ಅಧಿಕಾರದ ಹಪಾಹಪಿಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಅತ್ತ ಗ್ಯಾರಂಟಿಗಳನ್ನೂ ಸರಿಯಾಗಿ ನಿಭಾಯಿಸದೆ, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೊಕ್ಕಸವನ್ನು ಬರಿದಾಗಿಸಿರುವ ಭ್ರಷ್ಟ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸಿ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ.
ಆಡಳಿತ ವೈಫಲ್ಯದಿಂದ ಕಂಗೆಟ್ಟಿರುವ ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯ ಅಂಚಿಗೆ ತಲುಪಿದ್ದು, ಪೆಟ್ರೋಲ್ ದರವನ್ನು ಪ್ರತೀ ಲೀಟರ್ ಗೆ 3 ರೂ. ಹಾಗೂ ಡೀಸೆಲ್ ದರವನ್ನು ಪ್ರತೀ ಲೀಟರ್ ಗೆ 3 ರೂ. 50 ಪೈಸೆಗೆ ಏರಿಸುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನತೆಯ ಜೇಬಿಗೇ ಪದೇ ಪದೇ ಕತ್ತರಿ ಹಾಕುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ.
ಅಕ್ಕಿ ಬೇಳೆ ಕಾಳು, ಹಾಲು, ವಿದ್ಯುತ್ ದರದ ಸಹಿತ ಆಸ್ತಿ ನೋoದಣಿ, ಸ್ಟ್ಯಾಂಪ್ ಪೇಪರ್ ಮುಂತಾದ ಮುಲಭೂತ ಆದ್ಯತೆಗಳ ಬೆಲೆ ಏರಿಕೆ ಜೊತೆಗೆ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಅದೇಶವನ್ನು ಹಿಂಪಡೆಯಬೇಕು. ತಪ್ಪಿದಲ್ಲಿ ರಾಜ್ಯದ ಜನತೆ ಮುoಬರಲಿರುವ ಜಿ.ಪಂ, ತಾ.ಪಂ. ಸಹಿತ ಎಲ್ಲ ಚುನಾವಣೆಗಳಲ್ಲಿ ಜನ ವಿರೋಧಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉದಯಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಪ್ರತೀ ವರ್ಷ ಕರ್ಕಾಟಕ ಅಮಾವಾಸ್ಯೆ ದಿನದಂದು ನಡೆಯುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯು ಈ ಬಾರಿ ಆಗಸ್ಟ್ 4 ರಂದು ಕುಂದಾಪುರದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಇದರ ಜೊತೆಗೆ ತೆರೆಯ ಮರೆಗೆ ಸರಿದಿರುವ ಕುಂದಾಪುರ ಭಾಗದ ಗ್ರಾಮ್ಯ ಕ್ರೀಡೆಗಳನ್ನು ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಕೂಡಾ ಜರುಗಿಸುವ ಯೋಜನೆಯನ್ನು ಹೊಂದಲಾಗಿದೆ.
ಈ ಎರಡೂ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಲು ಹಾಗೂ ಅದ್ದೂರಿಯ ತಯಾರಿಯನ್ನು ನಡೆಸುವ ಸಲುವಾಗಿ ಜೂನ್ 17, ಸೋಮವಾರ ಸಂಜೆ ಗಂಟೆ 5.00ಕ್ಕೆ ಕುಂದಾಪುರ ಎವಿಎನ್ ಬಿಲ್ಡಿಂಗ್ ನಲ್ಲಿರುವ (ಹೊಟೇಲ್ ಡಿಪ್ಲೋಮೆಟ ಸಮೀಪ) ‘ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್’ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಕುಂದಾಪ್ರ ಕನ್ನಡ ಭಾಷೆ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕುಂದಾಪ್ರ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.
ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಜಾಲಾ ಸತೀಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಓಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾರ್ಯದರ್ಶಿ ಆನಂದ ಸುವರ್ಣ, ಉಡುಪಿ ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆಸೀಫ್ ಕಟಪಾಡಿ, ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ವೆಂಕಟರಮಣ ಕಿದಿಯೂರು, ನೀತಾ ಪ್ರಭು, ಸರೋಜಾ ಶೆಣೈ, ಪೂರ್ಣಿಮಾ ಶೆಟ್ಟಿ, ಪ್ರೀತಿ, ದೀಪಾ ಪೈ, ಸುಗುಣಾ ನಾಯ್ಕ್, ಸಂತೋಷ್ ಆಚಾರ್ಯ, ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಹೇಮನಾಥ್ ಹೆಗ್ಡೆ, ದಿವಾಕರ್ ಶೆಟ್ಟಿ, ನಾಗರಾಜ್ ಕರ್ಕೇರ, ರಾಜೇಶ್ ಸುವರ್ಣ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.
ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಜಾಲಾ ಸತೀಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಓಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾರ್ಯದರ್ಶಿ ಆನಂದ ಸುವರ್ಣ, ಉಡುಪಿ ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆಸೀಫ್ ಕಟಪಾಡಿ, ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ವೆಂಕಟರಮಣ ಕಿದಿಯೂರು, ನೀತಾ ಪ್ರಭು, ಸರೋಜಾ ಶೆಣೈ, ಪೂರ್ಣಿಮಾ ಶೆಟ್ಟಿ, ಪ್ರೀತಿ, ದೀಪಾ ಪೈ, ಸುಗುಣಾ ನಾಯ್ಕ್, ಸಂತೋಷ್ ಆಚಾರ್ಯ, ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಹೇಮನಾಥ್ ಹೆಗ್ಡೆ, ದಿವಾಕರ್ ಶೆಟ್ಟಿ, ನಾಗರಾಜ್ ಕರ್ಕೇರ, ರಾಜೇಶ್ ಸುವರ್ಣ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಅತ್ಯದ್ಭುತ ಜಯವನ್ನು ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿಗೆ ಶ್ರಮಿಸಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮತದಾರರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದೃಢ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಶ್ರಮದಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಾಧ್ಯಮ ವರದಿಗಾರರನ್ನುದ್ದೇಶಿಸಿ ಮಾತನಾಡಿದರು.
ಯಾವುದೇ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ, ಪ್ರಾಬಲ್ಯವನ್ನು ಹೊಂದಿದ್ದರೂ ಕೂಡ ಪಕ್ಷವನ್ನು ಮೀರಿ ನಿಲ್ಲಲು ಸಾಧ್ಯವಿಲ್ಲ ಎಂಬ ಸ್ಪಷ್ಟವಾದ ಒಂದು ಸಂದೇಶವನ್ನು ಈ ಚುನಾವಣೆ ಕೊಟ್ಟಿದೆ. ನೈರುತ್ಯ ಪದವೀಧರ ಕ್ಷೇತ್ರದ ಕಣದಲ್ಲಿ ಸ್ಥಳೀಯರಾದ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆ ಮಾಡಿದ್ದರು. ಪ್ರಾರಂಭದಲ್ಲಿ ಸಣ್ಣ ಮಟ್ಟಿನ ಆತಂಕ ಕೂಡಾ ಇತ್ತು. ಆದರೆ ಫಲಿತಾಂಶ ಬಂದ ಮೇಲೆ ಯಾವ ಬಂಡಾಯಗಳು ಕೂಡಾ ಇಲ್ಲಿ ನಿಲ್ಲುವುದಿಲ್ಲ ಎಂಬುದು ಸ್ಪಷ್ಟಗೊಂಡಿದೆ. ಪಕ್ಷ ಸಂಘಟನೆ ಮತ್ತು ನಿಷ್ಠಾವಂತ ಕಾರ್ಯಕರ್ತರು ಸದೃಢವಾಗಿರುವುದರಿಂದ ಯಾವುದೇ ಕಠಿಣ ಚುನಾವಣೆಯನ್ನು ಕೂಡ ನಾವು ನಿರಾಯಾಸವಾಗಿ ಗೆಲ್ಲುತ್ತೇವೆ ಎಂಬ ಸಂದೇಶ ಹೋಗಿದೆ. ಆದುದರಿಂದ ಅವಕಾಶ ಸಿಗಲಿಲ್ಲ ಎಂದೋ ಅಥವಾ ಯಾವುದೇ ಕಾರಣಕ್ಕೆ ಬಂಡಾಯ ಏಳುತ್ತೇವೆ ಎನ್ನುವ ಮನಸ್ಥಿತಿ ಹೊಂದಿದವರಿಗೆ ಪ್ರಸಕ್ತ ಚುನಾವಣಾ ಫಲಿತಾಂಶ ಒಂದು ಒಳ್ಳೆಯ ಸಂದೇಶ ನೀಡಿದೆ. ಹಾಗಾಗಿ ಇನ್ನು ಮುಂದೆ ಯಾರೂ ಕೂಡಾ ಪಕ್ಷದ ನಿಲುವಿಗೆ ವಿರುದ್ಧವಾಗಿ ತಮ್ಮ ನಡೆಯನ್ನು ತೋರಿಸಬಾರದು ಎನ್ನುವ ವಿನಂತಿಯನ್ನು ಮಾಡುತ್ತಾ, ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅದ್ಭುತ ಗೆಲುವನ್ನು ಸಾಧಿಸಿರುವ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಪ್ರಮುಖರಾದ ಶೈಲೇಂದ್ರ ಶೆಟ್ಟಿ, ಸುಭಾಷಿತ್ ಕುಮಾರ್, ಚಿನ್ಮಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಅವರು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾನು ಮುಂದಿನ 3 ವರ್ಷದ ಅವಧಿಗೆ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದಾಗ ಇದು ಚುನಾವಣೆ ಪರ್ವ ಎಂದಿದ್ದೆ. ಈಗಾಗಲೇ ನಡೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಅಂತರದಿಂದ ಬಿಜೆಪಿ ಅದ್ಭುತ ಗೆಲುವು ಸಾಧಿಸಿದೆ. ಗೆಲುವಿನ ಅಂತರ ಸ್ವತಃ ಅಭ್ಯರ್ಥಿಯನ್ನೇ ಅಚ್ಚರಿಗೊಳಿಸಿದೆ. ಇತ್ತೀಚೆಗೆ ನಡೆದ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಎನ್.ಡಿ.ಎ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸುವ ಮೂಲಕ ನಮ್ಮದು ಗೆಲುವಿನ ಪರ್ವವಾಗಿ ಮಾರ್ಪಟ್ಟಿದೆ. ಅಭ್ಯರ್ಥಿಯ ಆಯ್ಕೆ ಸಂದರ್ಭದಲ್ಲಿ ಆಸೆ, ಆಕಾಂಕ್ಷೆಗಳು ಸಹಜ. ಆದರೆ, ಪಕ್ಷ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಅವರನ್ನು ಬೆಂಬಲಿಸುವುದು ಪಕ್ಷ ನಿಷ್ಠೆ ಮತ್ತು ಧರ್ಮ ಎಂದೆನಿಸುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಂಡ ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಪ್ರಚಂಡ ಗೆಲುವು ಸಾಧಿಸಿದ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯವರೇ ಆದ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆಗಿಳಿದಾಗ ಸ್ವಲ್ಪ ಆತಂಕವಿತ್ತು. ಆದರೆ, ಭಟ್ ಅವರ ಅಭಿಮಾನಿಗಳಾಗಿದ್ದರೂ ಕಾರ್ಯಕರ್ತರು ಪಕ್ಷ ಬೆಂಬಲಿತ ಅಭ್ಯರ್ಥಿಯನ್ನೇ ಬೆಂಬಲಿಸಿದ್ದಾರೆ. ಜೊತೆಗೆ ಮೈತ್ರಿ ಅಭ್ಯರ್ಥಿಯ ಗೆಲುವಿಗೂ ಕಾರಣರಾಗಿದ್ದಾರೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಚಿಂತನೆಯ ಪಕ್ಷದ ತತ್ವಕ್ಕೆ ವಿರೋಧವಾಗಿ ಪಕ್ಷ ತ್ಯಜಿಸಿದವರಿಗೆ ಏನಾಗುತ್ತದೆ ಎಂಬುದು ಈ ಬಾರಿಯ ಚುನಾವಣೆ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಿಟ್ಟು ಹೋಗುವವರಿಗೆ ಇದು ಎಚ್ಚರಿಕೆಯ ಗಂಟೆ ಎಂದರು.
*ಕಾರ್ಯಕರ್ತರ ಗೆಲುವು : ಕೆ. ಉದಯ ಕುಮಾರ್ ಶೆಟ್ಟಿ*
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ಈ ಬಾರಿಯ ಗೆಲುವು ಪಕ್ಷದ ಕಾರ್ಯಕರ್ತರಿಗೆ ಸಂದ ಜಯ ಎಂದು ಬಣ್ಣಿಸಿದರು.
ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ 1988ರಿಂದ ಸತತವಾಗಿ ಗೆಲ್ಲುತ್ತಾ ಬಂದಿದೆ. ಎಷ್ಟೇ ಪ್ರಭಾವಿಗಳಾದರೂ ಗೆಲುವಿಗೆ ಪಕ್ಷದ ಆಸರೆ ಅತ್ಯಗತ್ಯ ಎಂಬುದು ಈ ಚುನಾವಣೆಯಲ್ಲಿ ಸಾಬೀತಾಗಿದೆ. ಪಕ್ಷ ಎಲ್ಲವನ್ನೂ ಗಮನಿಸುತ್ತದೆ. ಬಿಜೆಪಿ ಕಾರ್ಯಕರ್ತರು ನಿಶ್ಚಯ ಮಾಡಿದ ಮೇಲೆ ಗೆಲುವು ಶತಸಿದ್ಧ. ಬಿಜೆಪಿ ಹಾಗೂ ಎನ್.ಡಿ.ಎ ಸಮರ್ಥ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿರುವ ಪ್ರಜ್ಞಾವಂತ ಪದವೀಧರ ಮತ್ತು ಶಿಕ್ಷಕ ಮತದಾರರು ಹಾಗೂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಸಂಘಟಿತ ಪ್ರಯತ್ನದ ಮೂಲಕ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಅವಿರತ ಶ್ರಮ ವಹಿಸಿರುವ ಪಕ್ಷದ ವರಿಷ್ಠರು, ಜಿಲ್ಲಾ ನಾಯಕರು, ಶಾಸಕರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ನಿಷ್ಠಾವಂತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಉದಯ ಕುಮಾರ್ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಒಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ಪಕ್ಷದ ಪ್ರಮುಖರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಜೇಶ್ ಕಾವೇರಿ, ದೇವಿಪ್ರಸಾದ್ ಶೆಟ್ಟಿ, ಶೈಲೇಂದ್ರ ಶೆಟ್ಟಿ, ಆಸಿಫ್ ಕಟಪಾಡಿ, ದಾವೂದ್ ಅಬೂಬಕರ್, ಅಜಿತ್ ಕುಮಾರ್, ಸುರೇಶ್ ಮಲ್ಪೆ, ರುಡಾಲ್ಫ್ ಡಿಸೋಜ, ಡೇನಿಸ್ ಮಾಸ್ಕರೇನಸ್, ರಾಜೇಂದ್ರ ಪಂದುಬೆಟ್ಟು, ಮಂಜುನಾಥ್ ಮಣಿಪಾಲ್, ಆನಂದ ಸುವರ್ಣ, ಗುರುಪ್ರಸಾದ್, ಜಯಕರ್, ನಿತಿನ್ ಪೈ, ಸುಭಾಷಿತ್ ಕುಮಾರ್, ಚಿನ್ಮಯಮೂರ್ತಿ, ದಯಾಶಿನಿ, ಪೂರ್ಣಿಮಾ ಶೆಟ್ಟಿ, ಭಾರತಿ ಚಂದ್ರಶೇಖರ್, ಸುಧಾ ಪೈ, ಸರೋಜಾ ಶೆಣೈ, ಸುಜಾಲ ಸತೀಶ್, ಶಾಂತಿ ಮನೋಜ್, ಸುಗುಣಾ ನಾಯ್ಕ್, ಮಂಜುಳಾ ಪ್ರಸಾದ್, ಗ್ರೇಟ್ಟಾ ಮಾಸ್ಕರೇನಸ್, ದೀಪಾ ಪೈ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಅವರ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ, ದ.ಕ. ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಇನ್ನೊಮ್ಮೆ ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎನ್ನುವುದು ಈ ಗೆಲುವಿನಿಂದ ಸಾಬೀತಾಗಿದೆ ಎಂದು ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನ ಪಾರ್ಟಿ ಅಗಾಧವಾದ ಬಹುಮತದಿಂದ ಗೆಲ್ಲುವ ಅವಕಾಶವನ್ನು ಮಾಡಿಕೊಟ್ಟಿದೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ ಮಾಧ್ಯಮ ವರದಿಗಾರರನ್ನುದ್ದೇಶಿಸಿ ಮಾತನಾಡಿದರು.
