ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ




ಉಡುಪಿ: ಜು.14ರ ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಜಿಲ್ಲೆಗೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ



ಕಾಪು: ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು. ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವು‌ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳ ಜೆಹಾದಿ ಶಕ್ತಿಗಳ ಕೈವಾಡ ಇರುವ ಸಾಧ್ಯತೆ ಇದ್ದು ಇದರ ತನಿಖೆ ಸಿಬಿಐ ಗೆ ವಹಿಸಬೇಕು, ಇದರೊಂದಿಗೆ ರಾಜ್ಯದಲ್ಲಿ ನಡೆದ ವೇಣುಗೋಪಾಲ್ ಹತ್ಯೆ, ಬೆಂಗಳೂರಿನಲ್ಲಿ ನಡೆದ ಸರಣಿ ಹತ್ಯೆಗಳನ್ನು ಖಂಡಿಸಲಾಗಿ ರಾಜ್ಯದಲ್ಲಿ ಹಿಂದೂಗಳಿಗೆ ಭಯದಲ್ಲಿ ಓಡಾಡುವ ವಾತಾವರ ನಿರ್ಮಾಣ ವಾಗುತ್ತಿದ್ದು ಮುಖ್ಯಮಂತ್ರಿ ಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕೂಡಲೇ ಗ್ರಹ ಇಲಾಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಲಾಯಿತು. ತುಷ್ಟೀಕರಣ ನೀತಿಯನ್ನು ಕೈ ಬಿಡದಿದ್ದರೆ ಮುಂದೆ ಮತ್ತೆ ಬೀದಿಗಿಳಿದು ಹೋರಾಟ ಮಾಡುವೆವು ಎಂದರು. ಪಂಚ ಗ್ಯಾರಂಟಿಗಳ ಅವ್ಯವಸ್ಥೆಯಿಂದ ಜನ ರೋಸಿಹೋಗಿದ್ದಾರೆ. ಕೂಡಲೇ ಇದನ್ನು ಸರಿಪಡಿಸಿ ಜನರಿಗೆ ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನು‌ ಒದಗಿಸಲು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮಾತನಾಡಿ ಸರಕಾರ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುವಲ್ಲಿ ಮೊದಲ ಹೆಜ್ಜೆಯಾಗಿ‌ ಶಿಕ್ಷಣದಲ್ಲಿ ಕೋಮುವಾದ ತುಂಬಿದೆ, ನಂತರ ಬಜೆಟ್ ನಲ್ಲಿ ಅವರಿಗೆ ಮಾತ್ರ ಸಾಕಷ್ಟು ಘೋಷಣೆಗಳನ್ನು ಮಾಡಿದೆ, ಇಷ್ಟಲ್ಲದೆ ವರ್ಗಾವಣೆ ಧಂದೆ ಮೂಲಕ ಕೋಟ್ಯಂತರ ರೂಪಾಯಿ ಹಣದ ವ್ವವಹಾರ ಮಾಡಿ ಹೇಸಿಗೆ ಹುಟ್ಟಿಸುತ್ತದೆ. ಮತ್ತೆ ಮತ್ತೆ ಹಿಂದೂಗಳ ಹತ್ಯೆ ನಡೆದರೆ ಸುಮ್ಮನೆ ಕುಳಿತುಕೊಳ್ಳಲಾಗದು ಎಂದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಂಡಲ ಕಾರ್ಯದರ್ಶಿ ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಮಹಾಶಕ್ತಿಕೇಂದ್ರಗಳ ಅಧ್ಯಕ್ಷರುಗಳಾದ ವಿಶ್ವನಾಥ ಕುರ್ಕಾಲು, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಪ್ರಮುಖರಾದ ಶಶಿಧರ್ ವಾಗ್ಳೆ, ಸುರೇಖ ಶೈಲೇಶ್, ಪದ್ಮನಾಭ ಕೊಡಂಗಳ, ಶಕ್ತಿಕೇಂದ್ರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ಎಂ. ಅವರಿಗೆ ವರ್ಗಾವಣೆ ನೀಡವಲಾಗಿದೆ.
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದವರು, ಇದೀಗ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.


