ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ : ‘ಕೆಸರ್ದ ಗೊಬ್ಬು’ ಗ್ರಾಮೀಣ ಕ್ರೀಡಾ ಕೂಟ



ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ ಇದರ ನೇತೃತ್ವದಲ್ಲಿ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಉಜ್ವಲ ಸಂಜೀವಿನಿ ಒಕ್ಕೂಟ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಆಟಿ ತಿಂಗಳ ಗ್ರಾಮೀಣ ಕ್ರೀಡಾ ಕೂಟ ‘ಕೆಸರ್ದ ಗೊಬ್ಬು-2023’ ಅಂಬಲಪಾಡಿಯ ಬಂಕೇರಕಟ್ಟ ಆಚಾರಿಗುಂಡಿ ದ್ವಾಲಮಾರ್ ಗದ್ದೆಯಲ್ಲಿ ಸಂಪನ್ನಗೊಂಡಿತು.

ಕೆಸರು ಗದ್ದೆ ಕ್ರೀಡಾ ಕೂಟ ಕೆಸರ್ದ ಗೊಬ್ಬು-2023ನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೆಂಗಿನ ತೆನೆ ಅರಳಿಸಿ, ಗದ್ದೆಗೆ ಹಾಲೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಚಿಕ್ಕಂದಿನಲ್ಲಿ ಮನೆ ಮಂದಿಯೊಂದಿಗೆ ಗದ್ದೆಯಲ್ಲಿ ಕೃಷಿ ಚಟುವಟಿಕೆಗೆ ಓಡಾಡಿದ ನೆನಪು ಮುರುಕಳಿಸುತ್ತಿದೆ. ಇಂದು ಗ್ರಾಮೀಣ ಪ್ರದೇಶದಲ್ಲಿ ಬೇಸಾಯ ವೃತ್ತಿ ಕುಂಠಿತವಾಗಿರುವ ಹಂತದಲ್ಲಿ ಹಡಿಲು ಭೂಮಿ ಕೃಷಿಯಲ್ಲಿ ತೊಡಸಿಕೊಳ್ಳುವ ಜೊತೆಗೆ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ‘ಕೆಸರ್ದ ಗೊಬ್ಬು’ ಆಯೋಜಿಸಿರುವುದು ಪ್ರಶಂಸನೀಯ. ಇಂತಹ ಮಾದರಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿರುವ ಸ್ವಾಮಿ ಫ್ರೆಂಡ್ಸ್ ತಂಡದ ಸರ್ವ ಸದಸ್ಯರು ಹಾಗೂ ಸಹರಿಸಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಸಂಸ್ಥೆಯ ಮೂಲಕ ಮುಂದೆಯೂ ಇನ್ನಷ್ಟು ಸಮಾಜಮುಖಿ ಕಾರ್ಯ ಚಟುವಟಿಕೆಗಳು ಮೂಡಿ ಬರುವಂತಾಗಲಿ ಎಂದು ಹಾರೈಸಿದರು.

ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರ್ಕಟ್ಟ ಇದರ ಗೌರವಾಧ್ಯಕ್ಷ ವಿಶ್ವನಾಥ್ ಹೆಗ್ಡೆ, ಹಡಿಲು ಭೂಮಿ ಕೃಷಿಕ ರಿಕೇಶ್ ಪಾಲನ್ ಕಡೆಕಾರು, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಭಾರತಿ ಭಾಸ್ಕರ್ ಮಾತನಾಡಿ, ಮಾಜಿ ಶಾಸಕ ಕೆ.ರಘುಪತಿ ಭಟ್ ರವರ ಕ್ರಾಂತಿಕಾರಿ ಹಡಿಲು ಭೂಮಿ ಕೃಷಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಯುವಜನತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ದೊರೆತಿದೆ. ಕೆಸರು ಗದ್ದೆಯ ಕ್ರೀಡಾಕೂಟದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವ ಜೊತೆಗೆ ಯುವ ಜನತೆ ಹಡಿಲು ಭೂಮಿ ಕೃಷಿ ಸಹಿತ ತಮ್ಮ ಮನೆಯ ತೋಟಗಳಲ್ಲಿ ತರಕಾರಿ ಬೆಳೆಯ ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಅಗತ್ಯತೆ. ಈ ನಿಟ್ಟಿನಲ್ಲಿ ಸ್ವಾಮಿ ಫ್ರೆಂಡ್ಸ್ ತಂಡದ ಪ್ರಯತ್ನ ಶ್ಲಾಘನೀಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಪ್ರಭಾರ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಇಂದಿನ ತಾಂತ್ರಿಕ ಯುಗದಲ್ಲಿ ಒಂದು ದಿನ ಪೂರ್ತಿ ಗ್ರಾಮಸ್ಥರೆಲ್ಲ ಒಂದಾಗಿ ಪ್ರಕೃತಿಯ ಮಡಿಲ ಕೆಸರು ಗದ್ದೆಯ ಆಟೋಟಗಳಲ್ಲಿ ಸ್ವೇಚ್ಛೆಯಿಂದ ಪಾಲ್ಗೊಳ್ಳುವ ಸದವಕಾಶವನ್ನು ಸ್ವಾಮಿ ಫ್ರೆಂಡ್ಸ್ ತಂಡ ಒದಗಿಸಿದೆ. ಗ್ರಾಮೀಣ ಭಾಗದ ಭವ್ಯ ಪರಂಪರೆ, ಸಾಂಸ್ಕೃತಿಕ ವೈಭವವನ್ನು ಮೆಲುಕು ಹಾಕುವ ಕ್ಷಣ ಇದಾಗಿದೆ. ಇದರ ಜೊತೆಗೆ ಯುವ ಜನತೆ ಹಾಗೂ ಉಜ್ವಲ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಮಾಜಿ ಶಾಸಕ ಕೆ.ರಘುಪತಿ ಭಟ್ ರವರ ಉದಾತ್ತ ಯೋಜನೆ ಹಡಿಲು ಭೂಮಿ ಕೃಷಿಯಲ್ಲಿಯೂ ತೊಡಗಿಸಿಕೊಳ್ಳುವ ಹುಮ್ಮಸ್ಸು ಇಮ್ಮಡಿಯಾಗಿದೆ. ಈ ಮಾದರಿ ಕಾರ್ಯಕ್ರಮವನ್ನು ಆಯೋಜಿಸುವ ಜೊತೆಗೆ ಹಿರಿಯ ಕೃಷಿಕ ಮಹಿಳೆಯರನ್ನು ಗೌರವಿಸಿ ಪ್ರೋತ್ಸಾಹಿಸಿದ ಸ್ವಾಮಿ ಫ್ರೆಂಡ್ಸ್ ತಂಡದ ಸರ್ವ ಸದಸ್ಯರಿಗೆ ಹಾಗೂ ‘ಕೆಸರ್ದ ಗೊಬ್ಬು’ ಗ್ರಾಮೀಣ ಕ್ರೀಡಾ ಕೂಟದ ಯಶಸ್ಸಿಗೆ ಕೈಜೋಡಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.

ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಸ್ಥಳೀಯ ಕೃಷಿಕ ಪಟೇಲರ ಮನೆ ಶರತ್ ಶೆಟ್ಟಿ, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಸ್ಥಳೀಯರಾದ ಭುವನೇಂದ್ರ ಮೈಂದನ್, ಕಾರ್ಯಕ್ರಮದ ಸಂಯೋಜಕರಾದ ಸ್ವಾಮಿ ಫ್ರೆಂಡ್ಸ್ ತಂಡದ ವಿನೋದ್ ಪೂಜಾರಿ, ಸಂದೇಶ್ ಹಾಗೂ ಸಂಸ್ಥೆಯ ಸರ್ವ ಸದಸ್ಯರು, ಉಜ್ವಲ ಸಂಜೀವಿನಿ ಒಕ್ಕೂಟದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಯುವ ಜನತೆ, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, ಉದ್ಯಮಿಗಳಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಾಲಕೃಷ್ಣ ಶೆಟ್ಟಿ ನಿಟ್ಟೂರು ಕ್ರೀಡಾ ಕೂಟಕ್ಕೆ ಆಗಮಿಸಿ ಶುಭ ಹಾರೈಸಿದರು.

ಶಿವಾನಂದ ಕಟ್ಟೆಗುಡ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ರಾಜ್ಯದಲ್ಲಿ ಹಿಟ್ಲರ್ ಮಾದರಿಯ ನಿರಂಕುಶ ಆಡಳಿತದಿಂದ ಕರಾಳ ಭವಿಷ್ಯ ನಿಶ್ಚಿತ; ಬಂಧಿತ ಭಯೋತ್ಪಾದಕರ ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸಿ: ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ, ಸರ್ವಾಧಿಕಾರಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಜನತೆಗೆ ಆಮಿಷವನ್ನು ಒಡ್ಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಗ್ಯಾರಂಟಿಗಳನ್ನು ಮರೆತು ಜನರ ಗಮನವನ್ನು ಬೇರೆಡೆಗೆ ಒಯ್ಯಲು ವಿವಿಧ ಜನ ವಿರೋಧಿ, ಸಂವಿಧಾನ ವಿರೋಧಿ ಕಾರ್ಯಗಳಲ್ಲಿ ತೊಡಗಿದೆ. ಇದರ ಭಾಗವಾಗಿ ವಿಧಾನಸಭೆಯಲ್ಲಿ ಉಪ ಸಭಾಪತಿಯವರ ಎದುರು ಪೇಪರ್ ಹರಿದು ಎಸೆದ ಕಾರಣಕ್ಕೆ ಸ್ಪೀಕರ್ ರವರು ಸರ್ವಾಧಿಕಾರಿ ಧೋರಣೆ ತಳೆದು ಬಿಜೆಪಿಯ 10 ಮಂದಿ ಶಾಸಕರನ್ನು ಅಸಾಂವಿಧಾನಿಕ ರೀತಿಯಲ್ಲಿ ಸದನದಿಂದ ಅಮಾನತುಗೊಳಿಸಿರುವುದು ಆತುರದ ನಿರ್ಧಾರದ ಅತ್ಯಂತ ಹೇಯ ಕೃತ್ಯವಾಗಿದೆ. ಈ ವಿಚಾರದಲ್ಲೂ ದಲಿತ ಕಾರ್ಡ್ ಬಳಕೆ ಮಾಡುತ್ತಿರುವ ಕಾಂಗ್ರೆಸ್ ಎಲ್ಲದರಲ್ಲೂ ಜಾತಿ, ಧರ್ಮ ಎಂದು ಜನತೆಯನ್ನು ವಿಭಜಿಸುವ ಕಾರ್ಯದಲ್ಲಿ ತೊಡಗಿರುವುದು ನಾಚಿಕೆಗೇಡು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯೋತ್ಪಾದಕರನ್ನು ‘ದೆ ಆರ್ ಮೈ ಬ್ರದರ್ಸ್’ ಎನ್ನುವ ಕಾಂಗ್ರೆಸ್, ಬೆಂಗಳೂರಿನ ಬಂಧಿತ ಭಯೋತ್ಪಾದಕರ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರಕರಣದ ತನಿಖೆಯನ್ನು ಎನ್ಐಎ ಗೆ ವಹಿಸಬೇಕು. ಈ ಎಲ್ಲ ವಿಚಾರಗಳನ್ನು ಗಮನಿಸಿದಾಗ ಪ್ರಾಯಶಃ 2013-2018ರ ಅವಧಿಯಲ್ಲಿ ನಡೆದ ಸಿ.ಎಂ. ಸಿದ್ಧರಾಮಯ್ಯನವರ ನಿರಂಕುಶ ಆಡಳಿತದ ಭೀಕರತೆ ಪುನರಾವರ್ತನೆಗೊಳ್ಳುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, ರಾಜ್ಯದ ಜನತೆ ಇದರ ಫಲವನ್ನು ಉಣ್ಣಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರೈತರ ಸರಣಿ ಆತ್ಮಹತ್ಯೆ, ಅಲ್ಲಲ್ಲಿ ಕೊಲೆಗಳು ನಡೆಯುತ್ತಿವೆ. ಹಾಲಿನ ಸಹಿತ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಕಾಂಗ್ರೆಸ್ ಘೋಷಿಸಿದ ನಕಲಿ ಗ್ಯಾರಂಟಿಗಳಲ್ಲಿ 200 ಯುನಿಟ್ ವಿದ್ಯುತ್ ಉಚಿತ ಎಂದಿದ್ದು, ಇದೀಗ ಯಥಾಸ್ಥಿತಿ ಹೆಚ್ಚಿನ ದರದ ವಿದ್ಯುತ್ ಬಿಲ್ ಬರುತ್ತಿದೆ. 10 ಕೆ.ಜಿ. ಅಕ್ಕಿ ಉಚಿತ ಎಂದಿದ್ದು, ಕೇಂದ್ರ ಸರಕಾರದ 5 ಕೆ.ಜಿ. ಹೊರತುಪಡಿಸಿ ಹೆಚ್ಚುವರಿ 10 ಕೆ.ಜಿ. ಅಕ್ಕಿ ನೀಡಬೇಕಿತ್ತು. ಆದರೆ ಅಕ್ಕಿ ಖರೀದಿಸಲು ಯೋಗ್ಯತೆ ಇಲ್ಲದ ರಾಜ್ಯ ಕಾಂಗ್ರೆಸ್ ಸರಕಾರ ಅಕ್ಕಿಯ ದುಡ್ಡನ್ನು ಖಾತೆಗೆ ಹಾಕುವ ಪ್ರಸ್ತಾಪ ಮಾಡಿದೆ. ಆದರೆ ಯಾವುದೇ ಗ್ಯಾರಂಟಿಗಳನ್ನು ಇದುವರೆಗೆ ಯಥಾವತ್ತಾಗಿ ಜಾರಿಗೆ ತಂದಿಲ್ಲ. ಇಂತಹ ಜನವಿರೋಧಿ ಸರಕಾರ ರಾಜ್ಯದಲ್ಲಿರುವುದು ಜನತೆಯ ದೌರ್ಭಾಗ್ಯವಾಗಿದೆ.

