ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು, ಕಾರ್ಯ ತತ್ಪರತೆ, ದೇಶಭಕ್ತಿ ಮತ್ತು ಜೀವನ ಮೌಲ್ಯಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ ಎಂದರು.
ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಆಸಿಫ್ ಕಟಪಾಡಿ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸಂತೋಷ್ ಜತ್ತನ್ ಹೇರೂರು, ಉಡುಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಕಾರ್ಮಿಕ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿ, ಉಡುಪಿ ನಗರ ಒಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ, ಪ್ರಮುಖರಾದ ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಗಿರಿಧರ್ ಆಚಾರ್ಯ, ದಾವೂದ್ ಅಬೂಬಕರ್, ಸುರೇಶ್ ಕಾಮತ್ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ’ ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ ಮುಂದೆ ಬೆತ್ತಲಾಗಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಇತರ ಯಾರನ್ನೂ ದೂಷಿಸದೆ ಕೇವಲ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಅವಮಾನಿಸಿರುವುದು ಕಾಂಗ್ರೆಸ್ಸಿನ ಕೀಳು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ದೇಶ ವಿಭಜನೆಯ ಸಂಧರ್ಭದಲ್ಲಿ ನಡೆದ ಲಕ್ಷಾಂತರ ಹಿಂದೂಗಳ ಹತ್ಯೆ ಮತ್ತು ಕಾಶ್ಮೀರದಲ್ಲಿ ನಡೆದ ಅಸಂಖ್ಯಾತ ಹಿಂದೂಗಳ ಮಾರಣ ಹೋಮಕ್ಕೆ ಯಾರು ಕಾರಣ ಎಂಬ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಹಿಂದೂಗಳ ಬಗ್ಗೆ ಅತೀವ ದ್ವೇಷ ಭಾವನೆಯನ್ನು ಹೊಂದಿರುವ ಕಾಂಗ್ರೆಸ್ಸಿನ ಹಿಂದೂ ಧಮನ ನೀತಿಯನ್ನು ದೇಶವಾಸಿಗಳು ಚೆನ್ನಾಗಿಯೇ ಅರಿತಿದ್ದಾರೆ.
ದೇಶದ ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ರಾಹುಲ್ ಗಾಂಧಿ, ಸಂವಿಧಾನವನ್ನು ತಿದ್ದುಪಡಿ ಮಾಡಿ ಅದರಲ್ಲಿ ‘ಜಾತ್ಯಾತೀತ’ ಎಂಬ ಪದವನ್ನು ಸೇರ್ಪಡೆಗೊಳಿಸಿದವರು ಯಾರು ಎಂಬ ಬಗ್ಗೆ ಆಳವಾದ ಅಧ್ಯಯನ ನಡೆಸುವುದು ಉತ್ತಮ. ರಾಜ್ಯದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಸಹಿತ ದೇಶದೆಲ್ಲೆಡೆ ನಡೆಯುತ್ತಿರುವ ದೊಂಬಿ, ಹತ್ಯೆ, ಅಹಿಂಸೆಗೆ ಕುಮ್ಮಕ್ಕು ನೀಡುತ್ತಿರುವವರು ಯಾರು ಎಂಬ ಬಗ್ಗೆಯೂ ರಾಹುಲ್ ಗಾಂಧಿ ಗಂಭೀರ ಚಿಂತೆನೆ ನಡೆಸಿ ತನ್ನ ಪ್ರಬುದ್ಧತೆಯನ್ನು ಹೆಚ್ಚಿಸಿಕೊಳ್ಳುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.
ಸಂಸತ್ತಿನಲ್ಲಿ ರಾಜಕೀಯ ಬಾಷಣ ಮಾಡಿರುವ ನಕಲಿ ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ, ಸನಾತನ ಧರ್ಮದ ಬಗ್ಗೆ ಅತೀವ ಶೃದ್ಧೆಯುಳ್ಳ ಅಹಿಂಸಾ ಪ್ರತಿಪಾದಕ ಸಹಿಷ್ಣು ಹಿಂದೂಗಳ ಬಗ್ಗೆ ಎಳ್ಳಷ್ಟೂ ಅರಿವಿಲ್ಲದೇ ಅವಮಾನಕಾರಿ ಮಾತುಗಳನ್ನಾಡಿರುವುದು ಹಾಗೂ ಹಿಂದೂಗಳು ಪೂಜಿಸುವ ಪರಮೇಶ್ವರನ ಚಿತ್ರವನ್ನು ಸಂಸತ್ತಿನಲ್ಲಿ ಪ್ರದರ್ಶಿಸಿ ತನ್ನ ಬಾಲಿಷ ವರ್ತನೆಯನ್ನು ಜಗಜ್ಜಾಹೀರುಪಡಿಸಿ ಹಿಂದೂಗಳಿಗೆ ಪೂಜ್ಯ ಭಾವನೆ ಇರುವ ತ್ರಿಶೂಲವನ್ನು ಕೂಡಾ ಅವಮಾನಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.