ಜು.14 ಮಣಿಪಾಲದ ಕಂಟ್ರಿ ಇನ್ ನಲ್ಲಿ ಪ್ರಬುದ್ದರ ಗೋಷ್ಠಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ: ಕುಯಿಲಾಡಿ ಸುರೇಶ್ ನಾಯಕ್





ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಜು.14 ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಸಂಚಾಲಕರನ್ನಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರನ್ನು ನಿಯೋಜಿಸಲಾಗಿದೆ.

ಜಿಲ್ಲೆಯ ಸಂಘ-ಸಂಸ್ಥೆಗಳ ಪ್ರಮುಖರು, ವೃತ್ತಿಪರರು, ಪ್ರಬುದ್ಧರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಆಸಕ್ತ ಸಾರ್ವಜನಿಕ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಬಿಜೆಪಿ‌ ಪದಾಧಿಕಾರಿಗಳ ಸಭೆ



ಕಾಪು: ನರೇಂದ್ರ ಮೋದೀಜಿ ಸರಕಾರ ಒಂಭತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಸರಕಾರದ ಸಾಧನೆಗಳನ್ನು ಮ‌ನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಈ ಕುರಿತಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ‌ಕಾರ್ಯಕ್ರಮಗಳ ಜಿಲ್ಲಾ ಉಸ್ತುವಾರಿ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ‌ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ‌ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಶೀಲಾ ಕೆ ಶೆಟ್ಟಿ ಉಪಸ್ಥಿತರಿದ್ದರು. ಪಕ್ಷದ ವಿವಿಧ ಜವಾಬ್ದಾರಿ ಹೊತ್ತಿರುವ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀಕಾಂತ ನಾಯಕ್
ಅಧ್ಯಕ್ಷರು‌ ಬಿಜೆಪಿ ಕಾಪು ಕ್ಷೇತ್ರ

ಜು.14ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ: ಕುಯಿಲಾಡಿ ಸುರೇಶ್ ನಾಯಕ್



ಉಡುಪಿ: ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ ಅಭಿಯಾನ’ದ ಕರ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪಕ್ಷದ ಸೂಚನೆಯಂತೆ ಮಹಾ ಸಂಪರ್ಕ ಅಭಿಯಾನದಡಿ ಮಂಡಲ ವ್ಯಾಪ್ತಿಯ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಿಗಳ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸುವ ಜೊತೆಗೆ ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳನ್ನು ಪ್ರಚುರಪಡಿಸಲು ಮನೆ ಮನೆ ಬೇಟಿ, ಮಂಡಲ ವ್ಯಾಪ್ತಿಯಲ್ಲಿ 100 ಮಂದಿ ವೃತ್ತಿಪರರು ಮತ್ತು ಸಾಮಾಜಿಕ ಪ್ರಮುಖರ ತಂಡ ರಚನೆ, ಬೂತ್ ವಾರು 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಹಾಗೂ ಸೋಷಿಯಲ್ ಮೀಡಿಯಾ ತಂಡವನ್ನು ಸಕ್ರಿಯಗೊಳಿಸುವುದು ಇತ್ಯಾದಿ ಪ್ರಮುಖ ಕಾರ್ಯ ಯೋಜನೆಗಳನ್ನು ಜುಲೈ ತಿಂಗಳಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು ಎಂದರು.

ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ವೈಪರೀತ್ಯಗಳ ನಡುವೆಯೂ ಪಕ್ಷ ನೀಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿಭಾಯಿಸುವ ಕಾರ್ಯಕ್ಷಮತೆ ಮತ್ತು ಸಾಮರ್ಥ್ಯ ಪಕ್ಷದ ಕಾರ್ಯಕರ್ತರಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಯ ಮೂಲಕ ಮುಂಬರಲಿರುವ ತಾ.ಪಂ., ಜಿ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಮಗದೊಮ್ಮೆ ಉಡುಪಿ ಜಿಲ್ಲೆ ನಿರಂತರ ಗೆಲುವಿನ ಜಿಲ್ಲೆ ಎಂಬ ಹೆಗ್ಗಳಿಕೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ನಿರಂತರ ಗೆಲುವಿನ ಛಾಪು ಮೂಡಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯಕ್ಕೇ ಮಾದರಿ. ಜಿಲ್ಲೆಯಲ್ಲಿ ಬಿಜೆಪಿ ವಿಜಯ ಯಾತ್ರೆಯನ್ನು ಮುಂದುವರಿಸಲು ಕೈಜೋಡಿಸಿರುವ ಎಲ್ಲರಿಗೂ ಅಭಿನಂದನೆಗಳು. ಕಾಂಗ್ರೆಸ್ ಕೇವಲ ಅಧಿಕಾರದ ದುರಾಸೆಯಿಂದ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದ ಉಚಿತಗಳ ಗ್ಯಾರಂಟಿಗಳಲ್ಲಿ ಯಾವುದನ್ನೂ ಯಥಾವತ್ತಾಗಿ ಜಾರಿಗೊಳಿಸದೆ ದಿನಕ್ಕೊಂದು ಷರತ್ತುಗಳನ್ನು ವಿಧಿಸುತ್ತಾ ಜನತೆಗೆ ಪಂಗನಾಮ ಹಾಕಿದೆ. ಸಿ.ಎಂ. ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ಬಜೆಟ್ ನಲ್ಲಿ ಹಿಂದಿನ ಬಿಜೆಪಿ ಸರಕಾರದ ಜನಪರ ಯೋಜನೆಗಳನ್ನು ಕೈಬಿಟ್ಟಿರುವ ಜೊತೆಗೆ ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ನೀಡದೇ ತಾರತಮ್ಯ ಎಸಗಿದ್ದಾರೆ. ರಾಜ್ಯದಲ್ಲಿ ಒಂದೇ ವರ್ಗದ ತುಷ್ಟೀಕರಣ ಮತ್ತು ಹಿಂದೂ ವಿರೋಧಿ ನೀತಿ ಮಿತಿ ಮೀರುತ್ತಿದೆ. ಪ್ರಧಾನಿ ಮೋದಿ ಆಡಳಿತ ವೈಖರಿ ದೇಶದೆಲ್ಲೆಡೆ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಭಾರತ ಇಂದು ಅತೀ ವೇಗದ ಆರ್ಥಿಕಾಭಿವೃದ್ಧಿಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಆಡಳಿತ ವೈಫಲ್ಯ ಹಾಗೂ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಮಾತನಾಡಿ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಸಂಪರ್ಕ ಸಹಿತ ಪಕ್ಷ ನೀಡಿರುವ ಎಲ್ಲ ಚಟುವಟಿಕೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವ ಜೊತೆಗೆ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಭರ್ಜರಿ ಗೆಲುವಿಗೆ ಸಂಘಟಿತರಾಗಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷರಾದ ವಿಜಯ ಕೊಡವೂರು, ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಉಡುಪಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ, ನಗರ ಮಂಡಲ ಕಾರ್ಯದರ್ಶಿಗಳಾದ ರಾಜೇಂದ್ರ ಪಂದುಬೆಟ್ಟು, ಆನಂದ್ ಸುವರ್ಣ, ಲಕ್ಷ್ಮೀ ಕಿನ್ನಿಮುಲ್ಕಿ, ಶ್ರೀಲತ, ಕೋಶಾಧಿಕಾರಿ ಸಂತೋಷ್ ಆಚಾರ್ಯ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ನಗರಸಭಾ ಸದಸ್ಯರು, ನಗರ ಮಂಡಲ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರಗಳ ಸಂಚಾಲಕರಾದ ಕಿಶೋರ್ ಕುಮಾರ್ ಕರಂಬಳ್ಳಿ, ನಾಗರಾಜ್ ಶೇಟ್, ಸಂತೋಷ್ ಜತ್ತನ್, ನಗರ ಮಂಡಲ ಸಹಿತ ಮೋರ್ಚಾ, ಪ್ರಕೋಷ್ಠ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.

ಅಧಿಕಾರಕ್ಕೆ ಬಂದ 2 ತಿಂಗಳಲ್ಲಿ ರಾಜ್ಯದಲ್ಲಿ 2 ಕೊಲೆ; ಕಾಂಗ್ರೆಸ್ ಸರಕಾರದ ಸಾಧನೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆಗಡುಕರಿಗೆ, ಭಯೋತ್ಪಾದಕರಿಗೆ ಪುಷ್ಠಿ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ 2 ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ ರವರ ಅಮಾನುಷ ಹತ್ಯೆಮತ್ತು ಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ರವರ ಕೊಲೆಯನ್ನು ಖಂಡಿಸಿ, ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜೈನ ಮುನಿ ಕೊಲೆ, ಹಿಂದೂ ಕಾರ್ಯಕರ್ತರ ಹತ್ಯೆಯಂತಹ ಸಮಾಜ ಕಂಟಕ ಹೇಯ ಕೃತ್ಯಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾತ್ರ ನಿರೀಕ್ಷಿಸಲು ಸಾಧ್ಯ. ‘ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ’ ಎಂದಿರುವ ಗೃಹ ಸಚಿವ ಪರಮೇಶ್ವರ್ ಹೇಳಿಕೆಯಂತೆ ಕಾಂಗ್ರೆಸ್ ಸರಕಾರ ಈ ಋಣ ತೀರಿಸುವ ನಿಟ್ಟಿನಲ್ಲಿ ಹಿಂದೂ ವಿರೋಧಿ ಕೃತ್ಯ ಎಸಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಇದರ ವ್ಯತಿರಿಕ್ತ ಪರಿಣಾಮದ ಫಲ ಉಣ್ಣಲಿದೆ ಎಂದು ಅವರು ಹೇಳಿದರು.

