ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ





ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಅನನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸಕ್ತ ಸಕ್ಷಮ ಜಿಲ್ಲಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಾಂಡುರಂಗ ಶಾನುಭಾಗ್ (65 ವರ್ಷ) ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತತ್ವ ಸಿದ್ಧಾಂತಗಳ ಬದ್ಧತೆಯಿಂದ ಕಾರ್ಯಕರ್ತರಿಗೆ ಮಾದರಿಯಾಗಿದ್ದ ಪಾಂಡುರಂಗ ಶಾನುಭಾಗ್ ರವರು ಉಡುಪಿಯ ಸಿಂಡಿಕೇಟ್ ಬ್ಯಾಂಕಿನ ಕ್ಯಾಥೋಲಿಕ್ ಸೆಂಟರ್ ಶಾಖೆಯಲ್ಲಿ ಸಹಾಯಕ ಪ್ರಭಂಧಕರಾಗಿ 2018ರಲ್ಲಿ ನಿವೃತ್ತಿ ಹೊಂದಿದ್ದರು. ಸಂಘದ ಅನೇಕ ಕಾರ್ಯಕ್ರಮಗಳಲ್ಲಿ ಹಾಗೂ ಶಿಬಿರಗಳಲ್ಲಿ ಪರಿಣಾಮಕಾರಿ ವಿಷಯ ಮಂಡನೆಯೊಂದಿಗೆ ಮಾರ್ಗದರ್ಶನ ನೀಡುತ್ತಿದ್ದ ಶಾನುಭಾಗ್ ರವರು ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅಯೋಧ್ಯೆಯ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಸಂದರ್ಭದಲ್ಲಿ ನಡೆದ ಸ್ಥಳೀಯ ಶ್ರೀ ರಾಮೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಶ್ರೀ ರಾಮ ಜನ್ಮ ಭೂಮಿ ಹೋರಾಟದ ಚಿತ್ರಣವನ್ನು ನೀಡಿದ್ದ ಶಾನುಭಾಗ್ ರವರು ಇಂದು ಅಯೋಧ್ಯೆಯಲ್ಲಿ ಬಾಲ ರಾಮನ ದರ್ಶನ ಪಡೆದ ಬಳಿಕ ಇಹಲೋಕವನ್ನು ತ್ಯಜಿಸಿರುವುದು ವಿಷಾಧನೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು




ಉಡುಪಿ: ಭಾರತೀಯ ಜನತಾ ಪಾರ್ಟಿ ದೇಶದಾದ್ಯoತ ಹಮ್ಮಿಕೊಂಡಿರುವ ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನದಡಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸುಮಾರು 1,336 ಮಂದಿ ರಾಮ ಭಕ್ತರು ಶ್ರೀ ರಾಮ ದರ್ಶನ ಭಾಗ್ಯ ಪಡೆಯಲು ಸಜ್ಜಾಗಿದ್ದಾರೆ. ಈ ಅಭಿಯಾನದಡಿ ಪ್ರಥಮ ಹಂತದ ಕೊನೆಯ ತಂಡದ ಪ್ರಯಾಣ ಇದಾಗಿದೆ.

ಮಂಗಳೂರಿನಿಂದ ಅಯೋಧ್ಯೆಗೆ ತೆರಳಲಿರುವ ವಿಶೇಷ ರೈಲು ‘ಆಸ್ತಾ’ದಲ್ಲಿ ನಾಳೆ ಮಾ.6ರ ಸಂಜೆ ಗಂಟೆ 6.00ಕ್ಕೆ ಅಯೋಧ್ಯೆಗೆ ಪ್ರಯಾಣ ಬೆಳೆಸಲಿರುವ ಉಡುಪಿ ಜಿಲ್ಲೆಯ ಸುಮಾರು 400 ಮoದಿ ರಾಮ ಭಕ್ತರನ್ನು ಪಕ್ಷದ ಮುಖಂಡರು, ಶಾಸಕರುಗಳು ಮತ್ತು ಕಾರ್ಯಕರ್ತರು ನಾಳೆ ಸಂಜೆ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಬೀಳ್ಕೊಡಲ್ಲಿದ್ದಾರೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ದರ್ಶನ ಅಭಿಯಾನದ ಮಂಗಳೂರು ವಿಭಾಗ ಪ್ರಭಾರಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ





ಉಡುಪಿ: ಫೆ.27ರಂದು ರಾಜ್ಯಸಭೆ ಚುನಾವಣೆಯ ಫಲಿತಾಂಶ ಘೋಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಜೀರ್ ಹುಸೇನ್ ಗೆಲುವನ್ನು ಸಂಭ್ರಮಿಸುವ ಭರದಲ್ಲಿ ಅವರ ಬೆಂಬಲಿಗರೆನ್ನಲಾದ ವ್ಯಕ್ತಿಗಳು ವಿಧಾನ ಸೌಧದ ಆವರಣದೊಳಗೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆ ಕೂಗಿದ್ದರೂ, ಕಾಂಗ್ರೆಸ್ ಮುಖಂಡರು ಅಂತಹ ಭಯೋತ್ಪಾದಕರ ಪರವಾಗಿ ನಿಂತು ಘಟನೆಯನ್ನು ಅಲ್ಲಗಳೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ದಾಖಲಿಸಿದ ದೂರಿನನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿಯನ್ನಾಧರಿಸಿ ಪೋಲೀಸರು ಮೂರು ಮಂದಿ ದೇಶದ್ರೋಹಿಗಳನ್ನು ಬಂಧಿಸಿರುವ ಪ್ರಕ್ರಿಯೆಯಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಈ ಹಿಂದೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಭಯೋತ್ಪಾದಕನ ಜೊತೆಗೆ ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದ ಆರೋಪಿಗಳನ್ನು ‘ದೇ ಆರ್ ಮೈ ಬ್ರದರ್ಸ್’ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ದೇಶ ವಿರೋಧಿ ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರನ್ನು ಬೆಂಬಲಿಸಿ, ಅಂತಹ ಘೋಷಣೆ ನಡೆದಿಲ್ಲ ಎಂದು ಘಟನೆಯನ್ನು ಸಮರ್ಥಿಸಿಕೊಂಡಿರುವುದು ದೇಶದ್ರೋಹಕ್ಕೆ ಸಮನಾದ ಕುಕೃತ್ಯವಾಗಿದೆ. ಇದೀಗ ಕಾನೂನಾತ್ಮಕ ಪೋಲಿಸ್ ತನಿಖೆಯ ಮೂಲಕ ಮೂರು ಮಂದಿ ಭಯೋತ್ಪಾದಕರ ಬಂಧನವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಚಿವರುಗಳ ಪ್ರತಿಕ್ರಿಯೆ ಏನು ಎಂಬುದು ಕುತೂಹಲಕಾರಿಯಾಗಿದೆ. ಈ ನೆಲದ ಕಾನೂನನ್ನು ದಿಕ್ಕರಿಸಿ, ಪ್ರಕರಣದ ತನಿಖೆಗೂ ಮುನ್ನ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿರುವ ಇಂತಹ ದೇಶ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ ಮುಖಂಡರು ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಸಬ್ ಕೇ ಸಾಥ್ ಸಬ್ ಕೇ ವಿಕಾಸ್, ಸಬ್ ಕೇ ವಿಶ್ವಾಸ್, ಸಬ್ ಕೇ ಪ್ರಯಾಸ್’ ತತ್ವದಡಿ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗೆ ಅಹರ್ನಿಶಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಆಡಳಿತ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿದೆ. ರಾಜ್ಯದಲ್ಲಿ ಕೇವಲ ಅಧಿಕಾರಕ್ಕೇರುವ ಸಲುವಾಗಿ ಒಂದೇ ಕೋಮಿನ ಅತಿಯಾದ ಓಲೈಕೆ ಕಾಂಗ್ರೆಸ್ ಪಕ್ಷಕ್ಕೆ ಮುoದಿನ ದಿನಗಳಲ್ಲಿ  ಮುಳುವಾಗಲಿರುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ದೇಶ ಹಿತ ಮತ್ತು ರಾಜ್ಯದ ಅಭಿವೃದ್ಧಿಯನ್ನು ಮರೆತು ಒಂದು ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮಾತ್ರ ದುರ್ಬಳಕೆ ಮಾಡುತ್ತಿರುವ ದೇಶ ವಿರೋಧಿ ಕಾಂಗ್ರೆಸ್ಸಿಗೆ ರಾಜ್ಯದ ಜನತೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ





ಉಡುಪಿ: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ  ಕ್ರಮ ಜರಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರಕಾರ ಬೊಕ್ಕಸವನ್ನು ಬರಿದಾಗಿಸಿ ಆಡಳಿತ ವ್ಯವಸ್ಥೆಯಲ್ಲಿ ವೈಫಲ್ಯ ಕಂಡ ಪರಿಣಾಮವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿ, ರಾಷ್ಟ್ರ ವಿರೋಧಿ ಮಾನಸಿಕತೆ ಹಾಗೂ ಆಡಳಿತ ವೈಫಲ್ಯಗಳ ವಿಸ್ತೃತ ಮಾಹಿತಿ ನೀಡಿದರು.

● ಇಡೀ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಬರಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಅತ್ಮಹತ್ಯೆ ಮಾಡಿಕೊಂಡಿದ್ದು, ಜನರು ಗುಳೆ ಹೋಗುತ್ತಿದ್ದಾರೆ. ಆದರೆ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ.
● ರಾಜ್ಯ ಸರಕಾರ ಕೊಡುವ ಪರಿಹಾರ ಮೊತ್ತದ ಆಸೆಗಾಗಿ ರೈತರ ಆತ್ಮಹತ್ಯೆಗಳಾಗುತ್ತಿವೆ ಎಂದು ರಾಜ್ಯದ ಸಚಿವರಾದ ಶಿವನಾಂದ ಪಾಟೀಲ್ ಹೇಳುತ್ತಾರೆ. ಇದು ‘ರೈತವಿರೋಧಿ’ ಹೇಳಿಕೆಯಲ್ಲವೇ?
● ಕಾವೇರಿ ನೀರನ್ನು ಹರಿಯಲು ಬಿಟ್ಟು ಕಾವೇರಿ ಕೊಳ್ಳದ ರೈತರ ಬದುಕನ್ನು ದುರ್ಬರಗೊಳಿಸಿದ್ದು ಒಂದೆಡೆಯಾದರೆ ಕಾವೇರಿಯನ್ನೇ ನಂಬಿಕೊಂಡಿರುವ ಮೈಸೂರು ಬೆಂಗಳೂರಿನ ಜನರನ್ನು ನೀರಿಲ್ಲದೆ ಒದ್ದಾಡುವಂತೆ ಮಾಡಿದೆ.
● ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ ಸರ್ಕಾರ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಜತೆಯಾಗಿ ನೀರಿನ ದರ ದುಪ್ಪಟ್ಟು ಮಾಡಿದೆ. ಕೈಗಾರಿಕಾ ಪ್ರದೇಶಗಳಿಗೆ ನೀರನ್ನು ಸರಬರಾಜು ಮಾಡದೇ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ ಜನರ ಬದುಕನ್ನು ನರಕ ಮಾಡುತ್ತಿದೆ.
● ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ಸಂಬಂಧಿಸಿದ (ಎಸ್‌ಸಿಎಸ್‌ಪಿ, ಎಸ್‌ಟಿಪಿ) 11 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಬೇರೆ ಉದ್ದೇಶಕ್ಕೆ ಹಾಗೂ ಗ್ಯಾರಂಟಿಗಳಿಗೆ ಬಳಸಿಕೊಂಡಿದೆ. ದಲಿತರು, ಶೋಷಿತ ವರ್ಗದವರ ಕುರಿತು ಸಿದ್ದರಾಮಯ್ಯನವರ ಮೊಸಳೆ ಕಣ್ಣೀರಿಗೆ ಇದು ಸಾಕ್ಷಿ. ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರೆದಿದೆ. ಇದು ದಲಿತ ವಿರೋಧಿ ಸರ್ಕಾರ.
● ಸಂವಿಧಾನ ಕರ್ತೃ ಡಾ! ಬಾಬಾಸಾಹೇಬ್ ಅಂಬೇಡ್ಕರ್ ಅವರು ಬದುಕಿದ್ದಾಗ, ಮಾತ್ರವಲ್ಲದೆ ಮೃತರಾದ ಬಳಿಕವೂ ಅವರಿಗೆ ನಿರಂತರ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಪಕ್ಷ. ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದು ಕಾಂಗ್ರೆಸ್ ಪಕ್ಷ.
● ಬಿಜೆಪಿ ನೇತೃತ್ವದ ಕಾಂಗ್ರೆಸ್ ಸರಕಾರವು ಡಾ! ಅಂಬೇಡ್ಕರ್ ಅವರ ಜೀವನದ ಪ್ರಮುಖ ಐದು ಸ್ಥಳಗಳನ್ನು ಗುರುತಿಸಿ ಪಂಚ ಕ್ಷೇತ್ರಗಳ ಅಭಿವೃದ್ಧಿ ಮಾಡಿ ಗೌರವಿಸಿದೆ. 
● ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರವೇ ತಾಂಡವವಾಡುತ್ತಿದೆ. ಸಿಕ್ಕಲ್ಲೆಲ್ಲ ಲಂಚಕ್ಕೆ ಕಾಡು ಕೂತಿದೆ ಕಾಂಗ್ರೆಸ್. ಅಧಿಕಾರಿಗಳಿಗೆ ಇಂತಿಷ್ಟು ಎಂದು ಕಲೆಕ್ಷನ್ ಟಾಸ್ಕ್ ನೀಡಲಾಗಿದೆ. ಕಾಂಗ್ರೆಸ್ಸಿಗರ ದೆಹಲಿ ತಿಜೋರಿ ತುಂಬಲು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ.
● ಸರ್ಕಾರದ ಸಚಿವರು, ಶಾಸಕರುಗಳು ರಾಜ್ಯದ ಪ್ರವಾಸ ಮಾಡುತ್ತಿಲ್ಲ. ಗ್ಯಾರಂಟಿಗಳನ್ನೂ ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ. ಕರ್ನಾಟಕ ರಾಜ್ಯದಲ್ಲಿ ಒಂದೇ ಒಂದು ಕಡೆ ಚರಂಡಿ, ರಸ್ತೆ ಯಾವುದೇ ಅಭಿವೃದ್ಧಿ ಕೆಲಗಳು ಆಗಿಲ್ಲ. ಇದು ಶೂನ್ಯ ಅಭಿವೃದ್ಧಿ ಸರ್ಕಾರ. ರಾಜ್ಯದ ಖಜಾನೆ ಖಾಲಿಯಾಗಿದೆ.
● ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದಕ್ಕೆ ವಿಧಾನಸೌಧದ ಆವರಣದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಮೊಲಗಿದ್ದು ಜ್ವಲoತ ಸಾಕ್ಷಿ. ಇವೆಲ್ಲವೂ ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಫಲ. ನಾಸಿರ್ ರಾಜ್ಯಸಭೆಗೆ ಆಯ್ಕೆಯಾದ ಕ್ಷಣವೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಿದ್ದು ಅತ್ಯಂತ ಕೆಟ್ಟ ಬೆಳವಣಿಗೆ.
● ಕಾಂಗ್ರೆಸ್ ಎಂದೆಂದಿಗೂ ದೇಶದ್ರೋಹಿಗಳ ಪರವಾಗಿಯೇ ಇದೆ. ಕಾಂಗ್ರೆಸ್ಸಿಗರದ್ದು ಜಿನ್ನಾ ಮನಸ್ಥಿತಿ.
● ಕೇಂದ್ರ ಸರ್ಕಾರವು ಹಿಂದಿನ ಯುಪಿಎ ಸರಕಾರಕ್ಕೆ ಹೋಲಿಸಿದರೆ ಶೇ. 200ಕ್ಕೂ ಹೆಚ್ಚು ಮೊತ್ತವನ್ನು ರಾಜ್ಯಕ್ಕೆ ಕೊಟ್ಟಿದ್ದರೂ ಕೇಂದ್ರದತ್ತ ಬೊಟ್ಟು ಮಾಡುವುದು, ಕೇಂದ್ರದ ವಿರುದ್ಧ ಮಾತನಾಡುವುದನ್ನು ಸಿದ್ಧರಾಮಯ್ಯನವರು ಮುಂದುವರೆಸಿದ್ದಾರೆ. ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ. 
● ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿಯ ಒಂದು ಭಾಗ ಕೂಡ ಕಾಂಗ್ರೆಸ್ ತನ್ನ ಎಪ್ಪತ್ತು ವರ್ಷಗಳ ಆಡಳಿತದಲ್ಲಿ ಮಾಡಿಲ್ಲ.
● ಕಿಸಾನ್ ಸಮ್ಮಾನ್ ಯೋಜನೆಯಡಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು 6 ಸಾವಿರ ನೀಡುತ್ತಿದೆ. ನಮ್ಮ ರಾಜ್ಯದಲ್ಲಿ ಅಂದಿನ ಯಡಿಯೂರಪ್ಪ ಅವರ ಸರಕಾರ ಆರಂಭಿಸಿದ್ದ ಹೆಚ್ಚುವರಿ 4 ಸಾವಿರ ನೀಡುವ ವ್ಯವಸ್ಥೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿಲ್ಲಿಸಿದೆ. 
● ಮನೆ ಮನೆಗೆ ಶುದ್ಧ ಕುಡಿಯುವ ನೀರು (ಜಲ್ ಜೀವನ್), ಆಯುಷ್ಮಾನ್ ಕಾರ್ಡ್, ಜನ್‌ಧನ್ ಯೋಜನೆ, 10 ಕೋಟಿಗೂ ಹೆಚ್ಚು ಶೌಚಾಲಯಗಳ ನಿರ್ಮಾಣ – ಇವೆಲ್ಲವೂ ಮೋದಿಯವರ ಸರ್ಕಾರದ ಮಹತ್ವದ ಸಾಧನೆಗಳು. ಇತ್ತೀಚಿಗೆ ಪ್ರಧಾನಿ ಮೋದಿಯವರು, ದೇಶದಾದ್ಯಂತ ಒಟ್ಟು 41,000 ಕೋಟಿ ರೂ. ವೆಚ್ಚದ ಎರಡು ಸಾವಿರಕ್ಕೂ ಅಧಿಕ ರೈಲ್ವೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಕರ್ನಾಟಕದ 31 ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಪರಿವರ್ತಿಸಲು ಚಾಲನೆ ನೀಡಿದ್ದಾರೆ. ರೈಲ್ವೆ ಅಭಿವೃದ್ಧಿಯಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೆ.
● ಭಾರತ್ ಬ್ರಾಂಡ್ ಅಡಿಯಲ್ಲಿ ಕೇoದ್ರ ಸರಕಾರ ಭಾರತ್ ಅಕ್ಕಿಯನ್ನು ಕೆಜಿಗೆ 29 ರೂ.ಗಳಂತೆ ದೇಶಾದ್ಯಂತ ಬಡವರಿಗೆ ನೀಡುತ್ತಿದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಮೂಲಕ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಈಗ ಅತೀ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.
● ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನಿರಾಳ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನಿರಂತರ ಪ್ರಯತ್ನ ನಡೆಸುತ್ತಿದ್ದು, ಕೆ.ಜಿಗೆ ಕೇವಲ 27.50 ರೂ. ದರದಲ್ಲಿ ಗೋಧಿ ಹಿಟ್ಟನ್ನು ವಿತರಿಸುತ್ತಿದೆ ಕೇಂದ್ರ ಸರ್ಕಾರ.
● ‘ಭಾರತ್ ದಾಲ್’ ಎಂಬ ಬ್ರ್ಯಾಂಡ್ ಹೆಸರಿನಲ್ಲಿ ಸಬ್ಸಿಡಿ ದರದಲ್ಲಿ ಕಡಲೆಬೇಳೆ ಮಾರಾಟವನ್ನು ಕೂಡ ಪ್ರಾರಂಭಿಸಿದೆ.
● ‘ಭಾರತ್’ ಲೇಬಲ್ ಅಡಿಯಲ್ಲಿ ಮಾರಾಟವಾದ ಈ ಎಲ್ಲ ವಸ್ತುಗಳೂ ಶೀಘ್ರವಾಗಿ ಗ್ರಾಹಕರಲ್ಲಿ ಜನಪ್ರಿಯತೆಯನ್ನು ಗಳಿಸಿದೆ.
● ವಿಕಸಿತ ಭಾರತದ ಸಂಕಲ್ಪ ನಮ್ಮ ಮೋದಿ ಅವರದು. 2047ರ ವೇಳೆಗೆ ಭಾರತವನ್ನು ಜಗತ್ತಿನ ಅತ್ಯಂತ ಶಕ್ತಿಶಾಲಿ ದೇಶವಾಗಿ ಮಾಡುವ ಚಿಂತನೆ ಮತ್ತು ಸಂಕಲ್ಪವನ್ನು ನಮ್ಮ ಮೋದಿ ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ದೇಶದ ಜಿ.ಡಿ.ಪಿ. 8.4ರಷ್ಟು ಭರ್ಜರಿ ಪ್ರಗತಿ ಕಂಡಿದೆ.