ರಾಜ್ಯದಲ್ಲಿ ಹಿಟ್ಲರ್ ಸರಕಾರ ಅಧಿಕಾರದಲ್ಲಿದೆ. ಸರಕಾರದ ನಿರಂಕುಶ ಆಡಳಿತ ವೈಖರಿ ಭಯದ ವಾತಾವರಣ ಸೃಷ್ಟಿಸುತ್ತಿದೆ. ಭಜರಂಗ ದಳ ಕಾರ್ಯಕರ್ತರಿಗೆ ಗಡಿಪಾರು ಮಾಡುತ್ತೇವೆ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಗ್ರಹಚಾರ ಹಿಡಿಯಬೇಕು ಎಂದಿದ್ದರೆ ಇಂತಹ ಗಡಿಪಾರು ಕಾನೂನು ಜಾರಿಗೆ ತರಲಿ. ಕರ್ನಾಟಕದಲ್ಲಿ ಅದರ ಪರಿಣಾಮ ಏನಾಗುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಹಾಗೂ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್ ರವರು ಮಾತನಾಡಿ, ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ಸಿನ ಕೈಗೊಂಬೆಯಂತೆ ವರ್ತಿಸಿ, ಸರ್ವಾಧಿಕಾರಿ ಧೋರಣೆಯಿಂದ ಬಿಜೆಪಿಯ 10 ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಘಟನೆ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಮಾತನಾಡಿ, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಭಯೋತ್ಪಾದಕರ ತನಿಖೆಯನ್ನು ಎನ್ಐಎ ಗೆ ವಹಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ದಿನಕರ ಬಾಬು, ಶಿಲ್ಪಾ ಜಿ. ಸುವರ್ಣ, ಉಮೇಶ್ ನಾಯ್ಕ್, ಶ್ಯಾಮಲಾ ಎಸ್. ಕುಂದರ್, ಸಲೀಂ ಅಂಬಾಗಿಲು, ಸುಮಿತ್ರಾ ಆರ್. ನಾಯಕ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆೆಟ್ಟು, ನಳಿನಿ ಪ್ರದೀಪ್ ರಾವ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ವೀಣಾ ಎಸ್. ಶೆಟ್ಟಿ, ಶ್ರೀನಿಧಿ ಹೆಗ್ಡೆ, ವಿಖ್ಯಾತ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಘವೇಂದ್ರ ಉಪ್ಪೂರು, ನಿತ್ಯಾನಂದ ನಾಯ್ಕ್, ದಾವೂದ್ ಅಬೂಬಕರ್, ಸತೀಶ್ ಕುಲಾಲ್, ಧೀರಜ್ ಎಸ್.ಕೆ., ಗೋಪಾಲ ಕಾಂಚನ್, ಅಕ್ಷಿತ್ ಶೆಟ್ಟಿ, ಆಸಿಫ್ ಕಟಪಾಡಿ, ಅಭಿರಾಜ್ ಸುವರ್ಣ, ಪ್ರವೀಣ್ ಪೂಜಾರಿ, ಪೂರ್ಣಿಮಾ ರತ್ನಾಕರ್, ರಶ್ಮಿತಾ ಬಿ. ಶೆಟ್ಟಿ, ಸಚಿನ್ ಸುವರ್ಣ ಪಿತ್ರೋಡಿ, ದಿಲ್ಲೇಶ್ ಶೆಟ್ಟಿ, ರಶ್ಮಿ ಸಿ. ಭಟ್, ಕಲ್ಪನಾ ಸುಧಾಮ, ಬಾಲಕೃಷ್ಣ ಶೆಟ್ಟಿ, ಪ್ರಭಾಕರ ಪೂಜಾರಿ, ಹರೀಶ್ ಶೆಟ್ಟಿ, ಅಶೋಕ್ ನಾಯ್ಕ್, ಗೋಪಾಲಕೃಷ್ಣ ರಾವ್, ರೋಷನ್ ಶೆಟ್ಟಿ, ಮಂಜುನಾಥ್ ಹೆಬ್ಬಾರ್, ಅಕ್ಷಯ್ ಶೆಟ್ಟಿ, ಯೋಗೀಶ್ ಶೆಟ್ಟಿ, ಸದಾನಂದ ಪ್ರಭು, ದಯಾಶಿನಿ, ಪ್ರೀತಿ, ಮಂಜುಳಾ ಪ್ರಸಾದ್ ಸಹಿತ ನಗರಸಭೆ ಸದಸ್ಯರು, ಗ್ರಾ.ಪಂ. ಸದಸ್ಯರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜು.22ರಂದು ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ



ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜುಲೈ 22, ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಸರಣಿ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ದ ಹಾಗೂ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ; ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ



ಉಡುಪಿ: ಕಾಂಗ್ರೆಸ್ ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹೀರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸದನದ ಬಾಗಿಲು ಒದ್ದಿದ್ದರು. ಡಿ.ಕೆ. ಶಿವಕುಮಾರ್ ಸದನದಲ್ಲೇ ಪೇಪರ್ ಹರಿದು ಹಾಕಿದ್ದರು. ಸದನದ ಇನ್ನೋರ್ವ ಸದಸ್ಯ ಸ್ಪೀಕರ್ ಮುಂದಿದ್ದ ಮೈಕ್ ಕಿತ್ತು ಹಾಕಿದ್ದರು. ಇಂತಹ ಹಲವಾರು ನಿದರ್ಶನಗಳು ಸದನದಲ್ಲಿ ಕಾಂಗ್ರೆಸ್ ಶಾಸಕರು ನಡೆಸಿದ್ದ ದುರ್ವತನೆಗೆ ಜ್ವಲಂತ ಸಾಕ್ಷಿಗಳಾಗಿದ್ದು ಸದನದ ಅಮಾನತಿಗೆ ಒಳಪಡದೇ ಇದ್ದರೂ, ಕಾಂಗ್ರೆಸ್ ಕೈಗೊಂಬೆಯಂತಿರುವ ವಿಧಾನಸಭಾ ಸ್ಪೀಕರ್ ರವರಿಗೆ ಬಿಜೆಪಿಯ 10 ಶಾಸಕರ ವರ್ತನೆ ಮಾತ್ರ ಶಿಕ್ಷಾರ್ಹ ಅಪರಾಧ ಎಂದು ಕಂಡುಬಂದಿರುವುದು ವಿಪರ್ಯಾಸ.

ಸರಕಾರೇತರ ರಾಜಕೀಯ ಕಾರ್ಯಕ್ರಮಕ್ಕೆ ಸರಕಾರದ ಉನ್ನತಾಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಶಿಷ್ಟಾಚಾರಕ್ಕೆ ತಿಲಾಂಜಲಿ ನೀಡಿದ ಸಿ.ಎಂ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳದೆ ಸಮರ್ಥನೆ ಮಾಡಲು ಹೊರಟಿರುವುದು ಖಂಡನೀಯ. ಈ ಹಿಂದೆ ದುರಾಡಳಿತದಿಂದ ಅಧಿಕಾರ ಕಳೆದುಕೊಂಡು ಮೂಲೆಗುಂಪಾಗಿದ್ದ ಕಾಂಗ್ರೆಸ್, ಪ್ರಸಕ್ತ ರಾಜ್ಯದಲ್ಲಿ ನಕಲಿ ಗ್ಯಾರಂಟಿಗಳ ಮೂಲಕ ಜನತೆಯನ್ನು ವಂಚಿಸಿ ಅಧಿಕಾರಕ್ಕೆ ಬಂದ ಮಾತ್ರಕ್ಕೆ ಇಡೀ ದೇಶವನ್ನೇ ಗೆದ್ದಂತೆ ಭಾವಿಸಿ ದುರಹಂಕಾರ ಪ್ರವೃತ್ತಿಯಿಂದ ಸರ್ವಾಧಿಕಾರಿ ಧೋರಣೆ ತಳೆದಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ಮಾಡಿರುವ ಅಪಮಾನವಾಗಿದೆ.

ರಾಜ್ಯದ ಆಡಳಿತ ಯಂತ್ರ ಕುಸಿದಿದೆ. ರೈತರ ಆತ್ಮಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಬಂದು ಬಂಧನಕ್ಕೊಳಗಾಗಿರುವ ಕಾಂಗ್ರೆಸ್ಸಿನ ಬ್ರದರ್ಸ್ ಬಗ್ಗೆ ರಾಜ್ಯ ಗೃಹ ಸಚಿವರು ಮೃದುವಾದ ಹೇಳಿಕೆ ನೀಡಿರುವುದು, ಸದನದಲ್ಲಿ ಬಿಜೆಪಿ ಶಾಸಕರ ಅಸಾಂವಿಧಾನಿಕ ಅಮಾನತು ಈ ಎಲ್ಲ ಪ್ರಕ್ರಿಯೆಗಳು ರಾಜ್ಯ ಕಾಂಗ್ರೆಸ್ ಸರಕಾರ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ತಂತ್ರದ ಭಾಗವಾಗಿದೆ.

ರಾಜ್ಯದ ಜ್ವಲಂತ ಸಮಸ್ಯೆಗಳನ್ನು ನಿರ್ಲಕ್ಷಿಸಿರುವ ಕಾಂಗ್ರೆಸ್ ಸರಕಾರ ಪಂಚ ನಕಲಿ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ಜನತೆಗೆ ಪಂಗನಾಮ ಹಾಕಿದೆ. ಬಿಜೆಪಿ ಸರಕಾರ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸುವ ಜೊತೆಗೆ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಗೆ ರಾಜ್ಯದಿಂದ ನೀಡುತ್ತಿದ್ದ ರೂ.4,000/- ಮೊತ್ತವನ್ನೂ ಕಡಿತಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಕೇವಲ ರಾಜಕೀಯ ಲಾಭದ ಲೆಕ್ಕಾಚಾರ ಮತ್ತು ಒಂದೇ ವರ್ಗದ ಓಲೈಕೆಯಲ್ಲಿ ತೊಡಗಿಕೊಂಡು ಜನವಿರೋಧಿ ನೀತಿ ಅನುಸರಿಸುತ್ತಿರುವುದು ಜಗಜ್ಜಾಹೀರಾಗಿದೆ.

ರಾಜ್ಯದ ಜನತೆಗೆ ಪ್ರಬುದ್ಧರಾಗಿದ್ದು ಪ್ರಚಲಿತ ವಿದ್ಯಮಾನಗಳನ್ನು ಅವಲೋಕಿಸಿ, ಕಾಂಗ್ರೆಸ್ಸಿನ ಸರ್ವಾಧಿಕಾರಿ ಧೋರಣೆ ಮತ್ತು ಜನವಿರೋಧಿ ನೀತಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್



ಉಡುಪಿ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಾಯೋಜಿತ ಹೊರ ರಾಜ್ಯಗಳ ಕಳಂಕಿತ ರಾಜಕಾರಿಣಿಗಳ ಸಮಾವೇಶಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಶಿಷ್ಟಾಚಾರ ಉಲ್ಲಂಘಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸುವ ಮೂಲಕ ಕಾಂಗ್ರೆಸ್ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಸ್ಥಾನದ ಅಧಿಕಾರವನ್ನು ದುರ್ಬಳಕೆ ಮಾಡಿರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ತಮ್ಮ ಹುಳುಕನ್ನು ಮುಚ್ಚಿಹಾಕಲು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ಜೊತೆಗೆ ವಿಪಕ್ಷ ಶಾಸಕರ ಹಕ್ಕನ್ನು ಮೊಟಕುಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸದನದಲ್ಲಿ ಏಕಪಕ್ಷೀಯವಾಗಿ, ಸರ್ವಾಧಿಕಾರಿ ಧೋರಣೆ ತೋರ್ಪಡಿಸುತ್ತಿದ್ದು, ಸ್ಪೀಕರ್ ಕಾಂಗ್ರೆಸ್ಸಿನ ಕೈಗೊಂಬೆಯಂತೆ ವರ್ತಿಸುತ್ತಿರುವುದು ಸ್ಪೀಕರ್ ಸದನವನ್ನು ನಡೆಸಿಕೊಳ್ಳುವ ರೀತಿಯಿಂದ ಸ್ಪಷ್ಟವಾಗಿದೆ.