ರಾಜ್ಯದೆಲ್ಲೆಡೆ ಗೋಹತ್ಯೆ ಎಗ್ಗಿಲ್ಲದೆ ನಡೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಲಂಚದ ಮೂಲಕ ವರ್ಗಾವಣೆ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಬ್ಬಕ್ಕೆ ಹೋಗಿ ಸಂತೋಷದಿಂದ ಟೋಪಿ ಶಾಲು ಧರಿಸಿದರೆ, ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ರಮದಲ್ಲಿ ಸನ್ಮಾನವನ್ನು ತಿರಸ್ಕರಿಸುವ ಜೊತೆಗೆ ಕೇಸರಿ ಶಾಲು, ನಾಮ ಕಂಡರೆ ಕೆಂಡಕಾರುವ ಮೂಲಕ ತಾನು ಎಂತಹ ಮಹಾನ್ ಹಿಂದೂ ವಿರೋಧಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ವಿದ್ಯಮಾನಗಳನ್ನು ಅವಲೋಕಿಸಿದಾಗ ರಾಜ್ಯದಲ್ಲಿ ಮುಂದೆ ಭಯಾನಕ ಪರಿಸ್ಥಿತಿ ತಲೆದೋರುವುದು ನಿಶ್ಚಿತ ಎಂಬುದು ಕಂಡುಬರುತ್ತಿದೆ. ಈ ಎರಡೂ ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಒಳಪಡಿಸಿ ಸತ್ಯಾಸತ್ಯತೆ ಹೊರಬರುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಕುಯಿಲಾಡಿ ಎಚ್ಚರಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಇಂದು ಕೊಲೆಗಡುಕ ಸರಕಾರ ರಾಜ್ಯದಲ್ಲಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕಗ್ಗೊಲೆ ಈಗಾಗಲೇ ರಾಜ್ಯದಲ್ಲಿ ಮರುಕಳಿಸಿರುವುದು ಪಶ್ಚಿಮ ಬಂಗಾಲದ ಕರಾಳ ಇತಿಹಾಸ ಕರ್ನಾಟಕದಲ್ಲೂ ಮರುಕಳಿಸುವ ಹುನ್ನಾರ ನಡೆಯುತ್ತಿರುವಂತೆ ಬಾಸವಾಗುತ್ತಿದೆ. ರಾಜ್ಯದಲ್ಲಿ ನಡೆದ ಜೈನ ಮುನಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ನಾರಾಯಣ ಮಾಲಿ ಮತ್ತು ಹಸನ್ ಸಾಬಿ ಎಂಬವರು ಆರೋಪಿಗಳು ಎಂಬ ವಿಚಾರ ಜಗಜ್ಜಾಹೀರಾಗಿದ್ದರೂ ಕೂಡಾ ಗೃಹ ಮತ್ತು ಪೊಲೀಸ್ ಇಲಾಖೆ ಎಲ್ಲಿಯೂ ಕೂಡಾ ಅಲ್ಪಸಂಖ್ಯಾತ ಸಮುದಾಯದ ಆರೋಪಿಯ ಹೆಸರನ್ನು ಎತ್ತದೇ ಸಮಾಜದ ದಾರಿ ತಪ್ಪಿಸುತ್ತಿರುವುದು ಖಂಡನೀಯ. ಜೈನ ಮುನಿಗಳು ಯಾವ ರೀತಿಯ ಕಟ್ಟು ಪಾಡುಗಳನ್ನು ಅನುಸರಿಸುವ ಮಹಾನ್ ತಪಸ್ವಿಗಳು ಎಂಬುದನ್ನು ಊಹಿಸಲಸಾಧ್ಯ. ಇಂತಹ ಸನ್ನಿವೇಶದಲ್ಲಿ ಪ್ರಕರಣದ ಬಗ್ಗೆ ದಿವ್ಯ ನಿಲಕ್ಷ ವಹಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಎಸಗಿದ ಅಕ್ಷಮ್ಯ ದ್ರೋಹವಾಗಿದೆ. ಈ ಬಾರಿಯ ಬಜೆಟ್ ಅನುದಾನದಲ್ಲಿಯೂ ಬಹುಸಂಖ್ಯಾತರನ್ನು ಕಡೆಗಣಿಸಿ ಅಲ್ಪಸಂಖ್ಯಾತರ ಗರಿಷ್ಠ ಓಲೈಕೆಗೆ ಮುಂದಾಗಿರುವ ಜೊತೆಗೆ ರಾಜಕೀಯ ದ್ವೇಷದ ಕಾರಣಕ್ಕಾಗಿ ಕರಾವಳಿ ಸಹಿತ ಹೆಚ್ಚಿನ ಜಿಲ್ಲೆಗಳನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿರ್ಲಕ್ಷ್ಯ ಮಾಡಿದೆ. ಈ ಬಗ್ಗೆ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಹತ್ಯೆಯ ನಿಷ್ಪಕ್ಷಪಾತ ತನಿಖೆಯ ಬಗ್ಗೆ ರಾಜ್ಯ ಸರಕಾರದ ಮೇಲೆ ಯಾವುದೇ ನಂಬಿಕೆ ಇರದ ಕಾರಣ, ಈ ಎರಡೂ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷರಾದ ವಿಜಯ ಕೊಡವೂರು, ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಕಾರ್ಯದರ್ಶಿ ದಯಾಶಿನಿ, ಲಕ್ಷ್ಮೀ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಆಚಾರ್ಯ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಉಡುಪಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರು, ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ಸಂಚಾಲಕರಾಗಿ ಗೋದಾವರಿ ಮಂಜಪ್ಪ ಸುವರ್ಣ ಆಯ್ಕೆ



ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ 2023-25ನೇ ಸಾಲಿನ ಮಹಿಳಾ ಘಟಕದ ಸಂಚಾಲಕರಾಗಿ ಉಡುಪಿ-ಶಿರಿಬೀಡು ಶ್ರೀ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಗೋದಾವರಿ ಮಂಜಪ್ಪ ಸುವರ್ಣ ಅಂಬಲಪಾಡಿ ಆಯ್ಕೆಯಾಗಿದ್ದಾರೆ.