● ಕೇವಲ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ, ಹಿಂದೂ ವಿರೋಧಿ ನೀತಿ ಕಾಂಗ್ರೆಸ್ ಸರಕಾರದ್ದು. ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ಗೈರು ಹಾಜರಿ, ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸಿದ್ದು. ಮಂಡ್ಯದ ಕೆರೆಗೋಡಿನಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಅವರ ಮೇಲೆ ಕ್ರಮ ಇವೆಲ್ಲವೂ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಗೆ ಒಂದೆರಡು ಉದಾಹರಣೆಗಳಷ್ಟೇ. ಹಿಂದೂ ದೇವಸ್ಥಾನಗಳ ಹುಂಡಿಯಿಂದ ಹಣ ಕಿತ್ತುಕೊಂಡು ಅದನ್ನು ಅನ್ಯ ಉದ್ದೇಶಕ್ಕೆ ಬಳಸುವ ಹುನ್ನಾರ ಕಾಂಗ್ರೆಸ್ ಸರಕಾರದ್ದು.
● ಬೆಲೆ ಏರಿಕೆಯ ಕೊಡುಗೆ ಕಾಂಗ್ರೆಸ್ ಸರಕಾರದ ದೊಡ್ಡ ಸಾಧನೆ. ವಿದ್ಯುತ್ ದರ ಏರಿಕೆ, ಹಾಲಿನ ದರ ಏರಿಕೆ ಮಾತ್ರವಲ್ಲದೆ, ಅಬಕಾರಿ ಸುಂಕ, ಆಸ್ತಿ ನೋಂದಣಿ ದರ, ವಾಹನ ನೋಂದಣಿ ದರವನ್ನು ಹೆಚ್ಚಿಸಿದೆ ಸರ್ಕಾರ.
● ಕಾಂಗ್ರೆಸ್ಸಿನ ಶಾಸಕ ಬಿ.ಆರ್ ಪಾಟೀಲ್ ಸಿದ್ದರಾಮಯ್ಯನವರಿಗೆ 18 ಶಾಸಕರಿಂದ ಸಹಿ ಹಾಕಿದ ಪತ್ರದಲ್ಲಿ, ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುವುದಕ್ಕೆ ಮಧ್ಯವರ್ತಿಗಳಿಗೆ ಕಮಿಷನ್ ಹಣ ಕೇಳುತ್ತಿದ್ದಾರೆಂದು ಹೇಳಿದ್ದರು.
● ಬಿ.ಬಿ.ಎಂ.ಪಿ. ಗುತ್ತಿಗೆದಾರರು ತಮ್ಮ ಬಾಕಿ ಹಣ ನೀಡದ ಕಾರಣ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಿದ್ದರು, ತಮಗೆ ನೀಡಬೇಕಾದ ಬಾಕಿ ಹಣ ನೀಡದ ಕಾರಣ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದರು.
● ಬೆಂಗಳೂರಿನ ಸುತ್ತಮುತ್ತಲಿನ ಹಲವು ಬಡಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನೂತನ ಸೈಟುಗಳಿಗೆ ಖಾತೆಗಳನ್ನು ನೀಡುವುದನ್ನು ನಿಲ್ಲಿಸಲಾಗಿದೆ.
● ಕಾಂಗ್ರೆಸ್ ಪಕ್ಷ ಎಂದರೆ ಅದು ಒಂದು ಕುಟುಂಬದ ಪಕ್ಷ, ಒಂದು ಸಮುದಾಯದ ತುಷ್ಟೀಕರಣದ ಪಕ್ಷ, ಭ್ರಷ್ಟರ ಪಕ್ಷ. ಕಮಿಷನ್ ಹೊಡೆಯುವ ಪಕ್ಷ, ಚುನಾವಣೆಗಳಲ್ಲಿ ಅಕ್ರಮ ಎಸಗುವ ಪಕ್ಷ.
● ಕಾಂಗ್ರೆಸ್ ಕೇವಲ ಮೋದಿಯವರನ್ನು ಸೋಲಿಸಲೆಂದೇ ಐಎನ್ಡಿಐಎ ಮೈತ್ರಿಕೂಟ ರಚನೆ ಮಾಡಿಕೊಂಡಿತು. ಆದರೆ ಚುನಾವಣೆಗೆ ಮೊದಲೇ ಈ ಮೈತ್ರಿಕೂಟ ಛಿದ್ರವಾಗಿದೆ.
● ಕಾಂಗ್ರೆಸ್ ಪಕ್ಷ ಒಕ್ಕೂಟ ವ್ಯವಸ್ಥೆಯನ್ನು ತಿರಸ್ಕರಿಸುತ್ತದೆ. ಭಾರತವನ್ನು ತುಕಡೇ ತುಕಡೇ ಮಾಡುವ ಆಶಯ ಹೊಂದಿದ ಪಕ್ಷ ಕಾಂಗ್ರೆಸ್. ಭಾರತವನ್ನು ದಕ್ಷಿಣ ಭಾರತ-ಉತ್ತರ ಭಾರತ ಎಂದು ಒಡೆಯುವ ಕುರಿತು ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದರು. ಆದರೆ ಅದನ್ನು ಖಂಡಿಸಿ ದೇಶ ಒಂದು ಎನ್ನುವ ಮಾತನ್ನು ಕಾಂಗ್ರೆಸ್ಸಿಗರು ಯಾರೂ ಆಡಲಿಲ್ಲ. ಕಾಂಗ್ರೆಸ್ಸಿಗೆ ದೇಶ ಒಂದಾಗುವುದು ಬೇಕಿಲ್ಲ, ಒಡೆಯುವುದಷ್ಟೇ ಬೇಕು. 
● ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಯಾವುದೇ ಜನಪರ ಚರ್ಚೆಗಳನ್ನು ಮಾಡದೇ ಸಮಯವನ್ನು ವ್ಯರ್ಥ ಮಾಡಿ ಕರ್ನಾಟಕದ ಜನತೆಯ ತೆರಿಗೆ ಹಣವನ್ನು ಪೊಲು ಮಾಡಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ವಕ್ತಾರರಾದ ಸತೀಶ್ ಶೆಟ್ಟಿ ಮುಟ್ಲುಪಾಡಿ, ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ





ಉಡುಪಿ, ಫೆ.28: ಕಾಂಗ್ರೆಸ್ಸಿನ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚಾರಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ನಡೆದ ದೇಶ ವಿರೋಧಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು.

ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ ಮತ್ತು ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಮಾತನಾಡಿ ಕಾಂಗ್ರೆಸ್ ಪಕ್ಷದ ಪಾಕ್ ಮೇಲಿನ ಪ್ರೀತಿ ಮತ್ತು ದೇಶ ವಿರೋಧಿ ನೀತಿಯನ್ನು ಖಂಡಿಸಿದರು.

ಬಿಗಿ ಪೊಲೀಸ್ ಬಂದೋಬಸ್ತನ್ನೂ ಲೆಕ್ಕಿಸದೆ ಬ್ಯಾರಿಗೇಡ್ ಗಳನ್ನು ತಳ್ಳಿ ಜಿಲ್ಲಾ ಕಾಂಗ್ರೆಸ್ ಕಛೇರಿಯತ್ತ ನುಗ್ಗಲು ಯತ್ನಿಸಿದ ಶಾಸಕರು, ಯುವ ಮೋರ್ಚಾ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರನ್ನು ಪೋಲಿಸರು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮುಖಂಡರುಗಳಾದ ಶ್ರೀಶ ನಾಯಕ್ ಪೆರಣಂಕಿಲ, ದಿನಕರ ಬಾಬು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಯರಾಮ್ ಸಾಲ್ಯಾನ್, ಶಿವಕುಮಾರ್ ಅಂಬಲಪಾಡಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೀಣಾ ಎಸ್. ಶೆಟ್ಟಿ, ಶ್ರೀನಿಧಿ ಹೆಗ್ಡೆ, ವಿಜಯ ಕುಮಾರ್ ಉದ್ಯಾವರ, ರಾಘವೇಂದ್ರ ಉಪ್ಪುರು, ಶ್ರೀಕಾಂತ್ ನಾಯಕ್, ಸತೀಶ್ ಪೂಜಾರಿ, ದಿಲ್ಲೇಶ್ ಶೆಟ್ಟಿ, ಅನಿತಾ ಶ್ರೀಧರ್, ಯುವ ಮೋರ್ಚಾ ಪದಾಧಿಕಾರಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಅಭಿರಾಜ್ ಸುವರ್ಣ, ಅವಿನಾಶ್ ಉಳ್ತುರ್, ಸುಹಾಸ್ ಶೆಟ್ಟಿ, ಸಚಿನ್ ಪಿತ್ರೋಡಿ, ಸಂದೇಶ್ ಪ್ರಭು, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ದಿನೇಶ್ ಅಮೀನ್, ಜಿತೇoದ್ರ ಶೆಟ್ಟಿ, ನವೀನ್ ನಾಯಕ್, ರಾಜೀವ ಕುಲಾಲ್, ಸುರೇಶ್ ಶೆಟ್ಟಿ ಗೋಪಾಡಿ, ದೀಪಕ್ ಕುಮಾರ್ ಶೆಟ್ಟಿ, ಪ್ರಮುಖರಾದ ಮಹೇಂದ್ರ ಕುಮಾರ್ ನೀಲಾವರ, ಗೋಪಾಲ್ ಕಾಂಚನ್, ಮಂಜುನಾಥ್ ಮಣಿಪಾಲ್, ಗೋಪಾಲಕೃಷ್ಣ ರಾವ್, ರಶ್ಮಿತಾ ಬಿ. ಶೆಟ್ಟಿ, ಪೂರ್ಣಿಮಾ ರತ್ನಾಕರ್, ಅಶ್ವಿನಿ ಶೆಟ್ಟಿ, ಸುಜಾಲಾ ಸತೀಶ್ ಸಹಿತ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಗರಸಭಾ ಸದಸ್ಯರು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್





ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆ ದೇಶ ಕಟ್ಟುವ ಚುನಾವಣೆಯಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಎಲ್ಲರನ್ನೂ ಜೊತೆಯಾಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಬೂತ್ ಗೆಲ್ಲಿಸುವ ಗುರಿಯೊಂದಿಗೆ ಪಕ್ಷದ ವಿಜಯ ಯಾತ್ರೆಯನ್ನು ಮುಂದುವರಿಸಲು ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಲೋಕಸಭಾ ಚುನಾವಣಾ ಕರಾವಳಿ-ಮಲೆನಾಡು ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡಿದರು.

