ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ



ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬಿಜೆಪಿ ಉಡುಪಿ ಗ್ರಾಮಾಂತರ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಚಂದ್ರಶೇಖರ ಪ್ರಭು ಹಾಗೂ ವಿನೋದ್ ನಾಯಕ್ ರವರಿಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ಪದಾಧಿಕಾರಿಗಳು ಆರತಿ ಬೆಳಗಿ, ತಿಲಕವಿಟ್ಟು, ರಕ್ಷೆ ಕಟ್ಟಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಸುಜಾಲ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪ್ರಮುಖರಾದ ರಜನಿ ಹೆಬ್ಬಾರ್, ಅಶ್ವಿನಿ ಶೆಟ್ಟಿ, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಸರೋಜ ಶೆಣೈ, ಯಶೋಧ, ಶಾಂತಿ ಮನೋಜ್, ಚಂದ್ರಿಕಾ ಮುಂತಾದವರು ಉಪಸ್ಥಿತರಿದ್ದರು.

ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ?: ಕುಯಿಲಾಡಿ



ಉಡುಪಿ: ಹೆಣ್ಣಿಗೆ ನ್ಯಾಯ ಕೊಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ.

ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.29ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಹಿರಿಯ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡುವಾಗ ಬಳಸುವ ಪದ ಮತ್ತು ವಿಚಾರದ ಬಗ್ಗೆ ಎಚ್ಚರ ವಹಿಸುವುದು ಸೂಕ್ತ. ತಿಮರೋಡಿ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ಇದರಲ್ಲಿ ರಾಜಕೀಯ ವಾಸನೆ ಇರುವುದು ಸ್ಪಷ್ಟವಾಗುತ್ತಿದೆ.

ಸೌಜನ್ಯಾ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ಸೌಜನ್ಯಾ ಅತ್ಯಾಚಾರ ಮತ್ತು ಸಾವಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತಿದೆ. ಆದರೂ ಮಹೇಶ್ ಶೆಟ್ಟಿ ತಿಮರೋಡಿ ಉದ್ದೇಶಪೂರ್ವಕವಾಗಿಯೇ ಅಸಂಬದ್ಧ ಪದ ಪ್ರಯೋಗದೊಂದಿಗೆ ಕೇವಲ ಬಿಜೆಪಿ ಮುಖಂಡರ ತೇಜೋವಧೆಗೈಯುವ ಮೂಲಕ ಹೋರಾಟದ ದಿಕ್ಕು ತಪ್ಪಿಸಲು ಹೊರಟಿರುವುದು ವಿಷಾದನೀಯ.

ಸೌಜನ್ಯಾ ಪರ ಹೋರಾಟವನ್ನು ನೆಪವಾಗಿಟ್ಟುಕೊಂಡು ರಾಜಕೀಯ ತೆವಲಿಗೆ ಜೋತು ಬಿದ್ದಂತಿರುವ ಮಹೇಶ್ ಶೆಟ್ಟಿ ತಿಮರೋಡಿಯ ಹೋರಾಟದ ಕಾಂಟ್ರಾಕ್ಟ್ ಪ್ರಾಯಶಃ ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ಮುಗಿಯಲಿದೆ ಎಂದು ಭಾಸವಾಗುತ್ತಿದೆ.

ಸೌಜನ್ಯಾ ಅತ್ಯಾಚಾರ ಮತ್ತು ಸಾವಿಗೆ ನ್ಯಾಯ ಕೊಡಿಸುವ ನೈಜ ಕಾಳಜಿ ಇದ್ದಲ್ಲಿ ತಿಮರೋಡಿ, ವಸ್ತುನಿಷ್ಠ ವಿಚಾರಗಳೊಂದಿಗೆ, ಪ್ರಚಾರದ ಗೀಳಿಗೆ ಜೋತು ಬೀಳದೆ, ಸಾಂವಿಧಾನಿಕ ರೀತಿಯಲ್ಲಿ ನ್ಯಾಯಸಮ್ಮತ ಹೋರಾಟ ಮುಂದುವರಿಸುವುದು ಉತ್ತಮ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ


ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕರು, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷರೂ, ಕಟಪಾಡಿ
ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷರೂ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ‌ಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡು ಶುಭ ಹಾರೈಸಿದರು. ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅಶೋಕ್ ರಾವ್ ಕಟಪಾಡಿಯಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಗೆ ಶಕ್ತಿತುಂಬುವ ಕೆಲಸ ಮಾಡಿ ಪಕ್ಷದ ಗೌರವ ಹೆಚ್ಚಿಸುವ ಕೆಲಸ ಮಾಡುವೆ ಎಂದರು.

ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ, ಕಟಪಾಡಿಯ ಪ್ರಮುಖರಾದ ಗಂಗಾಧರ್ ಸುವರ್ಣ ಮುರಳೀಧರ ಪೈ, ಶಿಲ್ಪಾ ಜಿ ಸುವರ್ಣ, ಸುಭಾಸ್ ಬಲ್ಲಾಳ್, ಗುರುಕ್ರಪಾ ರಾವ್, ಕವಿತಾ ಸುವರ್ಣ, ಶ್ರೀನಿವಾಸ ಕಿಣಿ, ಪವಿತ್ರ ಶೆಟ್ಟಿ, ರಘುಪತಿ‌ ಆಚಾರ್ಯ, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ನಿತೇಶ್ ದೇವಾಡಿಗ, ಕಟಪಾಡಿ‌ ಪಂಚಾಯತ್ ನ ಎಲ್ಲ ಸದಸ್ಯರುಗಳು, ಮುಖಂಡರುಗಳಾದ ಅರುಣ್ ಶೆಟ್ಟಿ ‌ಪಾದೂರು, ಅನಿಲ್ ಕುಮಾರ್, ನವೀನ್ ಎಸ್ ಕೆ, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ಸಂದೀಪ್ ಶೆಟ್ಟಿ, ಸಂದೀಪ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ



ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಪಂಚಮ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಭಜನೆ, ಸಾಮೂಹಿಕ ಅಷ್ಟೋತ್ತರ, ಕುಂಕುಮಾರ್ಚನೆ, ಮಹಾ ಪೂಜೆ ಹಾಗೂ ಅನ್ನ ಪ್ರಸಾದ ವಿತರಣೆ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಕೋಶಾಧಿಕಾರಿ ಸವಿತಾ ಸಂತೋಷ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಸಂಚಲ ಶಶಿಕಾಂತ್, ಸಂಘದ ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ಭಾಸ್ಕರ ಅಂಚನ್, ವಿನಯ್ ಕುಮಾರ್, ಸತೀಶ್ ಜಿ. ಪೂಜಾರಿ, ಚೆನ್ನಕೇಶವ,ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಗ್ರಾ.ಪಂ. ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಪ್ರಮುಖರಾದ ಶಶಿಕಾಂತ್, ಮಹೇಶ್ ಕುಮಾರ್, ಅಚ್ಯುತ ಪೂಜಾರಿ, ನಾರಾಯಣ ಪೂಜಾರಿ, ಆನಂದ ಕೋಟ್ಯಾನ್ ಹಾಗೂ ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಅಂಬಲಪಾಡಿ : ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ



ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ, ಸಂಘದ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಮಾಹಿತಿ ಕಾರ್ಯಕ್ರಮದಲ್ಲಿ ಅಂಬಲಪಾಡಿ ಪರಿಸರದ ಹಿರಿಯ ಕೃಷಿಕ ಮಹಿಳೆಯರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ ಆಚಾರಿಗುಂಡಿ-ಬಂಕೇರಕಟ್ಟ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಅಂಬಲಪಾಡಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೇಮಂತ್ ಕುಮಾರ್, ಎನ್ಎಲ್ಆರ್ ಎಮ್ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಶಮಂತ್, ಜಯಮಾಲಾ, ತಾಲೂಕು ಸಂಪನ್ಮೂಲ ವ್ಯಕ್ತಿ ರಂಜಿತಾ, ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಗೌರವ ಸದಸ್ಯರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಂಘದ ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಸಂಚಲ ಶಶಿಕಾಂತ್, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಉಪಾಧ್ಯಕ್ಷೆ ಉಷಾ ಕಿದಿಯೂರು, ಕಾರ್ಯದರ್ಶಿ ಗೀತಾ ಹರೀಶ್ ಪಾಲನ್, ಎಂಬಿಕೆ ಪ್ರಮೀಳಾ ಶಶಿಕಾಂತ್, ಎಲ್ಸಿಆರ್ಪಿ ಇಂದಿರಾ ಪಾಂಡು, ಪುಷ್ಪಲತಾ ಹರೀಶ್, ಶಮಿತಾ, ಬಿಆರ್ಪಿವಿಪಿ ಪ್ರಮೀಳಾ ಸುಧಾಕರ್, ಪಶು ಸಖಿ ಸುಪ್ರಿತಾ ಮನೋಜ್ ಹಾಗೂ ಸಂಘದ ಆಡಳಿತ ಸಮಿತಿಯ ಸದಸ್ಯರು, ಸಂಘದ ಮಹಿಳಾ ಘಟಕ, ಉಜ್ವಲ ಸಂಜೀವಿನಿ ಒಕ್ಕೂಟ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಭಾರತದ ಅದ್ವಿತೀಯ ಸಾಧನೆಗೆ ವಿಶ್ವವೇ ಬೆರಗು: ಕುಯಿಲಾಡಿ ಸುರೇಶ್ ನಾಯಕ್ ಚಂದ್ರಯಾನ-3 ಅದ್ಬುತ ಯಶಸ್ಸು : ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ





ಉಡುಪಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಮಸ್ತ ಭಾರತೀಯರಿಗೆ ಹೆಮ್ಮೆ ತಂದಿದೆ. ಈ ಐತಿಹಾಸಿಕ ಸಾಧನೆಗೈದಿರುವ ಇಸ್ರೋ ವಿಜ್ಞಾನಿಗಳ ಇಡೀ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಭಾರತ ಇಂತಹ ವಿಶ್ವ ದಾಖಲೆಯ ಸಾಧನೆಯ ಹೊಸ ಮೈಲಿಗಲ್ಲು ತಲುಪಿರುವುದು ಶ್ಲಾಘನೀಯ. ಈ ಅದ್ವಿತೀಯ ಸಾಧನೆಯ ಮೂಲಕ ವಿಶ್ವವೇ ಬೆರಗಾಗಿ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಇಸ್ರೋ ವಿಜ್ಞಾನಿಗಳ ವಿಕ್ರಮ ಸಾಧನೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಕ್ಷಣವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಚಂದ್ರಯಾನ-3ರ ಅದ್ಭುತ ಯಶಸ್ಸಿನ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಚಂದ್ರಯಾನ-3ರ ಯಶಸ್ವಿ ಲ್ಯಾಂಡಿಂಗ್ ನ ನೇರ ಪ್ರಸಾರವನ್ನು ವೀಕ್ಷಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಬಳಿಕ ಉಡುಪಿ ಕ್ಲಾಕ್ ಟವರ್ ಬಳಿ ಸಿಹಿತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಮುಖರಾದ ಪ್ರದೀಪ್ ರಾವ್, ಪಾಂಡುರಂಗ ಲಾಗ್ವಾಂಕರ್, ವಿಜೇತ್ ಕುಮಾರ್, ಅಕ್ಷಯ್ ಶೆಟ್ಟಿ, ಚಂದ್ರಶೇಖರ್ ಪ್ರಭು, ಜಯಪ್ರಕಾಶ್, ದಿನೇಶ್ ಅಮೀನ್, ಸಚಿನ್ ಪೂಜಾರಿ, ಗಣೇಶ್ ಕುಲಾಲ್, ದಿನಕರ್ ಪೂಜಾರಿ, ಶಿವರಾಮ್, ಜಗದೀಶ್ ಶೆಟ್ಟಿ, ವಿಜಯರಾಜ್ ಮುಂತಾದವರು ಉಪಸ್ಥಿತರಿದ್ದರು.

ಕಟಪಾಡಿ ಪಂಚಾಯತ್ ಬಿಜೆಪಿ ವಶ



ಕಾಪು: ಕಟಪಾಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಶೋಕ್ ರಾವ್ ರವರು ಆಯ್ಕೆಯಾಗಿದ್ದಾರೆ. 26 ಜನ ಸದಸ್ಯರಲ್ಲಿ 10 ಬಿಜೆಪಿ ಹಾಗೂ 16 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕೊನೆಯ ಕ್ಷಣದಲ್ಲಿ ಅಶೋಕ್ ರಾವ್ ಹಾಗೂ ಹಲವರು ಬಿಜೆಪಿ ಪಕ್ಷ ಸೇರ್ಪಡೆಗೊಂಡು ಜಿದ್ದಾ ಜಿದ್ದು ಹೋರಾಟದಲ್ಲಿ ಕೊನೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ್ ರಾವ್ ಜಯಗಳಿಸಿರುವರು. ಇತಿಹಾಸದಲ್ಲಿ ಮೊದಲ ಬಾರಿಗೆ ಕಟಪಾಡಿ ಪಂಚಾಯತ್ ಬಿಜೆಪಿ ವಶವಾಗಿದೆ.

