ಉಚಿತ ಗ್ಯಾರಂಟಿಗಳ ಬೆನ್ನು ಹತ್ತಿ ಸರಕಾರದ ಗ್ಯಾರಂಟಿ ಕಳೆದುಕೊಂಡ ಕಾಂಗ್ರೆಸ್ : ಕುಯಿಲಾಡಿ ಸುರೇಶ್ ನಾಯಕ್


ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಏರಲೇಬೇಕೆಂಬ ಏಕೈಕ ಉದ್ದೇಶವನ್ನಿಟ್ಟುಕೊಂಡು ಬದ್ಧತೆ ಇಲ್ಲದ ಉಚಿತಗಳ ಗ್ಯಾರಂಟಿಗಳನ್ನು ಘೋಷಿಸಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಜನಹಿತ ಮತ್ತು ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು, ಗ್ಯಾರಂಟಿಗಳ ವ್ಯವಸ್ಥಿತ ನಿರ್ವಹಣೆಯನ್ನೂ ಕಡೆಗಣಿಸಿ ಭ್ರಷ್ಟಾಚಾರ, ಕಮಿಷನ್ ದoಧೆ, ಬಣ ರಾಜಕೀಯ, ಆಡಳಿತ ವೈಫಲ್ಯದ ಜೊತೆಗೆ ಸರಕಾರದ ಅಸ್ತಿತ್ವದ ಗ್ಯಾರಂಟಿಯನ್ನು ಕಳೆದುಕೊಂಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಆಹಾರ ಭದ್ರತಾ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಉಚಿತ 5 ಕೆ.ಜಿ. ಅಕ್ಕಿ ವಿತರಣೆಯ ಸೌಲಭ್ಯವನ್ನು ದೇಶದಾದ್ಯಂತ ಮುಂದಿನ 5 ವರ್ಷಗಳ ಅವಧಿಗೆ ವಿಸ್ತರಿಸಿರುವುದು ರಾಜ್ಯದ ಫಲಾನುಭವಿಗಳಿಗೆ ವರದಾನವಾಗಿದೆ. ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಫ್ರೀ ಯಾಗಿ ನೀಡುತ್ತೇವೆ ಎಂದು ಬೊಬ್ಬಿರಿದಿದ್ಧ ಸಿ.ಎಂ. ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನುಡಿದಂತೆ ನಡೆಯದೆ, ಇದೀಗ ಕೇಂದ್ರ ಬಿಜೆಪಿ ಸರಕಾರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನೂ ಸಮರ್ಪಕವಾಗಿ ವಿತರಿಸದೆ ರಾಜ್ಯದ ಜನತೆಗೆ ದ್ರೋಹ ಎಸಗಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ ಸರ್ವರ್ ಗ್ರಹಣ ಹಿಡಿದರೆ, ಉಚಿತ ಬಸ್ ಪ್ರಯಾಣದಿಂದ ಆಟೋ ಚಾಲಕರ ಬವಣೆ ಕೇಳುವವರಿಲ್ಲದಂತಾಗಿದೆ. ಗೃಹ ಜ್ಯೋತಿ ಬದಲಿಗೆ ಪವರ್ ಕಟ್ ಭಾಗ್ಯ ನೀಡಿ ಕತ್ತಲ ಸಾಮ್ರಾಜ್ಯ ನಿರ್ಮಾಣವಾಗಿದ್ದರೆ, ಯುವನಿಧಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಕಾರಣವಾಗಿರುವ ಉಚಿತ, ಖಚಿತ, ಖಂಡಿತ, ನಿಶ್ಚಿತಗಳ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಜೊತೆಗೆ ಕಮಿಷನ್ ದಂಧೆ ಮೂಲಕ ಸಂಗ್ರಹಿಸಿದ ಅಕ್ರಮ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಕಳುಹಿಸಿಕೊಡಲು ರಾಜ್ಯ ಎಟಿಎಂ ಸರಕಾರ ಹರಸಾಹಸಪಡುತ್ತಿರುವುದನ್ನು ಕಂಡು ರಾಜ್ಯದ ಜನತೆ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಚಿಕ್ಕಾಸೂ ಬಿಡುಗಡೆ ಮಾಡದ ರಾಜ್ಯ ಕಾಂಗ್ರೆಸ್ ಸರಕಾರ ಸಿಎಂ, ಡಿಸಿಎಂ ಮತ್ತು ಸಚಿವರ ಮನೆ, ಕಛೇರಿ ನವೀಕರಣ ಹಾಗೂ ಐಷಾರಾಮಿ ಕಾರು ಖರೀದಿಗೆ ಕೋಟ್ಯಾಂತರ ರೂಪಾಯಿ ವ್ಯಯಿಸುತ್ತಿರುವುದು ವಿಪರ್ಯಾಸ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎoದಿರುವ ಸಿ.ಎಂ. ಸಿದ್ದರಾಮಯ್ಯನವರಿಗೆ ಬರ ಪೀಡಿತ ಪ್ರದೇಶಕ್ಕೆ ಅನುದಾನ ಘೋಷಿಸಲು, ರೈತರ ಬವಣೆ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಸಹಿತ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಬಿಡುವಿಲ್ಲದಿರುವುದು ರಾಜ್ಯದ ಜನತೆಯ ದೌರ್ಭಾಗ್ಯವೇ ಸರಿ.

ಬರಗಾಲ, ಅನಿಯಮಿತ ಲೋಡ್ ಶೆಡ್ಡಿಂಗ್ ನಿoದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯ ಸರಕಾರ, ರೈತರು ಪಂಪ್ ಸೆಟ್ ಗಳಿಗೆ ವಿದ್ಯುತ್ ಕಂಬ, ತಂತಿ ಸಹಿತ ವಿದ್ಯುತ್ ಸಲಕರಣೆಗಳನ್ನು ಸ್ವತಃ ತಾವೇ ಖರೀದಿಸಬೇಕೆಂಬ ಆದೇಶ ಹೊರಡಿಸಿರುವುದು ಮಾತ್ರವಲ್ಲದೆ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾ ನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮುಂತಾದ ರೈತಪರ ಯೋಜನೆಗಳನ್ನು ಅನುದಾನದ ಕೊರತೆಯ ನೆಪವೊಡ್ಡಿ ರದ್ದುಗೊಳಿಸಿರುವುದು ಖಂಡನೀಯ.

ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಬರ ಪೀಡಿತ ಪ್ರದೇಶಗಳಿಗೆ ಬೇಟಿ ನೀಡದ ಸಿ.ಎಂ., ಡಿಸಿಎಂ ಮತ್ತು ಸಚಿವರು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ರೈತಪರ ಕಾಳಜಿ ಹೊಂದಿರುವ ಬಿಜೆಪಿ ರಾಜ್ಯ ಮುಖಂಡರು ವಿವಿಧ ತಂಡಗಳಲ್ಲಿ ರಾಜ್ಯಾದ್ಯಂತ ಬರ ಅಧ್ಯಯನ ಪ್ರವಾಸದಲ್ಲಿ ನಿರತರಾಗಿರುವುದು ಪ್ರಶಂಸನೀಯ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಜಾರಿಗೆ ಬಂದಿರುವ ನೂರಾರು ಜನಪರ ಯೋಜನೆಗಳು ಹಾಗೂ ಐತಿಹಾಸಿಕ ಅಭಿವೃದ್ಧಿ ಕೆಲಸ ಕಾರ್ಯಗಳು ಕಣ್ಣ ಮುಂದಿದ್ದರೂ ಸಿ.ಎಂ. ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ಪ್ರಧಾನಿ ಮೋದಿ ಮತ್ತು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿ ನಿರತರಾಗಿರುವುದು ಹಾಸ್ಯಾಸ್ಪದ.