‘ಬೂತ್ ಗೆದ್ದರೆ ದೇಶ ಗೆದ್ದಂತೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ, ಬೂತ್ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡುವ ಜೊತೆಗೆ ಕೇಂದ್ರ ಸರಕಾರದ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸಿ ನಿಗದಿತ ವಿವರಗಳನ್ನು ಸರಲ್ ಆಪ್ ನಲ್ಲಿ ಅಪ್ಲೋಡ್ ಮಾಡುವುದು, ಕೇoದ್ರದ ಜನಪರ ಯೋಜನೆಗಳನ್ನು ಹಾಗೂ ಸಕಾರಾತ್ಮಕ ವಿಚಾರಗಳನ್ನು ಕಟ್ಟಕಡೆಯ ಮತದಾರರಿಗೂ ತಲುಪಿಸುವುದು, ಹೊಸ ಯುವ ಮತದಾರರನ್ನು ಬಿಜೆಪಿ ಪರ ಮತದಾನಕ್ಕೆ ಪ್ರೇರೇಪಿಸುವುದು, ಬೂತ್ ಮಟ್ಟದಲ್ಲಿ ಹೊಸ ಕಾರ್ಯಕರ್ತರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡುವುದು ಇವೇ ಮುಂತಾದ ಪ್ರಮುಖ ಕಾರ್ಯ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಭ್ರಷ್ಟಾಚಾರ ರಹಿತ ಆಡಳಿತದ ಜೊತೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮೂಲಭೂತ ಸೌಕರ್ಯ ವೃದ್ಧಿ, ಆರೋಗ್ಯ ಸೇವೆ, ಬಡತನ ನಿವಾರಣೆ  ಹಾಗೂ ಎಲ್ಲ ವರ್ಗದ ಜನತೆಯ ಅಭ್ಯುದಯಕ್ಕೆ ಜಾರಿಗೆ ತಂದಿರುವ ವಿನೂತನ ಯೋಜನೆಗಳ ಸಹಿತ ದೇಶವಾಸಿಗಳ ಸ್ವಾಭಿಮಾನದ ಪ್ರತೀಕವಾಗಿ ಅಯೋಧ್ಯೆಯಲ್ಲಿ ಐತಿಹಾಸಿಕವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್ ಮುoತಾದ ದಾಖಲೆಯ ಅಭಿವೃದ್ಧಿಯ ಮಹಾಪೂರ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿವೆ. ಪಕ್ಷದ ಕಾರ್ಯಕರ್ತರು ಮೋದಿ ಸರಕಾರದ ಸಾಧನೆಗಳನ್ನು ಮನೆ ಮನೆಗಳಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಗೆಲುವಿನ ಸ್ಪಷ್ಟ ಗುರಿಯೊಂದಿಗೆ ಸಂಘಟಿತ ಪ್ರಯತ್ನದ ಮೂಲಕ ಪಕ್ಷದ ಗೆಲುವಿಗೆ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಚುನಾವಣಾ ನಿರ್ವಹಣಾ ಕೆಲಸ ಕಾರ್ಯಗಳ ಜೊತೆಗೆ ಪಕ್ಷ ನೀಡಿರುವ ವಿವಿಧ ಅಭಿಯಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಗುರುತರವಾದ ಜವಾಬ್ದಾರಿ ಅಭಿಯಾನಗಳ ಸಂಚಾಲಕರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಮೇಲಿದೆ. ಈ ನಿಟ್ಟಿನಲ್ಲಿ ಎಲ್ಲರ ಸಂಘಟಿತ ಪರಿಶ್ರಮ ಮತ್ತು ಸಹಕಾರ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆ ಮತ್ತು ಪರಿಣಾಮಕಾರಿ ಚುನಾವಣಾ ಪ್ರಚಾರ ಕಾರ್ಯದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಅಭಿವೃದ್ಧಿಪರ, ಸ್ವಚ್ಛ, ಪಾರದರ್ಶಕ ಆಡಳಿತಗಾರ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ನಮ್ಮ ಲೋಕಸಭಾ ಕ್ಷೇತ್ರದ ಭರ್ಜರಿ ಗೆಲುವಿನ ಕೊಡುಗೆ ನೀಡಲು ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಉಡುಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಯಾದಿಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಲೋಕಸಭಾ ಚುನಾವಣಾ ವಿಧಾನಸಭಾ ಕ್ಷೇತ್ರಗಳ ಪ್ರಭಾರಿಗಳಾದ ನಯನಾ ಗಣೇಶ್, ರಾಜೇಶ್ ಕಾವೇರಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಶ್ಯಾಮಲಾ ಎಸ್. ಕುಂದರ್, ವಿಧಾನಸಭಾ ಕ್ಷೇತ್ರಗಳ ಸಂಚಾಲಕರುಗಳಾದ ಸತೀಶ್ ಪೂಜಾರಿ ಕುಂದಾಪುರ, ಗಿರೀಶ್ ಎಮ್. ಅಂಚನ್ ಉಡುಪಿ, ಮುರಳಿಧರ ಪೈ ಕಾಪು, ಮಣಿರಾಜ್ ಶೆಟ್ಟಿ ಕಾರ್ಕಳ, ಲೋಕಸಭಾ ವಿಸ್ತಾರಕ್ ಧನಂಜಯ್, ವಿಧಾನಸಭಾ ವಿಸ್ತಾರಕ್ ಮೋಹನ್ ಅರಸ್ ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ  ವಿವಿಧ ವಿಭಾಗಗಳ ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ವಂದಿಸಿದರು.

ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ





ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಸದಾನಂದ ಕೈಪುಂಜಾಲು, ಎಸ್.ಸಿ. ಮೋರ್ಚಾ ಬೈಂದೂರು ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ಎಸ್.ಸಿ. ಮೋರ್ಚಾ ಉಡುಪಿ ಮಂಡಲ ಅಧ್ಯಕ್ಷ ಕಿರಣ್ ಕುಮಾರ್ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.*ಪ್ರಕಟಣೆಯ ಕೃಪೆಗಾಗಿ*

*ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ*

ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಸದಾನಂದ ಕೈಪುಂಜಾಲು, ಎಸ್.ಸಿ. ಮೋರ್ಚಾ ಬೈಂದೂರು ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ಎಸ್.ಸಿ. ಮೋರ್ಚಾ ಉಡುಪಿ ಮಂಡಲ ಅಧ್ಯಕ್ಷ ಕಿರಣ್ ಕುಮಾರ್ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ





ಉಡುಪಿ: ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿಖ್ಯಾತ್ ಶೆಟ್ಟಿಯವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ರವರು ನಗರ ಕಛೇರಿಯಲ್ಲಿ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರಜಿತ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ




ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.23ರಿಂದ ಮಾ.5ರ ವರೆಗೆ ಉಡುಪಿ ಜಿಲ್ಲೆಯ ವಿಧ ಗ್ರಾಮಗಳಲ್ಲಿ ‘ನಮೋ ಯುವ ಭಾರತ’ ಅಭಿಯಾನದಡಿ ‘ಯುವ ಚೌಪಾಲ್’, 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ’ ಕಾರ್ಯಕ್ರಮ ನಡೆಯಲಿದೆ.