ಈ ಹಿಂದೆ ಸದನದಲ್ಲಿ ಕಾಂಗ್ರೆಸ್ ಶಾಸಕರು ಯಾವ ರೀತಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದರು ಎಂಬುದನ್ನು ಕಾಂಗ್ರೆಸಿಗರು ತಿಳಿದುಕೊಳ್ಳುವುದು ಉತ್ತಮ. ಸದನದಲ್ಲಿ ಮಸೂದೆಯ ಪ್ರತಿಗಳನ್ನು ಹರಿದು ಹಾಕಿ, ಸ್ಪೀಕರ್ ಮೇಲೆ ದೈಹಿಕ ಹಲ್ಲೆ ನಡೆಸಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರಣವಾಗಿರುವ ಐದು ನಕಲಿ ಗ್ಯಾರಂಟಿಗಳನ್ನು ನುಡಿದಂತೆ ಯಥಾವತ್ತಾಗಿ ಜಾರಿಗೊಳಿಸಲು ವಿಫಲವಾಗಿರುವ ಜನ ವಿರೋಧಿ ಕಾಂಗ್ರೆಸ್ ಇದೀಗ ಸರಕಾರದ ವಿಪಕ್ಷವನ್ನು ಹತ್ತಿಕ್ಕುವ ಕಾರ್ಯದಲ್ಲಿ ನಿರತವಾಗಿರುವುದನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಯವಂಚಕ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಯನಾ ಗಣೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ



ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವ್ಯಾಪ್ತಿಯನ್ನು ಮೀರಿ ವಿದೇಶಕ್ಕೂ ಈ ಜಾಲ ಹರಡಿದೆ ಎಂಬ ಸಂಶಯವಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸುವುದು ಸೂಕ್ತ ಎಂದು ನುಡಿದರು.
ಅವರು ಬೆಂಗಳೂರಿನ ಹಲವೆಡೆ ಬಾಂಬ್ ಸ್ಫೋಟಿಸಲು ಯೋಜಿಸಿದ್ದರು ಎಂಬುದು ಬಹಳ ಗಂಭೀರವಾದ ಸಂಗತಿ ಎಂದ ಅವರು, ಕಾಂಗ್ರೆಸ್ ನಾಯಕರು ಈಗಲಾದರೂ ಮನ ಪರಿವರ್ತನೆ ಮಾಡಿಕೊಳ್ಳಲಿ ಎಂದು ಆಗ್ರಹಿಸಿದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗ ಕೆಪಿಸಿಸಿ ಅಧ್ಯಕ್ಷರು ಬಿಜೆಪಿಯನ್ನು ನಿಂದಿಸಿದ್ದರು. ಬಿಜೆಪಿ ದುರುದ್ದೇಶದಿಂದ ಬಂಧಿಸಿದೆ ಎಂದು ಟೀಕಿಸಿದ್ದರು ಎಂದು ವಿವರಿಸಿದರು.
ಉಗ್ರಗಾಮಿ ಜಾಲ ಕರ್ನಾಟಕದಲ್ಲಿ ವಿಸ್ತರಿಸುತ್ತಿರುವುದು ನಿರ್ವಿವಾದ ಸಂಗತಿ ಎಂದು ಅವರು ತಿಳಿಸಿದರು. ವಿವೇಚನೆ ಇಲ್ಲದೆ ಮತಬ್ಯಾಂಕಿಗಾಗಿ ಅವರೆಲ್ಲ ನಮ್ಮ ಸೋದರರು ಎಂದು ಅಪ್ಪಿಕೊಳ್ಳಲು ಹೋಗಬೇಡಿ ಎಂದು ಕಿವಿಮಾತು ಹೇಳಿದರು. ನೀವು ಅವರನ್ನು ಅಪ್ಪಿಕೊಳ್ಳಲು ಹೋದರೆ ಬೆಂಗಳೂರು, ಕರ್ನಾಟಕಕ್ಕೆ ಸಿಲುಕಬಹುದು ಎಂದು ಎಚ್ಚರಿಸಿದರು.
ಪೆÇಲೀಸರು ಸಮಗ್ರ ತನಿಖೆಗೆ ಸಹಕರಿಸಲಿ. ಕಾಂಗ್ರೆಸ್ ಪಕ್ಷದವರು ಬ್ರದರ್ಸ್ ಎಂದು ಅವರನ್ನು ಬಿಡಿಸಲು ಹೋಗದಿರಲಿ ಎಂದು ಸಲಹೆ ನೀಡಿದರು. ಈ ಜಾಲ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಕ್ರಿಯವಾಗಿರುವ ಸಾಧ್ಯತೆ ಇದ್ದು, ಇದನ್ನು ಎನ್‍ಐಎ ತನಿಖೆಗೆ ಒಪ್ಪಿಸಿ ಎಂದು ಒತ್ತಾಯಿಸಿದರು. ಟೆರರಿಸ್ಟ್‍ಗಳಿಗೆ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೆ ‘ನಮ್ದೂ ಕೆ ಸರಕಾರ್’ ಎಂಬ ಭಾವನೆ ಬರುತ್ತದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ವಿಪಕ್ಷಗಳ ಕೂಟ ಅದೇ ಬಾಟಲಿ ಅದೆ ವೈನು ಆದರೆ ಹೊಸ ಲೇಬಲ್ ನಂತಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ



ಉಡುಪಿ: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದನ್ನು ದಮನಿಸಬೇಕೆಂಬ ನಿಲುವನ್ನು ಹೊಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಸ್ಪೀಕರ್ ರವರನ್ನು ಮುಂದಿಟ್ಟುಕೊಂಡು ತಮ್ಮ ಅಜೆಂಡಾವನ್ನು ಕಾರ್ಯಗತಗೊಳಿಸುತ್ತಿರುವುದು ತೀರಾ ಶೋಚನೀಯ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಇಂತಹ ಸಂವಿಧಾನ ಬಾಹೀರ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

9 ವರ್ಷಗಳಲ್ಲಿ ಬಡವರ ಜೀವನ ಮಟ್ಟ ಸುಧಾರಣೆ; ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್



ಮಣಿಪಾಲ, ಜು.14: ಕೊರೊನಾ ಕಾಲಘಟ್ಟದ ಸಂದಿಗ್ಧ ಪರಿಸ್ಥಿತಿ ಸಹಿತವಾಗಿ ಕಳೆದ 9 ವರ್ಷಗಳಿಂದ ಕೇಂದ್ರ ಸರಕಾರವು ದೇಶದ ಜನರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಎಲ್ಲ ವ್ಯವಸ್ಥೆ ಮಾಡಿದೆ ಮತ್ತು ದೇಶವು ಸೇವೆಯ ಉತ್ಕೃಷ್ಟತೆಯನ್ನು ಕಂಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಕಂಟ್ರಿ ಇನ್ ಹೊಟೇಲ್‌ ನಲ್ಲಿ ಜು.14ರಂದು ಹಮ್ಮಿಕೊಂಡಿದ್ದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೀವದ ಹಂಗನ್ನು ತೊರೆದು ಸೇವೆ ಸಲ್ಲಿಸಿದ್ದಾರೆ ಎಂದರು.

50-60 ವರ್ಷಗಳಿಂದ ಬಡತನ ನಿರ್ಮೂಲನೆ ಘೋಷಣೆಯಾಗಿತ್ತು. 2013ರ ಅನಂತರದಲ್ಲಿ ಜನರ ಜೀವನ ಮಟ್ಟ ಬದಲಾಗಿದೆ. ಮನೆ ಮನೆಗೆ ನೀರು, ಗ್ಯಾಸ್, ಶೌಚಾಲಯದ ವ್ಯವಸ್ಥೆಯಾಗುತ್ತಿದೆ. ಮನೆ ಇಲ್ಲದವರಿಗೆ ಮನೆ ನಿರ್ಮಾಣ, ಆಯುಷ್ಮಾನ್ ಭಾರತ್ ಮೂಲಕ ಆರೋಗ್ಯ ಸೇವೆ, ಜನೌಷಧದ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಔಷಧ ಒದಗಿಸುವುದು ಸೇರಿದಂತೆ ಜನರ ಮೂಲ ಸೌಕರ್ಯ ಸುಧಾರಿಸಲು ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಮ್ಮದು ಭ್ರಷ್ಟಾಚಾರ ಇಲ್ಲದ ಶುದ್ಧ ಸರಕಾರ. ಅನುದಾನ ಬಳಕೆಯಲ್ಲೂ ಯಾವುದೇ ಲೋಪವಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಅನುದಾನದ ಹಂಚಿಕೆ ಮತ್ತು ಬಳಕೆಗೆ ಸರಿಯಾದ ಕ್ರಮ ಅನುಸರಿಸುತ್ತಿದ್ದೇವೆ. ಪ್ರಧಾನಿ ಮೋದಿಯವರು ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಎಂದರು.

*ಎಂಎಸ್‌ಎಂಇಗೆ ಒತ್ತು*:

ಕೇಂದ್ರ ಸರಕಾರ ಎಂಎಸ್‌ಎಂಇಗೆ ಒತ್ತು ನೀಡುತ್ತಲೇ ಬಂದಿದೆ. 142ನೇ ಸ್ಥಾನದಲ್ಲಿದ್ದ ನಾವು ಈಗ 62 ಸ್ಥಾನಕ್ಕೆ ಏರಿದ್ದೇವೆ. ಸಣ್ಣ ಉದ್ಯಮಿಗಳಿಗೆ ಹೊರೆಯಾಗದಂತೆ ಮತ್ತು ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದ ನಿಯಮಗಳನ್ನು ಬದಲಿಸಿದ್ದೇವೆ. 39,000 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದೇವೆ. ಉದ್ಯಮ್ ಪೋರ್ಟಲ್‌ನಲ್ಲಿ 1.97 ಕೋಟಿಗೂ ಅಧಿಕ ಉದ್ಯಮಿಗಳು ನೋಂದಣಿ ಮಾಡಿಕೊಂಡಿದ್ದಾರೆ. ರಫ್ತು ಉತ್ತೇಜನಕ್ಕೆ ವಿಶೇಷ ಅನುದಾನ ಒದಗಿಸಿದ್ದೇವೆ. 1,387 ಟ್ರೆಡ್‌ಮಾರ್ಕ್, 126 ಪೆಟೆಂಟ್ ನೀಡಲಾಗಿದೆ. ಪಬ್ಲಿಕ್ ಪ್ರಕ್ಯೂರ್‌ಮೆಂಟ್ ಪಾಲಿಸಿಯಲ್ಲಿಯೂ ಬದಲಾವಣೆ ತಂದಿರುವುದರಿಂದ ಎಂಎಸ್‌ಎಂಇ ಪ್ರಮೋಶನ್‌ಗೂ ಇದರ ಅನುಕೂಲವಾಗಿದೆ. ಎಂಎಸ್‌ಎಂಇಗಳಿಗೆ ನೇರ ಮಾರುಕಟ್ಟೆಗೂ ಅವಕಾಶ ಮಾಡಿಕೊಟ್ಟಿದ್ದೇವೆ ಹಾಗೂ ಕಾರ್ಯಕ್ಷಮತೆ ಗುಣಮಟ್ಟ ಸಂಬಂಧ ಪಾವತಿಸುವ ಶುಲ್ಕವನ್ನು ಹಿಂದಿರುಗಿಸುವ ವ್ಯವಸ್ಥೆಯಾಗಿದೆ ಎಂದು ವಿವರಿಸಿದರು.

2013-14ರಲ್ಲಿ ಈ ಕ್ಷೇತ್ರಕ್ಕೆ 2,385 ಕೋಟಿ ನೀಡಲಾಗಿತ್ತು. 2023-24ರಲ್ಲಿ 22,138 ಕೋಟಿ ನೀಡಿದ್ದೇವೆ. ಎಂಎಸ್‌ಎಂಇಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು. ಭಾರತದ ಉತ್ಪಾದನೆಯ ಶಕ್ತಿ ಹಾಗೂ ಬೆನ್ನೆಲುಬು ಎಂಎಸ್‌ಎಂಇ ಎಂದು ನಾವು ನಂಬಿದ್ದೇವೆ. ಹೀಗಾಗಿಯೇ ಉತ್ಪಾದನಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಕ್ರೆಡಿಟ್ ಗ್ಯಾರಂಟಿ ಸ್ಕೀಂ, ಮನ್‌ಧನ್ ಯೋಜನೆಯು ಸಣ್ಣ ಉದ್ಯಮಿಗಳಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.