ಈ ಹಿಂದೆ ಕುಕ್ಕರ್ ಬಾಂಬ್ ಸ್ಪೋಟದ ಭಯೋತ್ಪಾದಕನ ಪರ ವಹಿಸಿದ್ದ ಕಾಂಗ್ರೆಸ್ ಇದೀಗ ದಾಳಿಕೋರ ಹಿಮಾಸ್ ಉಗ್ರರು ಮತ್ತು ಪ್ಯಾಲೆಸ್ತೀನ್ ನನ್ನು ಬೆಂಬಲಿಸುವ ಮೂಲಕ ತುಷ್ಟೀಕರಣದ ಎಲ್ಲೆ ಮೀರಿದೆ. ಹಿಂದೂಗಳ ಹಬ್ಬ ಆಚರಣೆಗೆ ಮಾತ್ರ ಷರತ್ತು ವಿಧಿಸುತ್ತಿರುವ ಕಾಂಗ್ರೆಸ್ ಸರಕಾರ, ಇತರ ಸಮುದಾಯಗಳ ಹಬ್ಬ ಆಚರಣೆಯ ಸಂದರ್ಭದಲ್ಲಿ ಜಾಣ ಮೌನ ವಹಿಸುತ್ತಿದೆ. ಕೆಪಿಎಸ್ಸಿ ಪರೀಕ್ಷೆಯ ಸಂದರ್ಭದಲ್ಲಿ ಹಿಂದೂ ಮಹಿಳೆಯರ ಪವಿತ್ರ ಮಾಂಗಲ್ಯ ಮತ್ತು ಕಾಲುಂಗುರವನ್ನು ವಿನಾಕಾರಣ ಒತ್ತಾಯ ಪೂರ್ವಕವಾಗಿ ತೆಗೆಸಿದ ರಾಜ್ಯ ಕಾಂಗ್ರೆಸ್ ಸರಕಾರ ಇನ್ನೊಂದು ಕೋಮಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಮೂಲಕ ಹಿಂದೂ ಧಮನ ನೀತಿ ಮೆರೆದಿದೆ. ಯಾವುದೇ ದಿಕ್ಕು ದೆಸೆ ಇಲ್ಲದೆ ಘೋಷಿಸಿದ ಭೋಗಸ್ ಗ್ಯಾರಂಟಿಗಳ ಸಮೀಕ್ಷೆಗೆ ಮಾಧ್ಯಮ ಸಂಸ್ಥೆಯೊಂದಕ್ಕೆ ಕೋಟ್ಯಾಂತರ ರೂಪಾಯಿ ನೀಡುವ ಮೂಲಕ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವುದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಹಿತ ಮರೆತು ನಾನೇ ಸಿಎಂ, ಹೆಚ್ಚುವರಿ ಡಿಸಿಎಂ ಎಂದು ಕಚ್ಚಾಡುತ್ತಿರುವ ಸಚಿವರು ಮತ್ತು ಮುಖಂಡರ ಅಧಿಕಾರ ದಾಹದಿಂದ ರಾಜ್ಯ ಕಾಂಗ್ರೆಸ್ ಸರಕಾರ ಸ್ವಯಂ ಪತನದತ್ತ ಸಾಗುತ್ತಿರುವುದು ದಿನೇ ದಿನೇ ಸ್ಪಷ್ಟಗೊಳ್ಳುತ್ತಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಎಂ. ಸ್ವನಿಧಿ ಯೋಜನೆಯಲ್ಲಿ ಉಡುಪಿ ಜಿಲ್ಲೆ ಮಗದೊಮ್ಮೆ ದೇಶದಲ್ಲೇ ಮೊದಲ ಸ್ಥಾನಕ್ಕೇರಲಿ: ಮಾಜಿ ಸಚಿವ ರಾಮದಾಸ್



ಉಡುಪಿ: ಪ್ರಧಾನ ಮಂತ್ರಿಗಳ ‘ಪಿಎಂ ಸ್ವನಿಧಿ ಸೆ, ಪಿಎಂ ಸಮೃದ್ಧಿ ತಕ್’ ಎಂಬ 8 ಯೋಜನೆಗಳನ್ನು ದೇಶದಾದ್ಯಂತ ನಗರ ಪ್ರದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ರಾಜ್ಯದ 18 ಜಿಲ್ಲೆಗಳನ್ನು ‘ಪ್ರಧಾನಮಂತ್ರಿ ಸ್ವನಿಧಿ ಯೋಜನೆ’ ಮತ್ತು ‘ವಿಶ್ವಕರ್ಮ ಯೋಜನೆ’ಯ ಅನುಷ್ಠಾನಕ್ಕೆ ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ. ನಗರ ಪ್ರದೇಶದಲ್ಲಿರುವ ರಸ್ತೆಬದಿ ವ್ಯಾಪಾರಿಗಳು ಯಾವುದೇ ಗ್ಯಾರಂಟಿ ನೀಡದೆ ಪಡೆಯಬಹುದಾದ ಸಾಲ ಸೌಲಭ್ಯವನ್ನು ಜೂನ್ 1, 2000ದಂದು ಪ್ರಧಾನ ಮಂತ್ರಿಗಳು ಜಾರಿಗೆ ತಂದಿದ್ದು, ಸದ್ರಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿದ್ದು, ಉಡುಪಿ ಜಿಲ್ಲೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಮಗದೊಮ್ಮೆ ಗರಿಷ್ಠ ಫಲಾನುಭವಿಗಳನ್ನು ನೊಂದಾಯಿಸುವ ಮೂಲಕ ಉಡುಪಿ ಜಿಲ್ಲೆ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅನುಷ್ಠಾನದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆಯುವಂತಾಗಲಿ ಎಂದು ಮಾಜಿ ಸಚಿವ ಹಾಗೂ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ರಾಜ್ಯ ಸಂಚಾಲಕ ರಾಮದಾಸ್ ಹೇಳಿದರು.

ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಈಗಾಗಲೇ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ರಾಜ್ಯದ 311 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ ಆರ್ಥಿಕ ಸ್ಥಿತಿಯ ಅಧ್ಯಯನ ಮಾಡಲು ಅಭಿಯಾನ ಹಮ್ಮಿಕೊಳ್ಳಲು ಸುತ್ತೋಲೆ ಹೊರಡಿಸಿದೆ. ಪಿ.ಎಂ. ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳು, ತಳ್ಳುಗಾಡಿ ವ್ಯಾಪಾರಿಗಳು, ಮನೆ ಮನೆಗೆ ತರಕಾರಿ ವಿತರಕರು, ಹಾಲು ವಿತರಕರು, ಪತ್ರಿಕೆ ವಿತರಕರು, ಇಸ್ತ್ರಿ ವ್ಯವಹಾರ, ಮನೆಗಳಲ್ಲಿ ಟೈಲರಿಂಗ್ ಕೆಲಸ ಮಾಡುವವರು, ಆಹಾರ ಪದಾರ್ಥಗಳ ಉತ್ಪಾದನೆ ಮಾಡುವವರು, ಫುಡ್ ಡೆಲಿವರಿ ಬಾಯ್ಸ್, ಕೇಟರಿಂಗ್ ವ್ಯವಸ್ಥೆಯಡಿ ಅಡುಗೆ ತಯಾರಕರು, ಬಡಿಸುವವರು, ಪಾತ್ರೆ ತೊಳೆಯುವವರು ಇತ್ಯಾದಿ ಸೇವಾ ನಿರತರನ್ನು ಈ ಯೋಜನೆಯಡಿ ತರುವ ವ್ಯವಸ್ಥೆ ಮಾಡಲಾಗಿದೆ. ಪಿ.ಎಂ. ಸ್ವನಿಧಿ ಯೋಜನೆಯಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಆಯಾಯ ನಗರಾಡಳಿತ ಸಂಸ್ಥೆಯಲ್ಲಿ ನೊಂದಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾಲ ಸೌಲಭ್ಯಕ್ಕೆ ಆಯ್ಕೆಯಾದವರಿಗೆ ‘ಲೆಟರ್ ಆಫ್ ರೆಕಮಂಡೇಷನ್’ ಎಂಬ ಪತ್ರವನ್ನು ಬ್ಯಾಂಕ್ ಗಳಿಗೆ ಕಳುಹಿಸಿಕೊಡಲಾಗುತ್ತದೆ. ಬ್ಯಾಂಕಿನವರು ಮೊದಲನೇ ಹಂತದಲ್ಲಿ ರೂ.10,000 ಎರಡನೇ ಹಂತದಲ್ಲಿ ರೂ.20,000 ಮೂರನೇ ಹಂತದಲ್ಲಿ ರೂ.50,000 ಹಾಗೂ ಇದನ್ನು ಮರು ಪಾವತಿಸಿದವರಿಗೆ ರೂ.10 ಲಕ್ಷ ವರೆಗಿನ ಮುದ್ರಾ ಪರಿವರ್ತಿತ ಸಾಲವನ್ನು ಪಡೆಯಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಿ ಜಿಲ್ಲೆಯಲ್ಲಿ ಗರಿಷ್ಠ ನೊಂದಾವಣೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಮಾತನಾಡಿ ಸರಕಾರದ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿದಾಗ ಮಾತ್ರ ಯೋಜನೆ ಸಾರ್ಥಕವಾಗುತ್ತದೆ. ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವಕರ್ಮ ಯೋಜನೆಯನ್ನು ಪ್ರತಿ ವಾರ್ಡ್, ಬೂತ್ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ಪಕ್ಷದ ಕಾರ್ಯಕರ್ತರು ಮತ್ತು ನಗರ ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳು ಗರಿಷ್ಠ ಪ್ರಮಾಣದಲ್ಲಿ ಫಲಾನುಭವಿಗಳ ನೊಂದಾವಣೆಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಸಮಗ್ರ ಮಾಹಿತಿಯನ್ನು ಪ್ರಚಾರ ಮಾಡುವ ಜೊತೆಗೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನಗರ ಪ್ರದೇಶದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸುವ ಮೂಲಕ ಮಗದೊಮ್ಮೆ ಉಡುಪಿ ಜಿಲ್ಲೆ ದೇಶದಲ್ಲೇ ಮೊದಲನೆಯ ಸ್ಥಾನವನ್ನು ಪಡೆಯುವಂತೆ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದರು.

ಮಾಜಿ ಸಚಿವ ರಾಮದಾಸ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಪಿ.ಎಂ. ಸ್ವನಿಧಿ ಯೋಜನೆಯ ಜಿಲ್ಲಾ ಸಂಚಾಲಕರಾದ ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ರವೀಂದ್ರ ಮಡಿವಾಳ, ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಸದಾನಂದ ಬಳ್ಕೂರ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್, ಅರುಣ್ ಕುಮಾರ್ ಬಾಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್, ಜಿಲ್ಲಾ ಎಸ್‌.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಸುಂದರ್ ಕಲ್ಮಾಡಿ, ಹರೀಶ್ ಶೆಟ್ಟಿ, ಸಂತೋಷ್ ಜತ್ತನ್, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ಚಂದ್ರಶೇಖರ್ ಯು., ರಜನಿ ಹೆಬ್ಬಾರ್, ಕಲ್ಪನಾ ಸುಧಾಮ, ಭಾರತಿ ಪ್ರಶಾಂತ್, ಗೀತಾ ಡಿ. ಶೇಟ್, ಸವಿತಾ ಹರೀಶ್ ರಾಮ್, ಕಾಪು ಪುರಸಭಾ ಸದಸ್ಯರಾದ ಕಿರಣ್ ಆಳ್ವ, ಅನಿಲ್ ಕುಮಾರ್ ಹಾಗೂ ದಿನಕರ ಪೂಜಾರಿ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ



ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವಾರದ ಭಜನಾ ಸೇವೆಗೆ ಪೂರಕವಾಗುವಂತೆ ಶಾಶ್ವತ ಧ್ವನಿವರ್ಧಕದ ವ್ಯವಸ್ಥೆ ಹಾಗೂ ಶ್ರೀ ನಾರಾಯಣ ಗುರು ಸಮುದಾಯ ಭವನದ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತೆ ಸ್ಟೀಲ್ ಟೇಬಲ್ ಗಳ ಉದಾರ ಕೊಡುಗೆ ನೀಡಿರುವ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ಆಡಳಿತ ಪಾಲುದಾರ, ಮೆಡಿಯರ್ಥ್ ಲೈಫ್ ಕೇರ್ ಮುಂಬೈ ಇದರ ಆಡಳಿತ ನಿರ್ದೇಶಕ ಭರತ್ ಶೆಟ್ಟಿ ಪಠೇಲರ ಮನೆ ಅಂಬಲಪಾಡಿ ಇವರನ್ನು ಸಂಘದ ವತಿಯಿಂದ ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ ಹಾಗೂ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಬ್ಲಡ್ ಸೆಂಟರ್ ಆರೋಗ್ಯಾಧಿಕಾರಿ ಡಾ! ದೀಪ್ ಎಮ್., ತಾಂತ್ರಿಕ ಮೇಲ್ವಿಚಾರಕ ವಿಶ್ವೇಶ್ ಎನ್., ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷ ಮೋಹನದಾಸ್ ಆಚಾರ್ಯ, ಲಯನ್ಸ್ ಕ್ಲಬ್ ಉಡುಪಿ-ಚೇತನಾ ಅಧ್ಯಕ್ಷ ಜಗದೀಶ್ ಆಚಾರ್ಯ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಂದುಬೆಟ್ಟು ಅಧ್ಯಕ್ಷ ಮಹೇಶ್ ಚಂದ್ರ ರಾವ್, ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ ಅಧ್ಯಕ್ಷ ಕಿರಣ್ ಪೂಜಾರಿ, ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಇದರ ಪಾಲುದಾರರಾದ ಅಂಬಲಪಾಡಿ ಪಠೇಲರ ಮನೆ ಮೋಹನ್ ಶೆಟ್ಟಿ, ಜಯ ಸನಿಲ್, ಗೋಪಾಲಕೃಷ್ಣ ಶೆಟ್ಟಿ, ಪ್ರಮುಖರಾದ ರಮೇಶ್ ಮಲ್ಪೆ, ಎ.ಮುದ್ದಣ್ಣ ಪೂಜಾರಿ, ರಾಜೇಂದ್ರ ಪಂದುಬೆಟ್ಟು, ಭಾಸ್ಕರ್ ಅಂಚನ್, ಗುರುರಾಜ್, ವಿನಯ್ ಕುಮಾರ್, ನಿತಿನ್ ಕುಮಾರ್, ಜನಾರ್ದನ ಪೂಜಾರಿ, ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ರವಿ ಪಾಲನ್, ಶಂಕರ ಪೂಜಾರಿ, ದೇವಕಿ ಕೆ. ಕೋಟ್ಯಾನ್, ವಾಣಿಶ್ರೀ ಅರುಣ್, ಸವಿತಾ ಸಂತೋಷ್, ಅಶ್ವಿನಿ, ಲಾವಣ್ಯ ಹಾಗೂ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ





ಶಿಸ್ತುಬದ್ಧ ಆಹಾರ ಕ್ರಮ, ವ್ಯಾಯಾಮ, ಉಲ್ಲಸಿತ ಮನಸ್ಸಿನ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಸದೃಢ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.

ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ, ಲಯನ್ಸ್ ಕ್ಲಬ್ ಹಿರಿಯಡ್ಕ, ಹೆಚ್ಡಿಎಫ್ಸಿ ಬ್ಯಾಂಕ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ ಚೇತನಾ, ಲಯನ್ಸ್ ಕ್ಲಬ್ ಉಡುಪಿ ಬನ್ನಂಜೆ, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಂದುಬೆಟ್ಟು, ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ, ಸ್ವಾಮಿ ಫ್ರೆಂಡ್ಸ್ ಆಚಾರಿಗುಂಡಿ ಅಂಬಲಪಾಡಿ ಮತ್ತು ಚಾಂಪಿಯನ್ ಕ್ರಿಕೆಟರ್ಸ್ ಅಂಬಲಪಾಡಿ ಇದರ ಜಂಟಿ ಸಹಭಾಗಿತ್ವದೊಂದಿಗೆ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿ ಅಂಬಲಪಾಡಿ ಇದರ ಸಹಕಾರದೊಂದಿಗೆ ಅಂಬಲಪಾಡಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಹೆದರಿಕೆ ಮತ್ತು ನಿರ್ಲಕ್ಷ್ಯ ಮನೋಭಾವ ಅರೋಗ್ಯ ಸಂರಕ್ಷಣೆಗೆ ಮಾರಕ. ರಕ್ತದಾನದಿoದ ಜೀವದಾನ ಎಂಬಂತೆ ವಿವಿಧ ಸಮಾಜ ಸೇವಾ ಸಂಘಟನೆಗಳ ಆಶ್ರಯದಲ್ಲಿ ಮಣಿಪಾಲದ ಪ್ರತಿಷ್ಠಿತ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆಯ ಜೊತೆಗೆ ರಕ್ತದಾನ ಶಿಬಿರವನ್ನೂ ಆಯೋಜಿಸಿರುವುದು ಪ್ರಶಂಸನೀಯ. ಹೆಚ್ಚಿನ ದೈಹಿಕ ತ್ರಾಸವಿಲ್ಲದ ಒತ್ತಡದ ಬದುಕಿನ ನಡುವೆ ಎಲ್ಲ ವಯೋಮಾನದ ಜನತೆ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವುದು ಇಂದಿನ ಅಗತ್ಯತೆ ಎಂದು ಅವರು ತಿಳಿಸಿದರು.

ಮುಂಬೈಯಲ್ಲಿ ಮೆಡಿಯರ್ಥ್ ಲೈಫ್ ಕೇರ್ ಸಂಸ್ಥೆಯ ನಿರ್ದೇಶಕರಾಗಿ ನೂರಾರು ಮಂದಿಗೆ ಉದ್ಯೋಗವನ್ನು ನೀಡಿ, ಪ್ರಸಕ್ತ ಉಡುಪಿಯ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಸಂಸ್ಥೆಯ ಆಡಳಿತ ಪಾಲುದಾರರಾಗಿ ಆರೋಗ್ಯ ಸಂಬಂಧಿತ ಸೇವೆಯ ಜೊತೆಗೆ, ಸಂಘದ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಅಂಬಲಪಾಡಿ ಪಠೇಲರ ಮನೆ ಭರತ್ ಶೆಟ್ಟಿ, ಹಾಗೂ ರಕ್ತದಾನಿಗಳಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಸತತ 60ನೇ ಬಾರಿಗೆ ರಕ್ತದಾನಗೈದ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಇವರನ್ನು ಸಂಘಟಕರ ಪರವಾಗಿ ಡಾ! ನಿ.ಬೀ. ವಿಜಯ ಬಲ್ಲಾಳ್ ಸನ್ಮಾನಿಸಿ, ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ವತಿಯಿಂದ, ಪಾರ್ಶ್ವವಾಯು ಪೀಡಿತ ವ್ಯಕ್ತಿಯೋರ್ವರಿಗೆ ಗಾಲಿ ಕುರ್ಚಿಯನ್ನು ವಿತರಿಸಿದರು.

ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ವತಿಯಿಂದ ಫಸ್ಟ್ ಏಡ್ ಕಿಟ್ ಗಳನ್ನು ವಿತರಿಸಲಾಯಿತು.

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಹಾಗೂ ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಮಲ್ಪೆ ಇದರ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಬ್ಲಡ್ ಸೆಂಟರ್ ಇದರ ಆರೋಗ್ಯಾಧಿಕಾರಿ ಡಾ! ದೀಪ್ ಎಮ್., ತಾಂತ್ರಿಕ ಮೇಲ್ವಿಚಾರಕ ವಿಶ್ವೇಶ್ ಎನ್., ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷ ಮೋಹನದಾಸ್ ಆಚಾರ್ಯ, ಹೆಚ್ಡಿಎಫ್ಸಿ ಬ್ಯಾಂಕ್ ಅಧಿಕಾರಿ ಆಕಾಶ್ ಕುಂದರ್, ಲಯನ್ಸ್ ಕ್ಲಬ್ ಉಡುಪಿ-ಚೇತನಾ ಅಧ್ಯಕ್ಷ ಜಗದೀಶ್ ಆಚಾರ್ಯ, ಲಯನ್ಸ್ ಕ್ಲಬ್ ಉಡುಪಿ-ಬನ್ನಂಜೆ ಅಧ್ಯಕ್ಷ ಸದಾನಂದ, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಎಸೋಸಿಯೇಶನ್ ಕರ್ನಾಟಕ ಅಧ್ಯಕ್ಷ ವಾಮನ್ ಪಾಲನ್, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಅಧ್ಯಕ್ಷೆ ಸವಿತಾ ಸಂತೋಷ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಂದುಬೆಟ್ಟು ಅಧ್ಯಕ್ಷ ಮಹೇಶ್ ಚಂದ್ರ ರಾವ್, ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ ಅಧ್ಯಕ್ಷ ಕಿರಣ್ ಪೂಜಾರಿ, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ, ಬಿಲ್ಲವ ಸೇವಾ ಸಂಘದ ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಭಾಸ್ಕರ ಪೂಜಾರಿ, ಸಮಿತಿ ಸದಸ್ಯರುಗಳಾದ ಎ.ಮುದ್ದಣ್ಣ ಪೂಜಾರಿ, ರಾಜೇಂದ್ರ ಪಂದುಬೆಟ್ಟು, ಭಾಸ್ಕರ್ ಅಂಚನ್, ಗುರುರಾಜ್, ವಿನಯ್ ಕುಮಾರ್, ನಿತಿನ್ ಕುಮಾರ್, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಲಾವಣ್ಯ, ಪ್ರಮುಖರಾದ ಮೋಹನ್ ಶೆಟ್ಟಿ, ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ರವಿ ಪಾಲನ್, ಶಂಕರ ಪೂಜಾರಿ, ಜಯ ಸನಿಲ್, ಗೋಪಾಲಕೃಷ್ಣ ಶೆಟ್ಟಿ, ರಮೇಶ್ ಮಲ್ಪೆ ಹಾಗೂ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಅ.29 ರವಿವಾರ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’



ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಹಿರಿಯಡ್ಕ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಉಡುಪಿ, ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಅಂಬಲಪಾಡಿ ವಲಯ, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಂದುಬೆಟ್ಟು, ಸ್ವಾಮಿ ಫ್ರೆಂಡ್ಸ್ ಆಚಾರಿಗುಂಡಿ-ಅಂಬಲಪಾಡಿ, ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ.) ಬಂಕೇರ್ಕಟ್ಟ-ಅಂಬಲಪಾಡಿ ಮತ್ತು ಚಾಂಪಿಯನ್ ಕ್ರಿಕೆಟರ್ಸ್ ಅಂಬಲಪಾಡಿ ಇದರ ಸಹಭಾಗಿತ್ವದೊಂದಿಗೆ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿ ಅಂಬಲಪಾಡಿ ಇದರ ಸಹಕಾರದೊಂದಿಗೆ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ವು ತಾ.29.10.2023ನೇ ರವಿವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ ಗಂಟೆ 1.00ರ ವರೆಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಬೆಳಿಗ್ಗೆ ಗಂಟೆ 9.30ಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.

ಸಂಘದ ಗೌರವಾಧ್ಯಕ್ಷ ಹಾಗೂ ಮಲ್ಪೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಇದರ ಆಡಳಿತ ಪಾಲುದಾರ ಪಠೇಲರ ಮನೆ ಭರತ್ ಶೆಟ್ಟಿ ಅಂಬಲಪಾಡಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ತಂಡದ ಮುಖ್ಯಸ್ಥರು ಹಾಗೂ ಶಿಬಿರದ ಸಂಘಟಕ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ರಕ್ತದಾನಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿವೃದ್ಧಿ ಸಹಿಸದ ಕಾಂಗ್ರೆಸ್ ನಿಂದ ಪರಶುರಾಮ ಪ್ರತಿಮೆ ವಿರುದ್ಧ ಅಪಪ್ರಚಾರ: ಕುಯಿಲಾಡಿ ಸುರೇಶ್ ನಾಯಕ್


