೆ ಕಾಪು ಶಾಸಕರ ತೇಜೋವಧೆ ನಡೆಸುವ ದುರುದ್ದೇಶದಿಂದ ಅಸಂಬದ್ಧ ಹೇಳಿಕೆ ನೀಡುವುದನ್ನು ಬಿಟ್ಟು ಓರ್ವ ಜವಾಬ್ದಾರಿಯುತ ಮಾಜಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳುವುದು ಉತ್ತಮ. ಇದೇ ಚಾಳಿಯನ್ನು ಮುಂದುವರಿಸಿದಲ್ಲಿ ಅದಕ್ಕೆ ತಕ್ಕ ಉತ್ತರವನ್ನು ನೀಡಲು ಬಿಜೆಪಿ ಸದಾ ಸನ್ನದ್ದವಾಗಿದೆ ಎಂದು ಕಿಶೋರ್ ಕುಮಾರ್ ತಿಳಿಸಿದರು.

*ರಾಜ್ಯ ಸರಕಾರದ ಹಗರಣಗಳನ್ನು ಮರೆಮಾಚಲು ಕಾಂಗ್ರೆಸ್ ಪರಶುರಾಮ ಥೀಮ್ ಪಾರ್ಕ್ ಯೋಜನೆಯನ್ನು ಗುರಾಣಿಯನ್ನಾಗಿಸಿದೆ:*

ಕಾರ್ಕಳ ತಾಲೂಕಿನ ಬೈಲೂರು ಉಮಿಕ್ಕಳ ಬೆಟ್ಡದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನ 11 ಕೋಟಿ ರೂ. ಯೋಜನಾ ಮೊತ್ತದಲ್ಲಿ 6 ಕೋಟಿ ರೂ. ಬಿಡುಗಡೆಯಾಗಿದ್ದು, ವ್ಯವಸ್ಥಿತವಾಗಿ ಕೆಲಸ ಕಾರ್ಯಗಳು ನಡೆದಿವೆ. ಆದರೆ ಕಾಂಗ್ರೆಸ್ ಮಾತ್ರ ರಾಜ್ಯ ಸರಕಾರ ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳಲ್ಲಿ ಸಿಲುಕಿಕೊಂಡಿದ್ದರೂ ಅಪಪ್ರಚಾರ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡುವ ಮೂಲಕ ಪರಶುರಾಮ ಥೀಮ್ ಪಾರ್ಕ್ ಯೋಜನೆಯನ್ನು ತಮ್ಮ ಸರಕಾರದ ಭ್ರಷ್ಟಾಚಾರ, ಹಗರಣಗಳಿಂದ ನುಣುಚಿಕೊಳ್ಳಲು ಗುರಾಣಿಯನ್ನಾಗಿಸುವ ವಿಫಲ ಯತ್ನದಲ್ಲಿ ತೊಡಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಶೋರ್ ಕುಮಾರ್ ತಿಳಿಸಿದರು.

ಪರಶುರಾಮ ಥೀಮ್ ಪಾರ್ಕ್ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಒಂದು ವರ್ಷದ ಬಳಿಕ ಯೋಜನೆಯ ಅನುಷ್ಠಾನಾಧಿಕಾರಿ ಎಂದು ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿದೆ. ತಮ್ಮದೇ ಸರಕಾರದ ಆಡಳಿತವಿದ್ದರೂ ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಕಾಮಗಾರಿಯ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡು ತಮ್ಮ ಅನುಮಾನವನ್ನು ಪರಿಹರಿಸಿಕೊಳ್ಳಲಾಗದ ಕಾಂಗ್ರೆಸ್ ಸ್ವಯಂಕೃತ ಅಪರಾಧ, ಅಸಹಾಯಕತೆಯಿಂದ ಬಳಲುತ್ತಾ, ಮಾಜಿ ಸಚಿವರ ವಿರುದ್ಧ ಸುಳ್ಳು ಆರೋಪವನ್ನು ಜೀವಂತವಾಗಿರಿಸಿ ಜನರ ದಾರಿ ತಪ್ಪಿಸಲು ಹರಸಾಹಸ ಪಡುತ್ತಿರುವುದು ಸ್ಪಷ್ಟವಾಗಿದೆ ಎಂದರು.

ಜನತೆಗೆ ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಜನ ವಿರೋಧಿ, ಅಭಿವೃದ್ಧಿ ವಿರೋಧಿ ಕಾಂಗ್ರೆಸ್ಸಿಗೆ ಮುoದಿನ ಎಲ್ಲ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

*ಸೊರಕೆ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ:*

ಬಿಜೆಪಿ ಕಾಪು ಮಂಡಲಾಧ್ಯಕ್ಷ ಜಿತೇಂದ್ರ ಶೆಟ್ಟಿ ಮತ್ತು ನಿಕಟಪೂರ್ವ ಮಂಡಲಾಧ್ಯಕ್ಷ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರದ ಸಜ್ಜನ, ಕ್ರಿಯಾಶೀಲ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವರ್ಚಸ್ಸಿಗೆ ಕುಂದು ತರುವ ದುರುದ್ದೇಶದಿಂದ ಅಪಪ್ರಚಾರ ನಡೆಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ವರ್ತನೆಯನ್ನು ಖಂಡಿಸಿ, ಇಂತಹ ಗೀಳು ಮುಂದುವರಿಸಿದಲ್ಲಿ ಸೊರಕೆ ವಿರುದ್ಧ ಜನಾಂದೋಲನ ಜರಗಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಉಪಾಧ್ಯಕ್ಷ ಅನಿಲ್ ಕುಮಾರ್, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಸ್ವಾಗತಿಸಿ, ಮಂಡಲ ವಕ್ತಾರ ನವೀನ್ ಎಸ್.ಕೆ. ವಂದಿಸಿದರು.

Design a site like this with WordPress.com
Get started