ಗೌರವ ಸಂಚಾಲಕರಾಗಿ ಶ್ರೀ ನಾರಾಯಣಗುರು ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ಉಪಾಧ್ಯಕ್ಷೆ ವಿಜಯಾ ಗೋಪಾಲ್ ಬಂಗೇರ ಪಂದುಬೆಟ್ಟು ಇವರು ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ ದೇವಕಿ ಕೆ. ಕೋಟ್ಯಾನ್ ಮತ್ತು ಜಯಂತಿ ಹರೀಶ್ (ಸಹ ಸಂಚಾಲಕರು), ವಾಣಿ ಅರುಣ್ ಕುಮಾರ್ (ಕಾರ್ಯದರ್ಶಿ), ಅಶ್ವಿನಿ ಪೂಜಾರಿ ಮತ್ತು ಕಾವ್ಯ ಅಂಚನ್ (ಜತೆ ಕಾರ್ಯದರ್ಶಿಗಳು), ಸವಿತಾ ಸಂತೋಷ್ (ಕೋಶಾಧಿಕಾರಿ), ಪ್ರಭಾ ದಯಾನಂದ್ (ಸಂಘಟನಾ ಕಾರ್ಯದರ್ಶಿ), ಸಂಚಲ ಶಶಿಕಾಂತ್ (ಜತೆ ಸಂಘಟನಾ ಕಾರ್ಯದರ್ಶಿ), ಮೋಹಿನಿ ಭಾಸ್ಕರ್, ಅನಿತಾ ಲಕ್ಷ್ಮಣ್, ವಿಜಯಲಕ್ಷ್ಮಿ ಎಸ್. ಕುಮಾರ್, ಸುನಿತಾ ಶಂಕರ್ ಪೂಜಾರಿ, ವಿಜಯ ಕೃಷ್ಣ, ಲೋಲಾಕ್ಷಿ, ಲತಾ ಆನಂದ ಪೂಜಾರಿ, ಲಲಿತಾ ಅಚ್ಯುತ ಪೂಜಾರಿ, ರತಿ ಸುಧಾಕರ್, ಅಶ್ವಿನಿ ಸುನಿಲ್ ಕುಮಾರ್ (ಸಮಿತಿ ಸದಸ್ಯರು) ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.

ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರ; ಜಿಲ್ಲಾ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳು: ಕುಯಿಲಾಡಿ


ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಸಾರ್ಥಕ ಜನಪರ ಆಡಳಿತವನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಪ್ರಧಾನಿ ಮೋದಿ ಆಡಳಿತಾವಧಿಯ ಸಾಧನೆಗಳ ಪ್ರಚಾರ ಸಹಿತ ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಕುಮಾರ್ ತಿಳಿಸಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಂಡಲವಾರು ಉಸ್ತುವಾರಿಗಳ ಯಾದಿ ಬಿಡುಗಡೆಗೊಳಿಸಿ ಮಾತನಾಡಿದರು.

ಮಂಡಲ ಮಟ್ಟದಲ್ಲಿ ಹಿರಿಯ ಬಿಜಿಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆ, ಕೇಂದ್ರ ಸರಕಾರದ ಸಾಧನೆ ಪ್ರಚುರಪಡಿಸುವ ಕರಪತ್ರ ವಿತರಣೆ, ಮನೆ ಮನೆ ಬೇಟಿ ಪ್ರಯುಕ್ತ ವೃತ್ತಿಪರರ ಸಹಿತ ಮಂಡಲವಾರು 100 ಮಂದಿ ಪ್ರಮುಖರ ತಂಡ ರಚನೆ, ಬೂತ್ ವಾರು 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಕೂಟ ಆಯೋಜನೆ, ಸೋಷಿಯಲ್ ಮೀಡಿಯಾ ತಂಡಗಳನ್ನು ಸಕ್ರಿಯಗೊಳಿಸುವುದು ಮುಂತಾದ ಪ್ರಮುಖ ಕಾರ್ಯ ಯೋಜನೆಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕಾಗಿದೆ ಎಂದರು.