*ಲೆಕ್ಕ ಪರಿಶೋಧನೆಗೆ ಆದ್ಯತೆ*:

ಲೆಕ್ಕ ಪರಿಶೋಧನೆ ವಿಭಾಗದಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದ ಸಂದರ್ಭದಲ್ಲಿ ಆ ದೇಶ ಮತ್ತು ಭಾರತದೊಂದಿಗೆ ಲೆಕ್ಕ ಪರಿಶೋಧನೆ ವಿಷಯದ ಕಲಿಕೆ ಮತ್ತು ಪ್ರೊಫೆಶನಲ್ ಕೋರ್ಸ್ ಎಕ್ಚೇoಜ್ ಸಂಬಂಧಿಸಿದ ಯೋಚನೆ ನಡೆಯುತ್ತಿದೆ. ಆನ್‌ಲೈನ್ ಕೋರ್ಸ್‌ಗಳು ಆರಂಭವಾಗಿದೆ ಮತ್ತು ತಂತ್ರಜ್ಞಾನದ ಜತೆಗೆ ನೈತಿಕತೆಯನ್ನು ಸೇರಿಸುವ ವ್ಯವಸ್ಥೆಯೂ ಆಗುತ್ತಿದೆ. ಅಕೌಂಟಿಂಗ್ ಸಿಸ್ಟಮ್ ಕೂಡ ವ್ಯವಸ್ಥಿತಗೊಳಿಸಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

*ತೆರಿಗೆ ಸುಧಾರಣೆ*:

ವಾರ್ಷಿಕ 7 ಲಕ್ಷದ ವರೆಗೂ ಆದಾಯ ಇರುವವರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. 7,27,000 ವರೆಗೂ ಅದನ್ನು ವಿಸ್ತರಿಸಿದ್ದೇವೆ. ಅಲ್ಲದೆ 50 ಸಾವಿರದವರೆಗೂ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಡಾಕ್ಯೂಮೆಂಟ್ ಪ್ರೊಸೆಸಿಂಗ್ ವಿಧಾನವನ್ನು ಸರಳೀಕರಿಸಿದ್ದೇವೆ. ಮನವಿಗಳನ್ನು ಆಗಿಂದಾಗಲೇ ಇತ್ಯರ್ಥಪಡಿಸುವ ವ್ಯವಸ್ಥೆಯೂ ಇದೆ. ಆದಾಯ ತೆರಿಗೆ ಸಾಮಾನ್ಯ ಕುಟುಂಬಕ್ಕೆ ಹೊರೆಯಾಗುತ್ತಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದೆ. ಉಡುಪಿಯ ಯು.ಆರ್. ರಾವ್ ಸಹಿತವಾಗಿ ಅನೇಕರು ಇಸ್ರೊ ಕಟ್ಟಿ ಬೆಳೆಸಲು ತಮ್ಮದೆ ಕೊಡುಗೆ ನೀಡಿದ್ದಾರೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಯಾವುದೇ ರೀತಿಯಲ್ಲೂ ಅನುದಾನ ಕಡಿಮೆ ಮಾಡಿಲ್ಲ. ಪ್ರಗತಿಯಲ್ಲಿರುವ ಯೋಜನೆಗಳಿಗೆ ಅನುದಾನ ಒದಗಿಸಿದ್ದೇವೆ. ಆದರೆ, ಈಗಾಗಲೇ ಪೂರ್ಣಗೊಂಡಿರುವ ಯೋಜನೆಗೆ ಪುನರ್ ಅನುದಾನ ನೀಡಿಲ್ಲ. ಹೊಸ ಯೋಜನೆಗಳಿಗೆ ಅನುದಾನ ನೀಡುತ್ತಿದ್ದೇವೆ ಮತ್ತು ಎಲ್ಲರ ಒಗ್ಗೂಡಿಕೆಯಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

*ಸಂವಾದ*:

ಪ್ರಬುದ್ಧರ ಗೋಷ್ಠಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಲಹೊತ್ತು ಸಂವಾದ ನಡೆಸಿದರು. ವಿದ್ಯಾರ್ಥಿಗಳ ಸಹಿತ ಕೈಗಾರಿಕೆ, ಲೆಕ್ಕಪರಿಶೋಧನೆ, ಮಹಿಳಾ ಉದ್ಯಮಿ ಮೊದಲಾದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅನಂತರ ವಿವಿಧ ಸಂಘಟನೆಗಳಿಂದ ಮನವಿ ಸ್ವೀಕರಿಸಿದರು.

ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಕಿರಣ್ ಕೊಡ್ಗಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಗ್ವಾಂಕರ್ ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಾಗತಿಸಿ, ಪ್ರಸ್ತಾವನೆಗೈದರು. ಬಿಜೆಪಿ ಉಡುಪಿ ನಗರಾಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಯೋಜಕ ಮಹೇಶ್ ಠಾಕೂರ್ ವಂದಿಸಿದರು. ಎಂಐಟಿ ಪ್ರಾಧ್ಯಾಪಕ ಡಾ! ಬಾಲಕೃಷ್ಣ ಮದ್ದೋಡಿ ಕಾರ್ಯಕ್ರಮ ನಿರೂಪಿಸಿದರು.

ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ‘ಮಹಾ ಸಂಪರ್ಕ ಅಭಿಯಾನ’



ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ಮಂಡಲ ಕಛೇರಿಯಲ್ಲಿ ನಡೆಯಿತು.