‘ಕಾಂಗ್ರೆಸ್ ಅಧಿಕಾರದಲ್ಲಿ ಇರುವುದಕ್ಕಿಂತ ವಿಪಕ್ಷದಲ್ಲಿ ಇರುವಾಗ ಹೆಚ್ಚು ಅಪಾಯಕಾರಿ’ ಎಂದು ಹೇಳಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತು ಇಂದು ನಿಜವಾಗುತ್ತಿದೆ. ಕಾಂಗ್ರೆಸ್ಸಿಗೆ ದೇಶದ ಸಂವಿಧಾನ, ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕೇವಲ ದ್ವೇಷ ಮತ್ತು ಗೊಂದಲ ಮೂಡಿಸುವುದೇ ಕಾಂಗ್ರೆಸ್ ಉದ್ದೇಶ ಎಂಬುದು ಲೋಕ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವರ್ತನೆಯಿಂದ ರುಜುವಾತಾಗಿದೆ. ದೇಶದ ಅಸ್ಮಿತೆ, ಮೂಲ ಸಮಾಜ, ಬಹುಸಂಖ್ಯಾತ ಹಿಂದೂಗಳ ಭಾವನೆಯನ್ನು ಘಾಸಿಗೊಳಿಸಿ, ಅವಮಾನಿಸಿರುವ ರಾಹುಲ್ ಗಾಂಧಿ ದೇಶದ ಸಮಸ್ತ ಹಿಂದೂಗಳ ಕ್ಷಮೆ ಯಾಚಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ಬಳಿಕ ಗುಜ್ಜಾಡಿ ಪ್ರಭಾಕರ್ ನಾಯಕ್ ರವರರಿಗೆ ಹೂಗುಚ್ಚ ಮತ್ತು ಪುಸ್ತಕವನ್ನು ನೀಡಿ ಸ್ವಾಗತಿಸಿದ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶ ಪ್ರೇಮ, ತ್ಯಾಗ, ಬಲಿದಾನ ಹಾಗೂ ಆದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾದಾಯಕ. ಡಾ! ಮುಖರ್ಜಿ ಅವರ ನಿಸ್ವಾರ್ಥ ಸೇವಾ ಮನೋಭಾವ, ದೂರದರ್ಶಿತ್ವದ ಚಿಂತನೆಗಳು, ಹೋರಾಟಗಳು ಸದಾ ಅನುಕರಣೀಯ. ಮೌಲ್ಯಯುತ ತತ್ವಾದರ್ಶಗಳನ್ನು ನಾಡಿಗೆ ನೀಡಿದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಪ್ರಾತ: ಸ್ಮರಣೀಯರು ಎಂದರು.
ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಉಪನ್ಯಾಸವನ್ನು ನಡೆಸಿ, ‘ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ, ಎರಡು ಸಂವಿಧಾನ ಇರಲು ಸಾಧ್ಯವಿಲ್ಲ’ ಎಂಬ ತತ್ವವನ್ನು ಪ್ರತಿಪಾದಿಸಿ ಕಾಶ್ಮೀರದ ವಿಮೋಚನೆಗಾಗಿ ಹೋರಾಡಿ ಹುತಾತ್ಮರಾದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶಭಕ್ತಿ, ಸಾಧನೆ, ಹೋರಾಟಗಳು ಮತ್ತು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪರಿ, ತ್ಯಾಗ, ಬಲಿದಾನದ ಯಶೋಗಾಥೆಯನ್ನು ಎಳೆ ಎಳೆಯಾಗಿ ಬಿಡಿಸಿ ಅವರ ಜೀವನಾದರ್ಶಗಳ ಚಿತ್ರಣವನ್ನು ಸಭೆಯ ಮಂದಿಟ್ಟರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರ.ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಅನಿತಾ ಆರ್.ಕೆ., ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಪ್ರ.ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಕುಮಾರದಾಸ್, ಪ್ರ.ಕಾರ್ಯದರ್ಶಿ ಶ್ರೀಧರ್ ಗೌಡ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಉಡುಪಿ ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ಕುಂದಾಪುರ ಮಂಡಲ ಪ್ರ.ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ರಾಜೇಶ್ ಕಾವೇರಿ, ಶ್ಯಾಮಲಾ ಎಸ್. ಕುಂದರ್, ಸುಮಿತ್ರಾ ಆರ್. ನಾಯಕ್, ಪ್ರಭಾಕರ್ ಪೂಜಾರಿ, ವೀಣಾ ಎಸ್. ಶೆಟ್ಟಿ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ದಾವೂದ್ ಅಬೂಬಕರ್, ರಮ್ಯಾ ಉಪ್ಪೂರು, ಶೈಲ್ಲಾ ಪೃಥ್ವಿರಾಜ್, ನಳಿನಿ ರಾವ್ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಶಿರಾ: ತುಮಕೂರು ಜಿಲ್ಲೆಯ ಶಿರಾ2 ತಾಲೂಕಿನ ಶಿರಾ ವಲಯದ ಸಂತೆಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀನಿವಾಸ ಹಾಗೂ ಶಿವರಾಜ್ ಎಂಬ ವಿಶೇಷಚೇತನ ಫಲಾನುಭವಿಗಳಿಗೆ ಕಮೋಡ್ ವೀಲ್ ಚೇರ್ ನ್ನು ಶಿರಾ 2 ತಾಲೂಕಿನ ಯೋಜನಾಧಿಕಾರಿ ರಮೇಶ್ ಎನ್ ವಿತರಣೆ ಮಾಡಿದರು, ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಶ್ರೀಷ ಆಚಾರ್ಯ, ವಲಯ ಮೇಲ್ವಿಚಾರಕ ನರೇಶ್, TNO ಹರೀಶ್ ಹಾಗೂ ಫಲಾನುಭವಿಗಳ ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಲಪಟಾಯಿಸಿ ದುರ್ಬಳಕೆ ಮಾಡಿರುವ ಹಗರಣವನ್ನು ಖಂಡಿಸಿ ಜೂನ್ 26ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿ ರೂಪಾಯಿ ಹಣವನ್ನು ಕದ್ದು ಬೇನಾಮಿ ಖಾತೆಗಳಿಗೆ ಅದನ್ನು ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಭಾಷಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಎಂದು ಬೊಗಳೆ ಬಿಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಎರಡೂ ಸಮುದಾಯಗಳಿಗೆ ವಂಚಿಸಿ ಘೋರ ಅನ್ಯಾಯವೆಸಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11,000 ಕೋಟಿ ರೂಪಾಯಿಯನ್ನು ಅನ್ಯ ಉದ್ದೇಶಗಳಿಗೆ ಬಳಸಿದ ರಾಜ್ಯ ಕಾಂಗ್ರೆಸ್ ಸರಕಾರ, ಇದೀಗ ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ನಿರ್ಲಜ್ಜತೆಯಿಂದ ಲಪಟಾಯಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ರಾಜ್ಯ ಸರಕಾರ ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ದುರುಪಯೋಗಪಡಿಸಿಕೊಂಡಿದೆ ಎಂಬ ಮಾಹಿತಿ ಇದೆ ಎಂದರು.
ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ತಿಲಾಂಜಲಿಯನ್ನಿತ್ತು, ಜನ ವಿರೋಧಿ, ರೈತ ವಿರೋಧಿ, ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಾ ರಾಜ್ಯದ ಜನತೆಯ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ರಾಜ್ಯ ಸರಕಾರ ಕೂಡಲೇ ಈ ಹಗರಣದ 187 ಕೋಟಿ ರೂಪಾಯಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಗೆ ವಾಪಾಸು ಜಮಾ ಮಾಡುವ ಮೂಲಕ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿ ಕೆಲಸಕಾರ್ಯಗಳಿಗೆ ಅದನ್ನು ಬಳಸಬೇಕು. ತಪ್ಪಿದಲ್ಲಿ ಇಡೀ ಸರಕಾರ ನೈತಿಕ ಹೊಣೆ ಹೊತ್ತು ಅಧಿಕಾರದಿಂದ ಕೆಳಗಿಳಿಯಬೇಕು ಮತ್ತು ರಾಜ್ಯ ಸರಕಾರವನ್ನು ಬರ್ಕಾಸ್ತುಗೊಳಿಸಬೇಕು ಎಂದು ಆಗ್ರಹಿಸಿದ ಕಿಶೋರ್ ಕುಮಾರ್ ಕುಂದಾಪುರ, ವಿಪರೀತ ಗಾಳಿ ಮಳೆಯ ನಡುವೆಯೂ ಸುಮಾರು ಒಂದು ಸಾವಿರಕ್ಕೂ ಮಿಕ್ಕಿದ ಬೃಹತ್ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಯಲ್ಲಿ ಭಾಗವಹಿಸಿರುವ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಹುಮ್ಮಸ್ಸು ಕಾಂಗ್ರೆಸ್ ಸರಕಾರದ ವಿರುದ್ಧ ಭುಗಿಲೆದ್ದಿರುವ ಅಸಮಾಧಾನವನ್ನು ಸಾಬೀತುಪಡಿಸಿದೆ ಎಂದರು.
ಲೂಟಿಕೋರ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗುತ್ತಾ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ ಮತ್ತು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ! ನವೀನ್ ಕುಮಾರ್ ಸಹಿತ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರಣಂಕಿಲ, ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ, ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ್, ಉದಯ ಎಸ್. ಕೋಟ್ಯಾನ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರರಾದ ಗೀತಾಂಜಲಿ ಎಮ್. ಸುವರ್ಣ, ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪರಾಜ್ ಶೆಟ್ಟಿ, ಶ್ರೀಕಾಂತ್ ಕಾಮತ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಕುಮಾರದಾಸ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜಾ, ಮಂಡಲ ಅಧ್ಯಕ್ಷರುಗಳಾದ ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ಸುರೇಶ್ ಶೆಟ್ಟಿ ಗೋಪಾಡಿ, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ದಿನೇಶ್ ಅಮೀನ್ ಉಡುಪಿ ನಗರ, ಜಿತೇಂದ್ರ ಶೆಟ್ಟಿ ಕಾಪು, ನವೀನ್ ನಾಯಕ್ ಕಾರ್ಕಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಸಚಿನ್ ಪೂಜಾರಿ, ಮನೋಜ್ ಕುಮಾರ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಗೋಪಾಲಕೃಷ್ಣ ರಾವ್, ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ನಯನಾ ಗಣೇಶ್, ಶ್ಯಾಮಲಾ ಎಸ್. ಕುಂದರ್, ಶೈಲೇಂದ್ರ ಶೆಟ್ಟಿ, ಸುಮಿತ್ರಾ ಆರ್. ನಾಯಕ್, ವೀಣಾ ಎಸ್. ಶೆಟ್ಟಿ, ಶರತ್ ಶೆಟ್ಟಿ ಉಪ್ಪುಂದ, ಅಕ್ಷಿತ್ ಶೆಟ್ಟಿ ಹೆರ್ಗ, ಸಚಿನ್ ಪಿತ್ರೋಡಿ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ ಸಹಿತ ಮಂಡಲ ಪದಾಧಿಕಾರಿಗಳು, ಮಂಡಲಗಳ ಮೋರ್ಚಾ, ಪ್ರಕೋಷ್ಠ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕವಾಗಿ ಮಾತನಾಡಿ ಹೈನುಗಾರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಬಿತ್ತನೆ ಬೀಜದ ದರ ಏರಿಕೆ ಮತ್ತು ಕೊರತೆ ಹಾಗೂ ತೈಲಬೆಲೆ ಏರಿಕೆಯನ್ನು ಖಂಡಿಸಿ, ಜಿಲ್ಲೆಯಲ್ಲಿ ಕೃಷಿ ಕಾಲೇಜು ಪ್ರಾರಂಭಿಸುವ ಕುರಿತು ಹಾಗೂ ಕುಮ್ಕಿ ಹಕ್ಕು ಮತ್ತು ಆಕ್ರಮ ಸಕ್ರಮ ಹಂಚಿಕೆ ಮಾಡುವ ಬಗ್ಗೆ ಅಗ್ರಹಿಸಿ ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮತ್ತು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ! ನವೀನ್ ಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಯನ್ನು ಖಂಡಿಸಿದರು.
ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಚೆಂಡೆ ವಾದನ, ದನ-ಕರು, ಕೋಣಗಳ ವಿಶೇಷ ಆಕರ್ಷಣೆಯೊಂದಿಗೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರಿಂದ ಪಾದಯಾತ್ರೆ ನಡೆಯಿತು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶೇಖರ್ ಕುಲಾಲ್, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ರೈತ ಮೋರ್ಚಾ ಸಹಿತ ವಿವಿಧ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಹೈನುಗಾರರು ಮತ್ತು ರೈತರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಶ್ರೀಕಾಂತ್ ಕಾಮತ್ ವಂದಿಸಿದರು. ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮೋಹನ ಚಂದ್ರ ಕಾರ್ಯಕ್ರಮ ನಿರೂಪಿಸಿದರು.
ಪ್ರಾರಂಭದಲ್ಲಿ ರಾಜ ಆರೂರು ಮತ್ತು ಬಳಗ ರೈತ ಗೀತೆ ಹಾಡಿದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್ ಭಟ್ ಅವರ ಅನ್ನಪೂರ್ಣ ನರ್ಸರಿ ಪೇತ್ರಿ ವತಿಯಿಂದ ಸುಮಾರು 500ಕ್ಕೂ ಮಿಕ್ಕಿ ಫಲ-ಪುಷ್ಪಗಳ ಸಸಿಗಳನ್ನು ವಿತರಿಸಲಾಯಿತು.
ತುಮಕೂರು 2 ಜಿಲ್ಲೆಯ ಶಿರಾ2 ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯೋಜನಾಧಿಕಾರಿಗಳಾದ ಶ್ರೀ ರಮೇಶ್ ಎನ್ ಮಾತನಾಡುತ್ತಾ ಸುಂದರ ಆರೋಗ್ಯಕ್ಕಾಗಿ ದುಷ್ಚಟ ಮುಕ್ತ ಜೀವನ ನಡೆಸಬೇಕೆಂದು ತಿಳಿಸಿದರು, ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ರವೀಂದ್ರ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಸಿದ್ದಣ್ಣ ಅವರು ದುಶ್ಚಟದಿಂದ ಆರೋಗ್ಯದ ಮೇಲೆ ಆಗುವ ಹಾನಿಯ ಕುರಿತು ತಿಳಿಸಿದರು, ಕಾರ್ಯಕ್ರಮದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವೀಂದ್ರ , ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ , ಸಂಪನ್ಮೂಲ ವ್ಯಕ್ತಿಗಳಾದ ಸಿದ್ದಣ್ಣ , ತಾಲೂಕು ಯೋಜನಾಧಿಕಾರಿಗಳಾದ ರಮೇಶ್ ಎನ್. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಂದ R , ವಲಯದ ಮೇಲ್ವಿಚಾರಕರಾದ ನಗ್ಮಾ , ಕೃಷಿ ಅಧಿಕಾರಿ ಶ್ರೀಶ ಆಚಾರ್ಯ, ಸೇವಾಪ್ರತಿನಿಧಿ ಕವಿತಾ, ಶಾಲಾ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು
ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ರವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ಗ್ರಾಮಾಂತರ ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ರವರು ಪುಷ್ಪಾರ್ಚನೆ ಮಾಡಿ ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನದ ಬಗ್ಗೆ ವಿವರಿಸಿ ಅವರು ಹಾಕಿಕೊಟ್ಟ ಆದರ್ಶದಲ್ಲಿಯೇ ನಾವೆಲ್ಲ ಇರಬೇಕೆಂದು ಕರೆ ನೀಡಿದರು.