ನಾನು ಚುನಾವಣೆಗೆ ನಿಂತಾಗ ಉಡುಪಿ, ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಸುಮಾರು 1,900 ಮತಗಟ್ಟೆಯಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಆವಿಶ್ರಾಂತವಾಗಿ ದುಡಿದು, ಎರಡೂ ಜಿಲ್ಲೆಯ ಜಿಲ್ಲಾಧ್ಯಕ್ಷರ ತಂಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಐದು ಮಂದಿ ಶಾಸಕರು ಚಿಕ್ಕಮಗಳೂರು ಜಿಲ್ಲೆಯ ಪಕ್ಷದ ಮುಖಂಡರು ಎಲ್ಲರೂ ಒಟ್ಟಾಗಿ ಒಂದಾಗಿ ಪರಿಶ್ರಮದಿಂದ ಕೆಲಸ ಮಾಡಿದುದರಿಂದ, ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಹೆಚ್.ಡಿ. ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಯವರಂತಹ ಗಣ್ಯರು, ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರು ಎಲ್ಲರೂ ಒಟ್ಟಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ನಿರೀಕ್ಷೆಗೂ ಮೀರಿ 2,59,175 ಮತಗಳ ಅಂತರದಿಂದ ಬಹು ದೊಡ್ಡ ಗೆಲುವನ್ನು ತಂದು ಕೊಟ್ಟ ನನ್ನ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಎಲ್ಲ ಮುಖಂಡರಿಗೆ, ನಮ್ಮೆಲ್ಲಾ ಕಾರ್ಯಕರ್ತರಿಗೆ, ಆಹರ್ನಿಶಿ ದುಡಿದ ಎಲ್ಲಾ ಬಂಧುಗಳಿಗೆ ಮತ್ತು ನನ್ನ ಮೇಲೆ ವಿಶ್ವಾಸವಿರಿಸಿ, ನನ್ನ ಪಕ್ಷದ ಮೇಲೆ ವಿಶ್ವಾಸವಿರಿಸಿ ನನ್ನ ಮುಖಂಡರಾದ ನರೇಂದ್ರ ಮೋದಿಯವರ ದೇಶ ಕಟ್ಟುವಂತಹ ಕೆಲಸಕ್ಕೆ ಬೆಂಬಲ ಕೊಟ್ಟು ಮತ ನೀಡಿದಂತಹ ಲಕ್ಷಾಂತರ ಮತದಾರರಿಗೆ ಭಾವುಕತೆಯಿಂದ ಧನ್ಯವಾದಗಳನ್ನು ಸಮರ್ಪಣೆ ಮಾಡುತ್ತಿದ್ದೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರೈತ ಮೋರ್ಚಾ ನಿಕಟಪೂರ್ವ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ ಮತ್ತಿತರರು ಉಸ್ಥಿತರಿದ್ದರು.
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.
ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹರಿಮಕ್ಕಿ ರತ್ನಾಕರ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ವಿಜಯ ಕುಮಾರ್ ಉದ್ಯಾವರ, ಪ್ರಥ್ವಿರಾಜ್ ಶೆಟ್ಟಿ, ಸಶಾಂಕ್ ಶಿವತ್ತಾಯ, ರಾಘವೇಂದ್ರ ಉಪ್ಪೂರು, ದಿಲೇಶ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಿ. ಶೆಟ್ಟಿ, ಪವಿತ್ರಾ ಶೆಟ್ಟಿ, ಭಾರತೀ ಚಂದ್ರಶೇಖರ್, ವೀಣಾ ಎಸ್. ಶೆಟ್ಟಿ, ಸಚಿನ್ ಪಿತ್ರೋಡಿ, ಸತೀಶ್ ಪೂಜಾರಿ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ, ರಘುನಾಥ್, ಸುಭಾಷಿತ್, ವಿಜಯಲಕ್ಷ್ಮಿ, ಮಂಜುಳಾ ಪ್ರಸಾದ್, ಪ್ರೀತಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಮತದಾನಗೈದಿರುವ ಪದವೀಧರ ಮತ್ತು ಶಿಕ್ಷಕ ಮತದಾರ ಬಾಂಧವರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶೃದ್ಧೆಯಿಂದ ಶ್ರಮ ವಹಿಸಿ ತೊಡಗಿಸಿಕೊಂಡಿರುವ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗದ ಜಿಲ್ಲಾಧ್ಯಕ್ಷರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಬದ್ಧತೆಯಿಂದ ಶ್ರಮಿಸೋಣ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.