ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ



ಉಡುಪಿ: ಅಸಂಖ್ಯಾತ ಭಕ್ತರ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ನಡೆಯುತ್ತಿರುವ ಅಪಪ್ರಚಾರಗಳು ವ್ಯವಸ್ಥಿತ ಷಡ್ಯಂತ್ರ ಎಂಬ ಅಂಶ ಬಟ್ಟಾಬಯಲಾಗಿದೆ. ಶಬರಿಮಲೆ, ತಿರುಪತಿ, ಇಶಾ ಫೌಂಡೇಶನ್ ಬಳಿಕ ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫಲಗೊಳಿಸಿ ಹಿಂದೂಗಳ ಶೃದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ, ಉಡುಪಿ ಜಿಲ್ಲೆಯಾದ್ಯoತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಮಂಡಲಗಳ ವ್ಯಾಪ್ತಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ತುರ್ತು ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸರಕಾರ ನಡೆಸುತ್ತಿದ್ದ ಎಸ್.ಐ.ಟಿ. ತನಿಖೆಯ ನೆಪವನ್ನು ಮುಂದಿಟ್ಟುಕೊಂಡು ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ವಿಚಾರಗಳೊಂದಿಗೆ ಮಾನಹಾನಿಕರ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸುತ್ತಿರುವ ವ್ಯಕ್ತಿಗಳ ಷಡ್ಯಂತ್ರದ ಕುರಿತು ತನಿಖೆ ನಡೆಸುವುದು ಅತ್ಯಗತ್ಯವಾಗಿದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳ ಭಕ್ತ ಸಮೂಹ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಅಪಾರ ಶ್ರದ್ಧಾಭಕ್ತಿ ನಂಬಿಕೆಯನ್ನು ಇರಿಸಿಕೊಂಡಿದ್ದು, ಇತ್ತೀಚಿನ ಕೆಲವು ಅನಪೇಕ್ಷಿತ ವಿದ್ಯಮಾನಗಳು ಭಕ್ತಾಭಿಮಾನಿಗಳ ಭಾವನೆಗೆ ಘಾಸಿಯನ್ನುoಟುಮಾಡಿವೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ‘ಧರ್ಮಸ್ಥಳ ಉಳಿಸಿ’ ಅಭಿಯಾನದಡಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ಧಾರ್ಮಿಕ ಶೃದ್ದಾ ಕೇಂದ್ರದ ರಕ್ಷಣೆಗೆ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

*ಆ.21ರಂದು ಕುಂದಾಪುರದಲ್ಲಿ ಪ್ರತಿಭಟನೆ*

‘ಧರ್ಮಸ್ಥಳ ಉಳಿಸಿ’ ಅಭಿಯಾನದಡಿ ಆ.21 ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆಯುವ ಸಾಮೂಹಿಕ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಬಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇತರ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿಯೂ ಪ್ರತಿಭಟನಾ ಪರ್ವ ಮುಂದುವರಿಯಲಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಶ್ರೀಶ ನಾಯಕ್ ಪೆರಣಂಕಿಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಸಹಿತ ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ




ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಮತ್ತು ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ, ಸೂಡ, ರೆಂಜಾಳ, ಬೈಲೂರು, ಯರ್ಲಪಾಡಿ ಮುಂತಾದ ಪ್ರದೇಶಗಳಲ್ಲಿ ಆ.18ರಂದು ಬೀಸಿದ ಬೀಕರ ಸುಂಟರ ಗಾಳಿಯಿಂದ ಸುಮಾರು ಒಂದೂವರೆ ಕಿ.ಮೀ. ಅಗಲ ಹಾಗೂ ಏಳೆoಟು ಕಿ.ಮೀ. ಉದ್ದಕ್ಕೆ ಸಾಲು ಸಾಲು ಮರಗಳು ಉರುಳಿ ಬಿದ್ದು ಅನೇಕ ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಅಪಾರ ಹಾನಿ ಸಂಭವಿಸಿದ್ದು, ಸದ್ರಿ ಪ್ರಕೃತಿ ವಿಕೋಪವನ್ನು ಜಿಲ್ಲೆಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಆದ್ಯತೆ ಮೇರೆಗೆ ತುರ್ತು ಪರಿಹಾರವನ್ನು ಒದಗಿಸುವಂತೆ, ಸ್ಥಳಕ್ಕೆ ಬೇಟಿ ನೀಡಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾರ್ಕಳ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಬೆಳ್ಮಣ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಲ್ಲಿಯೂ ಸದ್ರಿ ಪ್ರಕರಣವನ್ನು ಆದ್ಯತೆ ಮೇರೆಗೆ ಪರಿಗಣಿಸಿ ತುರ್ತು ಅನುದಾನವನ್ನು ಮಂಜೂರು ಮಾಡುವರೆ ಶಿಫಾರಸು ಮಾಡುವಂತೆ ಅವರು ಒತ್ತಾಯಿಸಿದರು.

ಇದರೊಂದಿಗೆ ಹಲವಾರು ವಿದ್ಯುತ್ ಕಂಬಗಳು ಕೂಡಾ ಧರಾಶಾಯಿಯಾಗಿದ್ದು, ಸಂಬಂಧಪಟ್ಟ ಇಲಾಖೆ ಮೂಲಕ ತುರ್ತು ಪರಿಹಾರ ಮಾರ್ಗೋಪಾಯವನ್ನು ಒದಗಿಸುವಂತೆ ಕುತ್ಯಾರು ಮನವಿ ಮಾಡಿದ್ದಾರೆ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಕಾರ್ಕಳ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಪಕ್ಷದ ಪ್ರಮುಖರಾದ ಶಿವರಾಮ ಭಂಡಾರಿ ಸಹಿತ ಸ್ಥಳೀಯರು ಉಪಸ್ಥಿತರಿದ್ದರು.

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ


ಉಡುಪಿ: ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ತನಿಖೆಗೊಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಅಗ್ರಹಿಸಿದೆ. ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಅಗ್ರಹಿಸಿದ್ದಾರೆ.

ಪಕ್ಷದ ನಾಯಕರ ವಿರುದ್ಧ ಮಾನಹಾನಿಕರ ಅವಾಚ್ಯ ಶಬ್ದ ಪ್ರಯೋಗದ ಮೂಲಕ ಸಮಾಜದಲ್ಲಿ ಶಾಂತಿ ಭಂಗಕ್ಕೆ ಪ್ರತ್ನಿಸುತ್ತಿರುವ ತಿಮರೋಡಿ ವರ್ತನೆ ಪಕ್ಷದ ಕೋಟ್ಯಾoತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಭಾವನೆಗೆ ಘಾಸಿಯನ್ನುoಟುಮಾಡಿದೆ.

ತನ್ನ ಕೆಟ್ಟ ಪ್ರವೃತ್ತಿಯನ್ನು ಯಾರೇ ಪ್ರಶ್ನಿಸಿದರೂ, ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಯಾರೇ ನಿಂತರೂ ಅವರನ್ನು ಅತ್ಯಂತ ಕೆಟ್ಟ ಪದ ಪ್ರಯೋಗದಿಂದ ಜರೆಯುತ್ತಾ ರಾಜಾರೋಷವಾಗಿ ಸಮಾಜ ಕಂಟಕತನವನ್ನು ಮೆರೆಯುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸ್ ಇಲಾಖೆ ಹದ್ದುಬಸ್ತಿನಲ್ಲಿ ಇಡುವುದು ಇಂದಿನ ಅಗತ್ಯತೆಯಾಗಿದೆ.

ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಸಮಾಜ ಕಂಟಕ ಪ್ರವೃತ್ತಿಯ ಮಹೇಶ್ ಶೆಟ್ಟಿ ತಿಮರೋಡಿಯ  ವಿರುದ್ಧ ಉಡುಪಿ ನಗರ ಆರಕ್ಷಕ ಠಾಣೆಯಲ್ಲಿ ದೂರು ದಾಖಲಿಸಿದೆ. ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ, ಸೈಬರ್ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಾಲಂ ಅನ್ವಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ, ಕಾನೂನಾತ್ಮಕ ವಿಚಾರಣೆ ನಡೆಸಿ ಶಿಕ್ಷೆಗೊಳಪಡಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ





ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ವೀರ ಸೇನಾನಿಗಳನ್ನು ಸ್ಮರಿಸಿದರು.

ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ CHSC ಯೋಜನಾಧಿಕಾರಿ ಹರೀಶ್, ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಜಯಂತ್, ತಾಲೂಕು ಯೋಜನಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು,

ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ


ಕಾಪು ತಾಲ್ಲೂಕು ಮಟ್ಟದ ವತಿಯಿಂದ ಇಂದು ದಿನಾಂಕ 15-08-2025 ರಂದು ನಡೆದ “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್  ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಕಾಪು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’




79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆ.14ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷೆ ಸುಮಾ ಯು. ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಿ. ಶೆಟ್ಟಿ, ಸರೋಜಾ ಶೆಣೈ, ಪ್ರಮುಖರಾದ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್. ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಗಿರಿಧರ್ ಆಚಾರ್ಯ, ನಗರಸಭಾ ಸದಸ್ಯರು, ಮಹಿಳಾ ಮೋರ್ಚಾ ಜಿಲ್ಲಾ, ಉಡುಪಿ ನಗರ, ಗ್ರಾಮಾಂತರ ಮತ್ತು ಕಾಪು ಮಂಡಲದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಿಂದ ಪ್ರಾರಂಭಗೊಂಡು ಕಲ್ಸoಕ, ಕಡಿಯಾಳಿ, ಶಾರದಾ ಮಂಟಪ ಮಾರ್ಗವಾಗಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಸಮಾಪನಗೊಂಡಿತು.

ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಶಸ್ತಿ

ಆ.10ರಂದು ಶಿವಮೊಗ್ಗದಲ್ಲಿ ನಡೆದ ‘ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರು ಕೃಷ್ಣ ಕುಂದರ್ ಹಾಗೂ ಗೀತಾ ಕರ್ಕೇರ ದಂಪತಿಗಳ ಪುತ್ರಿ. ಇವರು ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಸಂಸ್ಥೆಯ ಮುಖ್ಯ ಶಿಕ್ಷಕರ ವಾಮನ್ ಪಾಲನ್ ಹಾಗೂ ಮೇಘ ಇವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ





ಉಡುಪಿ: ಆಷಾಢ ಮಾಸದ ಆಚರಣೆಗಳು ಹಾಗೂ ಆಹಾರ ಪದ್ಧತಿಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಗ್ರಾಮೀಣ ಬದುಕಿನ ಭವ್ಯ ಸಂಸ್ಕೃತಿಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹೇಳಿದರು.

ಅವರು ಆ.10ರಂದು ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದಾಧಿಕಾರಿಗಳೊಂದಿಗೆ ಜ್ಯೋತಿ ಬೆಳಗಿಸಿ ಮಾತನಾಡಿದರು.

ಕೃಷಿ ಪ್ರಧಾನವಾಗಿರುವ ಗ್ರಾಮೀಣ ಪ್ರದೇಶದಲ್ಲಿ ಆಟಿ ತಿಂಗಳು ಎಂದರೆ ಜಡಿ ಮಳೆಯೊಂದಿಗೆ ಸಂಕಷ್ಟದ ದಿನಗಳು ಎಂಬ ಮಾತು ಪ್ರಚಲಿತದಲ್ಲಿದೆ. ಅಂದಿನ ಕಷ್ಟದ ದಿನಗಳಲ್ಲಿ ಗ್ರಾಮೀಣ ಜನತೆ ಸತ್ವಯುತ ಹಾಗೂ ಔಷಧೀಯ ಗುಣಗಳುಳ್ಳ ಸೊಪ್ಪು ತರಕಾರಿ, ಗೆಡ್ಡೆ ಗೆಣಸುಗಳನ್ನು ಯಾವ ರೀತಿಯಲ್ಲಿ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡಿದ್ದರು ಎಂಬ ಸಂಪೂರ್ಣ ಚಿತ್ರಣ ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳನ್ನು ಸವಿದಾಗ ಅನುಭವಕ್ಕೆ ಬರುತ್ತದೆ. ಗ್ರಾಮೀಣ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅನುಕರಣೀಯ ಎಂದು ಅವರು ತಿಳಿಸಿದರು.

ಸಂಗೀತ ಕಲಾ ಕ್ಷೇತ್ರದಲ್ಲಿ ಅಮೋಘ ಸಾಧನೆಗೈದ ಉದಯೋನ್ಮುಖ ಬಾಲ ಪ್ರತಿಭೆ ಶ್ರೀಯಾ ಎಸ್. ಪೂಜಾರಿ ಅಂಬಲಪಾಡಿ ಅವರನ್ನು ಸಂಘದ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ನಿಯೋಜಿತ ಅಧ್ಯಕ್ಷ ಶಿವದಾಸ್ ಪಿ., ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಸಂಚಲ ಶಶಿಕಾಂತ್, ಅಶ್ವಿನಿ ಪೂಜಾರಿ ಹಾಗೂ ಅಮ್ಮ ಡ್ರೀಮ್ ಮೆಲೋಡಿಸ್ ತಂಡದ ಸುನಿಲ್ ಕುಮಾರ್, ಅಶ್ವಿನಿ ಸುನಿಲ್ ಸಹಿತ ಸಂಘದ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಲೋಲಾಕ್ಷಿ ಸಂಯೋಜನೆಯಲ್ಲಿ ಪುಟಾಣಿಗಳಿಂದ ಆಟಿ ಕಳಂಜ ನೃತ್ಯ ಪ್ರದರ್ಶನ ನಡೆಯಿತು.

ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ ಕಾರ್ಯಕ್ರಮ ನಿರೂಪಿಸಿ, ಸಹ ಸಂಚಾಲಕಿ ವಿಜಯ ಕೃಷ್ಣ ವಂದಿಸಿದರು.

ಆಟಿ ತಿಂಗಳ ವೈವಿಧ್ಯಮಯ ಖಾಧ್ಯಗಳೊಂದಿಗೆ ಸಾಮೂಹಿಕ ಭೋಜನ ನಡೆಯಿತು.

ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ



ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಸರದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡುತ್ತಿದೆ. ಎಸ್.ಐ.ಟಿ. ತನಿಖೆ ನಡೆಯುತ್ತಿದ್ದಂತೆ ಹಲವಾರು ಸಮಾಜ ವಿದ್ರೋಹಿ ಹಾಗೂ ಎಡಪಂಥೀಯ ಮನಸ್ಥಿತಿಯ ಯು-ಟ್ಯೂಬರ್ ಗಳು ಮತ್ತು ಸ್ವಯಂಘೋಷಿತ ಹೋರಾಟಗಾರರು ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕರ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಿ, ಅಪಪ್ರಚಾರ ಎಸಗುತ್ತಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.

ಸರಕಾರ ಕಾನೂನಾತ್ಮಕ ನಡೆಸುವ ಎಸ್.ಐ.ಟಿ. ತನಿಖೆಗೆ ಯಾವುದೇ ಅಭ್ಯಂತರ ಇಲ್ಲ. ಆದರೆ ಇದೇ ವಿಷಯವನ್ನು ಮುಂದಿಟ್ಟುಕೊಂಡು ಅಸಂಬದ್ಧ ವಿಚಾರಗಳನ್ನು ವೈಭವೀಕರಿಸಿಕೊಂಡು ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡಹುತ್ತಿರುವ ವ್ಯವಸ್ಥಿತ ಜಾಲದ ಕುತಂತ್ರದ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸುವುದು ಅತ್ಯವಶ್ಯಕ.

ಸರಕಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯ ವರದಿಯನ್ನು ಶೀಘ್ರ ಬಿಡುಗಡೆಗೊಳಿಸಿ, ಸತ್ಯಾಂಶವನ್ನು ಜನತೆಯ ಮುಂದಿಡಬೇಕು. ಕರಾವಳಿಯ ಪ್ರತೀ ಮನೆಗಳು ಧಾರ್ಮಿಕ ಅಸ್ಮಿತೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು, ಧಾರ್ಮಿಕ ಶೃದ್ದಾ ನಂಬಿಕೆಗೆ ಧಕ್ಕೆಯುಂಟಾದರೆ ಯಾವುದೇ ಬೆಲೆ ತೆತ್ತು ಅದನ್ನು ಉಳಿಸಿಕೊಳ್ಳಲು ಜನತೆ ಶಕ್ತರಾಗಿದ್ದಾರೆ. ಸರಕಾರ ತಕ್ಷಣ ಎಚ್ಛೆತ್ತು ಅಪಪ್ರಚಾರದಲ್ಲಿ ತೊಡಗಿರುವ ಸಮಾಜ ಕಂಟಕರ ವಿರುದ್ಧ ಕೂಲಂಕುಶ ತನಿಖೆ ನಡೆಸಿ ಸಮಾಜಕ್ಕೆ ಅಂಟಿಕೊಂಡಿರುವ ಅನಿಷ್ಟ ಹಾವಳಿಯನ್ನು ಪರಿಹರಿಸಬೇಕು. ಈ ನಿಟ್ಟಿನಲ್ಲಿ ಯಾವುದೇ ಸಕಾರಾತ್ಮಕ ಪ್ರಗತಿ ಕಾಣದೇ ಇದ್ದಲ್ಲಿ ಬಿಜೆಪಿ ಜನ ಬೆಂಬಲದೊಂದಿಗೆ ಜನಪರ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ



ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ವತಿಯಿಂದ ಸೆ.14 ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು.

ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಪೂರ್ವಭಾವಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸೆ.14ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯಲಿರುವ 27ನೇ ಭಜನಾ ತರಬೇತಿ ಕಮ್ಮಟ, ಭಜನೋತ್ಸವ ಹಾಗೂ ಭಜನಾ ಮಂಡಳಿಗಳ ಸಾಧಕ ಪ್ರಶಸ್ತಿಯ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಹೆಸರು ನೊಂದಾಯಿಸುವ ಉಡುಪಿ ತಾಲೂಕಿನ ಭಜನಾ ಮಂಡಳಿಗಳಿಗೆ ಆ.10ರೊಳಗೆ ಸಭೆ ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಶ್ರೀ ಕ್ಷೇತ್ರದಿಂದ ಭಜನಾ ಸಂಸ್ಕಾರ ಬೆಳೆದು ಬಂದ ರೀತಿಯನ್ನು ವಿಶ್ಲೇಷಿಸಿ ಮಾತನಾಡಿ, ಡಾ! ಡಿ.ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವದ ಚಿಂತನೆಯ ಫಲವಾಗಿ ಶಿಕ್ಷಣದ ಜೊತೆಗೆ ಭಜನಾ ಸಂಸ್ಕಾರ, ಭಜನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣದಂತಹ ಸತ್ಕಾರ್ಯ ನಡೆಯುತ್ತಿದೆ. ದಾಸ ವಾಣಿಯ ಸತ್ವಗಳ ಮೂಲಕ ಭಜನೆ ಇಂದು ಸಂಘಟನಾತ್ಮಕ ರೂಪ ತಳೆದು ಎಲ್ಲೆಡೆ ಪ್ರಚಲಿತವಾಗಿದೆ. ಎಲ್ಲರ ಸಂಘಟಿತ ಪ್ರಯತ್ನದ ಮೂಲಕ ಭಜನಾ ಪರಿಷತ್ ಪರಿಣಾಮಕಾರಿ ಭಜನಾ ಕ್ರಾಂತಿಗೆ ನಾಂದಿ ಹಾಡುವಂತಾಗಲಿ ಎಂದರು.

ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು ಮಾತನಾಡಿ, ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಿದ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ವಲಯ ಮೇಲ್ವಿಚಾರಕರು, ಭಜನಾ ಪರಿಷತ್ ವಲಯ ಸಂಯೋಜಕರು, ಸಹ ಸಂಯೋಜಕರು ಹಾಗೂ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಯೋಜನೆಯ ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮಾ ಸ್ವಾಗತಿಸಿದರು. ಮಣಿಪಾಲ ವಲಯ ಮೇಲ್ವಿಚಾರಕ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Design a site like this with WordPress.com
Get started