ನಂತರದಲ್ಲಿ ಪಕ್ಷದ ಕೊಟ್ಟ ಹಲವಾರು ಕಾರ್ಯಕ್ರಮಗಳ ಬಗ್ಗೆ ಎರಡು ಕಾರ್ಯಕ್ರಮಗಳ ಸಂಚಾಲಕರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿ, ಇಂದಿನ ಪುಣ್ಯತಿಥಿಯಿಂದ ಅವರ ಜನ್ಮದಿನಾಂಕ ಜುಲೈ ,6 ನೇ ತಾರೀಕಿನವರೆಗೆ ಪ್ರತೀ ಬೂತ್ ನಲ್ಲಿಯೂ *ಏಕ್ ಪೇಡ್ ಮಾಕೆ ನಾಮ್* ಎನ್ನುವ ಕಾರ್ಯಕ್ರಮ ಮಾಡಬೇಕು. ಪ್ರತೀ ಬೂತ್ ನಲ್ಲಿ ಕನಿಷ್ಠ ಹತ್ತು ಗಿಡಗಳನ್ನಾದರೂ ಮನೆಗಳಲ್ಲಿ ತಾಯಿಯೊಂದಿಗೆ ನಿಂತು ನೆಟ್ಟು ವರದಿ ನೀಡಬೇಕು. ಅದರೊಂದಿಗೇ ಜೂನ್ 25 ರಂದು ತುರ್ತ ಪರಿಸ್ಥಿತಿ ಯ ಕರಾಳ ದಿನದ ಕಾರ್ಯಕ್ರಮ, ವಾಲ್ಮೀಕಿ ನಿಮಗದ ಹಗರಣ ಕುರಿತಂತೆ ಡಿಸಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ, ಮನ್ ಕಿ ಬಾತ್ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಎಲ್ಲ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಮಂಡಲದಿಂದ ಬೂತ್ ಮಟ್ಟದವರೆಗಿನ ಪದಾಧಿಕಾರಿಗಳು ನಡೆಸಿ ವರದಿ ನೀಡಬೇಕೆಂದು ಹೇಳಲಾಯಿತು. ನಂತರ ಮಂಡಲ ಅಧ್ಯಕ್ಷರಾದ ರಾಜೀವ್ ಕುಲಾಲ್ ರವರು ಮಾತನಾಡಿ ಎಲ್ಲ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಅನಿತಾ ಶ್ರೀಧರ್, ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ಕಮಲಾಕ್ಷ ಹೆಬ್ಬಾರ್ ಕಾರ್ಯಕ್ರಮಗಳ ಸಂಚಾಲಕರಾದ ಅರುಣ್ ಭಂಡಾರಿ, ಮಮತಾ ಶೆಟ್ಟಿ, ನಿಕಟಪೂರ್ವ ಮಂಡಲ ಅಧ್ಯಕ್ಷರಾದ ವೀಣಾ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾಕಾರ್ಯದರ್ಶಿ ಸಚಿನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಾಂಕೇತಿಕವಾಗಿ ಗಿಡಗಳ ವಿತರಣೆ ಮಾಡಲಾಯಿತು.
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವು ನಾಳೆ ಜೂ.23 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.
ಜೂ. 23ರಂದು ಜಿಲ್ಲೆಯ ಎಲ್ಲ 6 ಮಂಡಲಗಳು ಮತ್ತು 1,112 ಬೂತ್ ಗಳಲ್ಲಿ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಅವರ ದೇಶಭಕ್ತಿ, ತ್ಯಾಗ, ಬಲಿದಾನ, ಜೀವನಾದರ್ಶಗಳ ಬಗ್ಗೆ ವಿಚಾರ ಸಂಕಿರಣ ನಡೆಸುವ ಮೂಲಕ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ತಿಳಿಸಿದ್ದಾರೆ.