ಅಭಿಯಾನದ ಸರಣಿ ಕಾರ್ಯಕ್ರಮಗಳ ಗ್ರಾಮಾಂತರ ಮಂಡಲ ಉಸ್ತುವಾರಿ ರೇಶ್ಮಾ ಉದಯ ಶೆಟ್ಟಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆಯ ಸಹಿತ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಪ್ರಚುರಪಡಿಸುವ ಕರಪತ್ರ ವಿತರಣೆ, ಮನೆ ಮನೆ ಬೇಟಿ ಹಾಗೂ ಮಂಡಲ ವ್ಯಾಪ್ತಿಯ 100 ಮಂದಿ ಪ್ರಮುಖರು ಮತ್ತು ವೃತ್ತಿಪರರ ತಂಡ ರಚನೆ, ಪ್ರತೀ ಬೂತ್ ವ್ಯಾಪ್ತಿಯಲ್ಲಿ 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಮತ್ತು ಮಂಡಲದ ಸೋಷಿಯಲ್ ಮೀಡಿಯಾ ತಂಡವನ್ನು ಸಕ್ರಿಯಗೊಳಿಸುವುದು ಇವೇ ಮುಂತಾದ ಪ್ರಮುಖ ಕಾರ್ಯ ಯೋಜನೆಗಳನ್ನು ಜುಲೈ ತಿಂಗಳ ಅಂತ್ಯದೊಳಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಮನೆ ಮನೆ ಸಂಪರ್ಕದ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನಪರ ಆಡಳಿತ ಹಾಗೂ ರಾಜ್ಯ ಸರಕಾರದ ಆಡಳಿತ ವೈಫಲ್ಯ ಮತ್ತು ಜನವಿರೋಧಿ ನೀತಿಯನ್ನು ಜನತೆಗೆ ಮನದಟ್ಟು ಮಾಡುವ ಮೂಲಕ ಮುಂದಿನ ತಾ.ಪಂ., ಜಿ.ಪಂ. ಮತ್ತು ಲೋಕಸಭಾ ಚುನಾವಣೆಯಲ್ಲಿ ಮಗದೊಮ್ಮೆ ಬಿಜೆಪಿಯ ದೊಡ್ಡ ಅಂತರದ ಗೆಲುವಿಗೆ ಸಂಘಟಿತರಾಗಿ ಶ್ರಮಿಸುವಂತೆ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ವಿವರಗಳನ್ನೊಳಗೊಂಡಿರುವ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಕಾರ್ಯದರ್ಶಿ ಸುರೇಶ್ ಪೂಜಾರಿ, ಬ್ರಹ್ಮಾವರ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ್, ಪ್ರಮುಖರಾದ ರಾಜೇಶ್ ಶೆಟ್ಟಿ ಬಿರ್ತಿ, ರಾಜು ಪೂಜಾರಿ ಉಪ್ಪೂರು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಕಳ ಮಂಡಲ ಸಭೆ: ‘ಮಹಾ ಸಂಪರ್ಕ ಅಭಿಯಾನ’ದ ಕರಪತ್ರ ಬಿಡುಗಡೆ


ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರದ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ಮಹಾವೀರ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಂಡಲ ಕಛೇರಿಯಲ್ಲಿ ನಡೆಯಿತು.

ಅಭಿಯಾನದ ಕಾರ್ಕಳ ಮಂಡಲ ಉಸ್ತುವಾರಿಗಾಳಾದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆ, ಕೇಂದ್ರ ಸರಕಾರದ ಸಾಧನೆ ಪ್ರಚುರಪಡಿಸುವ ಕರಪತ್ರ ವಿತರಣೆ, ಮನೆ ಮನೆ ಬೇಟಿ ಹಾಗೂ ಮಂಡಲ ವ್ಯಾಪ್ತಿಯ 100 ಮಂದಿ ಪ್ರಮುಖರು ಮತ್ತು ವೃತ್ತಿಪರರ ತಂಡ ರಚನೆ, ಪ್ರತೀ ಬೂತ್ ವ್ಯಾಪ್ತಿಯಲ್ಲಿ 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಸಹಿತ ಸೋಷಿಯಲ್ ಮೀಡಿಯಾ ತಂಡಗಳನ್ನು ಸಕ್ರಿಯಗೊಳಿಸುವುದು ಇವೇ ಮುಂತಾದ ಪ್ರಮುಖ ಕಾರ್ಯ ಚಟುವಟಿಕೆಗಳನ್ನು ಸಂಘಟಿತ ಪ್ರಯತ್ನದ ಮೂಲಕ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬೇಕು ಎಂದರು.

ಮುಂಬರಲಿರುವ ತಾ.ಪಂ., ಜಿ.ಪಂ. ಮತ್ತು ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ರಾಜ್ಯ ಸರಕಾರದ ಗ್ಯಾರಂಟಿಗಳ ವೈಫಲ್ಯ ಹಾಗೂ ದುರಾಡಳಿತದ ಬಗ್ಗೆ ಜನತೆಗೆ ಮನಮುಟ್ಟುವಂತೆ ವಿವರಿಸಿ, ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಶ್ರಮಿಸುವಂತೆ ಕೋರಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ವಿವರಗಳನ್ನೊಳಗೊಂಡಿರುವ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಮಡಿವಾಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ನಾಯ್ಕ್, ಜಯರಾಮ್ ಸಾಲ್ಯಾನ್, ಹಿರಿಯ ಕಾರ್ಯಕರ್ತ ರಾಮಚಂದ್ರ ನಾಯಕ್, ಮಂಡಲ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಶಿವಪುರ, ಮಂಡಲ ವಕ್ತಾರ ಹರೀಶ್ ಶೆಣೈ, ಕ್ಯಾಂಪ್ಕೊ ನಿರ್ದೇಶಕ ದಯಾನಂದ ಹೆಗ್ಡೆ, ತಾಲೂಕು ಕಾರ್ಯದರ್ಶಿ ಶಂಕರ್ ಕುಂದರ್, ನಗರಾಧ್ಯಕ್ಷ ರವೀಂದ್ರ ಮೊಯ್ಲಿ, ಕಾರ್ಯದರ್ಶಿ ನಿರಂಜನ್ ಜೈನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಪ್ರಮುಖರಾದ ರವೀಂದ್ರ ಶೆಟ್ಟಿ ಮುಂಡ್ಕೂರು, ಉದಯ ಎಸ್. ಕೋಟ್ಯಾನ್, ಸುಮಾ ಕೇಶವ, ಕರುಣಾಕರ ಶೆಟ್ಟಿ ಬೋಳ, ಸಂತೋಷ್ ಶೆಟ್ಟಿ ಹಿರ್ಗಾನ, ಪುರಸಭಾ ಸದಸ್ಯರು, ಮಂಡಲ ಪದಾಧಿಕಾರಿಗಳು, ಗ್ರಾಮ ಸಮಿತಿಗಳ ಅಧ್ಯಕ್ಷರು, ಮಹಾ ಶಕ್ತಿಕೇಂದ್ರ, ಮೋರ್ಚಾ ಮತ್ತು ಪ್ರಕೋಷ್ಠಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Design a site like this with WordPress.com
Get started