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ: ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ, ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮ


ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಜಂಟಿ ಸಹಯೋಗದೊಂದಿಗೆ ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು.

ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೇಮಂತ್ ಕುಮಾರ್ ರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ತೋಟಗಾರಿಕೆ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ರವರು ಆಟಿ ತಿಂಗಳ ಆಹಾರ ಪದ್ಧತಿ ಹಾಗೂ ಕೃಷಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕೃಷಿ ಚಟುವಟಿಕೆಗಳಲ್ಲಿ ಸುದೀರ್ಘ ಅವಧಿಗೆ ತೊಡಗಿಸಿಕೊಂಡಿದ್ದ ಸಂಘದ ಪರಿಸರದ ಸರೋಜಿನಿ ಪೂಜಾರ್ತಿ ಅಂಬಲಪಾಡಿ, ಜಾನಕಿ ಪೂಜಾರ್ತಿ ಅಂಬಲಪಾಡಿ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎನ್ಎಲ್ಆರ್ ಎಮ್ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಶಮಂತ್, ಜಯಮಾಲಾ, ತಾಲೂಕು ಸಂಪನ್ಮೂಲ ವ್ಯಕ್ತಿ ರಂಜಿತಾ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಗೌರವ ಸದಸ್ಯರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಂಘದ ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಸಂಚಲ ಶಶಿಕಾಂತ್, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಉಪಾಧ್ಯಕ್ಷೆ ಉಷಾ ಕಿದಿಯೂರು, ಕಾರ್ಯದರ್ಶಿ ಗೀತಾ ಹರೀಶ್ ಪಾಲನ್, ಎಂಬಿಕೆ ಪ್ರಮೀಳಾ ಶಶಿಕಾಂತ್, ಎಲ್ಸಿಆರ್ಪಿ ಇಂದಿರಾ ಪಾಂಡು, ಪುಷ್ಪಲತಾ ಹರೀಶ್, ಶಮಿತಾ, ಬಿಆರ್ಪಿವಿಪಿ ಪ್ರಮೀಳಾ ಸುಧಾಕರ್, ಪಶು ಸಖಿ ಸುಪ್ರಿತಾ ಮನೋಜ್ ಹಾಗೂ ಸಂಘದ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯರು, ವಿದ್ಯಾರ್ಥಿನಿಯರು ಮತ್ತು ಪುಟಾಣಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳ ಸಹಿತ ಸಾಮೂಹಿಕ ಸಹ ಭೋಜನ ನಡೆಯಿತು.

ಆರೋಗ್ಯವಂತ ಜೀವನಕ್ಕಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ : ಶಿವರಾಯ ಪ್ರಭು



ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ನಾಂದಿ ಹಾಡಿದೆ. ವಿದ್ಯಾರ್ಥಿಗಳು ಪಡೆದ ಮಾಹಿತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಇದರ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಕರೆ ನೀಡಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಅಂಬಲಪಾಡಿ ವಲಯ ಇದರ ಆಶ್ರಯದಲ್ಲಿ ಮಲ್ಪೆ ಫಿಷರೀಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಎ.ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಮಗ್ರ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಗದೀಶ್ ಸಾಲ್ಯಾನ್, ಕಲ್ಮಾಡಿ ಸಮೃದ್ಧಿ ಒಕ್ಕೂಟದ ಅಧ್ಯಕ್ಷೆ ಇಂದಿರಾ ವಾಸು, ಶಿಕ್ಷಕ ವೃಂದ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಯೋಜನೆಯ ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಗೀತಾ ಹರೀಶ್ ಪಾಲನ್ ವಂದಿಸಿದರು.

ಬೊಮ್ಮಾರಬೆಟ್ಟು ಗ್ರಾ.ಪಂ. ಸದಸ್ಯ ಹರೀಶ್ ಸಾಲ್ಯಾನ್ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ



ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸಾಲ್ಯಾನ್ ರವರನ್ನು ಶಿಸ್ತು ಮೀರಿದ ವರ್ತನೆಯ ಕಾರಣಕ್ಕಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started