ಈ ಅಭಿಯಾನವು ಮೇ 25ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಮಾ.3ರ ತನಕ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಡೆಯಲಿದೆ. ಈ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ಸಾಧನೆಗಳ ಬಗ್ಗೆ ಹೊಸ ಯುವ ಮತದಾರರಲ್ಲಿ ಅರಿವು ಮೂಡಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಅವರು ಫೆ.24ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಿರ್ದೇಶನದಂತೆ ಗ್ರಾಮ ಚಲೋ, ‘ಮೋದಿ ಮತ್ತೊಮ್ಮೆ’ ಗೋಡೆ ಬರಹ, ಲಾಭಾರ್ಥಿಗಳ ಸಂಪರ್ಕ ಮತ್ತು ಶಕ್ತಿ ವಂದನ ಅಭಿಯಾನಗಳನ್ನು  ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಯೋಜನೆ ರೂಪಿಸಲಾಗಿದೆ.

ಪಕ್ಷದ ಯೋಜನೆಯಂತೆ ಮಾ.3ರಂದು ಉಡುಪಿ ಜಿಲ್ಲೆಯ ನಿಗದಿತ ಕಾರ್ಯಕರ್ತರು ಉಡುಪಿ ರೈಲ್ವೆ ನಿಲ್ದಾಣದಿಂದ ಅಯೋಧ್ಯೆಯ ಶ್ರೀರಾಮ ಮಂದಿರದ ದರ್ಶನಕ್ಕೆ ತೆರಳಲ್ಲಿದ್ದಾರೆ.

ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜಾಗಿದೆ. ಈಗಾಗಲೇ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯವು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಇರುವ ಮಾಂಡವಿ ಟ್ರೇಡ್ ಸೆಂಟರ್ ಸಂಕೀರ್ಣದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಂಡಿದೆ. ಮುಂದಿನ ಕಾರ್ಯ ಯೋಜನೆಗಳು ಪ್ರಗತಿಯಲ್ಲಿವೆ.

ಉಡುಪಿ ಜಿಲ್ಲಾ ಬಿಜೆಪಿಯ ನೂತನ ತಂಡ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ  ಪ್ರಯತ್ನದ ಮೂಲಕ ಪಕ್ಷ ನೀಡಿರುವ ಎಲ್ಲಾ ಅಭಿಯಾನಗಳನ್ನು  ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಯ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ  ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ್ ಶೆಟ್ಟಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ





ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಆಗಿದೆ. ಜಿಲ್ಲಾ ಸಮಿತಿ ಮತ್ತು ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು.

ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರ ಸಮರ್ಪಣಾಭಾವದ ಸೇವೆ ಮತ್ತು ಪಕ್ಷದ ಸಂಘಟನಾ ಸಾಮರ್ಥ್ಯದಿಂದ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಪಕ್ಷದ ಚಟುವಟಿಕೆಗಳಿಗೆ ಆದ್ಯತೆ ಮೇರೆಗೆ ಸಮಯವನ್ನು ನೀಡಿ, ಪಕ್ಷ ಸಂಘಟನೆಯ ಜೊತೆಗೆ ಪಕ್ಷದ ಎಲ್ಲ ಅಭಿಯಾನಗಳನ್ನು ಸಮಯದ ಇತಿಮಿತಿಯೊಳಗೆ ಸಮರ್ಪಕವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಒಳ್ಳೆಯ ತಂಡ ರಚನೆಯಾಗಿದೆ. ಚುನಾವಣಾ ಪರ್ವದ ಸನ್ನಿವೇಶದಲ್ಲಿ ಪದಾಧಿಕಾರಿಗಳು ಪಕ್ಷದ ಕಛೇರಿಗೆ ಭೇಟಿ ನೀಡಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪರಿಪಾಠ ಅಗತ್ಯ. ರಾಜ್ಯ ಬಿಜೆಪಿ ನೀಡುವ ಕಾರ್ಯಕ್ರಮಗಳನ್ನು ಬದ್ಧತೆಯಿಂದ ಪೂರೈಸುವ ಜೊತೆಗೆ ಪಕ್ಷದ ನಿಗದಿತ ಸಭೆಗಳಿಗೆ ತಪ್ಪದೇ ಹಾಜರಾಗಿ ಸದೃಢ ಪಕ್ಷ ಸಂಘಟನೆಯ ಮೂಲಕ ಜಿಲ್ಲೆಯ ವಿಜಯ ಯಾತ್ರೆಯನ್ನು ಮುಂದುವರಿಸಲು ಅಧ್ಯಕ್ಷರೊಂದಿಗೆ ಕೈಜೋಡಿಸಿ ಬದ್ಧತೆಯಿಂದ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ ರಾಜ್ಯ ಬಿಜೆಪಿ ನೀಡಿರುವ ನಾಲ್ಕು ಅಭಿಯಾನಗಳಾದ ಗ್ರಾಮ ಚಲೋ, ಶಕ್ತಿ ವಂದನಾ, ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಮತ್ತು ಲಾಭಾರ್ತಿಗಳ ಸಮಾವೇಶದ ಕುರಿತು ವಿಸ್ತೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳು ಮತ್ತು ಮಂಡಲಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ವಂದಿಸಿದರು. ರೇಷ್ಮಾ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Design a site like this with WordPress.com
Get started