ಕಾಂಗ್ರೆಸ್ ಜಾಯಮಾನವೇ ಹಗರಣ ಮತ್ತು ಭ್ರಷ್ಟಾಚಾರ. 1948ರಲ್ಲಿ ಪ್ರಧಾನಿ ನೆಹರೂ ರವರ ಜೀಪ್ ಹಗರಣದಿಂದ ಮೊದಲ್ಗೊಂಡು, ರಾಜೀವ್ ಗಾಂಧಿಯವರ ಬೋಫೋರ್ಸ್, ಮನ್ ಮೋಹನ್ ಸಿಂಗ್ ರವರ ಆದರ್ಶ ಸೊಸೈಟಿ ಹಾಗೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನ್ಯಾಷನಲ್ ಹೆರಾಲ್ಡ್ ಹಗರಣದ ವರೆಗೆ ಆಕಾಶ ಪಾತಾಳ ಭೂಮಿಯಲ್ಲಿ ಕಾಂಗ್ರೆಸ್ ಹಗರಣಗಳ ಸರಮಾಲೆಯೇ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸಿಗರು ಪ್ರತಿಯೊಂದು ಅಭಿವೃದ್ಧಿ ಯೋಜನೆಗಳಲ್ಲೂ ಹಗರಣಗಳ ಕನಸು ಕಾಣುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಪರಶುರಾಮ ಪ್ರತಿಮೆಯ ವಿರುದ್ಧ ಕಾಂಗ್ರೆಸ್ ಹೆಣೆದಿರುವ ಷಡ್ಯಂತ್ರದ ವ್ಯವಸ್ಥಿತ ಅಪಪ್ರಚಾರದಿಂದ ಕಾಂಗ್ರೆಸ್ಸಿನ ಅಭಿವೃದ್ಧಿ ವಿರೋಧಿ ಮನಸ್ಥಿತಿ ಅನಾವರಣಗೊಂಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚಾಲನೆ ದೊರೆತಿಲ್ಲ. ಕಾಂಗ್ರೆಸ್ ಘೋಷಿಸಿದ ಉಚಿತಗಳ ಭಾಗ್ಯಗಳು ದಿನಕ್ಕೊಂದು ಸಬೂಬು ಜೊತೆಗೆ ಹಳ್ಳ ಹಿಡಿದಿವೆ. ಕೇವಲ ನಾಲ್ಕೇ ತಿಂಗಳಲ್ಲಿ ಸಚಿವರ ನಡುವಿನ ಅಸಮಾಧಾನ, ಜಗಳ ತಾರಕಕ್ಕೇರಿದೆ. ಸರಕಾರದ ಈ ಎಲ್ಲಾ ಹುಳುಕುಗಳನ್ನು ಮುಚ್ಚಿಡಲು ಹಾಗೂ ಜನರ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸುವ ಉದ್ದೇಶದಿಂದ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ವಿಚಾರಗಳನ್ನು ಪ್ರಸ್ತಾಪಿಸುತ್ತಾ ಅಪಪ್ರಚಾರ ನಡೆಸುವ ಮೂಲಕ ಜಿಲ್ಲೆಯ ಜನತೆಗೆ ಮಂಕು ಬೂದಿ ಎರಚುತ್ತಿರುವುದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಆಡಳಿತಾವಧಿಯಲ್ಲಿ ಮಾಜಿ ಸಚಿವ ಹಾಗೂ ಕಾರ್ಕಳದ ಕ್ರಿಯಾಶೀಲ ಶಾಸಕ ವಿ.ಸುನೀಲ್ ಕುಮಾರ್ ರವರ ವಿಶೇಷ ಮುತುರ್ವಜಿಯಿಂದ ಮಂಜೂರುಗೊಂಡಿದ್ದ ಅನುದಾನದಲ್ಲಿ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ, ತುಳುನಾಡಿನ ಸೃಷ್ಟಿಕರ್ತ ಭಗವಾನ್ ಪರಶುರಾಮ ಪ್ರತಿಮೆ ಸ್ಥಾಪನೆಯ ಜೊತೆಗೆ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ ಯೋಜನೆ ಚಾಲನೆಗೊಂಡಿದೆ. ಈ ಯೋಜನೆಯಡಿ ಭಾಗಶಃ ಬಿಡುಗಡೆಯಾಗಿದ್ದ ರೂ.6.50 ಕೋಟಿ ಅನುದಾನದಲ್ಲಿ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡಿರುವುದು ವಾಸ್ತವ.

ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳುವ ಸಂದರ್ಭದಲ್ಲೇ, ಪ್ರತಿಮೆಯ ಮುಕ್ತಾಯ ಹಂತದ ಕೆಲವೊಂದು ಕಾಮಗಾರಿಯನ್ನು ಬಾಕಿ ಅನುದಾನ ಬಿಡುಗಡೆ ಜೊತೆಗೆ ಪೂರ್ಣಗೊಳಿಸುವ ಕುರಿತು ಶಾಸಕ ವಿ.ಸುನೀಲ್ ಕುಮಾರ್ ರವರು ಸ್ಪಷ್ಟನೆ ನೀಡಿದ್ದರು. ಆದರೂ ಕಾರ್ಕಳದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಸಹಿಸದ ಕಾಂಗ್ರೆಸ್ ನಾಯಕರ ದಂಡು ಅನಾವಶ್ಯಕವಾಗಿ ಪರಶುರಾಮ ಪ್ರತಿಮೆಯ ನೈಜತೆಯ ಬಗ್ಗೆ ಹುಯಿಲೆಬ್ಬಿಸಿ, ಪ್ರತಿಮೆಯ ಜೋಡಣೆಯ ವೆಲ್ಡಿಂಗ್ ಸ್ಥಳಗಳಲ್ಲಿ ಅಳವಡಿಸಲಾದ ಪಿಒಪಿ ಹಾಳೆಗಳನ್ನು ಹರಿದು ಪ್ರದರ್ಶಿಸಿ ಫೈಬರ್ ಪ್ರತಿಮೆ ಎಂಬ ಸುಳ್ಳು ವಾದವನ್ನು ತೇಲಿಬಿಟ್ಟು ಸಮಯಸಾಧಕತನವನ್ನು ಪ್ರದರ್ಶಿಸಿರುವುದು ವಿಪರ್ಯಾಸ.

ಮೂವತ್ತಮೂರು ಅಡಿ ಎತ್ತರದ ಪರಶುರಾಮ ಪ್ರತಿಮೆಯನ್ನು ಗುತ್ತಿಗೆದಾರರು ಕಂಚಿನಲ್ಲಿ ನಿರ್ಮಿಸಿದ್ದರೂ, ಕಾಂಗ್ರೆಸಿಗರು ಮಾತ್ರ ಪ್ರತಿಮೆ ಕಂಚಿನದ್ದಲ್ಲ ಫೈಬರ್ ನಿಂದ ನಿರ್ಮಿಸಿದ್ದು ಎಂಬ ಆಧಾರ ರಹಿತ ಪೊಳ್ಳು ವಾದವನ್ನು ಮುಂದಿಟ್ಟುಕೊಂಡು ಹಾದಿ ಬೀದಿಗಳಲ್ಲಿ ಪ್ರತಿಭಟನೆಯ ನಾಟಕವನ್ನಾಡಿ, ಇದೀಗ ವಿವಿಧ ಆಯಾಮಗಳಲ್ಲಿ ವಾಸ್ತವಿಕತೆಯ ವಿಚಾರಗಳು ಪ್ರಚಲಿತಗೊಂಡಿರುವ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಅನುಭವಿಸುತ್ತಿರುವುದು ಜಗಜ್ಜಾಹೀರಾಗಿದೆ.

ಪರಶುರಾಮ ಥೀಮ್ ಪಾರ್ಕ್ ಯೋಜನೆಯನ್ನು ಕೈಗೆತ್ತಿಕೊಂಡಿರುವ, ರಾಜ್ಯ ಸರಕಾರದ ಆಡಳಿತ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರ ಪರಶುರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಕಾಮಗಾರಿಯ ಕುರಿತು ಪತ್ರಿಕಾ ಪ್ರಕಟಣೆಯ ಮೂಲಕ ಸವಿಸ್ತಾರ ಮಾಹಿತಿಯನ್ನು ನೀಡಿದೆ. ಸ್ವತಃ ಪ್ರತಿಮೆಯನ್ನು ನಿರ್ಮಿಸಿರುವ ಶಿಲ್ಪಿ ಕೃಷ್ಣಾ ನಾಯಕ್ ರವರೇ ಪ್ರತಿಮೆಯ ನೈಜತೆಯ ಬಗ್ಗೆ ವಿಸ್ತೃತ ವಿವರಣೆ ನೀಡಿದ್ದು, ಪ್ರತಿಮೆ 100% ಕಂಚಿನದ್ದಾಗಿದ್ದು, ಪ್ರತಿಮೆಯಲ್ಲಿ ನಿಗದಿತ ಪ್ರಮಾಣದ ಕಂಚು ಬಳಕೆಯಾಗದೇ ಇರುವುದು ಸಾಬೀತಾದರೆ ತಾನು ಶಿಲ್ಪ ಕಲೆಯ ಕಾಯಕವನ್ನೇ ತೊರೆಯುವುದಾಗಿ ಹೇಳಿಕೆ ನೀಡಿರುವುದು ಕಾಂಗ್ರೆಸ್ಸಿನ ನಕಲಿ ಹೋರಾಟಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಫೈಬರ್ ಮೂರ್ತಿ ಸ್ಥಾಪಿಸಿ ಹಿಂದೂಗಳ ಭಾವನೆಗೆ ದಕ್ಕೆ ತರಲಾಗಿದೆ ಎಂದು ಬೊಗಳೆ ಬಿಡುತ್ತಿರುವ ಕಾಂಗ್ರೆಸ್ ಮುಖಂಡರು ವ್ಯರ್ಥ ಬೀದಿ ರಂಪಾಟ ನಡೆಸುವ ಬದಲು ಪ್ರತಿಮೆಯ ನೈಜತೆಯ ಬಗ್ಗೆ ಸರಕಾರದ ಮುಖಾಂತರ ಸೂಕ್ತ ತನಿಖೆ ನಡೆಸುವ ಎದೆಗಾರಿಕೆ ತೋರಲಿ. ಜೊತೆಗೆ ತಮ್ಮದೇ ಸರಕಾರಕ್ಕೆ ಒತ್ತಡ ಹೇರಿ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲು ಹೋರಾಟ ನಡೆಸುವುದು ಸೂಕ್ತ. ನಕಲಿ ಹೋರಾಟದ ಸಂದರ್ಭದಲ್ಲಿ ಹಿಂದೂ ದ್ವೇಷಿ ಕಾಂಗ್ರೆಸ್ಸಿಗೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಕಾಳಜಿ ಉಕ್ಕಿ ಬಂದಿರುವುದು ಹಾಸ್ಯಾಸ್ಪದವಾಗಿದೆ.

ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಪರಿಪೂರ್ಣ ಅನುಷ್ಠಾನದ ಗುರಿಯೊಂದಿಗೆ ಐತಿಹಾಸಿಕ ನಗರಿ ಕಾರ್ಕಳವನ್ನು ಜಿಲ್ಲೆಯಲ್ಲೇ ಆಕರ್ಷಣೀಯ ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಶ್ರಮಿಸುತ್ತಿರುವ ಕಾರ್ಕಳ ಶಾಸಕರ ಬದ್ಧತೆ ಪ್ರಶಂಸನೀಯ. ಅಭಿವೃದ್ಧಿಯ ವಿಚಾರದಲ್ಲೂ ರಾಜಕೀಯದ ಚದುರಂಗದಾಟವಾಡುತ್ತಿರುವ ಕಾಂಗ್ರೆಸ್ಸಿಗೆ ಜನತೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆ ಸಂಪನ್ನ



ಉಡುಪಿ: ನವರಾತ್ರಿ ಉತ್ಸವದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂಪನ್ನಗೊಂಡಿತು.

ರಶ್ಮಿ ಭಟ್ ರವರಿಂದ ವೀಣಾ ವಾದನ, ಮಾಯಾ ಕಾಮತ್ ಬಳಗದಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಎಮ್. ಅಂಚನ್, ಸುವರ್ಧನ್ ನಾಯಕ್, ಮಂಜುನಾಥ್ ಮಣಿಪಾಲ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಗದೀಶ್ ಆಚಾರ್ಯ, ಕೃಷ್ಣಪ್ಪ ಜತ್ತನ್, ರೋಷನ್ ಶೆಟ್ಟಿ, ಆನಂದ್ ಸುವರ್ಣ, ದಿನಕರ ಪೂಜಾರಿ, ಕಿಶೋರ್ ಕರಂಬಳ್ಳಿ, ವಿಜೇತ್, ಚಂದ್ರಶೇಖರ ಪ್ರಭು, ರಶ್ಮಿತ ಬಿ. ಶೆಟ್ಟಿ, ಪೂರ್ಣಿಮಾ ರತ್ನಾಕರ್, ಅಶ್ವಿನಿ ಶೆಟ್ಟಿ, ಲಕ್ಷ್ಮೀ ಶೆಟ್ಟಿ ಸಹಿತ ಬಿಜೆಪಿ ಜಿಲ್ಲಾ ಮತ್ತು ನಗರ ಮಂಡಲ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ; ರಸ್ತೆ ಬದಿಯಲ್ಲಿ ಬೊಬ್ಬೆ ಹೊಡೆಯುವ ಬದಲು ತನಿಖೆಗೆ ಒತ್ತು ನೀಡಿ: ಕುಯಿಲಾಡಿ



ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಕಮಿಷನ್ ದಂಧೆ, ಭ್ರಷ್ಟಾಚಾರದಿಂದ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸಕ್ತ ಕಾಂಗ್ರೆಸ್ ನೇತೃತ್ವದ ಸರಕಾರ ಚಾಲ್ತಿಯಲ್ಲಿದೆ. ತನಿಖಾ ಸಂಸ್ಥೆಗಳು ಸರಕಾರದ ಅಧೀನದಲ್ಲಿದೆ. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಥವಾ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಕಾಂಗ್ರೆಸಿಗರಿಗೆ ಏನಾದರೂ ಸಂಶಯಗಳಿದಲ್ಲಿ ಸಂಬಂಧಪಟ್ಟ ಇಲಾಖೆ ಮೂಲಕ ನ್ಯಾಯಯುತ ತನಿಖೆ ನಡೆಸಲು ಅವಕಾಶವಿದೆ. ಹುರುಳಿಲ್ಲದ ವಿಚಾರಗಳನ್ನು ವೈಭವೀಕರಿಸಿ ಅಸಂಬದ್ಧ ಪ್ರತಿಭಟನೆ ಮೂಲಕ ಪುಕ್ಕಟೆ ಪ್ರಚಾರ ಪಡೆಯುವ ಕಾಂಗ್ರೆಸ್ಸಿನ ಹುನ್ನಾರಕ್ಕೆ ಜನತೆ ಬೆಲೆ ನೀಡಲಾರರು ಎಂದು ಅವರು ತಿಳಿಸಿದ್ದಾರೆ.

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಕಾರ್ಕಳದ ಶಾಸಕರು ಈಗಾಗಲೇ ಸೂಕ್ತ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ವ್ಯವಸ್ಥೆಗಳ ಬಗ್ಗೆಯೂ ಆಡಳಿತ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಸರಕಾರದ ಆಡಳಿತ ವ್ಯವಸ್ಥೆಯಲ್ಲಿರುವ ನಿರ್ಮಿತಿ ಕೇಂದ್ರ, ಥೀಮ್ ಪಾರ್ಕ್ ಕಾಮಗಾರಿಯ ಗುತ್ತಿಗೆದಾರರಾಗಿ ಜವಾಬ್ದಾರಿ ನಿರ್ವಹಿಸುತ್ತಿದೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಕೂಡಾ ಸರಕಾರದ ಆಧೀನಕ್ಕೆ ಒಳಪಟ್ಟಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಬಿಜೆಪಿಗೆ ಸಂಬಂಧಪಟ್ಟಿರುವುದಿಲ್ಲ. ಈ ವಾಸ್ತವ ವಿಚಾರಗಳ ಬಗ್ಗೆ ಅರಿವಿದ್ದರೂ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟಿಸಲು ಯಾವುದೇ ನೈಜ ವಿಚಾರಗಳಿಲ್ಲದೇ ತಮ್ಮ ಪಕ್ಷದ ಸರಕಾರದ ಹುಳುಕುಗಳನ್ನು ಮುಚ್ಚಿಡಲು ಹರಸಾಹಸ ಪಡುತ್ತಿರುವುದು ಶೋಚನೀಯ.

ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್. ಈ ಹಿಂದೆ ಬಿಜೆಪಿ ವಿರುದ್ಧ 40% ಸರಕಾರ, ಪೇ ಸಿಎಂ ಮುಂತಾದ ಶುದ್ಧ ಸುಳ್ಳಿನ ಅಭಿಯಾನಗಳನ್ನು ನಡೆಸಿದ್ದ ಕಾಂಗ್ರೆಸ್, ಇಂದು ತಾನೇ ತೋಡಿದ ಖೆಡ್ಡಾಕ್ಕೆ ಬಿದ್ದು ಒದ್ದಾಡುತ್ತಿದೆ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ ಗುತ್ತಿಗೆದಾರರಿಂದ ಕಾಂಗ್ರೆಸ್ ಸರಕಾರ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗಳ ಕಮಿಷನ್ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ಕಾಂಗ್ರೆಸ್ ಯಾವ ಮಟ್ಟದಲ್ಲಿ ರಾಜ್ಯದ ಲೂಟಿಯಲ್ಲಿ ತೊಡಗಿಸಿಕೊಂಡು ಕರ್ನಾಟಕವನ್ನು ಹಣದ ಎಟಿಎಮ್ ಮಾಡಿಕೊಂಡಿದೆ ಎಂಬುದು ಬಟ್ಟಾಬಯಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚಿಕ್ಕಾಸೂ ಬಿಡುಗಡೆ ಮಾಡದೆ, ಜನಪರ ಯೋಜನೆಗಳಿಗೆ ಒತ್ತು ನೀಡದೇ, ಜನಹಿತ ಮರೆತು ಜನವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನತೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಲೂಟಿಗೈದು ಕಮಿಷನ್, ಭ್ರಷ್ಟಾಚಾರ ಮೇಳೈಸಿದ ಕಾಂಗ್ರೆಸ್ ಎಟಿಎಂ ಸರಕಾರಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ



ಉಡುಪಿ: ಗ್ಯಾರಂಟಿಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರ ಕೇವಲ ಮೂರು-ನಾಲ್ಕು ತಿಂಗಳಲ್ಲೇ ತನ್ನ ಮುಖವಾಡವನ್ನು ಕಳಚಿ, ಲೂಟಿ ಮತ್ತು ಕಮಿಷನ್ ದಂಧೆ ಮೂಲಕ ತನ್ನ ಭ್ರಷ್ಟಾಚಾರದ ಪರಂಪರೆಯನ್ನು ಮೇಳೈಸಿಕೊಂಡು ಕರ್ನಾಟಕವನ್ನು ಕಾಂಗ್ರೆಸ್ಸಿನ ಏಟಿಎಂ ಆಗಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ನಾಯಕರು ಬಚ್ಚಿಟ್ಟ ಹಣ ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದೆ. ಗುತ್ತಿಗೆದಾರರಾದ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಮತ್ತು ಸಂತೋಷ್ ಮನೆಯಲ್ಲಿ 45 ಕೋಟಿ ಹಾಗೂ 8 ಕೋಟಿ ಮೌಲ್ಯದ ಚಿನ್ನ ದೊರೆತಿದೆ. ಚುನಾವಣಾ ಪೂರ್ವದಲ್ಲಿ ಪ್ರಧಾನಿ ಮೋದಿಯವರು ‘ಕರ್ನಾಟಕ ಕಾಂಗ್ರೆಸ್ಸಿಗೆ ಎಟಿಎಮ್’ ಎಂದಿರುವ ಮಾತನ್ನು ಕಾಂಗ್ರೆಸಿಗರು ಅಕ್ಷರಶಃ ಸಾಬೀತುಪಡಿಸಿದ್ದಾರೆ ಎಂದರು.

ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರದ ವಾಸನೆ ಬರುತ್ತಿದೆ. ಮೈಸೂರು ದಸರಾದಲ್ಲಿ ಕಲಾವಿದರಿಗೆ ಅವಕಾಶ ನೀಡಲೂ ಸಹ ಕಮಿಷನ್ ದಂಧೆ ನಡೆದಿರುವುದು ನಾಚಿಕೆಗೇಡು. ಕರ್ನಾಟಕದಲ್ಲಿ ಮುಂದಿನ ನಾಲ್ಕೂವರೆ ವರ್ಷವೂ ಈ ಸರಕಾರ ಇದ್ದರೆ, ರಾಜ್ಯವನ್ನೇ ಮಾರಾಟ ಮಾಡುವ ಸ್ಥಿತಿಯನ್ನು ಕಾಂಗ್ರೆಸ್ ತರಬಹುದು ಎಂಬ ಆತಂಕ ಇಂದು ರಾಜ್ಯದ ಜನತೆಯಲ್ಲಿದೆ ಎಂದು ತಿಳಿಸಿದರು.

ರಾಜ್ಯದ ಜನತೆ ಕಾಂಗ್ರೆಸ್ಸಿನ ಉಚಿತಗಳ ಗ್ಯಾರಂಟಿಗಳಿಗೆ ಮಾರುಹೋಗಿ ಅವಕಾಶ ನೀಡಿದರೂ, ಇಂದು ಕಾಂಗ್ರೆಸ್ ಬೀದಿಗೆ ಬಂದಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಪುಂಖಾನುಪುಂಖವಾಗಿ ಪ್ರತಿಭಟಿಸಿ ಮಾಡಿರುವ ಪೇಸಿಎಂ ಹಾಗೂ 40% ಅಭಿಯಾನಗಳು ಸುಳ್ಳು ಹಾಗೂ ಅಧಿಕಾರಕ್ಕಾಗಿ ಮಾಧ್ಯಮದ ಮುಂದೆ ಸೃಷ್ಟಿಸಿರುವ ಪ್ರಹಸನ ಎಂಬುದಾಗಿ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಸತ್ಯದ ಅನಾವರಣವಾಗಿದೆ. ಚುನಾವಣೆಯ ಸಂದರ್ಭದಲ್ಲಿ ಕಮಿಷನ್ ದರ ನಿಗದಿ ಪಡಿಸಿ ಜಾಹೀರಾತು ನೀಡಿರುವುದು ಸ್ವತಃ ಕಾಂಗ್ರೆಸ್ಸಿನ ನೈಜ ಕಮಿಷನ್ ದಂದೆಯ ದರ ಎಂಬುದು ಇದೀಗ ಸಾಬೀತಾಗಿದೆ. ಐಟಿ ದಾಳಿಯ ಸಂದರ್ಭದಲ್ಲಿ ದೊರೆತ ಕೋಟ್ಯಾಂತರ ರೂಪಾಯಿಗಳ ಕಂತೆ ಕಂತೆ ನೋಟುಗಳು ಬಿಬಿಎಂಪಿ ಹಾಗೂ ಇತರ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡುವಾಗ ದೊರೆತ ಕಾಂಗ್ರೆಸ್ ನಿಗದಿಪಡಿಸಿದ ಕಮಿಷನ್ ಹಣ ಎಂಬುದು ಜಗಜ್ಜಾಹೀರಾಗಿದೆ. ಸಿಎಂ ಸಿದ್ಧರಾಮಯ್ಯನವರ ಸಮಾಜವಾದದ ಮುಖವಾಡ ಬಯಲಾಗಿದೆ ಎಂದರು.

ಪಂಚರಾಜ್ಯಗಳ ಚುನಾವಣೆಗೆ ವಿವಿಧ ಆಯಾಮಗಳಲ್ಲಿ ಕಾಂಗ್ರೆಸ್ ಸರಕಾರ ಸಂಗ್ರಹಿಸಿದ ಕಮಿಷನ್ ಹಣ ಮತ್ತು ಕರ್ನಾಟಕದ ಜನತೆಯ ತೆರಿಗೆ ಹಣ ಹೋಗುತ್ತಿದೆ. ಈ ವಿಚಾರವನ್ನು ಪ್ರಬುದ್ಧ ಜನತೆ ಒಂದಾಗಿ ಖಂಡಿಸಬೇಕು. ಇಂತಹ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಭಾರಿ ಗಂಡಾಂತರ ಕಾದಿದೆ. ಇಂದು ಉಚಿತ ವಿದ್ಯುತ್ ಬದಲಿಗೆ ಕತ್ತಲೆ ಭಾಗ್ಯ ಜಾರಿಯಲ್ಲಿದೆ. ಇಂತಹ ದೌರ್ಭಾಗ್ಯಗಳ ಸೋಂಕು ಇತರ ರಾಜ್ಯಗಳಿಗೂ ಹರಡಬಾರದು ಎಂದಾದರೆ ಕಾಂಗ್ರೆಸ್ ಯಾವುದೇ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಬಾರದು. ದೇಶಾದ್ಯಂತ ಮುಳುಗುತ್ತಿರುವ ಕಾಂಗ್ರೆಸ್ ಎಂಬ ಹಡಗಿಗೆ ಕರ್ನಾಟಕ ಸರಕಾರ ಇಂಧನ ತುಂಬಿಸುವ ಯತ್ನದಲ್ಲಿದೆ. ಮುಂದಿನ ಪೀಳಿಗೆ ಸಮೃದ್ಧ ಕರ್ನಾಟಕವನ್ನು ಕಾಣಬೇಕೆಂದರೆ ಆದಷ್ಟು ಬೇಗ ರಾಜ್ಯದ ಈ ಭ್ರಷ್ಟ ಕಾಂಗ್ರೆಸ್ ಸರಕಾರ ತೊಲಗಬೇಕು ಎಂದು ಕುಯಿಲಾಡಿ ಆಗ್ರಹಿಸಿದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚಿಕ್ಕಾಸು ಬಿಡುಗಡೆ ಮಾಡದ, ಸರಕಾರಿ ನೌಕರರ ವೇತನ ತಡೆ ಹಿಡಿದ, ಅಂಗನವಾಡಿ ಮಕ್ಕಳಿಗೂ ಆಹಾರ ಪೂರೈಸಲು ಅಸಮರ್ಥವಾಗಿರುವ ಭ್ರಷ್ಟ ಕಾಂಗ್ರೆಸ್ ಕಮಿಷನ್ ಸರಕಾರ ಕೋಟಿ ಕೋಟಿ ಹಣವನ್ನು ಲೂಟಿಗೈದು ಅದನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸುವ ಹುನ್ನಾರ ನಡೆಸಿರುವುದು ಅತ್ಯಂತ ನಾಚಿಕೆಗೇಡು. ಉಚಿತ ಖಚಿತ ನಿಶ್ಚಿತಗಳ ಮೋಡಿ ಮಾಡಿ ಯಾವುದೇ ಗ್ಯಾರಂಟಿಗಳನ್ನೂ ಘೋಷಿಸಿದಂತೆ ಯಥಾವತ್ತಾಗಿ ನಿರ್ವಹಿಸದೆ, ಕತ್ತಲೆ ಭಾಗ್ಯ ನೀಡಿರುವ ಕಾಂಗ್ರೆಸ್ ಸರಕಾರಕ್ಕೆ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ. ಎಲ್ಲ ವಿಚಾರಗಳಲ್ಲಿ ರಾಜ್ಯದ ಹಿತವನ್ನು ಬಲಿ ಕೊಡುತ್ತಿರುವ ಜೊತೆಗೆ ಜನತೆಗೆ ದ್ರೋಹ ಬಗೆದು ಸ್ವಯಂ ಸ್ವಾರ್ಥ ಸಾಧನೆಗಾಗಿ ಕರ್ನಾಟಕವನ್ನು ಎಟಿಎಮ್ ಆಗಿ ಬಳಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಜನತೆ ಒಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ಕಾಪು ಪುರಸಭೆ ಸದಸ್ಯ ಅರುಣ್‌ ಕುಮಾರ್ ಶೆಟ್ಟಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ಲೋಕಯ್ಯ ಪಣಿಯಾಡಿ, ದಿನಕರ ಪೂಜಾರಿ, ನೀರಜಾ ಶೆಟ್ಟಿ, ಲಕ್ಷ್ಮೀ ಹೆಬ್ಬಾಳ್, ರಾಧಿಕಾ, ನಿತಿನ್ ಪೈ, ಶಿವರಾಮ ಕಾಡಿಮಾರ್, ಚಂದ್ರಶೇಖರ್ ಪ್ರಭು ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ : ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ





ಉಡುಪಿ: ದೇಶದಾದ್ಯಂತ ಸಣ್ಣ ಸಣ್ಣ ಜಾತಿಗಳನ್ನು ಹುಡುಕಿ ಸ್ಥಾನಮಾನ ನೀಡಿದ ರಾಜಕೀಯ ಪಕ್ಷ ಬಿಜೆಪಿ. ದೇಶದ ಮೊದಲ ಒಬಿಸಿ ಪ್ರಧಾನಿಯನ್ನು ಮಾಡಿರುವುದು ಬಿಜೆಪಿ. ಹಿಂದುತ್ವದ ಜೊತೆಗೆ ಬಲವಾಗಿ ನಿಂತಿರುವ ವರ್ಗ ಒಬಿಸಿ. ಸರ್ವರ ಕಲ್ಯಾಣದ ಜೊತೆಗೆ ಒಬಿಸಿ ವರ್ಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಬಿಜೆಪಿ ಇಂದು ಹಿಂದುಳಿದ ವರ್ಗಗಳ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ಅತ್ಯಂತ ಶ್ರೇಷ್ಠವಾಗಿದ್ದು, ಕಾಂಗ್ರೆಸ್ ನ ಯೋಜನೆಗಳನ್ನು ಮೀರಿ ನಿಂತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿಗಳು, ಇಲ್ಲದವರಿಂದ ಪಡೆದು ಉಳ್ಳವರಿಗೆ ಕೊಡುವ ಯೋಜನೆಯಾಗಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್ಸಿಎಸ್ಟಿ ಎಸ್ಟಿಪಿ ಯ ರೂ.11,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಗುತ್ತಿಗೆದಾರರು ಹೇಳದೇ ಇರುವ, ಬಿಜೆಪಿ ವಿರುದ್ಧ ಕಾಂಗ್ರೆಸ್ ಸ್ವಯಂ ಕಪೋಲಕಲ್ಪಿತ ಸೃಷ್ಟಿಸಿರುವ 40% ಸರಕಾರ ಎಂಬ ಅಭಿಯಾನವೇ ದೊಡ್ಡ ಸುಳ್ಳು. ಇತ್ತೀಚೆಗೆ ರಾಜ್ಯದಲ್ಲಿ ಗುತ್ತಿಗೆದಾರರೊಬ್ಬರ ಮನೆಗೆ ನಡೆದ ಇ.ಡಿ. ದಾಳಿಯಿಂದ ಅಧಿಕಾರಿಗಳು ಕೋಟ್ಯಾಂತರ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದು ಕಾಂಗ್ರೆಸ್ ಎಟಿಎಮ್ ಸರಕಾರ ಎಂಬ ಪ್ರಧಾನಿ ಮೋದಿ ಮಾತಿಗೆ ಸಾಕ್ಷಿಯಂತಿದೆ. ಇಂದು ದಾಳಿ ಎದುರಿಸುತ್ತಿರುವ ದೇಶದ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಯಾಲೆಸ್ತೀನ್ ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮಾನಸಿಕತೆ ಪ್ರಶ್ನಾರ್ಥಕವಾಗಿದೆ ಎಂದು ಅವರು ತಿಳಿಸಿದರು.

ಇಂದು 18 ಕೋಟಿಗೂ ಮಿಕ್ಕಿದ ಸದಸ್ಯತ್ವವನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ಕಾರ್ಯಕರ್ತರು ಮತ್ತು ನಾಯಕರ ಜವಾಬ್ದಾರಿ ಮಹತ್ವಪೂರ್ಣವಾಗಿದೆ. ಪಕ್ಷದ ಪದಾಧಿಕಾರಿಗಳು ಸರಲ್ ಆಪ್ ಮತ್ತು ಮೋದಿ ಆಪ್ ಗಳ ಸದುಪಯೋಗವನ್ನು ಪಡೆಯುವುದು ಅತ್ಯಗತ್ಯ. ಬೂತ್ ಸಶಸ್ತೀಕರಣದ ಸಹಿತ ಪ್ರಧಾನಿ ಮೋದಿ ಸಾಧನೆಯ ಮನೆ ಮನೆ ಪ್ರಚಾರಕ್ಕೆ ವೇಗ ನೀಡಬೇಕು. ಪಕ್ಷದ ಸಂಘಟನಾ ಶಕ್ತಿ ಮತ್ತು ಅಭ್ಯರ್ಥಿಯ ವೈಯಕ್ತಿಕ ವರ್ಚಸ್ಸಿನ ಮೇಲೆ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಜವಾಬ್ದಾರಿಯುತ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಅರ್ಹ ಪದವೀಧರರು ಮತ್ತು ಶಿಕ್ಷಕರ ಹೆಸರು ನೊಂದಾವಣೆಗೆ ಸಕ್ರಿಯವಾಗಿ ತೊಡಗಿಸಿಕೊಂಡು ನೈಋತ್ಯ ಪದವೀಧರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಗೆಲುವಿಗೆ ಸಂಘಟಿತರಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸೇವಾ ಪಾಕ್ಷಿಕ ಅಭಿಯಾನದ ಸಹಿತ ರಾಜ್ಯ ಬಿಜೆಪಿ ನೀಡಿರುವ ಎಲ್ಲ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸಲಾಗಿದೆ. ನೈಋತ್ಯ ಪದವೀಧರರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನೂ ಸವಾಲಾಗಿ ಸ್ವೀಕರಿಸಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಒತ್ತು ನೀಡುವ ಮೂಲಕ ಚುನಾವಣೆಯ ಗೆಲುವಿಗೆ ಕಾರ್ಯಕರ್ತರು ಕಂಕಣಬದ್ಧರಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ,
ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ಶಾಸಕರಾದ ಯಶ್ಪಾಲ್ ಎ. ಸುವರ್ಣ, ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣoಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಕೆ.ರಾಘವೇಂದ್ರ ಕಿಣಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸತ್ಯಾನಂದ ನಾಯಕ್, ನಳಿನಿ ಪ್ರದೀಪ್ ರಾವ್, ರೇಶ್ಮಾ ಉದಯ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಜಿಲ್ಲಾ ಮೋರ್ಚಾ ಅಧ್ಯಕ್ಷರುಗಳಾದ ವೀಣಾ ಎಸ್. ಶೆಟ್ಟಿ, ಸುರೇಂದ್ರ ಪಣಿಯೂರು, ವಿಖ್ಯಾತ್ ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕ್ಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಂಡಲ ಅಧ್ಯಕ್ಷರುಗಳಾದ ಮಹೇಶ್ ಠಾಕೂರ್, ವೀಣಾ ವಿ. ನಾಯ್ಕ್, ಶ್ರೀಕಾಂತ್ ನಾಯಕ್, ಮಹಾವೀರ ಹೆಗ್ಡೆ, ದೀಪಕ್ ಕುಮಾರ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Design a site like this with WordPress.com
Get started