ಕಾಂಗ್ರೆಸ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಯಾವುದೇ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ದಿನಕ್ಕೊಂದು ಷರತ್ತುಗಳನ್ನು ವಿಧಿಸುತ್ತಾ ರಾಜ್ಯದ ಜನತೆಯನ್ನು ಯಾಮಾರಿಸಿ ಸತಾಯಿಸುತ್ತಿದೆ. ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ವ್ಯತಿರಿಕ್ತ ಫಲಿತಾಂಶ ಬಂದಿರಬಹುದು. ಆದರೆ ಕೇಂದ್ರ ಸರಕಾರದ ಆಡಳಿತ ವೈಖರಿ ಹಾಗೂ ಜನಪರ ಯೋಜನೆಗಳ ಬಗ್ಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆ ಬೇಟಿಯ ಸಂದರ್ಭದಲ್ಲಿ ಅತ್ಯಂತ ಮುತುರ್ವಜಿ ವಹಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳು ಮತ್ತು ಕೇಂದ್ರ ಸರಕಾರದ ವಿನೂತನ ಯೋಜನೆಗಳ ಬಗ್ಗೆ ಜನಮಾನಸದಲ್ಲಿ ಅರಿವು ಮೂಡಿಸಿ, ಉತ್ತಮ ಜನಾಭಿಪ್ರಾಯವನ್ನು ಮತಗಳಾಗಿ ಪರಿವರ್ತಿಸುವ ಮೂಲಕ ಮುಂದಿನ ತಾ.ಪಂ., ಜಿ.ಪಂ. ಸಹಿತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಂಡ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಕುಯಿಲಾಡಿ ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯ ಕಾರ್ಯಕರ್ತರು ರಾಜ್ಯಕ್ಕೇ ಮಾದರಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪಕ್ಷದ ಕೆಲಸ ಕಾರ್ಯಗಳಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ. ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಎರಡು ತಿಂಗಳು ಸಮೀಪಿಸುತ್ತಿದ್ದರೂ 5 ಉಚಿತಗಳ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸದೆ ಜನತೆಗೆ ಮೋಸ ಎಸಗಿದೆ. ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆಗಳಲ್ಲಿ ಚರ್ಚಿಸಿ ವಿಸ್ತ್ರತ ಹೋರಾಟ ನಡೆಸಬೇಕಾಗಿದೆ. ಬಿಜೆಪಿ ಜಿಲ್ಲಾ ಸಮಾವೇಶ ವ್ಯವಸ್ಥಿತವಾಗಿ ನಡೆದಿದೆ. ಪಕ್ಷ ನೀಡಿರುವ ಜುಲೈ ತಿಂಗಳ ಕಾರ್ಯ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಅತ್ಯಂತ ಪರಿಣಾಮಕಾರಿಯಾಗಿ ನಡೆಸಿ, ಮಗದೊಮ್ಮೆ ಸಂಘಟಿತ ಪ್ರಯತ್ನದ ಮೂಲಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ದೊಡ್ಡ ಅಂತರದ ಗೆಲುವಿಗೆ ತೊಡಗಿಸಿಕೊಳ್ಳಲು ಸನ್ನದ್ಧರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಅನುಷ್ಠಾನ ಮತ್ತು ವರದಿಗಳ ಆನ್ ಲೈನ್ ಅಪ್ಲೋಡ್ ಕುರಿತು ವಿಸ್ತೃತ ಮಾಹಿತಿ ನೀಡಿದರು.

ಪಕ್ಷ ಹಾಗೂ ಪರಿವಾರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ, ಚಿತ್ರದುರ್ಗದ ಮಾಜಿ ಜಿಲ್ಲಾಧ್ಯಕ್ಷ ಸಿದ್ದೇಶ್ ಯಾದವ್ ಮತ್ತು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ (ಆಂಧ್ರ, ಕರ್ನಾಟಕ, ತೆಲಂಗಾಣ) ಕೇಶವ ಹೆಗಡೆ ಇವರ ಅಕಾಲಿಕ ನಿಧನದ ಬಗ್ಗೆ ಸಭೆಯಲ್ಲಿ ನುಡಿ ನಮನ ಹಾಗೂ ಶೃದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಅಭಿವೃದ್ಧಿ ಯೋಜನೆ ರಹಿತ; ಸಾಲ ಸಹಿತ ನಕಲಿ ಗ್ಯಾರಂಟಿಯ ಬಜೆಟ್ : ಕುಯಿಲಾಡಿ



ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾವುದೇ ಯೋಜನೆಗಳಿಲ್ಲದೆ, ಕೇವಲ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದೇ ಘೋಷಿಸಿದ್ದ ನಕಲಿ ಗ್ಯಾರಂಟಿಗಳಿಗಾಗಿ, ರಾಜ್ಯದ ಹಿತ ಮರೆತು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುವ ನಿರಾಶಾದಾಯಕ ಚುನಾವಣಾ ಗಿಮಿಕ್ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಜೆಟ್ ನಲ್ಲಿ ವಾಹನ, ಅಬಕಾರಿ, ಮುದ್ರಾಂಕ ತೆರಿಗೆಗಳನ್ನು ಹೆಚ್ಚಿಸಿರುವುದು ಎಲ್ಲಾ ವರ್ಗದ ಜನತೆಗೆ ದೊಡ್ಡ ಹೊಡೆತ ನೀಡಲಿದೆ. ನೂತನ ಶಿಕ್ಷಣ ನೀತಿ ‘ಎನ್ಇಪಿ’ಯನ್ನು ವಿರೋಧಿಸುವ ಮೂಲಕ ಶಿಕ್ಷಣ ವ್ಯವಸ್ಥೆಯ ಆಧುನೀಕರಣಕ್ಕೆ ತಿಲಾಂಜಲಿ ನೀಡಲಾಗಿದೆ.

ಕೇವಲ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಐಎಎಸ್ ತರಬೇತಿಗೆ ಅವಕಾಶ; ಹಿಂದೂಯೇತರ ಧಾರ್ಮಿಕ ಕೇಂದ್ರಗಳಿಗೆ ಮಾಸಿಕ ತಕ್ಷಿಕ್ ಹೆಚ್ಚಳದ ಜೊತೆಗೆ ಅನುದಾನ ಘೋಷಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದೇ ವರ್ಗವನ್ನು ಓಲೈಸುವ ಹಿಂದೂ ವಿರೋಧಿ ಸರಕಾರ ಎಂಬುದನ್ನು ಈ ಬಜೆಟ್ ಸಾಬೀತುಪಡಿಸಿದೆ.

ಹಿಂದಿನ ಬಿಜೆಪಿ ಸರಕಾರ ಘೋಷಿಸಿರುವ ಎಲ್ಲಾ ಜನೋಪಯೋಗಿ ಯೋಜನೆಗಳನ್ನು ಕೈಬಿಡಲಾಗಿದೆ ಹಾಗೂ ಸಮುದಾಯವಾರು ನೂತನ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಅನುದಾನವನ್ನು ಘೋಷಿಸದೆ ಕಡೆಗಣಿಸುವ ಮೂಲಕ ಸೇಡಿನ ರಾಜಕಾರಣ ಮಾಡಲಾಗಿದೆ.

ಈ ಬಜೆಟ್ ನಲ್ಲಿ ಕರಾವಳಿ ಸಹಿತ ರಾಜ್ಯದ ಗರಿಷ್ಠ ಜಿಲ್ಲೆಗಳ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಈ ಹಿಂದಿನ ರೂ.300 ಕೋಟಿ ಮಿಗತೆ ಬಜೆಟ್ ಗೆ ಹೋಲಿಸಿದರೆ ಪ್ರಸಕ್ತ ಸಾಲಿನ ಬಜೆಟ್ ರೂ.3,269 ಕೋಟಿ ಕೊರತೆ ಬಜೆಟ್ ಆಗಿದೆ. ಇದರ ಪರಿಣಾಮವಾಗಿ ಹಣದುಬ್ಬರ ಪ್ರಮಾಣ ಹೆಚ್ಚಾಗಲಿದ್ದು, ಈ ಬಜೆಟ್ ರಾಜ್ಯವನ್ನು ದಿವಾಳಿಯ ಅಂಚಿನತ್ತ ಕೊಂಡೊಯ್ಯಲಿದೆ. ಈ ಬಜೆಟ್ ನಲ್ಲಿ ಸಾಲ ಖಚಿತ; ಆರ್ಥಿಕ ಅಸ್ತವ್ಯಸ್ತ ನಿಶ್ಚಿತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started