ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳು ಮತ್ತು ಸಂಚಾಲಕರನ್ನಾಗಿ ಈ ಕೆಳಗಿನಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ನೇಮಕ ಮಾಡಿರುತ್ತಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನಾ ಸಮಾರಂಭವು ನಾಳೆ ಫೆ.15 ಗುರುವಾರ ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿಯ ‘ಮಾಂಡವಿ ಟ್ರೇಡ್ ಸೆಂಟರ್’ ಸಂಕೀರ್ಣ ಕಡಿಯಾಳಿ ಇದರ ತಳ ಅಂತಸ್ತಿನಲ್ಲಿ ನಡೆಯಲಿದೆ.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಹಾಲಿ ಶಾಸಕರು ಮಾಜಿ ಸಚಿವರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿ ಅರಗ ಜ್ಞಾನೇಂದ್ರ ಇವರು ಚುನಾವಣಾ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.
ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸಹಿತ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ
ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡಾ! ಆಚಾರ್ಯರವರು ದೇಶದಲ್ಲೇ ಮೊದಲ ಬಾರಿಗೆ ತಲೆಯಲ್ಲಿ ಮಲವನ್ನು ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿರುವುದು ಐತಿಹಾಸಿಕ ದಾಖಲೆ ಎಂದರು.
ರಾಷ್ಟ್ರೀಯ ನಾಯಕರ ಜೊತೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಮೇರು ವ್ಯಕ್ತಿತ್ವದ ಡಾ! ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು ಅನುಕರಣೀಯ. ಅಭಿವೃದ್ಧಿಯ ಹೊಸ ಶಕೆಯ ಜೊತೆಗೆ ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿದಿರುವ ದಾಖಲೆಗಳ ಸರದಾರ ಡಾ! ವಿ.ಎಸ್. ಆಚಾರ್ಯರವರು ಹಾಕಿಕೊಟ್ಟ ಮಾರ್ಗ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
*ಪ್ರಕಟಣೆಯ ಕೃಪೆಗಾಗಿ*
*ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್*
*ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ*
ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡಾ! ಆಚಾರ್ಯರವರು ದೇಶದಲ್ಲೇ ಮೊದಲ ಬಾರಿಗೆ ತಲೆಯಲ್ಲಿ ಮಲವನ್ನು ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿರುವುದು ಐತಿಹಾಸಿಕ ದಾಖಲೆ ಎಂದರು.
ರಾಷ್ಟ್ರೀಯ ನಾಯಕರ ಜೊತೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಮೇರು ವ್ಯಕ್ತಿತ್ವದ ಡಾ! ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು ಅನುಕರಣೀಯ. ಅಭಿವೃದ್ಧಿಯ ಹೊಸ ಶಕೆಯ ಜೊತೆಗೆ ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿದಿರುವ ದಾಖಲೆಗಳ ಸರದಾರ ಡಾ! ವಿ.ಎಸ್. ಆಚಾರ್ಯರವರು ಹಾಕಿಕೊಟ್ಟ ಮಾರ್ಗ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಡಾ! ವಿ.ಎಸ್. ಆಚಾರ್ಯರವರ ಪುತ್ರರಾದ ಡಾ! ರವಿರಾಜ್ ವಿ. ಆಚಾರ್ಯ, ಡಾ! ಕಿರಣ್ ವಿ. ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಕಲ್ಪನಾ ಸುಧಾಮ, ಪ್ರಮುಖರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಕಿಶೋರ್ ಕರಂಬಳ್ಳಿ, ಎನ್.ರಾಮಕೃಷ್ಣ, ಮಂಜುಳಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ : ಅಖಿಲ ಭಾರತೀಯ ಸಂಘಟನಾತ್ಮಕ ಪ್ರವಾಸದ ವಿಶೇಷ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ನೂರಾರು ಯೋಜನೆಗಳ ಮೂಲಕ ಜನಪರ ಆಡಳಿತದ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ನಮ್ಮ ಸುಯೋಗ. ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಸದೃಢ ಪಕ್ಷ ಸಂಘಟನೆಯ ಜೊತೆಗೆ ಲೋಕಸಭೆ ಸಹಿತ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಎಲ್ಲರೂ ಬದ್ಧತೆಯಿಂದ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಅನ್ನುವುದು ಬಹಳ ಮುಖ್ಯವಾಗಿರುತ್ತದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹೇಳಿದರು.
ಅವರು ಬಿಜೆಪಿ ಕೇರಳ ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ನ್ಯಾಯವಾದಿ ರೂಪಾ ಬಾಬು ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ಕೇರಳ ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ನ್ಯಾಯವಾದಿ ರೂಪಾ ಬಾಬು ಮಾತನಾಡಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಹಾಗೂ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಅವರ ನೇತೃತ್ವದಲ್ಲಿ ದೇಶದ 25 ಬಿಜೆಪಿ ಮಹಿಳಾ ಮೋರ್ಚಾ ನಾಯಕಿಯರು ಫೆ.12 ಮತ್ತು 13ರಂದು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಘಟನಾ ಪ್ರವಾಸವನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಈ 2 ದಿನಗಳ ಅವಧಿಯಲ್ಲಿ ಹಮ್ಮಿಕೊಂಡಿರುವ 18 ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ. ಉಡುಪಿ ಜಿಲ್ಲೆ ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದ್ದು, ಜಿಲ್ಲಾ ಮಹಿಳಾ ಮೋರ್ಚಾ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಾದರಿ ಶ್ಲಾಘನೀಯ ಎಂದು ಅವರು ಹೇಳಿದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರೂಪ ಬಾಬು ಅವರನ್ನು ಶಾಲು ಹೊದೆಸಿ ಫಲ ಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳಾದ ಮಾಲಿನಿ ಶೆಟ್ಟಿ, ವಿನಯ, ಸುಮಾ ಶೆಟ್ಟಿ, ದೀಪ, ಶಾಂತಿ, ವಸಂತಿ ಸತೀಶ್, ಸರೋಜ ಶೆಟ್ಟಿಗಾರ್, ಸುಜಾಲ ಸತೀಶ್, ಸುಧಾ ಪೈ, ಸುರೇಖಾ, ನೇತ್ರಾವತಿ, ಶ್ವೇತಾ, ಸೌರಭಿ ಪೈ, ರಜನಿ ಹೆಬ್ಬಾರ್, ನೀರಜಾ ಶೆಟ್ಟಿ, ಮಾಯಾ ಕಾಮತ್, ಅನಿತಾ ಆರ್.ಕೆ., ಅಶ್ವಿನಿ ಶೆಟ್ಟಿ ಪೂರ್ಣಿಮಾ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ಮುದ್ದಣ್ಣ ಪೂಜಾರಿ, ರಾಜೇಂದ್ರ ಪಂದುಬೆಟ್ಟು, ವಿನಯ್ ಕುಮಾರ್, ಭಾಸ್ಕರ್ ಕೋಟ್ಯಾನ್, ನಿತಿನ್ ಕುಮಾರ್, ಭಾಸ್ಕರ್ ಅಂಚನ್, ಗುರುರಾಜ್ ಪೂಜಾರಿ, ಜನಾರ್ದನ ಪೂಜಾರಿ, ಚೆನ್ನಕೇಶವ, ಸಂಘದ ಮಾಜಿ ಅಧ್ಯಕ್ಷ ರಮೇಶ್ ಕೋಟ್ಯಾನ್, ಮಾಜಿ ಪ್ರ.ಕಾರ್ಯದರ್ಶಿ ಕುಶಲ್ ಕುಮಾರ್, ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ, ವಿಜಯ ಕೃಷ್ಣ, ಜಯಂತಿ ನಾರಾಯಣ, ಅನಿತಾ ಲಕ್ಷ್ಮಣ್, ಸವಿತಾ ಸಂತೋಷ್, ಸಂಘದ ಸದಸ್ಯರಾದ ಸುಧಾಕರ್ ಪೂಜಾರಿ, ಅಚ್ಯುತ ಪೂಜಾರಿ, ಪುನೀತ್ ಕುಮಾರ್, ದೀಕ್ಷಿತ್, ಸತೀಶ್, ರವಿ ಪಾಲನ್, ರಾಜು ಪೂಜಾರಿ, ಜೀವನ್ ಕೋಟ್ಯಾನ್, ಅರ್ಚಕರಾದ ಜೀವನ್, ಆದಿತ್ ಹಾಗೂ ಭಜನಾ ಸಪ್ತಾಹ ಪೂಜೆಯ ಸೇವಾದಾರರು ಉಪಸ್ಥಿತರಿದ್ದರು.
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಏಕಾತ್ಮ ಮಾನವತಾ ವಾದದ ಪ್ರತಿಪಾದಕರಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಅಂತ್ಯೋದಯ ಪರಿಕಲ್ಪನೆಯು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಅನೇಕ ಯೋಜನೆಗಳಲ್ಲಿ ಸಾಕಾರಗೊಂಡಿದೆ. ಪಂಡಿತ್ ಜೀ ಅವರ ಅನುಮಾನಾಸ್ಪದ ಸಾವು ಇನ್ನೂ ನಿಗೂಢವಾಗಿದ್ದರೂ ಅವರು ಕೋಟ್ಯಾಂತರ ಕಾರ್ಯಕರ್ತರಿಗೆ ಚೈತನ್ಯ ಶಕ್ತಿಯಾಗಿ ಇಂದಿಗೂ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಮಟ್ಟಾರ್ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಿಧಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಪ್ರಮುಖರಾದ ವಿಜಯ ಭಟ್ ಕಡೆಕಾರ್, ರಾಜು ಕುಲಾಲ್, ರಮ್ಯಾ ರಾವ್, ಅನಿಟಾ ಬೆಲಿಂಡ ಡಿಸೋಜ, ರಾಘವೇಂದ್ರ ಕುತ್ಪಾಡಿ, ದಿನಕರ ಪೂಜಾರಿ, ರೇಖಾ ಜಿ. ಮರಾಟೆ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಉಡುಪಿ ಶ್ರೀ ಕೃಷ್ಣ ದರ್ಶನಗೈದು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆಯನ್ನು ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ನೂರಾರು ಜನಪರ ಯೋಜನೆಗಳ ಸಹಿತ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯೊಂದಿಗೆ ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ ಮುಂಚೂಣಿ 3ನೆೇ ಸ್ಥಾನದತ್ತ ದಾಪುಗಾಲು ಹಾಕುತ್ತಿರುವ ಸಮೃದ್ಧ ಭಾರತದ ಕನಸು ನನಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕ ಸ್ವಾವಲಂಬನೆಯ ಜೊತೆಗೆ ಸುಮಾರು 25 ಕೋಟಿ ಕುಟುಂಬಗಳನ್ನು ಬಡತನದ ರೇಖೆಯಿಂದ ಮೇಲೆತ್ತಲಾಗಿದೆ. ಹಳ್ಳಿ ಹಳ್ಳಿಗಳಿಗೆ ವಿದ್ಯುತ್, ಗ್ಯಾಸ್ ಸಂಪರ್ಕ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ನಂತಹ ಅನೇಕ ಉದಾತ್ತ ಯೋಜನೆಗಳು ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿವೆ. ಬಡವರು, ಮಹಿಳೆಯರು, ಯುವ ಜನಾಂಗ ಮತ್ತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಮ್ಮಿಕೊಂಡಿರುವ ದೂರದರ್ಶಿ ಯೋಜನೆಗಳು ಸರ್ವ ಸ್ಪರ್ಶಿ ಸರ್ವ ವ್ಯಾಪಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.
ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಪರಿಹಾರ ನೀಡಲು ಹಣವಿಲ್ಲ. ಇತ್ತೀಚೆಗೆ ಬಿಡುಗಡೆ ಮಾಡಿದ 324 ಕೋಟಿ ರೂ. ಪರಿಹಾರ ಧನದಲ್ಲಿ ಶೇ.75ರಷ್ಟು ಕೇಂದ್ರದ ಪಾಲು, ಶೇ.25ರಷ್ಟು ಮಾತ್ರ ರಾಜ್ಯದ ಪಾಲು ಎಂಬುದು ವಾಸ್ತವ. ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ರಾಜ್ಯ ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಪ್ರಹಸನಕ್ಕೆ ಮುಂದಾಗಿದೆ ಎಂದು ಅವರು ಟೀಕಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ 54 ಲಕ್ಷ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ. ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಿಂದ 4 ಸಾವಿರ ರೂ. ನೀಡುತ್ತಿದ್ದರೂ, ದುರಾದೃಷ್ಟವಶಾತ್ ಸಿದ್ದರಾಮಯ್ಯ ಸರಕಾರ ರಾಜ್ಯದ ಪಾಲನ್ನು ಸ್ಥಗಿತಗೊಳಿಸಿದೆ. ರಾಜ್ಯ ಸರಕಾರ ಕೇವಲ ಕೇಂದ್ರವನ್ನು ದೂರುವುದರಲ್ಲೇ ಕಾಲಹರಣ ಮಾಡುತ್ತಿದೆ. ಇಂತಹ ಸಂಗತಿಗಳ ಜೊತೆಗೆ ಕೇಂದ್ರ ಸರಕಾರದ ಅಭಿವೃದ್ಧಿಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಮಿಕ್ಕಿ ಸ್ಥಾನಗಳೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಗದೊಮ್ಮೆ ಸದೃಢ, ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಪಕ್ಷದ ಹಿರಿಯ ನಾಯಕರಾದ ಸೋಮಶೇಖರ ಭಟ್, ಬಿ.ಸುಧಾಕರ ಶೆಟ್ಟಿ, ಸಂಘದ ಹಿರಿಯರಾದ ಗೋಪಾಲ ಚೆಟ್ಟಿಯಾರ್ ಮಂಗಳೂರು ಹಾಗೂ ಪ್ರೇಮ ಪಡಿಯಾರ್ ಇವರ ನಿಧನದ ಬಗ್ಗೆ ಮೌನ ಪ್ರಾರ್ಥನೆಯೊಂದಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಗಲಿದ ಗಣ್ಯರ ಕುರಿತು ಮಾಹಿತಿ ನೀಡಿದರು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ ಪಕ್ಷದ ಕಾರ್ಯ ಪದ್ಧತಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ಮಾರ್ಗದರ್ಶನ ನೀಡಿದರು.
ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುವ ಅಭಿನಂದನಾ ನಿರ್ಣಯವನ್ನು ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಅವರು ಸಭೆಯಲ್ಲಿ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅನುಮೋದಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಮತ್ತು ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಇವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಇವರು ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರ ಉಪಸ್ಥಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರು ಸಮಾರೋಪ ಭಾಷಣಗೈದರು.
ಈ ಸಂದರ್ಭದಲ್ಲಿ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ ವರ್ಗ ಗೀತೆ ಹಾಡಿದರು. ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ ವಂದೇ ಮಾತರಂ ಗೀತೆ ಹಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ಕೆ.ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು.
ಸಾಮೂಹಿಕ ರಾಷ್ಟ್ರ ಗೀತೆಯೊಂದಿಗೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಸಮಾಪನಗೊಂಡಿತು. ಅಯೋಧ್ಯೆ ಶ್ರೀ ರಾಮ ಮಂದಿರದ ತೀರ್ಥ ಪ್ರಸಾದದೊಂದಿಗೆ ಸಾಮೂಹಿಕ ಸಹ ಭೋಜನ ನಡೆಯಿತು.
ಬಿಜೆಪಿ ಉಡುಪಿ ಜಿಲ್ಲೆ ಇದರ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಫೆ.6 ಮಂಗಳವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 1.30ರ ವರೆಗೆ ಉಡುಪಿ-ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಲಿದೆ.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರು ಬೆಳಿಗ್ಗೆ ಗಂಟೆ 10.00ಕ್ಕೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.