*’ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ*:
ಪಕ್ಷದ ಸೂಚನೆಯಂತೆ ಜೂ.23 ರಿಂದ ಜು.6ರ ವರೆಗೆ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ‘ಏಕ್ ಪೆಡ್ ಮಾ ಕೆ ನಾಮ್’ (ಒಂದು ಗಿಡ ತಾಯಿಯ ಹೆಸರಿನಲ್ಲಿ) ಅಭಿಯಾನದ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಪ್ರಧಾನಿ ನರೇಂದ್ರ ಮೋದಿ ಅವರು ಜೂ.5, 2024ರ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ನಲ್ಲಿ ಅಶ್ವತ್ಥ ಸಸಿಯನ್ನು ನೆಡುವ ಮೂಲಕ ‘ಏಕ್ ಪೆಡ್ ಮಾ ಕೆ ನಾಮ್’ (ತಾಯಿಯ ಹೆಸರಿನಲ್ಲಿ ಒಂದು ಸಸಿ) ಅಭಿಯಾನವನ್ನು ಪ್ರಾರಂಭಿಸಿದರು. ಪಕ್ಷದ ಕಾರ್ಯಕರ್ತರು ರಾಷ್ಟ್ರಮಟ್ಟದಿಂದ ಪೇಜ್ ಪ್ರಮುಖ್ ಮಟ್ಟದ ತನಕ ತಮ್ಮ ತಾಯಿಯೊಂದಿಗೆ ಅಥವಾ ತಾಯಿಯ ಚಿತ್ರದೊಂದಿಗೆ ನಿಂತು ಸಸಿ ನೆಡುವ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನವನ್ನು ರಾಷ್ಟ್ರವ್ಯಾಪಿಯಾಗಿ ಪ್ರಚಲಿತಗೊಳಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕರು ಸಾರ್ವಜನಿಕ ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಎನ್‌ಜಿಒಗಳೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಬೇಕೆಂಬ ಅಪೇಕ್ಷೆ ಇದೆ. ಪರಿಸರ ಸಂರಕ್ಷಣೆಗಾಗಿ ದೊಡ್ಡ ಮಟ್ಟದಲ್ಲಿ ಸಸಿಗಳನ್ನು ನೆಡುವ ಈ ಅಭಿಯಾನದಲ್ಲಿ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಹುಮ್ಮಸ್ಸಿನಿಂದ ತೊಡಗಿಸಿಕೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುಧ್ಧ ಕಾಪುಮಂಡಲದ ವತಿಯಿಂದ ಅಲೆವೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಸರಕಾರದ ಪೆಟ್ರೋಲ್ ಡೀಸೆಲ್, ಅಬಕಾರಿ, ಮುದ್ರಾಂಕ ಶುಲ್ಕ, ಬಸ್ ದರ, ವಿದ್ಯುತ್ ದರ , ಆಸ್ತಿ ನೋಂದಣಿ ತೆರಿಗೆ ಹೀಗೆ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ ಹಾಗೂ ವಾಲ್ಮೀಕಿ ನಿಗಮದ ಹಗರಣ ಮಾಡಿ ಲೂಟಿ ಮಾಡುತ್ತಿರುವ ರಾಜ್ಯ ಸರಕಾರವನ್ನು ಕಿತ್ತೊಗೆಯುವ ತನಕ ಪ್ರತಿಯೊಬ್ಬ ನಾಗರಿಕನೂ ಪ್ರತಿಭಟಿಸಬೇಕೆಂದು ಕರೆ ನೀಡಿದರು.
ಕಳೆದ ಬಾರಿ ಪೆಟ್ರೋಲ್ ಡಿಸೆಲ್ ಬೆಲೆ ಏರಿದೆ ಎಂದು ಸಿಧ್ಧರಾಮಯ್ಯರವರು ಸ್ಕೂಟರ್ ಒಂದರ ಅಣಕು ಶವಯಾತ್ರೆ ಮಾಡಿದ್ದು ಬೆಲೆ ಏರಿಕೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅವರೇ ಹೇಳಿಕೆ ನೀಡಿದ್ದರು. ಅದನ್ನು ಅವರಿಗೆ ನೆನಪಿಸಲು ಇಂದು ಅಲೆವೂರು ರಾಮಪುರದಲ್ಲಿ ಅಣಕು ಶವಯಾತ್ರೆ ನಡೆಸಿ ಅವರಿಗೆ ನೆನಪಿಸುವ ಕೆಲಸ ಮಾಡಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದರು
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಗಳಾದ ಗೋಪಾಲಕೃಷ್ಣ ರಾವ್ ಹಾಗೂ ಶರಣ್ ಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ರಾಜ್ಯ ಎಸ್ ಸಿ ಮೋರ್ಚ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್, ಜಿಲ್ಲಾ ಯುವಮೋರ್ಚ ಉಪಾಧ್ಯಕ್ಷರಾದ ಸಚಿನ್ ಸುವರ್ಣ, ಜಿಲ್ಲಾ ಬಿಜೆಪಿ ವಕ್ತಾರರಾದ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ದಿಲ್ಲೇಶ್ ಶೆಟ್ಟಿ, ಕಾಪು ಮಂಡಲ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಮಂಡಲ ಕಾರ್ಯದರ್ಶಿ ಪ್ರೇಮಾ ಕೊರಂಗ್ರಪಾಡಿ, ವಿವಿಧ ಪದಾಧಿಕಾರಿಗಳು, ಮೋರ್ಚ ಅಧ್ಯಕ್ಷರು ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರುಗಳು ಸದಸ್ಯರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲಾಯಿತು.