ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿನಗರದಲ್ಲಿ “ಕೇಂದ್ರೀಯ ವಿದ್ಯಾಲಯ ಉಡುಪಿ” ಇದರ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಶಿಫಾರಸ್ಸಿನ ಮೇರೆಗೆ 25 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಂಕುಸ್ಥಾಪನೆಯನ್ನು ಇಂದು ದಿನಾಂಕ 25-09-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿ ಬೆಂಗಳೂರಿನ ಉಪ ಆಯುಕ್ತರಾದ ಧರ್ಮೇಂದ್ರ ಪಟ್ಲೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ



ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ನಿರ್ಮಾಣಗೊಳ್ಳಲಿರುವ ‘ಅಮೃತ ಉದ್ಯಾನವನ’ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಮಣ್ಣು ಸಂಗ್ರಹಿಸುವ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಾಲನೆ ನೀಡಿದರು.

ದೇಗುಲದ ಪರಿಸರದಲ್ಲಿ ಸಂಗ್ರಹಿಸಿದ ಪವಿತ್ರ ಮಣ್ಣನ್ನು ಅಮೃತ ಕಳಶಗಳಲ್ಲಿರಿಸಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಛೇರಿಯವರೆಗೆ ಮೆರವಣಿಗೆಯಲ್ಲಿ ತರಲಾಯಿತು.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಮೃತ ಕಳಸಗಳನ್ನು ಜಿಲ್ಲೆಯ ಎಲ್ಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಸ್ತಾಂತರಿಸಲಾಯಿತು. ಅ.13ರ ಒಳಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರ ಸಮಾಗಮದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಬಿಜೆಪಿ ಜಿಲ್ಲಾ ಕಛೇರಿಗೆ ತಲುಪಿಸಲು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ತಿಂಗಳೆ ವಿಕ್ರಮಾರ್ಜುನ ಹೆಗ್ಡೆೆ, ಶ್ಯಾಮಲಾ ಎಸ್. ಕುಂದರ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ದಿನಕರ ಬಾಬು, ವೀಣಾ ಎಸ್. ಶೆಟ್ಟಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಕಿರಣ್ ಕುಮಾರ್, ಅಭಿಯಾನದ ಸಂಯೋಜಕ ಸುಪ್ರಸಾದ್ ಶೆಟ್ಟಿ, ಸಹ ಸಂಯೋಜಕರಾದ ಶ್ರೀನಿಧಿ ಹೆಗ್ಡೆೆ, ಸುದೀಪ್ ಶೆಟ್ಟಿ ನಿಟ್ಟೆೆ ಮತ್ತು ನಳಿನಿ ಪ್ರದೀಪ್‌ ರಾವ್, ದೇವಸ್ಥಾನದ ವ್ಯವಸ್ಥಪನಾ ಸಮಿತಿ ಸದಸ್ಯ ಮಂಜುನಾಥ ಹೆಬ್ಬಾರ್, ಪ್ರಮುಖರಾದ ಪ್ರವೀಣ್‌ ಕುಮಾರ್ ಗುರ್ಮೆ, ದಾವೂದ್ ಅಬೂಬಕ್ಕರ್, ಆಲ್ವಿನ್ ಡಿ’ಸೋಜಾ, ದೀಪಕ್ ಕುಮಾರ್ ಶೆಟ್ಟಿ, ಶಂಕರ ಅಂಕದಕಟ್ಟೆ, ಮಹಾವೀರ ಹೆಗ್ಡೆ, ಶ್ರೀಕಾಂತ್ ನಾಯಕ್, ವೀಣಾ ನಾಯ್ಕ್, ದಿನೇಶ್ ಅಮೀನ್, ನವೀನ್ ನಾಯಕ್, ಪ್ರಿಯದರ್ಶಿನಿ, ರಾಜು ಕುಲಾಲ್, ರಘುವೀರ್ ಶೆಣೈ, ಸಚಿನ್ ಪೂಜಾರಿ, ಸುಮಾ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ಉಡುಪಿ ನಗರಸಭಾ ಸದಸ್ಯರುಗಳ ಸಹಿತ ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ



ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ‘ಅಮೃತ ಉದ್ಯಾನವನ’ ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿವಿಧ ಅಭಿಯಾನಗಳ ಕುರಿತು ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಮಣ್ಣನ್ನು ಸಂಗ್ರಹಿಸಿ, ಮಂಡಲವಾರು ಹಾಗೂ ಜಿಲ್ಲೆಯ ಮೂಲಕ ರಾಜ್ಯಕ್ಕೆ ಕಳುಹಿಸಲಾಗುವುದು. ಸೆ.24ರಂದು ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಭಿಯಾನಕ್ಕೆ ಚಾಲನೆ ದೊರೆತ ಬಳಿಕ ಮಣ್ಣು ಸಂಗ್ರಹಿಸುವ ಅಮೃತ ಕಳಸಗಳನ್ನು ಮೆರವಣೆಗೆ ಮೂಲಕ ಬಿಜೆಪಿ ಜಿಲ್ಲಾ ಕಛೇರಿಗೆ ತರಲಾಗುವುದು. ಬೆಳಿಗ್ಗೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಅಮೃತ ಕಳಸಗಳನ್ನು ವಿತರಿಸುವ ಜೊತೆಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಪಕ್ಷದ ವತಿಯಿಂದ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.

‘ನನ್ನ ಮಣ್ಣು ನನ್ನ ದೇಶ’ ಅಭಿಯಾನದ ಜಿಲ್ಲಾ ಸಂಯೋಜಕ ಸುಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಅಭಿಯಾನದ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ‘ಸೇವಾ ಪಾಕ್ಷಿಕ ಅಭಿಯಾನ’ದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ‘ಸೇವಾ ಪಾಕ್ಷಿಕ ಅಭಿಯಾನ’ದ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜಾ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಾಂಕರ್, ಬಿಜೆಪಿ ಕಾಪು ಮಂಡಲ ಉಪಾಧ್ಯಕ್ಷ ನವೀನ್ ಎಸ್.ಕೆ., ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಿತಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್

ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ



ಉಡುಪಿ: ಲೋಕಸಭೆ, ರಾಜ್ಯ ಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರ ಸದಸ್ಯತ್ವವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ನೂತನ ಸಂಸತ್ ಕಟ್ಟಡದಲ್ಲಿ ನಡೆದ ಮೊದಲ ಕಲಾಪದಲ್ಲಿ ಮಂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು. ಈ ಮಸೂದೆ ಮಂಡನೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಸ್ವಾಗತಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸದ್ಯದಲ್ಲೇ ಸಂಸತ್ತಿನಲ್ಲಿ ಅನುಮೋದನೆಗೊಂಡು ಶಾಸನವಾಗಿ ಮಾರ್ಪಾಡಾಗಲಿರುವ ಮಹಿಳಾ ಮೀಸಲಾತಿ ಮಸೂದೆ ನಾರೀ ಶಕ್ತಿಗೆ ಸಂಸತ್ತು ಮತ್ತು ವಿಧಾನಸಭೆಯಲ್ಲಿ 1/3ರಷ್ಟು ಪ್ರಾತಿನಿಧ್ಯ ನೀಡುವ ಮೂಲಕ ವರದಾನವಾಗಲಿದೆ. ಹೊಸ ಕಾನೂನುಗಳ ರಚನೆ ಸಹಿತ ದೇಶದ ಪ್ರಗತಿಯಲ್ಲಿ ಮಹಿಳೆಯರು ಇನ್ನಷ್ಟು ಮಹತ್ತರ ಪಾತ್ರ ವಹಿಸುವ ಅವಕಾಶ ನೀಡುವ ಮಹಿಳಾ ಮೀಸಲಾತಿ ಮಸೂದೆ ಮಂಡನೆಯ ದಿಟ್ಟ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ ಅಭಿನಂದನೀಯ. ಕಳೆದ 9 ವರ್ಷಗಳಿಂದ ಕೇಂದ್ರ ಸರಕಾರ ಮಹಿಳೆಯರಿಗೆ ಅಡುಗೆ ಮನೆಯಿಂದ ಪ್ರಾರಂಭಿಸಿ ವಿವಿಧ ವಿನೂತನ ಯೋಜನೆಗಳನ್ನು ನೀಡಿದೆ. ಮುಂದಿನ ಚುನಾವಣೆಯಲ್ಲಿ ಮಗದೊಮ್ಮೆ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿಸಲು ಮಹಿಳಾ ಮೋರ್ಚಾ ಸಹಿತ ನಾರೀ ಶಕ್ತಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತ ಬೆನ್ನಲ್ಲೇ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ‘ನಾರೀ ಶಕ್ತಿ ವಂದನ್ ಅಧಿನಿಯಮ್’ ಹೆಸರಿನಲ್ಲಿ ಮಹತ್ವದ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ ಭವನದಲ್ಲಿ ಮಂಡಿಸಿರುವುದು ದೇಶದಾದ್ಯಂತ ಮಹಿಳಾ ಸಮುದಾಯಕ್ಕೆ ದೊಡ್ಡ ಚೈತನ್ಯವನ್ನು ತುಂಬಿದೆ ಎಂದರು.

ಮಹಿಳಾ ಮೀಸಲಾತಿಯ ಬಗ್ಗೆ ಹಲವಾರು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ ಮೀಸಲಾತಿ ಮಸೂದೆ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವೇ ಬೇಕಾಯಿತು. ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆಡಳಿತಾವಧಿಯಲ್ಲಿಯೂ ಮಹಿಳಾ ಮೀಸಲಾತಿ ಮಸೂದೆ ಮಂಡಿಸಲ್ಪಟ್ಟಿದ್ದರೂ ಬಹುಮತದ ಕೊರತೆಯಿಂದ ಅಪೂರ್ಣವಾಗಿದ್ದ ಕನಸು ಇಂದು ಮೋದಿ ಆಡಳಿತದಲ್ಲಿ ನನಸಾಗಿದೆ. ಮಹಿಳೆಯರ ಅಭಿವೃದ್ಧಿ ಮತ್ತು ಮೀಸಲಾತಿಯ ಬಗ್ಗೆ ಗಂಭೀರವಾಗಿ ಆಲೋಚಿಸದ ಕಾಂಗ್ರೆಸ್ ಸಹಿತ ವಿಪಕ್ಷಗಳಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಈ ಮಹತ್ವದ ನಿರ್ಣಯವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯು ಉಭಯ ಸದನಗಳಲ್ಲಿ ಮಹಿಳೆಯರ ಗರಿಷ್ಠ ಭಾಗವಹಿಸುವಿಕೆಗೆ ನಾಂದಿ ಹಾಡುವ ಮೂಲಕ ನಾರೀ ಶಕ್ತಿಯ ಅನಾವರಣಕ್ಕೆ ಸಾಕ್ಷಿಯಾಗಲಿದೆ ಎಂದರು.

ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ ರತ್ನಾಕರ್, ಅಶ್ವಿನಿ ಆರ್. ಶೆಟ್ಟಿ, ರೇಣುಕಾ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಸುಜಾಲ ಸತೀಶ್, ಉಪಾಧ್ಯಕ್ಷೆ ಸರೋಜಾ ಶೆಣೈ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ನಗರ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ



ಉಡುಪಿ: ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ‘ಸೇವಾ ಪಾಕ್ಷಿಕ ಅಭಿಯಾನ’ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾದ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಸಾಧನೆಗಳ ಪ್ರದರ್ಶಿನಿಗೆ ಚಾಲನೆ ನೀಡಿ ಮಾತನಾಡಿದರು.

ಒಂದು ಕಾಲದಲ್ಲಿ ಹಾವಾಡಿಗರ ದೇಶ ಎಂಬ ಅಪಹಾಸ್ಯಕ್ಕೆ ಒಳಗಾಗಿದ್ದ ಭಾರತವನ್ನು ವಿಶ್ವ ಭೂಪಟದಲ್ಲಿ ಎದ್ದು ಕಾಣುವಂತೆ ಮಾಡಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಇಂದು ಜಗತ್ತಿನ ಬಲಿಷ್ಠ ರಾಷ್ಟ್ರಗಳ ನಾಯಕರು ಪ್ರಧಾನಿ ಮೋದಿಯವರ ಬೇಟಿಗೆ ಹಾತೊರೆಯುವ ಸ್ಥಿತಿ ನಿರ್ಮಾಣವಾಗಿದೆ. ‘ಸಬ್ ಕೇ ಸಬ್ ಕಾ ವಿಕಾಸ್’ ತತ್ವದಡಿ ಅಭಿವೃದ್ಧಿ ಪರ ಆಡಳಿತ ಮತ್ತು ಜನ ಪರ ವಿನೂತನ ಯೋಜನೆಗಳ ಅನುಷ್ಠಾನದ ಮೂಲಕ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನವನ್ನು ಸೆ.17ರಂದು ಜಿಲ್ಲೆಯಾದ್ಯಂತ ಸೇವಾ ಕಾರ್ಯಗಳ ಜೊತೆಗೆ ಆಚರಿಸಲಾಗಿದೆ. ಇದು ವ್ಯಕ್ತಿ ಪೂಜೆ ಅಲ್ಲ, ವ್ಯಕ್ತಿತ್ವದ ಪೂಜೆ ಎಂದರು.

ಪ್ರಧಾನಿ ಮೋದಿಯವರ 9 ವರ್ಷಗಳ ಆಡಳಿತಾವಧಿಯ ವಿಶಿಷ್ಟ ಸಾಧನೆಗಳ ಪ್ರದರ್ಶಿನಿ ಮುಖೇನ ಮೋದಿಯವರ ಉತ್ತಮ ಕೆಲಸ ಕಾರ್ಯಗಳನ್ನು ತಳ ಮಟ್ಟದಲ್ಲಿ ಗುರುತಿಸುವ ಕಾರ್ಯ ಆಗಬೇಕು. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿ ಪಕ್ಷದ ಕಾರ್ಯಕರ್ತರಿಗೆ ಇನ್ನಷ್ಟು ಸ್ಪೂರ್ತಿ ನೀಡುವ ಜೊತೆಗೆ ಹೊಸ ಕಾರ್ಯಕರ್ತರಿಗೆ ಪ್ರೇರಣೆ ತುಂಬಲಿ. ಸೇವಾ ಪಾಕ್ಷಿಕ ಅಭಿಯಾನ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಹಾಗೂ ಪ್ರದರ್ಶಿನಿಯ ಸಂಯೋಜಕ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಮುಖರಾದ ರಾಘವೇಂದ್ರ ಉಪ್ಪೂರು, ಪಾಂಡುರಂಗ ಲಾಗ್ವಾಂಕರ್, ನವೀನ್ ಎಸ್.ಕೆ., ಮಂಜುನಾಥ್ ಮಣಿಪಾಲ್, ಗೋಪಾಲಕೃಷ್ಣ ರಾವ್ ಮಟ್ಟು, ನಿತಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : ಶ್ರೀ ಗಣೇಶ ಚತುರ್ಥಿ ಆಚರಣೆ

ಉಡುಪಿ: ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಚೌತಿ ಪೂಜೆಯು ವಿಜೃಂಭಣೆಯಿಂದ ನೆರವೇರಿತು.

ಭಕ್ತಾದಿಗಳು ವಿವಿಧ ಬಗೆಯ ಭಕ್ಷ್ಯಗಳನ್ನು ಶ್ರೀ ವಿನಾಯಕ ದೇವರಿಗೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ, ಆಡಳಿತ ಸಮಿತಿ ಸದಸ್ಯರಾದ ವಿನಯ್ ಕುಮಾರ್, ಜನಾರ್ದನ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಶಂಕರ ಪೂಜಾರಿ, ಅರ್ಚಕರಾದ ಜೀವನ್, ಅದಿತ್, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಜತೆ ಕಾರ್ಯದರ್ಶಿ ಅಶ್ವಿನಿ ಪೂಜಾರಿ, ಸಮಿತಿ ಸದಸ್ಯೆಯರಾದ ಲೋಲಾಕ್ಷಿ, ಸುನಿತಾ ಶಂಕರ ಪೂಜಾರಿ, ಪ್ರಮುಖರಾದ ರಮೇಶ್ ಕೋಟ್ಯಾನ್, ಕುಶಲ್ ಕುಮಾರ್, ರವಿ ಪಾಲನ್, ಸುಧಾಕರ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ



ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ‌ ಇಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ನಮ್ಮ ವಿಶ್ವನಾಯಕ ಮೋದೀಜಿಯವರಿಗೆ ದೊರಕಲಿ ತನ್ಮೂಲಕ ಮತ್ತೆ ಮೋದೀಜಿಯವರ ನೇತ್ರತ್ವದಲ್ಲಿ ಚುನಾವಣೆಯಲ್ಲಿ ಗೆದ್ದು ಅವರ ನೇತ್ರತ್ವದಲ್ಲಿ ಭಾರತ ಭಾರತ ಪರಮವೈಭವಕ್ಕೆ ಸಾಗಲಿ ಎಂದು ಶುಭಹಾರೈಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮೋದೀಜಿಯವರ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿ ಮೋದೀಜಿ ಇಂದು ಇಡೀ ವಿಶ್ವಕ್ಕೆ ವಿಶ್ವಶಾಂತಿಗೆ ಅನಿವಾರ್ಯ ನಾಯಕ ಎಂದು ಶುಭಹಾರೈಸಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಶುಭಹಾರೈಸಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿಯ ವೈದ್ಯರಾದ ಡಾ.ವೀಣಾ, ಕಾರ್ಯಕ್ರಮದ ಸಂಚಾಲಕರಾದ ನವೀನ್ ಎಸ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 53 ಬಾರಿ ರಕ್ತದಾನ ಮಾಡಿದ ರಾಘವೇಂದ್ರ ಪ್ರಭು ಕರ್ವಾಲು, ವಿಕಲಚೇತನರ ಪ್ಯಾರ ಒಲಂಪಿಕ್ಸ್ ನಲ್ಲಿ ‌ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾಮ ಪಡೆದ ಯಶೋಧ ರಾಮಚಂದ್ರನ್ ಇವರಿಗೆ ಗೌರವಾರ್ಪಣೆ ನಡೆಯಿತು. ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ‌ ನಿರೂಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಆಗಮಿಸಿ ಶುಭ ಹಾರೈಸಿದರು. ಹಿಂದುಳಿದ ವರ್ಗ ಮೋರ್ಚದ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರು, ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ಪ್ರವೀಣ್ ಗುರ್ಮೆ, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಪ್ರಮುಖರಾದ ಲತಾ ಆಚಾರ್ಯ, ಅನಿಲ್ ಕುಮಾರ್, ಹೈದರ್, ಸುರೇಖ ಶೈಲೇಶ್, ಶೈಲೇಶ್, ರಾಜ್ ಪಡುಬಿದ್ರೆ, ಶಶಿಧರ್ ವಾಗ್ಳೆ, ಕೇಸರಿ ಯುವರಾಜ್, ಶಶಿಪ್ರಭಾ ಶೆಟ್ಟಿ, ಅನಿಲ್ ಶೆಟ್ಟಿ ಮಲ್ಲಾರು ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ



ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಜಾ ಮತ್ತು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಇದರ ಜಂಟಿ ಆಶ್ರಯದಲ್ಲಿ ರಕ್ತನಿಧಿ ವಿಭಾಗ ಕೆಎoಸಿ‌ ಮಣಿಪಾಲ ಇದರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸೆ.17ರಂದು ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆಯಂದು ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಚಾ ರಕ್ತದಾನ ಶಿಬಿರ ಆಯೋಜಿಸಿ‌ ಇತರರಿಗೆ ಮಾದರಿಯಾಗಿದ್ದಾರೆ. ದೇಶದ ಕಟ್ಟಕಡೆಯ ವ್ಯಕ್ತಿಯೂ ಇಂದು ನಿರ್ಭೀತಿಯಿಂದ ನೆಮ್ಮದಿಯ ಜೀವನ ನಡೆಸುವಂತೆ ಮಾಡಿದ ಭಾರತ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಲು ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಪ್ರಶಂಸನೀಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಮೋರ್ಚಾ ಸಹಿತ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸೆ.17ರಿಂದ ಅ.2ರ ವರೆಗೆ ನಡೆಯುವ ಸೇವಾ ಪಾಕ್ಷಿಕ ಅಭಿಯಾನದ ಎಲ್ಲಾ ಸೇವಾ ಚಟುವಟಿಕೆಗಳಲ್ಲಿ ಪಕ್ಷದ ಸಮಸ್ತ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ ಪ್ರತೀ ವರ್ಷ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರದಂತಹ ಜನೋಪಯೋಗಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಪ್ರಧಾನಿ ಮೋದಿ ಜನ್ಮ ದಿನಾಚರಣೆ ಬಿಜೆಪಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವ ಕಾರ್ಯಕ್ರಮ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರು, ಜಿಲ್ಲಾ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಉಡುಪಿ ನಗರ ಮಹಿಳಾ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.

ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ನಿಕಟಪೂರ್ವ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ



ಉಡುಪಿ: ಮುಂಬರಲಿರುವ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ರಾಜ್ಯ ಸಂಚಾಲಕ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಬಿಜೆಪಿ ಉಡುಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.

ಈ ಚುನಾವಣೆಯು ಪಕ್ಷಾಧಾರಿತ ಚುನಾವಣೆಯಾಗಿದ್ದು ಪಕ್ಷದ ವಿಚಾರಧಾರೆ ಇರುವವರನ್ನು ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸುವ ಜೊತೆಗೆ ನಕಲಿ ಮತದಾರರ ಸೇರ್ಪಡೆಯಾಗದಂತೆ ನಿಗಾ ವಹಿಸಬೇಕು. 3 ವರ್ಷದ ಪದವಿ ಪಡೆದು ನ.1ರಂದು 3 ವರ್ಷ ಪೂರೈಸುವ ಪದವೀಧರರು ಪದವೀಧರ ಕ್ಷೇತ್ರಕ್ಕೆ ಮತ್ತು ಕಳೆದ 6 ವರ್ಷಗಳಲ್ಲಿ ಕನಿಷ್ಠ 3 ವರ್ಷ ನಿರಂತರ 8ನೇ ತರಗತಿ ಮೇಲ್ಪಟ್ಟ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಕ್ಷಕರು ಶಿಕ್ಷಕರ ಕ್ಷೇತ್ರಕ್ಕೆ ಹಾಗೂ ಈ ನಿಗದಿತ ಅರ್ಹತೆ ಹೊಂದಿರುವವರು ಎರಡೂ ಕ್ಷೇತ್ರಗಳ ಮತದಾರರಾಗಿ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು.

ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದ್ದು, ಜವಾಬ್ದಾರಿ ಹೊಂದಿರುವ ತಂಡದ ಜೊತೆಗೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಚುನಾವಣೆಯ ಪೂರ್ಣ ಪ್ರಮಾಣದ ಗೆಲುವಿಗೆ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಈ ಹಿಂದಿನ ಚುನಾವಣೆಗಳ ವಿಶ್ಲೇಷಣೆ ಸಹಿತ ಪ್ರಾಸ್ತಾವಿಕವಾಗಿ ಮಾತನಾಡಿ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಬಾರಿ ಗೆಲುವು ಸಾಧಿಸಿರುವ ಇತಿಹಾಸವಿದೆ. ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತೀ ಮಂಡಲವಾರು ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಕೈಜೋಡಿಸಬೇಕು ಎಂದರು.

ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಚುನಾವಣೆಯ ಪರ್ವಕಾಲದಲ್ಲಿರುವ ಈ ಸನ್ನಿವೇಶದಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಗೆಲುವಿನ ಔಚಿತ್ಯವನ್ನು ಅರ್ಥೈಸಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಲಾಲಾಜಿ ಆರ್. ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ,ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ



ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲು ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ನೇತೃತ್ವದ ರಾಜ್ಯ ತಂಡದಿಂದ ಉಡುಪಿ ಜಿಲ್ಲಾ ಮಟ್ಟದ ಸಭೆಯು ಸೆ.14ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಜರಗಿತು.

ಮತದಾರರ ಪಟ್ಟಿ ಪರಿಷ್ಕರಣೆ ಸಹಿತ ಬೂತ್ ಮಟ್ಟದಿಂದ ಜಿಲ್ಲಾ ಸ್ತರದ ವರೆಗಿನ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಈಗಿಂದೀಗಲೇ ಚುನಾವಣೆಗೆ ಸಜ್ಜುಗೊಳಿಸಲು ನಿಶ್ಚಯಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ.ರಘುಪತಿ ಭಟ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಮನೋಹರ್ ಎಸ್. ಕಲ್ಮಾಡಿ ಉಪಸ್ಥಿತರಿದ್ದರು.

Design a site like this with WordPress.com
Get started